Homeಅಂತರಾಷ್ಟ್ರೀಯರಫೇಲ್ ಒಪ್ಪಂದಕ್ಕೆ 65 ಕೋಟಿ ಲಂಚ, ತನಿಖೆ ನಡೆಸದ CBI : ಫ್ರೆಂಚ್ ಪತ್ರಿಕೆ ಆರೋಪ

ರಫೇಲ್ ಒಪ್ಪಂದಕ್ಕೆ 65 ಕೋಟಿ ಲಂಚ, ತನಿಖೆ ನಡೆಸದ CBI : ಫ್ರೆಂಚ್ ಪತ್ರಿಕೆ ಆರೋಪ

ಭಾರತದ ಸುಶೇನ್ ಗುಪ್ತಾ ಎಂಬಾತನಿಗೆ ರಹಸ್ಯವಾಗಿ ಲಂಚ ನೀಡಲಾಗಿದೆ. ಸುಳ್ಳು ರಶೀದಿಗಳನ್ನು ಸೃಷ್ಟಿಸಲಾಗಿದೆ. ಇಷ್ಟೆಲ್ಲಾ ದಾಖಲೆಗಳು 2018 ರಲ್ಲಿಯೇ ಸಿಬಿಐ ಮತ್ತು ಇಡಿಗೆ ಸಿಕ್ಕಿದ್ದರೂ ಅವರು ತನಿಖೆ ಆರಂಭಿಸಿಲ್ಲ..- ಮೀಡಿಯಾ ಪಾರ್ಟ್

- Advertisement -
- Advertisement -

ಫ್ರೆಂಚ್ ಯುದ್ಧ ವಿಮಾನ ರಫೇಲ್ ತಯಾರಕರಾದ ಡಸಾಲ್ಟ್ ಕಂಪನಿಯು, 36 ರಫೇಲ್‌ ವಿಮಾನಗಳನ್ನು ಭಾರತಕ್ಕೆ ಮಾರುವುದಕ್ಕಾಗಿ ಭಾರತದ ಮಧ್ಯವರ್ತಿಯೊಬ್ಬರಿಗೆ 7.5 ಮಿಲಿಯನ್ ಯೂರೋ (65 ಕೋಟಿ ರೂ) ಲಂಚ ನೀಡಿದೆ. ಈ ಕುರಿತು ಸ್ಪಷ್ಟ ದಾಖಲೆಗಳಿದ್ದರೂ ಸಹ ಭಾರತೀಯ ಏಜೆನ್ಸಿ (CBI) ತನಿಖೆ ಮಾಡಲು ವಿಫಲವಾಗಿದೆ ಎಂದು ಫ್ರೆಂಚ್ ಪತ್ರಿಕೆ “ಮೀಡಿಯಾಪಾರ್ಟ್” ಆರೋಪಿಸಿದೆ.

59,000 ಕೋಟಿ ರೂಗಳ ರಾಫೇಲ್ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮೀಡಿಯಾಪಾರ್ಟ್ 2013 ಕ್ಕೆ ಮುಂಚೆಯೇ ಕಂಪನಿಯು ಮಧ್ಯವರ್ತಿಗೆ ಹಣ ನೀಡಿದೆ ಎಂದು ಹೇಳಿದೆ. ಆ ದಾಖಲೆಗಳನ್ನು ಸಿಬಿಐ ಕಚೇರಿಗೆ ಕಳುಹಿಸಿದೆ.

ಭಾರತದ ಸುಶೇನ್ ಗುಪ್ತಾ ಎಂಬಾತನಿಗೆ ರಹಸ್ಯವಾಗಿ ಲಂಚ ನೀಡಲಾಗಿದೆ. ಸುಳ್ಳು ರಶೀದಿಗಳನ್ನು ಸೃಷ್ಟಿಸಲಾಗಿದೆ. ಇಷ್ಟೆಲ್ಲಾ ದಾಖಲೆಗಳು 2018 ರಲ್ಲಿಯೇ ಸಿಬಿಐ ಮತ್ತು ಇಡಿಗೆ ಸಿಕ್ಕಿದ್ದರೂ ಅವರು ತನಿಖೆ ಆರಂಭಿಸಿಲ್ಲ ಎಂದು ಪತ್ರಿಕೆ ದೂರಿದೆ.

ಅಗುಸ್ಟಾವೆಸ್ಟ್‌ಲ್ಯಾಂಡ್ ಪ್ರಕರಣದಲ್ಲಿ ವಿ.ವಿ.ಐ.ಪಿ ಹೆಲಿಕ್ಯಾಪ್ಟರ್‌ಗಳ ಒಪ್ಪಂದದಲ್ಲಿ ಭಾರತದಲ್ಲಿ ಕಿಕ್‌ಬ್ಯಾಕ್‌ ಪಡೆದ ಆರೋಪದ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಸುಶೇನ್ ಗುಪ್ತಾ ಮೇಲೆ ಈ ಪ್ರಕರಣದಲ್ಲಿ ಏಕೆ ತನಿಖೆಯಿಲ್ಲ ಎಂದು ಮೀಡಿಯಾಪಾರ್ಟ್ ಪ್ರಶ್ನಿಸಿದೆ.

ಮೀಡಿಯಾ ಪಾರ್ಟ್ ಪತ್ರಿಕೆಯೂ ರಾಫೇಲ್ ಹಗರಣದ ದಾಖಲೆಗಳ ತನಿಖೆಯ ಕುರಿತು ಸರಣಿ ಲೇಖನಗಳನ್ನು ಪ್ರಕಟಿಸಿದೆ. ಇದು ರಾಫೇಲ್ ಭ್ರಷ್ಟಾಚಾರದ ಕುರಿತು ಫ್ರಾನ್ಸ್‌ನಲ್ಲಿ ನ್ಯಾಯಾಂಗ ತನಿಖೆಗೆ ಕಾರಣವಾಗಿದೆ.

ರಫೇಲ್ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದ ಒಂದು ವಾರದಲ್ಲಿ ಸಿಬಿಐಗೆ ಅಕ್ಟೋಬರ್ 11, 2018ರಂದೇ ದಾಖಲೆಗಳನ್ನು ಒದಗಿಸಲಾಗಿದೆ. ಅದರೂ ತನಿಖೆ ಆರಂಭಿಸದಿರಲು ಸಿಬಿಐ ನಿರ್ಧರಿಸಿದೆ. ರಹಸ್ಯವಾಗಿ ಲಂಚ ಪಡೆದಿರುವುದು ಸಾಬೀತಾಗಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಮೀಡಿಯಾಪಾರ್ಟ್ ಆರೋಪಿಸಿದೆ.

“ವಾಸ್ತವದಲ್ಲಿ ಎಷ್ಟು ಲಂಚ ಮತ್ತು ಕಮಿಷನ್ ಅನ್ನು ಪಾವತಿಸಲಾಗಿದೆ? ಮತ್ತು ಭಾರತ ಸರ್ಕಾರದಲ್ಲಿ ಯಾರಿಗೆ ನೀಡಲಾಗಿದೆ ಎಂದು ಕಂಡುಹಿಡಿಯಲು ಭಾರತದ ಅತಿದೊಡ್ಡ ರಕ್ಷಣಾ ಒಪ್ಪಂದದ ಬಗ್ಗೆ ಪೂರ್ಣ ಮತ್ತು ಸ್ವತಂತ್ರ ತನಿಖೆಯ ಅಗತ್ಯವಿಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು.


ಇದನ್ನೂ ಓದಿ: ರಕ್ಷಣಾ ಇಲಾಖೆಯ ಅತಿದೊಡ್ಡ ಹಗರಣ – ರಫೇಲ್ ಡೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...