Homeಕರ್ನಾಟಕಬೆಳಗಾವಿ ಸುವರ್ಣಸೌಧ: ಡಿಸೆಂಬರ್‌‌‌‌ನಲ್ಲಿ ಚಳಿಗಾಲದ ಅಧಿವೇಶನ

ಬೆಳಗಾವಿ ಸುವರ್ಣಸೌಧ: ಡಿಸೆಂಬರ್‌‌‌‌ನಲ್ಲಿ ಚಳಿಗಾಲದ ಅಧಿವೇಶನ

ಕಳೆದ ಎರಡು ವರ್ಷಗಳಲ್ಲಿ ಬೆಳಗಾವಿಯಲ್ಲಿ ಅಧಿವೇಶನಗಳನ್ನು ನಡೆಸಲಾಗಿಲ್ಲ

- Advertisement -
- Advertisement -

ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನ ಗಡಿ ಜಿಲ್ಲೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಂದಿನ ಸಂಪುಟ ಸಭೆಯಲ್ಲಿ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಸೋಮವಾರ ತಿಳಿಸಿದ್ದಾರೆ.

ಪ್ರವಾಹ ಮತ್ತು ಕೊರೊನಾದಿಂದಾಗಿ ಕಳೆದ ಎರಡು ವರ್ಷಗಳಲ್ಲಿ ಬೆಳಗಾವಿಯಲ್ಲಿ ಅಧಿವೇಶನಗಳನ್ನು ನಡೆಸಲಾಗಿಲ್ಲ. ಅದರ ಬದಲಿಗೆ ಬೆಂಗಳೂರಿನಲ್ಲಿ ಅಧಿವೇಶನವನ್ನು ನಡೆಸಲಾಗಿತ್ತು. ಗಡಿ ಜಿಲ್ಲೆಯಾಗಿರುವ ಬೆಳಗಾವಿಯಲ್ಲಿ 2006 ರಿಂದ ವರ್ಷಕ್ಕೊಮ್ಮೆ ವಿಧಾನಮಂಡಲದ ಅಧಿವೇಶನಗಳನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: ಸರ್ಕಾರದ ಆದೇಶದ ಹೊರತಾಗಿಯೂ ಸ್ಥಳಾಂತರವಾಗದ ಸಕ್ಕರೆ ನಿರ್ದೇಶನಾಲಯ; ಆಯುಕ್ತರು ಹೇಳಿದ್ದೇನು?

ನಿನ್ನೆ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಾಧುಸ್ವಾಮಿ, “ನಾವು ಚಳಿಗಾಲದ ಅಧಿವೇಶನದ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ಮುಂದಿನ ಸಂಪುಟ ಸಭೆಯಲ್ಲಿ ದಿನಾಂಕವನ್ನು ನಿಗದಿಪಡಿಸಲಾಗುವುದು. ಈ ಬಾರಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ” ಎಂದು ಹೇಳಿದ್ದಾರೆ. ಅಂದುಕೊಂಡಂತೆ ನಡೆದರೆ, ಆಪರೇಷನ್ ಕಮಲ ಮೂಲಕ 2019 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಬೆಳಗಾವಿಯಲ್ಲಿ ನಡೆಯಲಿರುವ ಮೊದಲ ವಿಧಾನಮಂಡಲ ಅಧಿವೇಶನ ಇದಾಗಿದೆ.

ನವೆಂಬರ್ ಅಂತ್ಯದಲ್ಲಿ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುವಂತೆ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಳೆದ ವಾರ ಪತ್ರ ಬರೆದಿದ್ದರು. ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸರ್ಕಾರ ಚಿಂತನೆ ನಡೆಸುತ್ತಿದ್ದು, ಅದನ್ನು ಸಂಪುಟದ ಒಪ್ಪಿಗೆಗಾಗಿ ಇಡಲಾಗುವುದು ಎಂದು ಬೊಮ್ಮಾಯಿ ಅವರು ಕಳೆದ ತಿಂಗಳು ಹೇಳಿದ್ದರು.

ಈ ಮಧ್ಯೆ ಸೋಮವಾರ ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಕುರಿತಂತೆ ಅಧಿಕಾರಿಗಳ ಪೂರ್ವ ಸಿದ್ಧತೆ ಸಭೆ ನಡೆಸಲಾಗಿದೆ.

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, “2018 ರ ನಂತರ ಬೆಳಗಾವಿಯಲ್ಲಿ ಅಧಿವೇಶನ ನಡೆದಿರಲಿಲ್ಲ. ಈ ಬಾರಿ ವಿಧಾನಮಂಡಲದ ಕಲಾಪಗಳ ನೇರಪ್ರಸಾರ ವ್ಯವಸ್ಥೆ ಮಾಡಲಾಗುತ್ತಿದೆ. ನವೆಂಬರ್ 20 ರೊಳಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಧಿವೇಶನ ಸುಸೂತ್ರವಾಗಿ ನಡೆಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಡಿಸೆಂಬರ್‌ನಲ್ಲಿ ಅಧಿವೇಶನ ನಡೆಯುವುದು ಖಚಿತವಾಗಿದ್ದು, ದಿನಾಂಕವನ್ನು ಸರ್ಕಾರ ನಿರ್ಧರಿಸಲಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ ಸ್ವೀಕಾರಾರ್ಹವೇ?

ನೆರೆಯ ಮಹಾರಾಷ್ಟ್ರ ಬೆಳಗಾವಿ ತನಗೆ ಸೇರಿದ್ದು ಎಂದು ಈ ವರೆಗೆ ಹೇಳಿಕೊಳ್ಳುತ್ತಾ ಬಂದಿದೆ. ಈ ಮಧ್ಯೆ ಸರ್ಕಾರಿ ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರಿಸುವ ಕೆಲಸವನ್ನೂ ಕರ್ನಾಟಕ ಸರ್ಕಾರ ಮಾಡುತ್ತಿದೆ. ವರ್ಷಕ್ಕೊಮ್ಮೆ ಸುಮಾರು ಎರಡು ವಾರಗಳ ಕಾಲ ನಡೆಯುವ ಅಧಿವೇಶನ ಹೊರತುಪಡಿಸಿದರೆ ಸುವರ್ಣ ವಿಧಾನಸೌಧ ಕಟ್ಟಡ ಬಹುತೇಕ ಬಳಕೆಯಾಗದೆ ಉಳಿದಿದೆ.

ನಾಗರಿಕರ ಅನುಕೂಲಕ್ಕಾಗಿ ಮತ್ತು ಪ್ರಾದೇಶಿಕ ಅಸಮತೋಲನವನ್ನು ನಿವಾರಿಸುವ ಉದ್ದೇಶದಿಂದ ಕೆಲವು ಸರ್ಕಾರಿ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಬೇಕು ಎಂಬುವುದು ಉತ್ತರ ಕರ್ನಾಟಕ ಜನರ ಬಹುಕಾಲದ ಬೇಡಿಕೆಯಾಗಿತ್ತು.

2018 ರಲ್ಲಿ, ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವು, ಪ್ರಾದೇಶಿಕ ಅಸಮತೋಲನವನ್ನು ಪರಿಹರಿಸಲು ಕೆಲವು ಸರ್ಕಾರಿ ಇಲಾಖೆಗಳು, ಮಂಡಳಿಗಳು ಮತ್ತು ಆಯೋಗಗಳನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸಲು ತಾತ್ವಿಕವಾಗಿ ಅನುಮೋದನೆ ನೀಡಿತ್ತು. ಇದರ ನಂತರ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಗೊಳ್ಳುವ ರಾಜ್ಯ ಮಟ್ಟದ ಸರ್ಕಾರಿ ಕಚೇರಿಗಳನ್ನು ಒಂದು ತಿಂಗಳೊಳಗೆ ಗುರುತಿಸಿ ಕಾರ್ಯಗತಗೊಳಿಸುವಂತೆ ಕಳೆದ ವರ್ಷ ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದರು.

ಇದನ್ನೂ ಓದಿ: ವಿಧಾನಸಭಾ ಅಧಿವೇಶನ: ಕಾಂಗ್ರೆಸ್‌ನ ’ಎತ್ತಿನಗಾಡಿ ಚಲೋ’ ಪ್ರತಿಭಟನೆ ಚಿತ್ರಗಳಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...