Homeಮುಖಪುಟಆಶ್ರಮ್‌ ಸೆಟ್‌ ಮೇಲೆ ದಾಳಿ ಪ್ರಕರಣ: ಅರೆಸ್ಟ್‌ ಆದ ಒಂದೇ ದಿನದಲ್ಲಿ ಕೊಲೆ ಅಪರಾಧಿಗೆ ಜಾಮೀನು!

ಆಶ್ರಮ್‌ ಸೆಟ್‌ ಮೇಲೆ ದಾಳಿ ಪ್ರಕರಣ: ಅರೆಸ್ಟ್‌ ಆದ ಒಂದೇ ದಿನದಲ್ಲಿ ಕೊಲೆ ಅಪರಾಧಿಗೆ ಜಾಮೀನು!

- Advertisement -
- Advertisement -

ಕಳೆದ ತಿಂಗಳು ನಿರ್ದೇಶಕ, ನಿರ್ಮಾಪಕ ಪ್ರಕಾಶ್‌ ಝಾ ಅವರ ‘ಆಶ್ರಮ್‌-3′ ವೆಬ್‌ಸೀರೀಸ್‌ ಚಿತ್ರೀಕರಣದ ವೇಳೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದರು. ಈ ಸಂಬಂಧ ದಾಖಲಾಗಿದ್ದ ಪ್ರಕರಣದ ಪ್ರಮುಖ ಆರೋಪಿ ಕೊಲೆ ಅಪರಾಧಿಯೂ ಆಗಿದ್ದು, ಪೊಲೀಸರು ಬಂಧಿಸಿದ ಒಂದೇ ದಿನದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ.

ಸುಶೀಲ್‌‌ ಸುದೇಲೆ ಬಲಪಂಥೀಯ ಸಂಘಟನೆಯ ಭೋಪಾಲ್‌ ಘಟಕದ ಮುಖ್ಯಸ್ಥನಾಗಿದ್ದು, ಏಳು ಜನ ಆರೋಪಿಗಳಲ್ಲಿ ಒಬ್ಬಾತನಾಗಿದ್ದಾನೆ. ಈತನಿಗೆ ಕೊಲೆ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದ್ದು, ಜಾಮೀನಿನ ಮೇಲೆ ಹೊರಗೆ ಬಂದಿದ್ದಾನೆ. ಪ್ರಕಾಶ್‌ ಝಾ ಅವರ ಆಶ್ರಮ್‌ ಸೆಟ್‌ ಮೇಲೆ ದಾಳಿ ಮಾಡಿದ ಆರೋಪಿಗಳೊಂದಿಗೆ ಸುಶೀಲ್‌ ಸುದೇಲೆಯನ್ನು ಪೊಲೀಸರು ಬಂಧಿಸಿದ್ದರು. ಒಂದೇ ದಿನದಲ್ಲಿ ಸುದೇಲೆಗೆ ಜಮೀನು ದೊರೆತಿದೆ.

ದಾಳಿ ಕೃತ್ಯದ ಪ್ರಮುಖ ಆರೋಪಿ ಸುದೇಲೆ ಕೊಲೆ ಪ್ರಕರಣದಲ್ಲಿ ಈಗಾಗಲೇ ಭಾಗಿಯಾಗಿದ್ದು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಉನ್ನತ ನಾಯಕರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾನೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೂ ಸಂಪರ್ಕದಲ್ಲಿದ್ದಾನೆ ಎಂಬ ಸಂಗತಿ ಬಹಿರಂಗವಾಗಿತ್ತು.

ಬಲಪಂಥೀಯ ಸಂಘಟನೆಯಾದ ಬಜರಂಗದಳ ಕೇಂದ್ರ ಘಟಕದ ಸಂಚಾಲಕರಾಗಿರುವ ಸುಶೀಲ್ ಸುದೇಲೆ, ಮಧ್ಯಪ್ರದೇಶ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಮಾಜಿ ಭೋಪಾಲ್ ಮೇಯರ್ ಅಲೋಕ್ ಶರ್ಮಾ ಅವರ ಸಂಬಂಧಿಯೂ ಹೌದು. 2011ರ ಕೊಲೆ ಪ್ರಕರಣದಲ್ಲಿ ಸುದೇಲೆ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದು, ಸೆಪ್ಟೆಂಬರ್ 2015ರಿಂದ ಜಾಮೀನಿನ ಮೇಲೆ ಹೊರಗಿದ್ದಾನೆ ಎಂದು ದಿ ವೈರ್‌ ವರದಿ ಮಾಡಿತ್ತು.

ಇದನ್ನೂ ಓದಿರಿ: ಗುರ್‌ಗಾಂವ್‌ನಲ್ಲಿ ಮತ್ತೆ ನಮಾಜ್‌ಗೆ ಅಡ್ಡಿ: ನಮಾಜ್‌ ಸ್ಥಳವನ್ನು ವಾಲಿಬಾಲ್ ಕೋರ್ಟ್ ಮಾಡುವುದಾಗಿ ಹೇಳಿಕೆ

ವೆಬ್ ಸರಣಿಯ ಸೆಟ್‌ ಮೇಲೆ ದಾಳಿ ನಡೆದ ಒಂದು ದಿನದ ನಂತರ (ಅಕ್ಟೋಬರ್ 25ರಂದು), ಭೋಪಾಲ್ ಪೊಲೀಸರು ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿದ್ದರು. ವಿಶ್ವ ಹಿಂದೂ ಪರಿಷತ್‌ ಹಾಗೂ ಆರ್‌‌ಎಸ್‌ಎಸ್‌ನ ಯುವ ಘಟಕವಾಗಿ ಕಾರ್ಯ ನಿರ್ವಹಿಸುತ್ತಿರುವ ಬಜರಂಗದಳದ ಹಿರಿಯ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 147, 148, 149, 323, 336 ಮತ್ತು 427ರ ಅಡಿಯಲ್ಲಿ ಪೊಲೀಸರು ಸುದೇಲೆ, ಜೀವನ್ ಶರ್ಮಾ, ಅಭಿಜಿತ್, ದೀಲಿಪ್, ಕರಣ್, ಶರ್ವಾನ್ ಬೋಥಮ್ ಮತ್ತು ಸುನೀಲ್ ಸೋನಿ ಎಂಬವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಎಲ್ಲಾ ಸೆಕ್ಷನ್‌ಗಳು ಜಮೀನು ಪಡೆಯಲು ಅವಕಾಶ ನೀಡುತ್ತವೆ ಎಂದು ‘ದಿ ವೈರ್‌’ ಹೇಳಿತ್ತು.

ಅಕ್ಟೋಬರ್ 24ರಂದು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಭೋಪಾಲ್ ಪೊಲೀಸರು ನಾಲ್ವರು ಬಜರಂಗದಳ ಕಾರ್ಯಕರ್ತರನ್ನು ಬಂಧಿಸಿ, ಸಿಆರ್‌ಪಿಸಿಯ ಸೆಕ್ಷನ್ 151ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಅಪರಾಧಿ ಸುಶೀಲ್‌ ಸುದೇಲೆ ಹಿನ್ನೆಲೆ

2011ರ ಫೆಬ್ರವರಿ 5ರಂದು ಭೋಪಾಲ್ ಮೂಲದ ಗುರುಕಿರ್ಪಾ ಟ್ರಾವೆಲ್ಸ್‌ನ ಮಾಲೀಕ ಭಾಗ್‌ಚಂದ್ ಅಲಿಯಾಸ್ ಪಪ್ಪು ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ದಾಳಿಯ ಪ್ರಮುಖ ಆರೋಪಿ ಸುದೇಲೆ ಅವರನ್ನು ಭೋಪಾಲ್ ನ್ಯಾಯಾಲಯವು 2014ರಲ್ಲಿ ದೋಷಿ ಎಂದು ತೀರ್ಪು ನೀಡಿದೆ.

ಐಪಿಸಿಯ ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿಯ ಶಿಕ್ಷೆ) ಅಡಿಯಲ್ಲಿ ಅವರನ್ನು ತಪ್ಪಿತಸ್ಥರೆಂದು ಘೋಷಿಸಲಾಯಿತು ಮತ್ತು 1,000 ರೂಪಾಯಿಗಳ ದಂಡದ ಜೊತೆಗೆ 14 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಯಿತು.

ಇದನ್ನೂ ಓದಿರಿ: ಕೇರಳ: ದಲಿತ ಮಹಿಳೆಗೆ ಮನೆ ಕಟ್ಟುಲು ಸಾಮಾಗ್ರಿಯನ್ನು ಕೊಂಡೊಯ್ಯಲು ಬಿಡದ ಮೇಲ್ಜಾತಿ ಕುಟುಂಬ

“ಸುದೇಲೆ ಭಾಗ್‌ಚಂದ್‌ನಿಂದ ಹಣ ವಸೂಲಿ ಮಾಡುತ್ತಿದ್ದ. ಭಾಗ್‌ಚಂದ್ ಅವರು ಸುದೇಲೆ ವಿರುದ್ಧ ಹನುಮಾನ್‌ಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸುದೇಲೆ ಹಣಕ್ಕಾಗಿ ಬೇಡಿಕೆಯಿಡುತ್ತಿರುವ ವಿಡಿಯೊ ಕ್ಲಿಪ್ಅನ್ನು ಭಾಗ್‌ಚಂದ್‌ ಸಲ್ಲಿಸಿದ್ದರು. ಈ ವಿಡಿಯೋವನ್ನು ಮಾಧ್ಯಮಗಳಿಗೂ ಬಿಡುಗಡೆ ಮಾಡಲಾಗಿದೆ” ಎಂದು ಕೋರ್ಟ್ ಹೇಳಿದೆ.

ಭಾಗ್‌ಚಂದ್ ದೂರು ನೀಡಿದ ಬಳಿಕ ಕುಪಿತರಾದ ಸುದೇಲೆಯ ಐವರು ಸಹಚರರು 2011ರ ಫೆಬ್ರವರಿ 5ರಂದು ಭಾಗ್‌ಚಂದ್ ಮೇಲೆ ದೊಣ್ಣೆ ಮತ್ತು ಕತ್ತಿಗಳಿಂದ ಹಲ್ಲೆ ನಡೆಸಿ, ದೂರನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದರು. ಭಾಗ್‌ಚಂದ್‌ ತೀವ್ರ ಗಾಯಾಳುವಾಗಿಯೇ ತಪ್ಪಿಸಿಕೊಂಡು ಬಂದು ಹನುಮಂಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ತಲೆಗೆ ಪೆಟ್ಟಾಗಿದ್ದರಿಂದ ನಾಲ್ಕು ದಿನಗಳ ನಂತರ ಮೃತಪಟ್ಟರು.

ಭಾಗ್‌ಚಂದ್‌ನ ಸಾವಿನ ನಂತರ ಪೊಲೀಸರು, ಸುದೇಲೆ, ನೀಲೇಶ್ ಖಟಿಕೆ, ರಾಜ್‌ಕುಮಾರ್ ಚೌರಾಸಿಯಾ, ಅರವಿಂದ್ ನರ್ವಾರಿಯಾ, ವೀರೇಂದ್ರ ಯಾದವ್, ಗೋಪಾಲ್ ಯಾದವ್ ವಿರುದ್ಧ ಸೆಕ್ಷನ್ 294, 147, 148, 148, 506-ಬಿ, 427, 302, 120-ಬಿ ಪ್ರಕರಣ ದಾಖಲಿಸಿದರು.

ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ತೀರ್ಪು ನೀಡಿದೆ. ಭೋಪಾಲ್ ಜಿಲ್ಲಾ ನ್ಯಾಯಾಲಯದ ನ್ಯಾಯಮೂರ್ತಿ ಅಮಿತಾಭ್ ಮಿಶ್ರಾ ಅವರ ಏಕಸದಸ್ಯ ಪೀಠವು ಫೆಬ್ರವರಿ 5, 2014ರಂದು ನಡೆದ ಘಟನೆಯ ಸುಮಾರು ಮೂರು ವರ್ಷಗಳ ನಂತರ ಸುದೇಲೆ ಸೇರಿದಂತೆ ಎಲ್ಲಾ ಆರೋಪಿಗಳಿಗೆ 14 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಿತು. ಆದರೆ ಇಬ್ಬರು ಆರೋಪಿಗಳು (ಸುದೇಲೆ ಮತ್ತು ಬಜರಂಗದಳದ ರಾಜಕುಮಾರ ಚೌರಾಸಿಯಾ) ಸೆಪ್ಟೆಂಬರ್ 28, 2015ರಂದು ಜಾಮೀನು ಪಡೆದರು.

ರಾಜಕುಮಾರ್ ಅವರು ಪ್ರಸ್ತುತ ಭೋಪಾಲ್ ಮುನ್ಸಿಪಲ್ ಕಾರ್ಪೊರೇಶನ್‌ಗೆ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದರೆ, ಬಜರಂಗದಳದ ಕಾರ್ಯಕರ್ತನಾಗಿದ್ದ ಸುದೇಲೆಯನ್ನು ಬಜರಂಗದಳ ಕೇಂದ್ರ ಘಟಕದ ಸಂಚಾಲಕ ಸ್ಥಾನದಲ್ಲಿ ಕೂರಿಸಲಾಗಿದೆ.


ಇದನ್ನೂ ಓದಿರಿ: ಕಾಸ್‌ಗಂಜ್ ಮುಸ್ಲಿಂ ಯುವಕನ ಲಾಕಪ್ ಡೆತ್: ಸರ್ಕಾರದಿಂದ ವರದಿ ಕೇಳಿದ ಅಲ್ಪಸಂಖ್ಯಾತರ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...