Homeಮುಖಪುಟರಫೇಲ್ ಒಪ್ಪಂದಕ್ಕಾಗಿ ಲಂಚ ಆರೋಪ: ಬಿಜೆಪಿ ಕಾಂಗ್ರೆಸ್ ನಡುವೆ ವಾಗ್ವಾದ

ರಫೇಲ್ ಒಪ್ಪಂದಕ್ಕಾಗಿ ಲಂಚ ಆರೋಪ: ಬಿಜೆಪಿ ಕಾಂಗ್ರೆಸ್ ನಡುವೆ ವಾಗ್ವಾದ

- Advertisement -
- Advertisement -

ರಫೇಲ್ ಯುದ್ಧ ವಿಮಾನ ತಯಾರಕರಾದ ಡಸಾಲ್ಟ್ ಕಂಪನಿಯು 36 ರಫೇಲ್‌ ವಿಮಾನಗಳನ್ನು ಭಾರತಕ್ಕೆ ಮಾರುವುದಕ್ಕಾಗಿ ಭಾರತದ ಮಧ್ಯವರ್ತಿಯೊಬ್ಬರಿಗೆ 7.5 ಮಿಲಿಯನ್ ಯೂರೋ (65 ಕೋಟಿ ರೂ) ಲಂಚ ನೀಡಿದೆ ಎಂದು ಫ್ರೆಂಚ್ ಪತ್ರಿಕೆ ‘ಮೀಡಿಯಾಪಾರ್ಟ್; ಆರೋಪಿಸಿದೆ. ಈ ಕುರಿತು ಸ್ಪಷ್ಟ ದಾಖಲೆಗಳಿದ್ದರೂ ಸಹ CBI ತನಿಖೆ ಮಾಡಲು ವಿಫಲವಾಗಿದೆ ಎಂದು ಅದು ಹೇಳಿದ ಬೆನ್ನಲ್ಲೆ ಭಾರತದಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ ವಾಗ್ವಾದ ಆರಂಭಗೊಂಡಿದೆ.

59,000 ಕೋಟಿ ರೂಗಳ ರಫೇಲ್ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮೀಡಿಯಾಪಾರ್ಟ್ 2013 ಕ್ಕೆ ಮುಂಚೆಯೇ ಕಂಪನಿಯು ಮಧ್ಯವರ್ತಿಗೆ ಹಣ ನೀಡಿದೆ ಎಂದು ಹೇಳಿದೆ. ಅಂದರೆ ಈ ಭ್ರಷ್ಟಾಚಾರವು ಬಿಜೆಪಿ 2014ರಲ್ಲಿ ಅಧಿಕಾರಕ್ಕೆ ಬರುವ ಮುನ್ನವೇ ನಡೆದಿದೆ, ಇದು ಕಾಂಗ್ರೆಸ್‌ ಮಾಡಿರುವುದು ಎಂದು ಬಿಜೆಪಿ ಆರೋಪಿಸಿದೆ. ಅದೇ ಸಮಯದಲ್ಲಿ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

‘INC (Indian National Congress) ಎಂದರೆ I need Commission (ನನಗೆ ಕಮಿಷನ್ ಬೇಕು)’ ಎಂದರ್ಥ ಎಂದು ಕಾಂಗ್ರೆಸ್‌ ಪಕ್ಷದ ಸಂಕ್ಷಿಪ್ತ ರೂಪದ ಕುರಿತು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ವ್ಯಂಗ್ಯವಾಡಿದ್ದಾರೆ. ಯುಪಿಎ ಸರ್ಕಾರವು ಪ್ರತಿ ಒಪ್ಪಂದದೊಳಗೆ ಒಪ್ಪಂದ ಮಾಡಿಕೊಳ್ಳುತ್ತದೆ, ಹಾಗಾಗಿ ರಫೇಲ್ ಹಗರಣದಲ್ಲಿಯೂ ಲಂಚ ಪಡೆದಿರಬಹುದು ಎಂದು ಅವರು ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಇಟಲಿಯಿಂದ ಉತ್ತರಿಸಲಿ. ಇಷ್ಟು ವರ್ಷ ನೀವು ಮತ್ತು ನಿಮ್ಮ ಪಕ್ಷದವರು ರಫೇಲ್ ಬಗ್ಗೆ ಸುಳ್ಳು ಪ್ರಚಾರ ಮಾಡಲು ಏಕೆ ಪ್ರಯತ್ನಿಸಿದ್ದೀರಿ? 2007 ರಿಂದ 2012 ರವರೆಗೆ ಅವರದೇ ಸರ್ಕಾರ ಅಧಿಕಾರದಲ್ಲಿದ್ದಾಗ ಕಮಿಷನ್ ಪಾವತಿಸಲಾಗಿದೆ ಎಂಬುದು ಈಗ ಬಹಿರಂಗವಾಗಿದೆ, ಇದರಲ್ಲಿ ಮಧ್ಯವರ್ತಿಯ ಹೆಸರೂ ಬಂದಿದೆ ಎಂದು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ತಮ್ಮ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಮತ್ತು ರಫೇಲ್ ಹಗರಣವನ್ನು ಮುಚ್ಚಿಹಾಕಲು ಮೋದಿ ಸರ್ಕಾರ-ಸಿಬಿಐ-ಜಾರಿ ನಿರ್ದೇಶನಾಲಯದ ನಡುವಿನ ಸಂಶಯಾಸ್ಪದ ಸಂಬಂಧವನ್ನು ಮೀಡಿಯಾ ಪಾರ್ಟ್ ಬಹಿರಂಗಪಡಿಸಿದೆ” ಎಂದಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಪ್ರತಿ ಹೆಜ್ಜೆಯಲ್ಲೂ ಸತ್ಯ ನಿಮ್ಮೊಂದಿಗಿರುವಾಗ, ತಡವೇಕೆ? ನನ್ನ ಕಾಂಗ್ರೆಸ್ ಸಂಗಾತಿಗಳೆ, ಭ್ರಷ್ಟ ಕೇಂದ್ರ ಸರ್ಕಾರದ ವಿರುದ್ಧ ಇದೇ ರೀತಿ ಹೋರಾಟ ಮುಂದುವರಿಸಿ. ಕಾಯಬೇಡಿ, ಆಯಾಸಗೊಳ್ಳಬೇಡಿ, ಭಯಪಡಬೇಡಿ” ಎಂದು ತಿಳಿಸಿದ್ದಾರೆ.

ತಮ್ಮ ಟ್ವೀಟ್‌ನೊಂದಿಗೆ ಹಿಂದಿ ಪತ್ರಿಕೆಯ ತುಣುಕೊಂದನ್ನು ರಾಹುಲ್ ಗಾಂಧಿ ಲಗತ್ತಿಸಿದ್ದಾರೆ. “ರಫೇಲ್ ಡೀಲ್‌ನಲ್ಲಿ ನಕಲಿ ರಶೀದಿಗಳನ್ನು ಬಳಸಿ ಮಧ್ಯವರ್ತಿಗಳಿಗೆ ಕಮಿಷನ್ ನೀಡಲಾಗಿದೆ. ಈ ದಾಖಲೆಗಳಿದ್ದರೂ ಭಾರತೀಯ ತನಿಖಾ ಸಂಸ್ಥೆಗಳು ಪ್ರಕರಣವನ್ನು ಮುಂದುವರಿಸಲಿಲ್ಲ ಎಂದು ಫ್ರೆಂಚ್ ನಿಯತಕಾಲಿಕ ಆರೋಪಿಸಿದೆ” ಎಂದು ಅದರಲ್ಲಿ ಬರೆಯಲಾಗಿದೆ.

ಭಾರತದ ಸುಶೇನ್ ಗುಪ್ತಾ ಎಂಬಾತನಿಗೆ ರಹಸ್ಯವಾಗಿ ಲಂಚ ನೀಡಲಾಗಿದೆ. ಸುಳ್ಳು ರಶೀದಿಗಳನ್ನು ಸೃಷ್ಟಿಸಲಾಗಿದೆ. ಇಷ್ಟೆಲ್ಲಾ ದಾಖಲೆಗಳು 2018 ರಲ್ಲಿಯೇ ಸಿಬಿಐ ಮತ್ತು ಇಡಿಗೆ ಸಿಕ್ಕಿದ್ದರೂ ಅವರು ತನಿಖೆ ಆರಂಭಿಸಿಲ್ಲ ಎಂದು ಪತ್ರಿಕೆ ದೂರಿದೆ. ಅಗುಸ್ಟಾವೆಸ್ಟ್‌ಲ್ಯಾಂಡ್ ಪ್ರಕರಣದಲ್ಲಿ ವಿ.ವಿ.ಐ.ಪಿ ಹೆಲಿಕ್ಯಾಪ್ಟರ್‌ಗಳ ಒಪ್ಪಂದದಲ್ಲಿ ಭಾರತದಲ್ಲಿ ಕಿಕ್‌ಬ್ಯಾಕ್‌ ಪಡೆದ ಆರೋಪದ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಸುಶೇನ್ ಗುಪ್ತಾ ಮೇಲೆ ಈ ಪ್ರಕರಣದಲ್ಲಿ ಏಕೆ ತನಿಖೆಯಿಲ್ಲ ಎಂದು ಅದು ಪ್ರಶ್ನಿಸಿದೆ.

ಮೀಡಿಯಾ ಪಾರ್ಟ್ ಪತ್ರಿಕೆಯೂ ರಾಫೇಲ್ ಹಗರಣದ ದಾಖಲೆಗಳ ತನಿಖೆಯ ಕುರಿತು ಸರಣಿ ಲೇಖನಗಳನ್ನು ಪ್ರಕಟಿಸಿದೆ. ಇದು ರಾಫೇಲ್ ಭ್ರಷ್ಟಾಚಾರದ ಕುರಿತು ಫ್ರಾನ್ಸ್‌ನಲ್ಲಿ ನ್ಯಾಯಾಂಗ ತನಿಖೆಗೆ ಕಾರಣವಾಗಿದೆ.


ಇದನ್ನೂ ಓದಿ: ರಫೇಲ್ ಹಗರಣ: ಸತ್ಯ ನಿಮ್ಮೊಂದಿಗೆ, ಭಯವಿಲ್ಲದೆ ಹೋರಾಡಿ – ಕಾಂಗ್ರೆಸ್ಸಿಗರಿಗೆ ರಾಹುಲ್ ಗಾಂಧಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...