Homeಚಳವಳಿಲಖಿಂಪುರ್‌ ಖೇರಿ ಹತ್ಯಾಕಾಂಡ:‌ ಸರ್ಕಾರದ ಮನವಿ ಮೇರೆಗೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಲಖಿಂಪುರ್‌ ಖೇರಿ ಹತ್ಯಾಕಾಂಡ:‌ ಸರ್ಕಾರದ ಮನವಿ ಮೇರೆಗೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

- Advertisement -
- Advertisement -

ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನವೆಂಬರ್ 15 ಕ್ಕೆ ಮುಂದೂಡಲಾಗಿದೆ. ಉತ್ತರ ಪ್ರದೇಶ ಸರ್ಕಾರದ ಮನವಿಯ ಮೇರೆಗೆ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ ಮುಂದಿನ ವಾರಕ್ಕೆ ಪ್ರಕರಣವನ್ನು ಮುಂದೂಡಿದೆ.

ಉತ್ತರ ಪ್ರದೇಶ ಸರ್ಕಾರವನ್ನು ಪ್ರತಿನಿಧಿಸುತ್ತಿರುವ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು ನ್ಯಾಯಾಲಯದಿಂದ ಕಾಲಾವಕಾಶ ಕೋರಿ, ಸೋಮವಾರದವರೆಗೆ ನಮಗೆ ಸಮಯ ಕೊಡಿ, ನಾವು ಪ್ರಕರಣದಲ್ಲಿ ಕೆಲಸ ಮಾಡುತ್ತಿದ್ದೇವೆ. ಅದನ್ನು ಬಹುತೇಕ ಪೂರ್ಣಗೊಳಿಸಿದ್ದೇವೆ ಎಂದು ಪೀಠಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪಿಐಎಲ್ ಅನ್ನು ನವೆಂಬರ್ 15 ಕ್ಕೆ ಮುಂದೂಡಲಾಗಿದೆ.

ನವೆಂಬರ್‌ 8 ರಂದು ವಿಚಾರಣೆ ನಡೆಸಿದ್ದ ನ್ಯಾಯಾಲಯ, ಉತ್ತರ ಪ್ರದೇಶ ಸರ್ಕಾರ ಸಲ್ಲಿಸಿರುವ ವರದಿ ಬಗ್ಗೆ ನಾವು ನಿರೀಕ್ಷಿಸಿದಂತೆ ತನಿಖೆ ನಡೆದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತ್ತು. ಕಳೆದ ಮೂರು ಬಾರಿಯ ವಿಚಾರಣೆಯಲ್ಲಿಯೂ ಯುಪಿ ಸರ್ಕಾರದ ತನಿಖೆ, ವರದಿ ಬಗ್ಗೆ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸುತ್ತಿದೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಯುಪಿ ಸರ್ಕಾರದ ಬಗ್ಗೆ ಅಸಮಾಧಾನ, ಸ್ವತಂತ್ರ ಮೇಲ್ವಿಚಾರಣೆಗೆ ಸುಪ್ರೀಂ ಒಲವು

ಪ್ರಕರಣದಲ್ಲಿ ಸ್ವತಂತ್ರ ಮೇಲ್ವಿಚಾರಣೆಗೆ ಆದೇಶಿಸುವುದಾಗಿ ತಿಳಿಸಿದ್ದ ನ್ಯಾಯಪೀಠವು, “ಎರಡು ಎಫ್‌ಐಆರ್‌ಗಳ ಸಾಕ್ಷ್ಯಗಳನ್ನು ಪ್ರತ್ಯೇಕವಾಗಿ ದಾಖಲಿಸಬೇಕು. ಹೀಗಾಗಿ ದಿನನಿತ್ಯದ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ಬೇರೆ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರನ್ನು ನೇಮಿಸಲು ನಾವು ಒಲವು ತೋರುತ್ತೇವೆ. ನಿಮ್ಮ ರಾಜ್ಯ ಸರ್ಕಾರದ ನ್ಯಾಯಾಧೀಶರು ನಮಗೆ ಬೇಡ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನ್ಯಾಯಮೂರ್ತಿ ರಂಜೀತ್ ಸಿಂಗ್ ಅಥವಾ ನ್ಯಾಯಮೂರ್ತಿ ರಾಕೇಶ್ ಕುಮಾರ್ ಬಗ್ಗೆ ಯೋಚಿಸುತ್ತೇವೆ” ಎಂದು ನ. 8 ರಂದು ಸುಪ್ರೀಂಕೋರ್ಟ್ ನ್ಯಾಯಪೀಠ ತಿಳಿಸಿತ್ತು.

ಕಳೆದ ಎರಡು ವಾರಗಳ ಹಿಂದೆ (ಅ.26) ಹತ್ಯಾಕಾಂಡ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಹತ್ಯಾಕಾಂಡ ಪ್ರಕರಣದಲ್ಲಿ ಕೇವಲ 23 ಪ್ರತ್ಯಕ್ಷದರ್ಶಿ ಸಾಕ್ಷಿಗಳು ಸಾಲುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತ್ತು. ಹೆಚ್ಚಿನ ಸಾಕ್ಷಿಗಳನ್ನು ಸಂಗ್ರಹಿಸಿ ಅವರಿಗೆ ರಕ್ಷಣೆ ನೀಡಿ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶಿಸಿತ್ತು. ಜೊತೆಗೆ  ಒಂದು ವೇಳೆ ಸಾಕ್ಷಿಗಳ ಹೇಳಿಕೆಗಳನ್ನು ಪಡೆಯಲು ನ್ಯಾಯಾಂಗ ಅಧಿಕಾರಿಗಳ ಕೊರತೆಯಿದ್ದಲ್ಲಿ ಹತ್ತಿರದ ಜಿಲ್ಲೆಗಳ ನ್ಯಾಯಾಧೀಶರು ಸಿಬ್ಬಂದಿಯನ್ನು ಒದಗಿಸುವಂತೆ ನಿರ್ದೇಶನ ನೀಡಿತ್ತು.
ಘಟನೆಯ ವಿವರ:
ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ, ಒಕ್ಕೂಟ ಸರ್ಕಾರದ ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ರೈತರ ಗುಂಪು, ಯುಪಿಯ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ಪ್ರತಿಭಟನೆ ನಡೆಸಿ ವಾಪಾಸಾಗುತ್ತಿದ್ದರು. ಆಗ ಏಕಾಏಕಿ ಅವರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಮತ್ತು ಆತನ ಬೆಂಬಲಿಗರು ಕಾರು ಹರಿಸಿರುವ ಆರೋಪ ಎದುರಿಸುತ್ತಿದ್ದಾರೆ. ಘಟನೆಯಲ್ಲಿ ನಾಲ್ಕು ರೈತರು ಮೃತಪಟ್ಟರೆ ಹಲವರು ಗಾಯಗೊಂಡಿದ್ದರು. ಆ ನಂತರ ನಡೆದ ಹಿಂಸಾಚಾರದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಮತ್ತು ಒಬ್ಬ ಪತ್ರಕರ್ತ ಹತ್ಯೆಯಾಗಿದ್ದರು. ಇದುವರೆಗೆ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ 13 ಮಂದಿಯನ್ನು ಬಂಧಿಸಲಾಗಿದೆ.
ಹತ್ಯಾಕಾಂಡದ ಸಂದರ್ಭದಲ್ಲಿ ಆರೋಪಿ ಅಂಕಿತ್ ದಾಸ್ ಮತ್ತು ಆಶಿಶ್ ಮಿಶ್ರಾ ಅವರ ಪರವಾನಗಿ ಪಡೆದ ಬಂದೂಕುಗಳಿಂದ ಗುಂಡು ಹಾರಿಸಲಾಗಿದೆ ಎಂದು ವಿಧಿ ವಿಜ್ಞಾನ ಪ್ರಯೋಗಾಲಯವು ಮಂಗಳವಾರ (ನ.9) ದೃಢಪಡಿಸಿದೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ, ಅಂಕಿತ್ ದಾಸ್‌ ಗನ್‌ಗಳಿಂದ ಗುಂಡು ಹಾರಿಸಲಾಗಿದೆ- ಪ್ರಯೋಗಾಲಯದ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...

ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ; ಪ್ರತಿಭಟನಾ ಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡುವ ನಿರೀಕ್ಷೆಯಿರುವ ಬೆನ್ನಲ್ಲೇ, ವಿದ್ಯಾರ್ಥಿಗಳ ಹೋರಾಟಕ್ಕೆ ಪಕ್ಷವು ಬೆಂಬಲ ವ್ಯಕ್ತಪಡಿಸಿದೆ. ವಿದ್ಯಾರ್ಥಿ ಸಂಘವನ್ನು (ಜೆಎಂಐಎಸ್‌ಯು)...

ಎಂಎಲ್‌ಸಿ ಚುನಾವಣೆ ಸೋಲಿನ ಹಿಂದಿರುವ ರಾಜಕೀಯ – ಸಂಘಟನಾತ್ಮಕ ಕಾರಣಗಳ ಕುರಿತು ಪರಾಮರ್ಶಿಸುತ್ತೇವೆ: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್

ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಸೋಲಿನ ಹಿಂದಿರುವ ರಾಜಕೀಯ ಹಾಗೂ ಸಂಘಟನಾತ್ಮಕ ಕಾರಣಗಳ ಕುರಿತು ಸಮಗ್ರ ಪರಾಮರ್ಶೆ ನಡೆಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್...

ಸ್ಪೇನ್‌ನಲ್ಲಿ ಅತಿ ವೇಗದ ರೈಲುಗಳ ನಡುವೆ ಡಿಕ್ಕಿ; ಕನಿಷ್ಠ 46 ಮಂದಿ ಸಾವು

ಸ್ಪೇನ್‌ನ ಟೊಲೆಡೊ ಪ್ರಾಂತ್ಯದಲ್ಲಿ ಬುಧವಾರ ಬೆಳಿಗ್ಗೆ ಎರಡು ಅತಿ ವೇಗದ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 46 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಪೇನ್‌ನ ಎಬಿಸಿ (ಎಬಿಸಿ) ಸುದ್ದಿ ಸಂಸ್ಥೆ ವರದಿ ಮಾಡಿದೆ....

ಇಸ್ರೇಲ್ ಚುನಾವಣೆಯಲ್ಲಿ ಸಿಗದ ಬಹುಮತ; ಆದರೂ ಗೆಲುವಿನ ಹಕ್ಕು ಮಂಡಿಸಿದ ನೆತನ್ಯಾಹು

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅರಬ್ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಜೆರುಸಲೇಮ್‌ನಲ್ಲಿರುವ ಲಿಕುಡ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಹೂದಿ ಮತ್ತು ಝಿಯೋನಿಸ್ಟ್...