Homeಮುಖಪುಟ’ನಾನು ಚೆನ್ನಾಗಿದ್ದೇನೆ’: ರಾಷ್ಟ್ರೀಯ ಕುಸ್ತಿಪಟು ನಿಶಾ ದಹಿಯಾ ಹತ್ಯೆ ಸುದ್ದಿ ಸುಳ್ಳು

’ನಾನು ಚೆನ್ನಾಗಿದ್ದೇನೆ’: ರಾಷ್ಟ್ರೀಯ ಕುಸ್ತಿಪಟು ನಿಶಾ ದಹಿಯಾ ಹತ್ಯೆ ಸುದ್ದಿ ಸುಳ್ಳು

- Advertisement -
- Advertisement -

ರಾಷ್ಟ್ರೀಯ  ಕುಸ್ತಿಪಟು ನಿಶಾ ದಹಿಯಾ ಅವರನ್ನು ಹರಿಯಾಣದಲ್ಲಿ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂಬ ಸುಳ್ಳು ಸುದ್ದಿ ಹಿನ್ನೆಲೆ ಸ್ವತಃ ಹೇಳಿಕೆ ನಿಡಿರುವ ನಿಶಾ ದಹಿಯಾ “ನಾನು ಸಂಪೂರ್ಣವಾಗಿ ಚೆನ್ನಾಗಿದ್ದೇನೆ” ಎಂದಿದ್ದಾರೆ.

ಮಾಧ್ಯಮಗಳು ನಿಶಾ ಹಾಗೂ ಅವರ ಸಹೋದರನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ವರದಿ ಮಾಡಿದ್ದವು. ಸುದ್ದಿ ವೈರಲ್ ಆಗುತ್ತಿದ್ದ ಹಾಗೆ ತಮಂಆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ನಾನು ಸುರಕ್ಷಿತವಾಗಿದ್ದೇನೆ ಎಂದಿದ್ದಾರೆ.

“ನನ್ನ ಹಾಗೂ ನನ್ನ ಕುಟುಂಬದ ಮೇಲೆ ಯಾವುದೇ ಗುಂಡಿನ ದಾಳಿ ನಡೆದಿಲ್ಲ. ನಾನು ಮತ್ತು ನನ್ನ ಕುಟುಂಬ ಸುರಕ್ಷಿತವಾಗಿದೆ. ಇದು ಸುಳ್ಳು ಸುದ್ದಿ” ಎಂದು ರಾಷ್ಟ್ರೀಯ ಕುಸ್ತಿಪಟು ನಿಶಾ ದಹಿಯಾ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

 

View this post on Instagram

 

A post shared by Nisha Dahiya (@nisha_dahiya_07)

ಕಳೆದ ವಾರ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದ ಕುಸ್ತಿಪಟು ಮತ್ತು ಆಕೆಯ ಸಹೋದರ ಸೂರಜ್ ಅವರನ್ನು ಇಂದು ಸೋನಿಪತ್‌ನ ಸುಶೀಲ್ ಕುಮಾರ್ ಕುಸ್ತಿ ಅಕಾಡೆಮಿಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿಗಳು ಮಾಡಿದ್ದವು.

ಸುಶೀಲ್ ಕುಮಾರ್ ಕುಸ್ತಿ ಅಕಾಡೆಮಿ ಹರಿಯಾಣದ ಸೋನೆಪತ್ ನ ಹಲಾಲ್‌ಪುರದಲ್ಲಿದೆ.


ಇದನ್ನೂ ಓದಿ: ವಿರಾಟ್‌ ಕೊಹ್ಲಿ ಮಗಳಿಗೆ ಅತ್ಯಾಚಾರ ಬೆದರಿಕೆಯೊಡ್ಡಿದ ಆರೋಪಿಯ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೊಪ್ಪಳ: ಬಿಜೆಪಿ ಭದ್ರಕೋಟೆಯನ್ನು ಛಿದ್ರಗೊಳಿಸಲು ಕಾಂಗ್ರೆಸ್‌ಗೆ ಸುವರ್ಣಾವಕಾಶ!?

0
ಹಿಂದುತ್ವ ರಾಜಕಾರಣದ ವಿಚಾರದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರ ಕಳೆದ ಒಂದೂವರೆ ದಶಕದಿಂದ ಥೇಟ್ ಚಿಕ್ಕಮಗಳೂರು-ಶಿವಮೊಗ್ಗದ ತದ್ರೂಪಿ. ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಹಿಂದುತ್ವದ ಅಜೆಂಡಾ ಇಲ್ಲಿ ನಿರ್ಣಾಯಕ. ಆದರೆ, 2014ರಲ್ಲಿ ಲೋಕಸಭಾ ಕಣಕ್ಕೆ ಸಂಗಣ್ಣ ಕರಡಿ...