Homeಮುಖಪುಟಸಗಣಿ ಮತ್ತು ಗೋಮೂತ್ರ ದೇಶದ ಆರ್ಥಿಕತೆಯನ್ನು ಸಬಲಗೊಳಿಸುತ್ತದೆ: ಮಧ್ಯ ಪ್ರದೇಶ ಸಿಎಂ

ಸಗಣಿ ಮತ್ತು ಗೋಮೂತ್ರ ದೇಶದ ಆರ್ಥಿಕತೆಯನ್ನು ಸಬಲಗೊಳಿಸುತ್ತದೆ: ಮಧ್ಯ ಪ್ರದೇಶ ಸಿಎಂ

- Advertisement -
- Advertisement -

‘ಗೋವು, ಅದರ ಸಗಣಿ ಮತ್ತು ಮೂತ್ರದ ಮೂಲಕ ನಾವು ವೈಯಕ್ತಿಕ ಆರ್ಥಿಕತೆಯನ್ನು ಬಲಪಡಿಸಬಹುದು ಹಾಗೂ ದೇಶವನ್ನು ಆರ್ಥಿಕವಾಗಿ ಸದೃಢಗೊಳಸಬಹುದು’ ಎಂದು ಮಧ್ಯಪ್ರದೇಶದ ಮಾನ್ಯ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

ಶನಿವಾರ ಜರುಗಿದ ಭಾರತೀಯ ಪಶು ವೈದ್ಯಕೀಯ ಸಂಘವು ಆಯೋಜಿಸಿದ್ದ ಮಹಿಳಾ ಪಶುವೈದ್ಯರ ‘ಶಕ್ತಿ 2021’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ‘ಸರ್ಕಾರವು ಹಸುಗಳಿಗಾಗಿ ಅಭಯಾರಣ್ಯ ಮತ್ತು ಗೋಶಾಲೆಗಳನ್ನು ಅಭಿವೃದ್ಧಿಪಡಿಸಿದೆ. ಅದಕ್ಕೆ ಸಮಾಜದ ಸಹಭಾಗಿತ್ವದ ಅಗತ್ಯವಿದೆ’ ಎಂದು ತಿಳಿಸಿದ್ದಾರೆ.

‘ಮಧ್ಯಪ್ರದೇಶದ ಸ್ಮಶಾನಗಳಲ್ಲಿ ಶವ ಸಂಸ್ಕಾರಕ್ಕೆ ಮರದ ಬಳಕೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹಸುವಿನ ಸಗಣಿಯಿಂದ ಮಾಡಿದ ದಿಮ್ಮಿಗಳನ್ನು ಬಳಸಲಾಗುತ್ತಿದೆ’ ಎಂದು ಅವರು ಹೇಳಿದರು.

‘ಸಣ್ಣ ರೈತರು ಮತ್ತು ಜಾನುವಾರು ಮಾಲೀಕರಿಗೆ ಹಸು ಸಾಕಣೆ ಹೇಗೆ ಲಾಭದಾಯಕ ವ್ಯವಹಾರವಾಗಬಹುದು ಎಂಬುದರ ಕುರಿತು ಪಶುವೈದ್ಯರು ಮತ್ತು ತಜ್ಞರು ಸಂಶೋಧನೆ ನಡೆಸಬೇಕು’ ಎಂದು ಅವರು ಹೇಳಿದರು.

ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪರ್ಶೋತ್ತಮ್ ರೂಪಾಲಾ, ‘ಗುಜರಾತ್‌ನ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಸು ಸಾಕಣೆಯಲ್ಲಿ ತೊಡಗಿದ್ದಾರೆ. ಇದು ಡೈರಿ ವ್ಯವಹಾರದ ಯಶಸ್ಸಿಗೆ ಕಾರಣವಾಗಿದೆ’ ಎಂದರು.

ಈ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಆಯ್ಕೆಮಾಡಿ ಕೆಲಸ ಮಾಡುವ ಮಹಿಳಾ ಪಶುವೈದ್ಯಕೀಯ ಪದವೀಧರರಿಗೆ ಸಹಾಯ ಮಾಡುವಂತೆ  ರೂಪಾಲಾ ಕೇಂದ್ರವನ್ನು ಒತ್ತಾಯಿಸಿದರು.


ಇದನ್ನೂ ಓದಿ: ಗೋವಿನ ಸೆಗಣಿ, ಮೂತ್ರ ಕೊರೊನಾಗೆ ಮದ್ದಲ್ಲ ಎಂದ ಪತ್ರಕರ್ತರ ವಿರುದ್ದ NSA ಅಡಿ ಪ್ರಕರಣ ದಾಖಲು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...