Homeಕರ್ನಾಟಕ’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

- Advertisement -
- Advertisement -

’ಕುಟುಂಬ ರಾಜಕಾರಣ ಜೆಡಿಎಸ್ ಸಿದ್ಧಾಂತ’ ಎಂಬ ರಾಜ್ಯ ಬಿಜೆಪಿ ವ್ಯಂಗ್ಯಕ್ಕೆ ತಿರುಗೇಟು ನೀಡಿರುವ ಜೆಡಿಎಸ್, “ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ” ಎಂದಿದ್ದು, ಪಟ್ಟಿಯನ್ನು ಟ್ವೀಟ್ ಮಾಡಿದೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಜಾತ್ಯಾತೀತ ಜನತಾದಳದ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಬಿಜೆಪಿಯ ಕುಟುಂಬ ರಾಜಕಾರಣದ ಪಟ್ಟಿ ನೀಡಿದೆ. “ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ! ಬೀದಿಯಲ್ಲಿ ಇನ್ನೊಂದು ಮುಖ! ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ʼಆಪರೇಷನ್ ಕಮಲʼದ ಮೂಲಕ ರಚನೆ ಮಾಡಿದ ಸರಕಾರಗಳೇ ಸಾಕ್ಷಿ” ಎಂದಿದೆ.

“ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ” ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: RSS ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

  1. ಯಡಿಯೂರಪ್ಪ ಕುಟುಂಬ: ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ. ಹಿರಿಮಗ ಲೋಕಸಭೆ ಸದಸ್ಯ, ಕಿರಿಮಗ ಪಕ್ಷದ ಉಪಾಧ್ಯಕ್ಷ.

2. ಶೆಟ್ಟರ್ ಕುಟುಂಬ: ಜಗದೀಶ್ ಶೆಟ್ಟರ್ ಶಾಸಕರು, ಮಾಜಿ ಸಚಿವ, ಮಾಜಿ ಸಿಎಂ; ಅವರ ತಮ್ಮ ಹಾಲಿ ವಿಧಾನ ಪರಿಷತ್ ಸದಸ್ಯ.

3. ಅಣ್ಣಾ ಸಾಹೇಬ್ ಕುಟುಂಬ: ಪತಿ ಲೋಕಸಭೆ ಸದಸ್ಯ, ಪತ್ನಿ ರಾಜ್ಯದಲ್ಲಿ ಕ್ಯಾಬಿನೆಟ್ ಸಚಿವೆ.

4. ಬಳ್ಳಾರಿ ರೆಡ್ಡಿ ಕುಟುಂಬ: ಕರುಣಾಕರ ರೆಡ್ಡಿ ಶಾಸಕ, ಅವರ ಸಹೋದರ ಸೋಮಶೇಖರ ರೆಡ್ಡಿ ಕೂಡ ಶಾಸಕ. ಇನ್ನೊಬ್ಬ ಸಹೋದರ ಬಿಜೆಪಿ ನಾಯಕರೇ. ಅವರ ಗೆಳೆಯ ಶ್ರೀರಾಮುಲು ಈಗ ಮಂತ್ರಿ. ಮಾಜಿ ಎಂಪಿ ಶಾಂತಾ ಅವರು ಶ್ರೀರಾಮುಲು ತಂಗಿ. ಸಣ್ಣ ಫಕೀರಪ್ಪ ಕೂಡ ಅವರ ಪೈಕಿಯೇ.

5. ಜಾರಕಿಹೊಳಿ ಕುಟುಂಬ: ರಮೇಶ್ ಜಾರಕಿಹೊಳಿ ಮಾಜಿ ಮಂತ್ರಿ , ಶಾಸಕರು. ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಹಾಲಿ ಶಾಸಕರು, ಕೆಎಂಎಫ್ ಸದಸ್ಯರು.

6. ಲಿಂಬಾವಳಿ ಕುಟುಂಬ: ಅರವಿಂದ ಲಿಂಬಾವಳಿ ಶಾಸಕರು, ಅವರ ಭಾವಮೈದ ರಘು ಕೂಡ ಶಾಸಕರಲ್ಲವೇ..?

7. ಉದಾಸಿ ಕುಟುಂಬ: ದಿವಂಗತ ಉದಾಸಿ ಅವರು ಮಂತ್ರಿಗಳಾಗಿದ್ದರು. ಅವರ ಮಗ ಈಗ ಸಂಸತ್ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಎಚ್.ಡಿ.ಕುಮಾರಸ್ವಾಮಿ

’ಪಟ್ಟಿ ಇನ್ನೂ ಇದೆ. ರಾಜ್ಯವಾರು ಬರೆಯುತ್ತಾ ಹೋದರೆ ಪುಟಗಳೇ ಸಾಲುವುದಿಲ್ಲ. ಕುಟುಂಬ ರಾಜಕಾರಣದ  ರೆಂಬೆಕೊಂಬೆಗಳು ಸಮೃದ್ಧವಾಗಿರುವುದು ಎಲ್ಲಿ..? ಯಾವ ಪಕ್ಷದಲ್ಲಿ..? ಕುಟುಂಬ ರಾಜಕಾರಣದ ವಿರಾಟ ದರ್ಶನ ಆಗುತ್ತಿರುತ್ತಿರುವುದು ಎಲ್ಲಿ..?’ ಎಂದು ಪ್ರಶ್ನಿಸಿದೆ.

“ರಾಷ್ಟ್ರ ನಿರ್ಮಾಣ ಬಿಜೆಪಿಯ ಗುರಿಯಲ್ಲ. ಆಪರೇಷನ್ ಕಮಲ ಅದರ ಗರಿ. ಆಪರೇಷನ್ ಕಮಲವನ್ನು ರಾಷ್ಟ್ರೀಕರಣ ಮಾಡಿ ರಾಷ್ಟ್ರಪ್ರೇಮ ಮೆರೆದ ಕುಖ್ಯಾತಿ ಅದರದ್ದು. ಒಡಕು ರಾಜಕಾರಣ ಬಿಜೆಪಿ ನಿತ್ಯ ಕಾಯಕ. ಆಪರೇಷನ್ ಕಮಲ ಅದರ ಅಧಿಕೃತ ರಾಜಧರ್ಮ. ಕುಟುಂಬ ರಾಜಕಾರಣ ಅದರ ಅಧಿಕಾರದ ಸೋಪಾನ. ಸವಕಲು ಹೇಳಿಕೆಗಳಿಂದ ಬೇಳೆ ಬೇಯಿಸಿಕೊಳ್ಳುವುದು ಬಿಟ್ಟು ಜನರ ಕೆಲಸ ಮಾಡಿ. ಬೇರೆಯವರ ತಟ್ಟೆಯತ್ತ ನೋಡುವ ಚಾಳಿ ಬಿಟ್ಟರೆ ಉತ್ತಮ” ಎಂದು ಉಪದೇಶ ನೀಡಿದೆ.

ಶನಿವಾರ ಟ್ವೀಟ್ ಮಾಡಿ ಕುಟುಂಬ ರಾಜಕಾರಣ ಜೆಡಿಎಸ್ ಸಿದ್ಧಾಂತ ಎಂದಿದ್ದ ರಾಜ್ಯ ಬಿಜೆಪಿ, “ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ರೇವಣ್ಣ, ಪ್ರಜ್ವಲ್ ರೇವಣ್ಣ, ಭವಾನಿ, ರೇವಣ್ಣ, ಸೂರಜ್ ರೇವಣ್ಣ….ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಎಷ್ಟೊಂದು ಸಮೃದ್ಧವಾಗಿದೆ” ಎಂದಿತ್ತು.


ಇದನ್ನೂ ಓದಿ: ಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...