Homeಮುಖಪುಟಯುಪಿ ವಿಧಾನಸಭೆ ಚುನಾವಣೆ ಗೆಲುವು 2024ರ ಲೋಕಸಭೆಗೆ ದಾರಿ: ಅಮಿತ್‌ ಶಾ

ಯುಪಿ ವಿಧಾನಸಭೆ ಚುನಾವಣೆ ಗೆಲುವು 2024ರ ಲೋಕಸಭೆಗೆ ದಾರಿ: ಅಮಿತ್‌ ಶಾ

ಕಾಂಗ್ರೆಸ್ ಎಷ್ಟು ಕಾಲ ಆಡಳಿತ ನಡೆಸಿತೋ ಅಷ್ಟು ಕಾಲ ಬಿಜೆಪಿ ಅಧಿಕಾರ ನಡೆಸಿದರೆ ಭಾರತ ಆರ್ಥಿಕ ಶಕ್ತಿ ಕೇಂದ್ರವಾಗಿ ಬದಲಾಗುತ್ತದೆ: ಅಮಿತ್‌ ಶಾ

- Advertisement -
- Advertisement -

ಮುಂಬರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿನ ದಿಗ್ವಿಜಯವು 2024ರ ಲೋಕಸಭಾ ಚುನಾವಣೆಗೆ ದಾರಿಯಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ ಭವಿಷ್ಯ ನುಡಿದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಪ್ರತಿನಿಧಿಸುವ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸುವ ಮುನ್ನ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ವೇದಿಕೆ ಹಂಚಿಕೊಂಡು ಅವರು ಮಾತನಾಡಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯ ತಳಮಟ್ಟದ ಚುನಾವಣಾ ತಂತ್ರಗಾರಿಕೆಯನ್ನು ರೂಪಿಸುವ ನಿಟ್ಟಿನಲ್ಲಿ ಅಮಿತ್‌ ಶಾ ಮಾತನಾಡಿದ್ದು, “ಕಾರ್ಯಕರ್ತರು ಪ್ರತಿ ಕುಟುಂಬದ ಕನಿಷ್ಠ ಮೂರು ಮತಗಳನ್ನು ಬಿಜೆಪಿಗೆ ಹಾಕಿಸಬೇಕು. ಏಕೆಂದರೆ ಉತ್ತರ ಪ್ರದೇಶದ ಗೆಲುವು ಮುಂಬರುವ ಲೋಕಸಭೆಗೆ ತೆರೆದ ಬಾಗಿಲಾಗಲಿದೆ” ಎಂದು ಕರೆ ನೀಡಿದ್ದಾರೆ.

ಒಂದು ಗಂಟೆಗೂ ಹೆಚ್ಚು ಕಾಲ ಮಾತನಾಡಿದ ಅವರು, ಬೂತ್ ಮಟ್ಟದ ಪ್ರಚಾರಗಳನ್ನು ಬಲಪಡಿಸುವಂತೆ ಪಕ್ಷದ ಕಾರ್ಯಕರ್ತರಲ್ಲಿ ಕೇಳಿಕೊಂಡರು. “ಇದಕ್ಕಾಗಿ ಬೂತ್ ಸಮಿತಿಗಳನ್ನು ಸ್ಥಾಪಿಸಬೇಕು” ಎಂದು ಸೂಚಿಸಿದರು.

ಇದನ್ನೂ ಓದಿರಿ: ಲಾಕಪ್ ಡೆತ್: ’ಉತ್ತರ ಪ್ರದೇಶದಲ್ಲಿ ಮಾನವ ಹಕ್ಕುಗಳು ಉಳಿದಿವೆಯೇ?’- ರಾಹುಲ್ ಗಾಂಧಿ

“ಬಿಜೆಪಿಗೆ ಮತ ಹಾಕಲು ತಲಾ 60 ಜನರ ಮೇಲೆ ಪ್ರತಿಯೊಬ್ಬ ವ್ಯಕ್ತಿಯೂ ಪ್ರಭಾವ ಬೀರಬೇಕು. ಒಂದು ವಲಯದಿಂದ ಕನಿಷ್ಠ 20 ಮತಗಳನ್ನು ಗಳಿಸುವ ಗುರಿಯನ್ನು ಇಟ್ಟುಕೊಳ್ಳಬೇಕು. ಪಕ್ಷದ ಪ್ರತಿ ಕಾರ್ಯಕರ್ತ ಪ್ರತಿ ಕುಟುಂಬಗಳಿಂದ ತಲಾ ಮೂರು ಮತಗಳನ್ನು ಗಳಿಸಬೇಕು” ಎಂದು ಅವರು ಹೇಳಿದ್ದಾರೆ.

“ಇದು ಸಾಮಾನ್ಯ ಚುನಾವಣೆಯಲ್ಲ. ಇದು ದೇಶವನ್ನು ಮುಂದಕ್ಕೆ ಕೊಂಡೊಯ್ಯುವ ಮತ್ತು ರಾಷ್ಟ್ರದ ಘನತೆಯನ್ನು ಎತ್ತಿ ಹಿಡಿಯುವ ಚುನಾವಣೆಯಾಗಿದೆ. ರೈತರಿಗೆ ಉಚಿತ ಗ್ಯಾಸ್ ಸಿಲಿಂಡರ್‌ ಯೋಜನೆ, ಪ್ರಧಾನಿಯವರ ಕಾರ್ಯಕ್ರಮಗಳು ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಜನರಿಗೆ ತಿಳಿಸಬೇಕು” ಎಂದಿರುವ ಅವರು, ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಸೇರಿದಂತೆ ದೇಶದಾದ್ಯಂತ ರೈತರು ನಡೆಸುತ್ತಿರುವ ಹೋರಾಟದ ಕುರಿತು ಅವರು ಪ್ರಸ್ತಾಪಿಸಲಿಲ್ಲ.

“ಕಾಂಗ್ರೆಸ್ ಕಾರ್ಯಕರ್ತರು ಇಷ್ಟು ವರ್ಷಗಳಿಂದ ಭ್ರಷ್ಟಾಚಾರ, ಅವ್ಯವಸ್ಥೆ ಮತ್ತು ವಿಭಜಕ ರಾಜಕೀಯದಲ್ಲಿ ಮಾತ್ರ ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಎಷ್ಟು ಕಾಲ ಆಡಳಿತ ನಡೆಸಿತೋ ಅಷ್ಟು ಕಾಲ ಬಿಜೆಪಿ ಅಧಿಕಾರ ನಡೆಸಿದರೆ ಭಾರತ ಆರ್ಥಿಕ ಶಕ್ತಿ ಕೇಂದ್ರವಾಗಿ ಬದಲಾಗುತ್ತದೆ” ಎಂದಿದ್ದಾರೆ.

“ಯೋಗಿ ಆದಿತ್ಯನಾಥ್ ಅವರ ಸರ್ಕಾರ ಗೂಂಡಾರಾಜ್ ಹಾಗೂ ಮಾಫಿಯಾವನ್ನು ನಿಯಂತ್ರಿಸಿದೆ. ನಾವು ಮುಂದಿನ ಐದು ವರ್ಷಗಳಲ್ಲಿ ಉತ್ತಮ ಉತ್ತರ ಪ್ರದೇಶವನ್ನು ರೂಪಿಸಬೇಕಾಗಿದೆ. ಯುಪಿ ಗೆಲುವು 2024ಕ್ಕೆ ಬಾಗಿಲು ತೆರೆಯುತ್ತದೆ” ಎಂದು ತಿಳಿಸಿದ್ದಾರೆ.

ಬಹುಜನ ಸಮಾಜ ಪಕ್ಷದ ಮಾಯಾವತಿ ಮತ್ತು ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರ ಅವಧಿಯಲ್ಲಿ ನಡೆದಿದ್ದ ಭ್ರಷ್ಟಾಚಾರ ಮತ್ತು ಗೂಂಡಾ ರಾಜ್ ಬಗ್ಗೆ ಜನರಿಗೆ ತಿಳಿಸಲು ಮನೆಮನೆಗೆ ಕಾರ್ಯಕರ್ತರು ಭೇಟಿ ನೀಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: 28 ವರ್ಷಗಳಿಂದಾದ ಪ್ರಯೋಗಗಳ ಫಲ- ಒಂದು ವರ್ಷದ ರೈತ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...