Homeಮುಖಪುಟತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರನ್ನು ಬಂಧಿಸಿದ ಅಸ್ಸಾಂ ಪೊಲೀಸರು

ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರನ್ನು ಬಂಧಿಸಿದ ಅಸ್ಸಾಂ ಪೊಲೀಸರು

- Advertisement -
- Advertisement -

ತ್ರಿಪುರಾ ರಾಜ್ಯದಲ್ಲಿ ನಡೆದ ಕೋಮು ಹಿಂಸಾಚಾರದ ಕುರಿತು ಗ್ರೌಂಡ್ ರಿಪೋರ್ಟ್ ಮಾಡಲು ತೆರಳಿದ್ದ ಸುದ್ದಿ ವೆಬ್‌ಸೈಟ್ ಎಚ್‌ಡಬ್ಲೂ ನ್ಯೂಸ್‌ನ (@hwnewsnetwork) ಇಬ್ಬರು ಪತ್ರಕರ್ತೆಯರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.

ಇಬ್ಬರು ಪತ್ರಕರ್ತೆಯರ ವಿರುದ್ಧ ವಿಶ್ವ ಹಿಂದೂ ಪರಿಷತ್ತಿನ ದೂರಿನ ಮೇಲೆ ಶನಿವಾರ ಉನಕೋಟಿ ಜಿಲ್ಲೆಯ ಫಾಟಿಕ್ರೋಯ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಸಿಲ್ಚಾರ್‌ಗೆ ತೆರಳುತ್ತಿದ್ದ ವೇಳೆ ಅಸ್ಸಾಂ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಅಸ್ಸಾಂನಲ್ಲಿ ಇವರ ಮೇಲೆ ಯಾವುದೇ ದೂರು ದಾಖಲಾಗದಿದ್ದರೂ ಗೋಮತಿ ಜಿಲ್ಲಾ ಎಸ್‌ಪಿ ಆದೇಶದಂತೆ ಬಂಧಿಸಲಾಗಿದೆ.

“ನಮ್ಮನ್ನು ಅಸ್ಸಾಂನ ಕರೀಂಗಂಜ್‌ನ ನಿಲಂಬಜಾರ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ಗೋಮತಿ ಜಿಲ್ಲಾ ಎಸ್‌ಪಿಯವರು ನಮ್ಮ ಬಂಧನಕ್ಕೆ ಆದೇಶ ನೀಡಿದ್ದಾರೆ ಎಂದು ನಿಲಂಬಜಾರ್ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿಯಿಂದ ನಮಗೆ ತಿಳಿಯಿತು” ಎಂದು ಪತ್ರಕರ್ತೆ ಸಮೃದ್ಧಿ ಸಕುನಿಯಾ ಟ್ವೀಟ್ ಮಾಡಿದ್ದಾರೆ. ಜೊತೆಗೆ ತಮ್ಮ ಸುದ್ದಿ ಸಂಸ್ಥೆಯ ಅಧಿಕೃತ ಹೇಳಿಕೆಯನ್ನು ಲಗತ್ತಿಸಿದ್ದಾರೆ.

ಇದನ್ನೂ ಓದಿ: ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಮೇಲೆ ದೂರು ದಾಖಲು

 ದೆಹಲಿ ಮೂಲದ ವರದಿಗಾರರಾದ 21 ವರ್ಷದ ಸಮೃದ್ಧಿ ಸಕುನಿಯಾ ಮತ್ತು 25 ವರ್ಷದ ಸ್ವರ್ಣ ಝಾ ವಿರುದ್ಧ ಭಾರತೀಯ ದಂಡ ಸಂಹಿತೆಯ 120B (ಕ್ರಿಮಿನಲ್ ಪಿತೂರಿ), 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 504 ಸೆಕ್ಷನ್ ಅಡಿಗಳಲ್ಲಿ ಫಾಟಿಕ್ರೋಯ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನವೆಂಬರ್ 13 ರಂದು ಫಾಟಿಕ್ರೋಯ್‌ನಲ್ಲಿರುವ ಮುಸ್ಲಿಂ ಮನೆಗಳಿಗೆ ಭೇಟಿ ನೀಡಿದಾಗ ಇಬ್ಬರು ಪತ್ರಕರ್ತರು “ಹಿಂದೂಗಳು ಮತ್ತು ತ್ರಿಪುರಾ ಸರ್ಕಾರದ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ” ಎಂದು ಆರೋಪಿಸಿ ಕಾಂಚನ್ ದಾಸ್ ಎಂಬವರು ದೂರು ದಾಖಲಿಸಿದ್ದಾರೆ.

ಪತ್ರಕರ್ತೆ ಸಕುನಿಯಾ, ಅಕ್ಟೋಬರ್ 24 ರಂದು ಉನಕೋಟಿಯ ಪೌಲ್ ಬಜಾರ್‌ನಲ್ಲಿ ಮಸೀದಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಎಚ್‌ಪಿ ಮತ್ತು ಬಜರಂಗದಳ ಸಂಘಟನೆ ಹೆಸರನ್ನು ಸೇರಿಸಿದ್ದಾರೆ. ಇದು ತ್ರಿಪುರಾದಲ್ಲಿ ಕೋಮು ಸೌಹಾರ್ದವನ್ನು ಹಾಳು ಮಾಡುವ “ಅಪರಾಧದ ಪಿತೂರಿ”ಯ ಭಾಗವಾಗಿದೆ ಎಂದು ದಾಸ್ ಆರೋಪಿಸಿದ್ದಾರೆ.

ನವೆಂಬರ್ 12 ರಂದು, ಸಮೃದ್ಧಿ ಸಕುನಿಯಾ ಮತ್ತು ಸ್ವರ್ಣ ಝಾ ಅವರು ತ್ರಿಪುರಾದ ಗೋಮತಿ ಜಿಲ್ಲೆಯಲ್ಲಿ ಬೆಂಕಿಗೆ ಆಹುತಿಯಾಗಿರುವ ಮಸೀದಿಯ ಬಗ್ಗೆ ವರದಿ ಮಾಡಿದ್ದರು. ಶನಿವಾರ ಇಬ್ಬರು ವರದಿಗಾರರು ಇಲ್ಲಿ ಇನ್ನೊಂದು ಮಸೀದಿ ಮತ್ತು ಮುಸ್ಲಿಮರ ಮನೆಗಳಿಗೆ ಹಾನಿಯಾಗಿರುವದನ್ನು ವರದಿ ಮಾಡಲು ಧರ್ಮನಗರಕ್ಕೆ ಬಂದಿದ್ದರು. ತ್ರಿಪುರಾದಲ್ಲಿ ಅಕ್ಟೋಬರ್ 26 ರಂದು ನಡೆದ ವಿಎಚ್‌ಪಿ ರ್‍ಯಾಲಿ ಬಳಿಕ ಹಿಂಸಾಚಾರ ಆರಂಭವಾಗಿದೆ.

ಆದರೆ, ಬಿಜೆಪಿ ಆಡಳಿತವಿರುವ ತ್ರಿಪುರಾದಲ್ಲಿ ಮಸೀದಿಯನ್ನು ಧ್ವಂಸ ಮಾಡಿರುವ ವರದಿಗಳನ್ನು ಗೃಹ ಸಚಿವಾಲಯ ತಳ್ಳಿಹಾಕಿದೆ. “ತ್ರಿಪುರಾದ ಗೋಮತಿ ಜಿಲ್ಲೆಯ ಕಕ್ರಾಬನ್ ಪ್ರದೇಶದಲ್ಲಿ ಮಸೀದಿಯನ್ನು ಹಾನಿಗೊಳಿಸಲಾಗಿದೆ ಮತ್ತು ಧ್ವಂಸಗೊಳಿಸಲಾಗಿದೆ ಎಂದು ವರದಿ ಪ್ರಸಾರವಾಗಿವೆ. ಈ ಸುದ್ದಿಗಳು ನಕಲಿ ಮತ್ತು ಸಂಪೂರ್ಣ ಸುಳ್ಳು” ಎಂದಿದೆ.


ಇದನ್ನೂ ಓದಿ: ’ಯುಎಪಿಎಯಿಂದ ಸತ್ಯವನ್ನು ಮೌನವಾಗಿಸಲಾಗದು’: ತ್ರಿಪುರಾ ಹಿಂಸಾಚಾರಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಬಂದನ ಕಂಡನಾರ್ಹ. ಈ ಇಬ್ಬರು ಪತ್ರಕರ್ತೆಯರನ್ನು ಈ ಕೂಡಲೇ ಬಿಡುಗಡೆ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...