Homeಕರ್ನಾಟಕರಾಘವೇಶ್ವರ ಭಾರತೀ ಅತ್ಯಾಚಾರ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಮೂರ್ತಿ

ರಾಘವೇಶ್ವರ ಭಾರತೀ ಅತ್ಯಾಚಾರ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಮೂರ್ತಿ

ಇದುವರೆಗೂ ಒಟ್ಟು 16 ನ್ಯಾಯಮೂರ್ತಿಗಳು ಈ ಪ್ರಕರಣದಲ್ಲಿ ವಿವಿಧ ಕಾರಣ ನೀಡಿ ಹಿಂದೆ ಸರಿದಿದ್ದಾರೆ.

- Advertisement -
- Advertisement -

ರಾಮಚಂದ್ರಾಪುರ ಮಠದ ಸ್ವಾಮಿ ರಾಘವೇಶ್ವರ ಭಾರತೀ ಅವರನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿದ ಸೆಷನ್ಸ್‌ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಂತ್ರಸ್ತೆ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಗಳ ವಿಚಾರಣೆಯಿಂದ ಹೈಕೋರ್ಟ್ ನ್ಯಾಯಮೂರ್ತಿ ಎನ್‌.ಕೆ. ಸುಧೀಂದ್ರ ರಾವ್‌ ಹಿಂದೆ ಸರಿದಿದ್ದಾರೆ.

ಇದುವರೆಗೂ ಒಟ್ಟು 16 ನ್ಯಾಯಮೂರ್ತಿಗಳು ಈ ಪ್ರಕರಣದಲ್ಲಿ ವಿವಿಧ ಕಾರಣ ನೀಡಿ ಹಿಂದೆ ಸರಿದಿದ್ದಾರೆ. ಪ್ರಸ್ತುತ ಪ್ರಕರಣದಿಂದ ಹಿಂದೆ ಸರಿದಿರುವ ನ್ಯಾಯಮೂರ್ತಿ ಸುಧೀಂದ್ರ ರಾವ್ ಅವರು ಮುಂದಿನ ತಿಂಗಳು ಡಿಸೆಂಬರ್‌‌ 3 ಕ್ಕೆ ನಿವೃತ್ತಿ ಹೊಂದಲಿದ್ದಾರೆ.

“ವಾದವನ್ನು ಆಲಿಸಲು ಕಡಿಮೆ ಸಮಯಾವಕಾಶ ಇರುವ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯುತ್ತಿದ್ದೇನೆ” ಎಂದು ಹೇಳಿ ನ್ಯಾಯಮೂರ್ತಿ ವಿಚಾರಣೆಯಿಂದ ಬಿಡುಗಡೆ ಹೊಂದಿದ್ದಾರೆ.

ಇದನ್ನೂ ಓದಿ: ರೇವಣ್ಣನವರ ಕುರಿತು ವ್ಯಂಗ್ಯವಾಡಲು ಹೋಗಿ ತೀವ್ರ ಟೀಕೆ-ನಿಂದನೆಗೊಳಗಾದ ವಿಶ್ವೇಶ್ವರ ಭಟ್‌!

ರಾಘವೇಶ್ವರ ಭಾರತೀ ಸ್ವಾಮಿಯನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿ ಸೆಷನ್ಸ್‌ ನ್ಯಾಯಾಲಯ 2016 ಮಾರ್ಚ್ 31 ರಂದು ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಬೇಕು ಎಂದು ಸಂತ್ರಸ್ತೆ ರಾಮಕಥಾ ಗಾಯಕಿ ಮತ್ತು ಪ್ರಾಸಿಕ್ಯೂಷನ್‌ ಮೇಲ್ಮನವಿ ಸಲ್ಲಿಸಿದ್ದರು.

ರಾಘವೇಶ್ವರ ಭಾರತಿ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಇದುವರೆಗೂ 16 ಜನ ನ್ಯಾಯಮೂರ್ತಿಗಳು ವಿವಿಧ ಕಾರಣ ನೀಡಿ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಪ್ರಸ್ತುತ ವಿಚಾರಣೆಯಿಂದ ಹಿಂದೆ ಸರಿದಿರುವ ಸುಧೀಂದ್ರ ರಾವ್‌ ಅವರು ಪ್ರಕರಣದ ವಾದವನ್ನು ಅರ್ಧ ಆಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಲು ಈಗ ಬೇರೆ ನ್ಯಾಯಪೀಠದ ಮುಂದೆ ನಿಗದಿ ಪಡಿಸಬೇಕಿದೆ. ಆದರೆ ಅಲ್ಲಿ ಪ್ರಕರಣವನ್ನು ಮತ್ತೆ ಪ್ರಾಥಮಿಕ ಹಂತದಿಂದ ವಾದ-ಪ್ರತಿವಾದ ಪ್ರಕ್ರಿಯೆ ನಡೆಸಬೇಕಿದೆ ಎಂದು ಲೈವ್‌ ಲಾ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ: ಪಿ.ಲಂಕೇಶ್‌ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಸಂಭವಿಸಿದ ಎರಡು ಘಟನೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...