Homeಮುಖಪುಟದೆಹಲಿಯಲ್ಲಿ ಹದಗೆಟ್ಟ ಗಾಳಿ ಪರಿಸ್ಥಿತಿ ಸುಧಾರಿಸಲು 2 ದಿನ ಲಾಕ್‌ಡೌನ್? - ಸುಪ್ರೀಂ ಪ್ರಶ್ನೆ

ದೆಹಲಿಯಲ್ಲಿ ಹದಗೆಟ್ಟ ಗಾಳಿ ಪರಿಸ್ಥಿತಿ ಸುಧಾರಿಸಲು 2 ದಿನ ಲಾಕ್‌ಡೌನ್? – ಸುಪ್ರೀಂ ಪ್ರಶ್ನೆ

ರೈತರಿಂದಲೇ ಮಾಲಿನ್ಯವಾಗಿದೆ ಎಂದು ಏಕೆ ಬಿಂಬಿಸುತ್ತಿದ್ದೀರಿ? ರೈತರನ್ನು ದೂಷಿಸುವುದು ಎಲ್ಲರಿಗೂ ಫ್ಯಾಶನ್ ಆಗಿದೆ ಎಂದು ಕೋರ್ಟ್ ಕೇಂದ್ರದ ವಿರುದ್ಧ ಕಿಡಿಕಾರಿದೆ.

- Advertisement -
- Advertisement -

ಕಳೆದೊಂದು ವಾರದಿಂದ ದೆಹಲಿ ಮತ್ತು ಸುತ್ತಮುತ್ತಲಿನ ನಗರಗಳಲ್ಲಿ ಹೊಗೆ ತುಂಬಿಕೊಂಡಿದ್ದು ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಗಾಳಿಯ ಗುಣಮಟ್ಟ ಸೂಚ್ಯಂಕವು ತೀರಾ ಕೆಳಕ್ಕಿಳಿದಿರುವುದರಿಂದ ಇದನ್ನು ಸರಿಪಡಿಸಲು ಏನು ಕ್ರಮ ಕೈಗೊಂಡಿರುವಿರಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ. ಯಾವ ತುರ್ತು ಯೋಜನೆಗಳನ್ನು – ಕ್ರಮಗಳನ್ನು ಕೈಗೊಂಡಿರುವಿರಿ ತಿಳಿಸಿ. 2 ದಿನ ಲಾಕ್‌ಡೌನ್ ಮಾಡುವಿರಾ? ಗಾಳಿಯ ಗುಣಮಟ್ಟವನ್ನು ಉತ್ತಮಗೊಳಿಸಲು ನಿಮ್ಮ ಯೋಜನೆಯೇನು ಎಂದು ಸಿಜೆಐ ರಮಣ ಪ್ರಶ್ನಿಸಿದ್ದಾರೆ.

ಪರಿಸ್ಥಿತಿ ಎಷ್ಟು ಹದಗೆಟ್ಟಿದೆ ಎಂಬುದು ನಿಮಗೆ ತಿಳಿದಿದೆಯೇ? ನಾವು ಮನೆಯಲ್ಲಿಯೂ ಮಾಸ್ಕ್ ಧರಿಸಬೇಕಾಗ ಪರಿಸ್ಥಿತಿ ಬಂದಿದೆ. ಇದು ರಾಜ್ಯಗಳ ಜವಾಬ್ದಾರಿ, ಇಲ್ಲ ಕೇಂದ್ರ ಜವಾಬ್ದಾರಿ ಎಂದು ನುಣಚಿಕೊಳ್ಳುವ ಸಂದರ್ಭದ ಇದ್ಲ. ಕೂಡಲೇ ಪಂಜಾಬ್ ಹರಿಯಾಣ ರಾಜ್ಯಗಳೊಂದಿಗೆ ತುರ್ತು ಸಭೆ ನಡೆಸಿ. ಮುಂದಿನ ಎರಡು ಮೂರು ದಿನಗಳಲ್ಲಿ ಪರಿಸ್ಥಿತಿ ಸುಧಾರಿಸಿ ಎಂದು ನಮಗೆ ಅನ್ನಿಸುವ ರೀತಿ ಕ್ರಮ ಕೈಗೊಳ್ಳಿ ಎಂದು ರಮಣ ಸೂಚಿಸಿದ್ದಾರೆ.

ಶುಕ್ರವಾರದ ದೆಹಲಿಯ ಪರಿಸ್ಥಿತಿ ಈ ಅವಧಿಯಲ್ಲಿಯೇ ಅತಿ ಕೆಟ್ಟ ಪರಿಸ್ಥಿತಿ ತಲುಪಿತ್ತು. ಪರಿಸ್ಥಿತಿ ಗಂಭೀರತೆ ನಮಗೆ ಅರ್ಥವಾಗಿದೆ. ದೆಹಲಿಯ ಗಾಳಿಯನ್ನು ಉಸಿರಾಡುವುದು ದಿನಕ್ಕೆ 20 ಸಿಗರೇಟ್ ಸೇದುವಂತೆ ಎಂದು ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಒಪ್ಪಿಕೊಂಡಿದೆ. ಕೇಂದ್ರೀಯ ಮಾಲಿನ್ಯ ನಿಯಂತ್ರಕವು ಜನರು ಮನೆಯಲ್ಲಿಯೇ ಇರುವಂತೆ ಸೂಚಿಸಿದೆ.

ಕೃಷಿ ತ್ಯಾಜ್ಯವನ್ನು ಸುಡದಂತೆ ತಡೆಯುವುದು ಸದ್ಯದ ವಾಯುಮಾಲಿನ್ಯವನ್ನು ತಡೆಯುವ ಪ್ರಮುಖ ಹೆಜ್ಜೆಯಾಗಿದ್ದು ಇದರತ್ತ ಗಮನ ಹರಿಸುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ನಾವು ಹುಲ್ಲು ಸುಡುವುದನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಆದರೆ ಕಳೆದ ಐದಾರು ದಿನಗಳಲ್ಲಿ ಪಂಜಾಬ್‌ನಲ್ಲಿ ಉರಿಯುತ್ತಿರುವ ಕೃಷಿ ತ್ಯಾಜ್ಯದ ಕಾರಣದಿಂದಾಗಿ ಮಾಲಿನ್ಯ ಹೆಚ್ಚಾಗಿದೆ, ಹಾಗಾಗಿ ಪಂಜಾಬ್ ರಾಜ್ಯವು ಅದನ್ನು ತಡೆಯಬೇಕೆಂದು ಕೇಂದ್ರವು ಪಂಜಾಬ್‌ ಮೇಲೆ ಹೊಣೆ ಹೊರಿಸಿದೆ.

ಇದಕ್ಕೆ ಉತ್ತರಿಸಿದ ಮುಖ್ಯ ನ್ಯಾಯಮೂರ್ತಿಗಳು, “ರೈತರಿಂದಲೇ ಮಾಲಿನ್ಯವಾಗಿದೆ ಎಂದು ಏಕೆ ಬಿಂಬಿಸುತ್ತಿದ್ದೀರಿ? ಅವರಿಂದ ಒಂದಷ್ಟು ಮಾಲಿನ್ಯವಾಗಿದೆ. ಆದರೆ ಉಳಿದ ಮಾಲಿನ್ಯದ ಬಗ್ಗೆ ಏನು ಹೇಳುತ್ತೀರಿ? ದೆಹಲಿಯಲ್ಲಿ ಮಾಲಿನ್ಯವನ್ನು ನಿಯಂತ್ರಿಸಲು ನೀವು ಏನು ಮಾಡುತ್ತಿದ್ದೀರಿ? ನೀವೇ ಹೇಳಿ? ನಿಮ್ಮ ಸರಿಯಾದ ಯೋಜನೆ ಏನು? ಕೇವಲ 2-3 ದಿನಗಳು ವಿಚಾರ ಅಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೈತರಿಗೆ ಪ್ರೋತ್ಸಾಹಧನ ಸಿಗದಿದ್ದರೆ ಅವರು ಹೇಗೆ ತಾನೇ ಬದಲಾಗುತ್ತಾರೆ? ಅವರಿಗೆ ಸಿಗುವ ಒಂದಷ್ಟು ಸಬ್ಸಿಡಿಯ ಹೊರತಾಗಿಯೂ, ಅನೇಕ ರೈತರಿಗೆ ಹುಲ್ಲು ಸುಡುವ ಯಂತ್ರಗಳನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ ಎಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ. “ರೈತರನ್ನು ದೂಷಿಸುವುದು ಎಲ್ಲರಿಗೂ ಫ್ಯಾಶನ್ ಆಗಿದೆ. ನೀವು ಪಟಾಕಿಯನ್ನು ನಿಷೇಧಿಸಿದ್ದೀರಿ ಆದರೆ ಕಳೆದ 5-6 ದಿನಗಳಿಂದ ಏನಾಗುತ್ತಿದೆ” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಪ್ರಶ್ನಿಸಿದ್ದಾರೆ.

ಕೇಂದ್ರವನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ನಾವು ರೈತರನ್ನು ಮಾತ್ರ ದೂಷಿಸುತ್ತಿಲ್ಲ, ನಾವು ಅದನ್ನು ಎಂದಿಗೂ ಹೇಳಲಿಲ್ಲ” ಎಂದು ಸ್ಪಷ್ಟಪಡಿಸಿದರು.


ಇದನ್ನೂ ಓದಿ: 25 ವರ್ಷಗಳ ಹಿಂದಿನ ಲಾಕಪ್‌ ಡೆತ್‌ ಪ್ರಕರಣ ಮರು ತನಿಖೆಗೆ ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಧಿಕಾರದಲ್ಲಿರುವವರ ವಿರುದ್ಧ ಮಾತನಾಡುವ ಭಯವನ್ನು ನೀಟ್ ಚಳವಳಿ ಹೋಗಲಾಡಿಸಿದೆ: ನೇಹಾ ಬೋರಾ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ 'ಜೆನ್ ಜಿ' ಚಳವಳಿಯು ಜನರಲ್ಲಿದ್ದ ಭಯವನ್ನು ಹೋಗಲಾಡಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಆರ್‌ಎಸ್‌ಎಸ್‌ನವರು ವಿದ್ಯಾರ್ಥಿ ಮತ್ತು ಯುವಜನರನ್ನು ತಲುಪುವಂತೆ ಮಾಡಿದೆ ಎಂದು ಆಲ್...

Karnataka SIR : ನಿರ್ದೋಷಿ ಜನರೇಕೆ ದಾಖಲೆಗಾಗಿ ಅಲೆದಾಡಬೇಕು? ಲಾಜಿಕಲ್ ಡಿಸ್ಕ್ರಿಪೆನ್ಸಿ ನೋಟಿಸ್‌ಗೆ ನಾಗರಿಕ ಸಂಘಟನೆಗಳ ಆಕ್ಷೇಪ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಭಾಗವಾಗಿ ಮತದಾರರಿಗೆ ನೋಟಿಸ್ ನೀಡಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮವನ್ನು ನಾಗರಿಕ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ...

ಮಳೆಯೇ ಇಲ್ಲದೆ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಕಾರಣವೇನು?

ನೇಪಾಳ-ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಹಿಮನದಿ ಇದ್ದಕ್ಕಿದ್ದಂತೆ ಕರಗಿ ಕುಸಿದ ಪರಿಣಾಮ ಭೀಕರ ಪ್ರವಾಹ ಉಂಟಾಗಿದೆ. ಈ ವಿಕೋಪದಲ್ಲಿ ಇದುವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, 800ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು...

ರಾಹುಲ್ ಗಾಂಧಿ ಅವರ ‘ಛಾತ್ರೋನ್ ಕೀ ಗೂಂಜ್’ಗೆ ಹೇಳಿಕೆಗಳ ಫ್ಯಾಕ್ಟ್-ಚೆಕ್: ಬಿಜೆಪಿಯಿಂದ ‘ಜೂಠ್ ಕೀ ಗೂಂಜ್’ ವೆಬ್‌ಸೈಟ್ ಆರಂಭ

ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಅವರ 'ಛಾತ್ರೋನ್ ಕೀ ಗೂಂಜ್' ಅಭಿಯಾನದ ವೇಳೆ ನೀಡಲಾದ ಹೇಳಿಕೆಗಳನ್ನು ಫ್ಯಾಕ್ಟ್-ಚೆಕ್ (ಸತ್ಯಾಸತ್ಯತೆ ಪರಿಶೀಲನೆ) ಮಾಡುವ ವೆಬ್‌ಸೈಟ್‌ ಒಂದನ್ನು ಉಲ್ಲೇಖಿಸಿರುವ ಬಿಜೆಪಿ, "ರಾಹುಲ್...

101 ತಾಲ್ಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

ಮಳೆ ಕೊರತೆಯಿಂದ ತತ್ತರಿಸಿರುವ ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು ₹350...

ಕೊಟ್ಟ ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5ರಂದು ಸಿಜೆಪಿಯಿಂದ ದೆಹಲಿಯಲ್ಲಿ ಶಾಂತಿಯುತ ಮೆರವಣಿಗೆ

ಜುಲೈ 25ರಂದು ದೇಶದ ಯುವಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಸೆಪ್ಟೆಂಬರ್ 5ರಂದು ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ...

Karnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾದ ಮತಹರಣದ ವಿರುದ್ಧ ಕಾನೂನು ಸಮರ ನಡೆಸಲು ನಾಗರಿಕ ಸಂಘಟನೆಗಳು ಮುಂದಾಗಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ...

ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಘಟಿಕೋತ್ಸವ ರದ್ದು: ಸಿಜೆಐ, ಬಾರ್ ಕೌನ್ಸಿಲ್ ಮುಖ್ಯಸ್ಥರ ಆಹ್ವಾನಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ!

ಬೆಂಗಳೂರು: ದೇಶದ ಪ್ರತಿಷ್ಠಿತ ಕಾನೂನು ಶಿಕ್ಷಣ ಸಂಸ್ಥೆಯಾದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU), ತನ್ನ 34ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ದಿಢೀರ್ ರದ್ದುಗೊಳಿಸಿದೆ. ಸೆಪ್ಟೆಂಬರ್ 12 ರಂದು...

ತಮಿಳುನಾಡು| ದಲಿತ ಯುವಕನ ಲಾಕಪ್ ಡೆತ್ ಪ್ರಕರಣ; ಆರು ಜನ ಪೊಲೀಸರ ವಿರುದ್ಧ ಪ್ರಕರಣ ದಾಖಲು

ಕಲೆದ ಮಾರ್ಚ್‌ನಲ್ಲಿ ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆಸಿದ್ದ 26 ವರ್ಷದ ದಲಿತ ಯುವಕ ಆಕಾಶ್ ಡೆಲಿಸನ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿ-ಸಿಐಡಿ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ (ಚಾರ್ಜ್‌ಶೀಟ್), ಆರೋಪಿಗಳಾದ ಆರು ಮಂದಿ...

Karnataka SIR | ಡಿಲೀಟ್ ಪಟ್ಟಿಯಲ್ಲಿ ಅಂದಾಜು 52 ಲಕ್ಷ ಅರ್ಹ ಮತದಾರರಿದ್ದಾರೆ : ನಾಗರಿಕ ಸಂಘಟನೆಗಳಿಂದ ಗಂಭೀರ ಆರೋಪ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಮತದಾರರ ಪಟ್ಟಿಯಿಂದ ಈಗಾಗಲೇ ಹೊರಗಿಟ್ಟಿರುವ 1.08 ಕೋಟಿ (1,07,96,415) ಮತದಾರರ ಪೈಕಿ ಅಂದಾಜು 52 ಲಕ್ಷ ಮಂದಿ ಅರ್ಹರಿದ್ದಾರೆ ಎಂದು ನಾಗರಿಕ ಸಂಘಟನೆಗಳು ಗಂಭೀರ...