Homeಮುಖಪುಟಗುರ್‌ಗಾಂವ್‌ನಲ್ಲಿ ಮತ್ತೆ ನಮಾಜ್‌ಗೆ ಅಡ್ಡಿ: ನಮಾಜ್‌ ಸ್ಥಳವನ್ನು ವಾಲಿಬಾಲ್ ಕೋರ್ಟ್ ಮಾಡುವುದಾಗಿ ಹೇಳಿಕೆ

ಗುರ್‌ಗಾಂವ್‌ನಲ್ಲಿ ಮತ್ತೆ ನಮಾಜ್‌ಗೆ ಅಡ್ಡಿ: ನಮಾಜ್‌ ಸ್ಥಳವನ್ನು ವಾಲಿಬಾಲ್ ಕೋರ್ಟ್ ಮಾಡುವುದಾಗಿ ಹೇಳಿಕೆ

- Advertisement -
- Advertisement -

ಹರಿಯಾಣದ ಗುರ್‌ಗಾಂವ್‌ನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್‌ ಮಾಡುವುದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಇಂದು (ನ.12) ಕೂಡ ಸೆಕ್ಟರ್ 12A ರಲ್ಲಿ ಮುಸ್ಲಿಂ ಸಮುದಾಯದವರು ನಮಾಜ್ ಮಾಡುವುದಕ್ಕೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.

ನಮಾಜ್ ಸ್ಥಳವನ್ನು ಬೆಳಗ್ಗೆಯಿಂದಲೇ ಆಕ್ರಮಿಸಿಕೊಂಡಿರುವ ಹಿಂದೂ ಪರ ಸಂಘಟನೆಯ ಸದಸ್ಯರು ಇದನ್ನು ವಾಲಿಬಾಲ್ ಅಂಕಣ ಮಾಡುವುದಾಗಿ ಹೇಳಿಕೊಂಡಿದ್ದಾರೆ. ಜೊತೆಗೆ ಅಲ್ಲಿಯೇ ಕುಳಿತು ಪ್ರಾರ್ಥನೆ ನಡೆಯದಂತೆ ತಡೆದಿದ್ದಾರೆ.

ಕಳೆದ ವಾರ ನಮಾಜ್ ಮುಗಿಸಿದ ಮೇಲೆ ಆ ಸ್ಥಳದಲ್ಲಿ ಹಸುವಿನ ಬೆರಣಿಯನ್ನು ಸಾಲು ಸಾಲಾಗಿ ಹರಡಲಾಗಿತ್ತು. ಬಲಪಂಥೀಯ ಗುಂಪುಗಳು ನಮಾಜ್ ಸ್ಥಳದ ಮೇಲೆ ಸಗಣಿ ಹರಡಿ ಪೂಜೆ ನಡೆಸಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕಳೆದ ಹಲವಾರು ವಾರಗಳಿಂದ ಈ ಸ್ಥಳಗಳಲ್ಲಿ ಪ್ರತಿಭಟನೆ ಮತ್ತು ಬೆದರಿಕೆ ನೀಡುವ ಘಟನೆಗಳು ನಡೆದ ನಂತರ ಮುಸ್ಲಿಂ ಸಂಘಟನೆಗಳು ಇಂದು ಈ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ’ಭಿಕ್ಷೆ ಬೇಡಿದವರಿಗೆ ಕ್ಷಮೆ ಸಿಕ್ಕಿದೆ..ಕೆಚ್ಚೆದೆಯಿಂದ ಹೋರಾಡಿದವರಿಗೆ ಸ್ವಾತಂತ್ರ್ಯ ಸಿಕ್ಕಿದೆ: ಕಂಗನಾಗೆ ಕಾಂಗ್ರೆಸ್ ತಿರುಗೇಟು

2018 ರಲ್ಲಿ ಇದೇ ರೀತಿಯ ಘರ್ಷಣೆಗಳ ನಂತರ ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಒಪ್ಪಂದದ ನಂತರ ನಮಾಜ್ ಮಾಡಲು ನಿಯೋಜಿಸಲಾಗಿದ್ದ 29 ಸ್ಥಳಗಳಲ್ಲಿ ಸೆಕ್ಟರ್ 12A  ಕೂಡ ಒಂದು ನಮಾಜ್ ಸ್ಥಳವಾಗಿದೆ.

ಇನ್ನು ನವೆಂಬರ್‌ 3 ರಂದು ಗುರುಗ್ರಾಮ್ ಆಡಳಿತವು ಮುಸ್ಲಿಮರಿಗೆ ನಮಾಜ್ ಮಾಡಲು ಗೊತ್ತುಪಡಿಸಿದ 37 ಸ್ಥಳಗಳ ಪೈಕಿ ಎಂಟರಲ್ಲಿ ಸ್ಥಳೀಯರ ವಿರೋಧದಿಂದ ಅನುಮತಿ ವಾಪಸ್ ಪಡೆದಿತ್ತು. ಗುರುಗ್ರಾಮ್ ಜಿಲ್ಲಾಡಳಿತದ ಅಧಿಕೃತ ಹೇಳಿಕೆಯ ಪ್ರಕಾರ, ಸ್ಥಳೀಯ ಜನರು ಮತ್ತು ಆರ್‌ಡಬ್ಲ್ಯೂಎಯಿಂದ ಆಕ್ಷೇಪಣೆ ಬಂದಿರುವ ಕಾರಣ ಅನುಮತಿಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿತ್ತು.

ಸೆಕ್ಟರ್ 49 ರಲ್ಲಿ ಬೆಂಗಾಲಿ ಬಸ್ತಿ, ಡಿಎಲ್‌ಎಫ್ ಹಂತ -3 ರ ವಿ ಬ್ಲಾಕ್, ಸೂರತ್ ನಗರ ಹಂತ -1, ಖೇರ್ಕಿ ಮಜ್ರಾ ಗ್ರಾಮದ ಹೊರವಲಯ, ದ್ವಾರಕಾ ಎಕ್ಸ್‌ಪ್ರೆಸ್‌ವೇ ಬಳಿಯ ದೌಲತಾಬಾದ್ ಗ್ರಾಮದ ಹೊರವಲಯ, ಸೆಕ್ಟರ್ 68 ರ ರಾಮಗಢ ಗ್ರಾಮದ ಬಳಿ, ಡಿಎಲ್‌ಎಫ್ ಸ್ಕ್ವೇರ್ ಟವರ್ ಬಳಿ ಮತ್ತು ರಾಂಪುರ ಗ್ರಾಮದಿಂದ ನಖ್ರೋಲಾ ರಸ್ತೆ. ಈ ಎಂಟು ಸ್ಥಳಗಳಲ್ಲಿ ನಮಾಜ್ ಮಾಡುವಂತಿಲ್ಲ ಎಂದು ಆದೇಶಿಸಿತ್ತು.

ನಮಾಜ್ ನಡೆಸುವು ಸ್ಥಳಗಳು ಮತ್ತು ಭವಿಷ್ಯದಲ್ಲಿ ನಮಾಜ್ ಮಾಡಲು ಸ್ಥಳಗಳನ್ನು ಗುರುತಿಸಲು ಉಪವಿಭಾಗೀಯ ಮ್ಯಾಜಿಸ್ಟ್ರೇಟ್, ಸಹಾಯಕ ಪೊಲೀಸ್ ಆಯುಕ್ತರು, ಧಾರ್ಮಿಕ ಸಂಘಟನೆಗಳು ಮತ್ತು ಸಿವಿಲ್ ಸೊಸೈಟಿ ಗುಂಪುಗಳ ಸದಸ್ಯರನ್ನೊಳಗೊಂಡ ಸಮಿತಿಯನ್ನು ಗುರುಗ್ರಾಮ್ ಡೆಪ್ಯುಟಿ ಕಮಿಷನರ್ ಯಶ್ ಗರ್ಗ್ ಅವರು ರಚಿಸಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.


ಇದನ್ನೂ ಓದಿ: ದೆಹಲಿ: ಸ್ಥಳೀಯರ ವಿರೋಧದಿಂದ ನಮಾಜ್‌ಗೆ ನಿಗದಿಪಡಿಸಿದ್ದ 8 ಸ್ಥಳಗಳ ಅನುಮತಿ ವಾಪಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...