ತ್ರಿಪುರಾ ರಾಜ್ಯದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಜನರನ್ನು ಬಂಧಿಸುವ ಮೂಲಕ ಸತ್ಯವನ್ನು ಮೌನಗೊಳಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.
ತ್ರಿಪುರಾದಲ್ಲಿ ಕೋಮು ಘರ್ಷಣೆಗಳು ಮತ್ತು ಮಸೀದಿಗಳ ಮೇಲಿನ ದಾಳಿಗಳ ಕುರಿತು ಪತ್ರಕರ್ತರು, ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರ ವಿರುದ್ಧ ಪೊಲೀಸರು ಯುಎಪಿಎಯನ್ನು ಜಾರಿಗೊಳಿಸಿದ ನಂತರ ರಾಹುಲ್ ಗಾಂಧಿ ಈ ಪ್ರತಿಕ್ರಿಯೆ ನೀಡಿದ್ದಾರೆ.
“ತ್ರಿಪುರಾ ಹೊತ್ತಿ ಉರಿಯುತ್ತಿದೆ” ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ಅವರು, ತ್ರಿಪುರಾ ಹೊತ್ತಿ ಉರಿಯುತ್ತಿದೆ ಎಂದರೆ, ಅದನ್ನು ಸರಿಪಡಿಸುವ ಕ್ರಮ ಕೈಗೊಳ್ಳಬೇಕು ಎಂಬುದರ ಕರೆ ಅದು. ಆದರೆ, ಬಿಜೆಪಿಯು ತನ್ನ ನೆಚ್ಚಿನ ಕೆಲಸ ಮಾಹಿತಿದಾರರನ್ನು ಹೊಡೆದುರುಳಿಸುವ ಕೆಲಸಕ್ಕೆ ಮುಂದಾಗಿದೆ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ: ತ್ರಿಪುರಾ ಹಿಂಸಾಚಾರದ ಸತ್ಯಶೋಧನೆ ನಡೆಸಿದ ವಕೀಲರ ಮೇಲೆ ಯುಎಪಿಎ ಪ್ರಕರಣ!
Pointing out that #Tripura_Is_Burning is a call for corrective action. But BJP’s favourite cover-up tactic is shooting the messenger.
Truth can’t be silenced by #UAPA.
— Rahul Gandhi (@RahulGandhi) November 8, 2021
ತ್ರಿಪುರಾ ಪೊಲೀಸರು ಶನಿವಾರ ಸಾಮಾಜಿಕ ಮಾಧ್ಯಮಗಳಲ್ಲಿ ಖಾತೆ ಹೊಂದಿರುವ 102 ಮಂದಿಯ ವಿರುದ್ಧ ಯುಎಪಿಎ, ಕ್ರಿಮಿನಲ್ ಪಿತೂರಿ ಮತ್ತು ಫೋರ್ಜರಿ ಆರೋಪಗಳ ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಅವರ ಖಾತೆಗಳನ್ನು ನಿಷ್ಕ್ರಿಯಗೊಳಿಸುವ ಜೊತೆಗೆ ಆ ವ್ಯಕ್ತಿಗಳ ಸಂಪೂರ್ಣ ವಿವರಗಳನ್ನು ನೀಡುವಂತೆ ಟ್ವಿಟರ್, ಫೇಸ್‌ಬುಕ್ ಮತ್ತು ಯೂಟ್ಯೂಬ್‌ನ ಅಧಿಕಾರಿಗಳಿಗೆ ನೋಟಿಸ್ ನೀಡಿದ್ದಾರೆ.
ರಾಜ್ಯದಲ್ಲಿ ಇತ್ತೀಚಿನ ಹಿಂಸಾಚಾರದ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕುವ ಮೂಲಕ ಕೋಮು ಗಲಭೆ ಉತ್ತೇಜಿಸಿದ ಆರೋಪದಲ್ಲಿ ತ್ರಿಪುರಾ ಪೊಲೀಸರು ನಾಲ್ವರು ಸುಪ್ರೀಂ ಕೋರ್ಟ್ ವಕೀಲರ ವಿರುದ್ಧ ಕಠಿಣ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇನ್ನು ರಾಜ್ಯದಲ್ಲಿ ನಡೆದ ಕೋಮು ಘರ್ಷಣೆಗಳ ಕುರಿತು ‘ಆಕ್ಷೇಪಾರ್ಹ’ ವಿಷಯಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ 68 ಜನರ ಟ್ವಿಟರ್ ಖಾತೆಗಳನ್ನು ಅಮಾನತುಗೊಳಿಸುವಂತೆ ಸಾಮಾಜಿಕ ಮಾಧ್ಯಮ ಸಂಸ್ಥೆ ಟ್ವಿಟರ್‌ಗೆ ಪೊಲೀಸರು ಸೂಚಿಸಿದ್ದಾರೆ.
ಇತ್ತ ವಕೀಲರ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿರುವುದನ್ನು ಖಂಡಿಸಿ ಬೆಂಗಳೂರಿನ ವಕೀಲರು ಇಂದು (ಸೋಮವಾರ) ಪ್ರತಿಭಟನೆ ನಡೆಸಿದ್ದಾರೆ.
B'luru advocates protest against false charges pressed against advocates @AnsarIndori, Mukesh for being part of a fact-finding team!
Instead of arresting perpetrators of violence against Muslims, Tripura police slaps false UAPA charges against advocates, journos#repealUAPA pic.twitter.com/jpq2yHATDp
— vinaysreenivasa ವಿನಯ (@vinaysreeni) November 8, 2021
ಇದನ್ನೂ ಓದಿ: ತ್ರಿಪುರ ಕೋಮು ಗಲಭೆ: 68 ಜನರ ಟ್ವಿಟರ್ ಖಾತೆ ಅಮಾನತುಗೊಳಿಸುವಂತೆ ಟ್ವಿಟರ್‌ಗೆ ಪತ್ರ ಬರೆದ ಪೊಲೀಸರು


