Homeಕರ್ನಾಟಕವಕೀಲರ ವಿರುದ್ಧ UAPA ದುರ್ಬಳಕೆ: ನ್ಯಾಯಕ್ಕಾಗಿ ವಕೀಲರ ಸಂಘ ಪ್ರತಿಭಟನೆ

ವಕೀಲರ ವಿರುದ್ಧ UAPA ದುರ್ಬಳಕೆ: ನ್ಯಾಯಕ್ಕಾಗಿ ವಕೀಲರ ಸಂಘ ಪ್ರತಿಭಟನೆ

- Advertisement -
- Advertisement -

ತ್ರಿಪುರಾದಲ್ಲಿ ನಡೆದ ಕೋಮುಗಲಭೆ ಕುರಿತು ಸತ್ಯಶೋಧನೆ ನಡೆಸಿದ ತಂಡದ ಭಾಗವಾಗಿದ್ದ ಇಬ್ಬರು ವಕೀಲರಿಗೆ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಹಾಗೂ ಐಪಿಸಿ ಅಡಿಯಲ್ಲಿ ನೋಟಿಸ್‌ ನೀಡಿರುವುದನ್ನು ಖಂಡಿಸಿ ‘ನ್ಯಾಯಕ್ಕಾಗಿ ಅಖಿಲ ಭಾರತ ವಕೀಲರ ಸಂಘ’ದ(AILAJ) ಕರ್ನಾಟಕ ರಾಜ್ಯ ಘಟಕವು ಪ್ರತಿಭಟನೆ ನಡೆಸಿದೆ.

ರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳ ಒಕ್ಕೂಟದ ಕಾರ್ಯದರ್ಶಿ ಅಡ್ವೊಕೇಟ್‌ ಅನ್ಸರ್‌ ಇಂದೋರಿ ಮತ್ತು ನಾಗರೀಕ ಹಕ್ಕುಗಳ ಸಂಘಟನೆಯಾದ ಪೀಪಲ್ಸ್‌ ಯೂನಿಯನ್‌ ಫಾರ್‌ ಸಿವಿಲ್‌ ಲಿಬರ್ಟಿಸ್‌ (ಪಿಯುಸಿಎಲ್‌, ದೆಹಲಿ)ನ ವಕೀಲರಾದ ಮುಖೇಶ್‌ ಅವರಿಗೆ ತ್ರಿಪುರಾ ಪೊಲೀಸರು ನೋಟಿಸ್‌ ಕಳುಹಿಸಿದ್ದಾರೆ. ಆ ನೋಟಿಸ್‌ನಲ್ಲಿ ‘ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿರುವ ಕಲ್ಪಿತ ಮತ್ತು ಸುಳ್ಳು ಹೇಳಿಕೆಗಳು/ ಕಾಮೆಂಟ್‌ಗಳನ್ನು ತಕ್ಷಣವೇ ಅಳಿಸಬೇಕು’ ಎಂದು ಹೇಳಿದ್ದು, ನವೆಂಬರ್‌ 10ರೊಳಗೆ ಪಶ್ಚಿಮ ಅಗರ್ತಲಾ ಪೊಲೀಸ್‌ ಠಾಣೆಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ಗಳು ತಿಳಿಸಿವೆ.

ಯುಎಪಿಎ ಹೊರತಾಗಿ, ಸೆಕ್ಷನ್‌ 153 ಎ ಮತ್ತು ಬಿ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 469 (ಮಾಹಿತಿಗೆ ಹಾನಿ ಮಾಡುವ ಉದ್ದೇಶಕ್ಕಾಗಿ ನಕಲು ಮಾಡುವುದು), 120 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಹಾಗೂ ಐಪಿಸಿಯ 120 ಬಿ (ಕ್ರಿಮಿನಲ್‌ ಪಿತೂರಿಗಾಗಿ ಶಿಕ್ಷೆ) ಇವೆಲ್ಲದರಡಿಯಲ್ಲಿ ನೋಟಿಸ್‌ ನೀಡಲಾಗಿದೆ.

ಇದನ್ನೂ ಓದಿರಿ: ಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

ಈ ಕುರಿತು ಮಾತನಾಡಿದ ವಕೀಲರಾದ ಮುಖೇಶ್‌, ‘ವಾಸ್ತವತೆಯನ್ನು ತಿಳಿಯಲು ತ್ರಿಪುರಾಕ್ಕೆ ಹೋದ ಸತ್ಯಶೋಧನಾ ತಂಡದ  ಭಾಗವಾಗಿದ್ದೇನೆ. ಸಾಮಾಜಿಕವಾಗಿ ನಾನು ನೋಡಿದ್ದನ್ನು ಹಂಚಿಕೊಂಡಿದ್ದೇನೆ’ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ವಕೀಲ ಎಹ್ತೇಶಾಮ್ ಹಶ್ಮಿ, ವಕೀಲ ಅಮಿತ್ ಶ್ರೀವಾಸ್ತವ್ (ಸಮನ್ವಯ ಸಮಿತಿ, ಪ್ರಜಾಪ್ರಭುತ್ವಕ್ಕಾಗಿ ವಕೀಲರು), ವಕೀಲ ಅನ್ಸಾರ್ ಇಂದೋರಿ ಮತ್ತು ವಕೀಲ ಮುಖೇಶ್ ಅವರನ್ನು ಒಳಗೊಂಡ ಸತ್ಯಶೋಧನಾ ತಂಡವು ಮಂಗಳವಾರ ದೆಹಲಿಯ ಪ್ರೆಸ್ ಕ್ಲಬ್ ನಲ್ಲಿ ವರದಿಯನ್ನು ಬಿಡುಗಡೆ ಮಾಡಿದೆ.

ಸತ್ಯಶೋಧನಾ ವರದಿ ಏನು ಹೇಳುತ್ತದೆ?

‘ಹ್ಯುಮ್ಯಾನಿಟಿ ಅಂಡರ್‌ ಅಟ್ಯಾಕ್‌ ಇನ್ ತ್ರಿಪುರ; #ಮುಸ್ಲಿಂ ಲೀವ್ಸ್‌ ಮ್ಯಾಟರ್‌’ ಶೀರ್ಷಿಕೆಯಡಿ ಬಿಡುಗಡೆಯಾದ ಸತ್ಯಶೋಧನಾ ವರದಿಯು ತ್ರಿಪುರಾದಲ್ಲಿನ ಬಿಜೆಪಿ ಸರ್ಕಾರವು ಹಿಂಸಾಚಾರವನ್ನು ನಿಲ್ಲಿಸಬಹುದಿತ್ತು ಆದರೆ ಅವರು ರಾಜ್ಯದಲ್ಲಿ ಗಲಭೆ ನಡೆಸಲು ಹಿಂದುತ್ವದ ಗುಂಪುಗಳಿಗೆ ಮುಕ್ತ ಅವಕಾಶ ನೀಡುವ ದಾರಿಯನ್ನು ಆರಿಸಿಕೊಂಡರು ಎಂಬುದನ್ನು ತಿಳಿಸಿದೆ.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ), ಬಜರಂಗದಳ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಂತಹ ಹಿಂದೂ ರಾಷ್ಟ್ರೀಯತಾವಾದಿ ಸಂಘಟನೆಗಳು ಜೆಸಿಬಿಗಳೊಂದಿಗೆ ರ್‍ಯಾಲಿಗಳನ್ನು ನಡೆಸಿವೆ ಮತ್ತು ಹಿಂಸೆಗೆ ಪ್ರಚೋದನೆ ನೀಡಿವೆ ಎಂದು ವರದಿಯಲ್ಲಿದೆ.

ವಕೀಲರ ಮೇಲಿನ ಈ ಆರೋಪವನ್ನು ನ್ಯಾಯಕ್ಕಾಗಿ ವಕೀಲರ ಸಂಘ ಖಂಡಿಸಿದ್ದು, ಈ ನೋಟಿಸ್‌ಗಳನ್ನು ವಾಪಸ್‌ ಪಡೆಯಬೇಕು. ಪ್ರಜಾಪ್ರಭುತ್ವದ ಕತ್ತು ಹಿಸುಕುವನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಹುಲ್‌ ಗಾಂಧಿ ಟೀಕೆ

ತ್ರಿಪುರಾ ರಾಜ್ಯದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಜನರನ್ನು ಬಂಧಿಸುವ ಮೂಲಕ ಸತ್ಯವನ್ನು ಮೌನಗೊಳಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.

ತ್ರಿಪುರಾದಲ್ಲಿ ಕೋಮು ಘರ್ಷಣೆಗಳು ಮತ್ತು ಮಸೀದಿಗಳ ಮೇಲಿನ ದಾಳಿಗಳ ಕುರಿತು ಪತ್ರಕರ್ತರು, ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರ ವಿರುದ್ಧ ಪೊಲೀಸರು ಯುಎಪಿಎಯನ್ನು ಜಾರಿಗೊಳಿಸಿದ ನಂತರ ರಾಹುಲ್ ಗಾಂಧಿ ಈ ಪ್ರತಿಕ್ರಿಯೆ ನೀಡಿದ್ದಾರೆ.

“ತ್ರಿಪುರಾ ಹೊತ್ತಿ ಉರಿಯುತ್ತಿದೆ” ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ಅವರು, ತ್ರಿಪುರಾ ಹೊತ್ತಿ ಉರಿಯುತ್ತಿದೆ ಎಂದರೆ, ಅದನ್ನು ಸರಿಪಡಿಸುವ ಕ್ರಮ ಕೈಗೊಳ್ಳಬೇಕು ಎಂಬುದರ ಕರೆ ಅದು. ಆದರೆ, ಬಿಜೆಪಿಯು ತನ್ನ ನೆಚ್ಚಿನ ಕೆಲಸ ಮಾಹಿತಿದಾರರನ್ನು ಹೊಡೆದುರುಳಿಸುವ ಕೆಲಸಕ್ಕೆ ಮುಂದಾಗಿದೆ ಎಂದು ಟೀಕಿಸಿದ್ದಾರೆ.


ಇದನ್ನೂ ಓದಿರಿ: ತ್ರಿಪುರ ಕೋಮು ಗಲಭೆ: 68 ಜನರ ಟ್ವಿಟರ್‌ ಖಾತೆ ಅಮಾನತುಗೊಳಿಸುವಂತೆ ಟ್ವಿಟರ್‌ಗೆ ಪತ್ರ ಬರೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...