Homeಕರ್ನಾಟಕಬೆಂಗಳೂರು: ಶೀಘ್ರದಲ್ಲೇ ಜೆಡಿಎಸ್‌ನಿಂದ ’ಜನತಾ ಜಲಧಾರೆ’ ಕಾರ್ಯಕ್ರಮ

ಬೆಂಗಳೂರು: ಶೀಘ್ರದಲ್ಲೇ ಜೆಡಿಎಸ್‌ನಿಂದ ’ಜನತಾ ಜಲಧಾರೆ’ ಕಾರ್ಯಕ್ರಮ

- Advertisement -
- Advertisement -

 

ರಾಜ್ಯದ ನದಿ ನೀರು ಬಳಕೆ ಹಾಗೂ ಜನರಿಗೆ ಜಲ ಭದ್ರತೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ದೀರ್ಘಕಾಲೀನ ಅನುಕೂಲತೆಯ ’ಜನತಾ ಜಲಧಾರೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

“ರಾಜ್ಯದಲ್ಲಿ ನದಿ, ಉಪನದಿಗಳು ಸೇರಿ 38 ಜೀವ ನದಿಗಳು ಇದ್ದು, ಅವುಗಳ ಜಲ ಸಂಗ್ರಹ ಮಾಡಿ ನೀರಿನ ಬಳಕೆಯ ಬಗ್ಗೆ ನಾಡಿನ ಜನರಿಗೆ ಅರಿವು ಮೂಡಿಸುವ ಹಾಗೂ ರಾಜ್ಯದ ನೀರಾವರಿ ಹಿತಾಸಕ್ತಿಗಳನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ದೊಡ್ಡ ಪ್ರಮಾಣದಲ್ಲಿ ಜನತಾ ಜಲಧಾರೆ ಕಾರ್ಯಕ್ರಮ ರೂಪಿಸಲಾಗಿದೆ. ಶೀಘ್ರದಲ್ಲೇ ಈ ಬಗ್ಗೆ ಮಾಹಿತಿ ನೀಡುವೆ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಈ ವೇಳೆ ನೀರಾವರಿ ವಿಷಯಗಳಲ್ಲಿ ಅಕ್ಕಪಕ್ಕದ ರಾಜ್ಯಗಳು ಕರ್ನಾಟಕದ ಬಗ್ಗೆ ಹೃದಯ ವೈಶಾಲ್ಯತೆ ಮೆರೆಯಬೇಕು ಹಾಗೂ ನೀರಾವರಿ ಬಿಕ್ಕಟ್ಟುಗಳನ್ನು ನ್ಯಾಯಾಲಯದ ಹೊರಗೆ ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂದು  ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ!- ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

’ಕಾವೇರಿ, ಮೇಕೆದಾಟು ವಿಷಯದಲ್ಲಿ ತಮಿಳುನಾಡು ತಗಾದೆ ತೆಗೆಯುತ್ತದೆ. ಕೃಷ್ಣಾ ವಿಷಯದಲ್ಲಿ ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶ ರಾಜ್ಯಗಳು ವಿವಾದ ಹುಟ್ಟು ಹಾಕುತ್ತಿದೆ. ಆದರೆ, ಆ ರಾಜ್ಯಗಳ ಅಸಂಖ್ಯಾತ ಜನರು   ಬೆಂಗಳೂರು ಮಹಾನಗರದಲ್ಲಿ ವಾಸ ಮಾಡುತ್ತಿದ್ದಾರೆ. ಅವರೆಲ್ಲರೂ ಕಾವೇರಿ ನೀರು ಕುಡಿಯುತ್ತಾ ಬದುಕುತ್ತಿದ್ದಾರೆ. ಇಲ್ಲಿಯೇ ಬದುಕು ಕಟ್ಟಿಕೊಂಡಿದ್ದಾರೆ. ಇದನ್ನು ಆಯಾ ರಾಜ್ಯಗಳ ಸರಕಾರಗಳು ಅರ್ಥ ಮಾಡಿಕೊಳ್ಳಬೇಕು’ ಎಂದಿದ್ದಾರೆ.

ಮುಂದುವರಿದು, ’ರಾಷ್ಟ್ರೀಯ ಪಕ್ಷಗಳು ರಾಜ್ಯದ ನೀರಾವರಿ ಹಿತರಕ್ಷಣೆ ಮಾಡುವುದಿಲ್ಲ. ಈ ಸತ್ಯ ಜನರಿಗೆ ಮನವರಿಕೆ ಮಾಡಿಕೊಡಲಾಗುವುದು. ಕೇಂದ್ರದ ಮುಂದೆ ನಮ್ಮ ಸರ್ಕಾರದಿಂದ ಮನವಿ ಕಳುಹಿಸಲಾಗಿದೆ. ಅದಕ್ಕೆ ಸರಿಯಾದ ಪ್ರತಿಕ್ರಿಯೆ ಬಂದಿಲ್ಲ. ಇವೆಲ್ಲ ಕಾರಣಕ್ಕೆ ಜಲಧಾರೆ ಕಾರ್ಯಕ್ರಮ ರೂಪಿಸುತ್ತಿದ್ದೇವೆ. ಜನತೆಯ ಮುಂದೆ ಈ ಕಾರ್ಯಕ್ರಮ ಇಡುತ್ತೇವೆ ಎಂದು ತಿಳಿಸಿದ್ದಾರೆ.

ನಮ್ಮ ರಾಜ್ಯದ 38 ನದಿಗಳ ನೀರು ಬಳಕೆ ಮಾಡಬೇಕು. ಹೀಗಾಗಿ ನಾವು ಹೋರಾಟ ಮಾಡುತೇವೆ. ನಾವು ಯಾವುದೇ ಗಿಮಿಕ್ ಮಾಡುತ್ತಿಲ್ಲ. ನಾವು ಬದ್ಧತೆ ಇಟ್ಟುಕೊಂಡು ಹೋಗುವವರು. ನಮ್ಮ ಕಾರ್ಯಕ್ರಮ ರೂಪರೇಷ ವಿಭಿನ್ನವಾಗಿರುತ್ತದೆ. ನೀರಾವರಿ ವಿಚಾರವಾಗಿ ರಾಜ್ಯಕ್ಕೆ ದೊಡ್ಡ ಕೊಡುಗೆ ನೀಡಿದವರಲ್ಲಿ ಮೊದಲಿಗರು ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


ಇದನ್ನೂ ಓದಿ: ʼಒಂದೇ ದೇಶ, ಒಂದೇ ಭಾಷೆʼ ಎಂಬ ಕರಾಳ ನೀತಿಯ ಮೂಲಕ ಹಿಂದಿ ಹೇರಿಕೆ: ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...