Homeಮುಖಪುಟಲೀಗಲ್ ನೋಟಿಸ್: ಜೈಭೀಮ್‌ ನಟ ಸೂರ್ಯ ಬೆಂಬಲಕ್ಕೆ ನಿಂತವರು ಇವರು!

ಲೀಗಲ್ ನೋಟಿಸ್: ಜೈಭೀಮ್‌ ನಟ ಸೂರ್ಯ ಬೆಂಬಲಕ್ಕೆ ನಿಂತವರು ಇವರು!

- Advertisement -
- Advertisement -

‘ಜೈ ಭೀಮ್‌’ ಚಿತ್ರದ ನಾಯಕ ನಟ ಸೂರ್ಯ ಹಾಗೂ ನಿರ್ದೇಶಕ ಟಿ.ಜೆ.ಜ್ಞಾನವೇಲ್‌ ಅವರಿಗೆ ವನ್ನಿಯಾರ್‌ ಸಂಘದ ಅಧ್ಯಕ್ಷ ಲೀಗಲ್‌ ನೋಟೀಸ್ ಕಳುಹಿಸಿದ್ದು, ‘ಜೈ ಭೀಮ್‌’ ಸಿನಿಮಾದಲ್ಲಿ ವನ್ನಿಯಾರ್‌ ಸಮುದಾಯವನ್ನು ಕೆಟ್ಟದ್ದಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿದ್ದರು. ಆದರೆ ಇದನ್ನು ವಿರೋಧಿಸಿ ನಟ ಸೂರ್ಯ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಜೊತೆಗೆ ಟ್ವಿಟರ್‌ನಲ್ಲಿ #WeStandWithSuriya ಎಂಬ ಹ್ಯಾಶ್ ಟ್ಯಾಗ್‌ ಅಗ್ರ ಸ್ಥಾನದಲ್ಲಿ ಟ್ರೆಂಡ್‌ ಕೂಡಾ ಆಗಿತ್ತು.

“ವಣ್ಣಿಯಾರ್‌ ಸಮುದಾಯವನ್ನು ಅಪಮಾನಿಸಿರುವ ದೃಶ್ಯವನ್ನು ಚಿತ್ರದಿಂದ ತೆಗೆಯಬೇಕು, ಜೊತೆಗೆ ಐದು ಕೋಟಿ ರೂ. ಪರಿಹಾರವನ್ನು ಒದಗಿಸಬೇಕು” ಎಂದು ವಣ್ಣಿಯಾರ್‌ ಸಂಘಟನೆ ಆಗ್ರಹಿಸಿತ್ತು. ಚಿತ್ರವು ನೈಜ ಕಥೆಯನ್ನು ಆಧರಿಸಿದ್ದರೂ ಕೊಲೆಯಾದ ವ್ಯಕ್ತಿ ರಾಜಾಕಣ್ಣುಗೆ ಚಿತ್ರಹಿಂಸೆ ನೀಡುವ ಪೊಲೀಸ್ ಪಾತ್ರವನ್ನು ಉದ್ದೇಶಪೂರ್ವಕವಾಗಿ ವನ್ನಿಯಾರ್ ಜಾತಿಗೆ ಸೇರಿದವನೆಂದು ಚಿತ್ರಿಸಲಾಗಿದೆ ಎಂದು ವನ್ನಿಯಾರ್ ಸಂಘಮ್‌ ಅಧ್ಯಕ್ಷ ಪು.ತಾ.ಅರುಲ್ಮೋಳಿ ದೂರಿದ್ದರು.

ಇದನ್ನೂ ಓದಿ: ಜೈ ಭೀಮ್‌‌ ಸಿನಿಮಾ: ನಟ ಸೂರ್ಯ, ನಿರ್ದೇಶಕ ಟಿ.ಜೆ.ಜ್ಞಾನವೇಲ್‌ಗೆ ಲೀಗಲ್‌ ನೋಟೀಸ್‌

ವನ್ನಿಯಾರ್ ಜಾತಿಯ ಹಿತಾಸಕ್ತಿಗಳನ್ನು ಪ್ರತಿನಿಧಿಸುವ ಪಕ್ಷವಾದ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಮುಖ್ಯಸ್ಥ, ಒಕ್ಕೂಟ ಸರ್ಕಾರದ ಮಾಜಿ ಆರೋಗ್ಯ ಸಚಿವ ಅನ್ಬುಮಣಿ ರಾಮದಾಸ್ ಈ ಆರೋಪದ ರೂವಾರಿಯಾಗಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ನಟ ಸೂರ್ಯ, “ಚಿತ್ರದ ಮೂಲಕ ಆಡಳಿತರೂಢರ ವಿರುದ್ಧ ದನಿ ಎತ್ತಲಾಗಿದೆ. ಇದನ್ನು ರಾಜಕೀಯಗೊಳಿಸಿ ವಿಷಯವನ್ನು ತಿರುಚಬಾರದು. ನಿವೃತ್ತ ನ್ಯಾಯಮೂರ್ತಿ ಚಂದ್ರು ಅವರು ಅಧಿಕಾರಿಗಳ ವಿರುದ್ಧ ಕಾನೂನು ಹೋರಾಟವನ್ನು ಹೇಗೆ ನಡೆಸಿದರು ಎಂಬುದನ್ನು ಸಿನಿಮಾ ಹೇಳುತ್ತದೆ. ಸ್ಥಳೀಯ ಜನರು ತಮ್ಮ ದೈನಂದಿನ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಲು ಸಿನಿಮಾ ಪ್ರಯತ್ನಿಸಿದೆ” ಎಂದಿದ್ದಾರೆ.

ನಟ ಸೂರ್ಯ ಮೇಲೆ ನಡೆಯುತ್ತಿರುವ ದಾಳಿಯನ್ನು ವಿರೋಧಿಸಿ ನಿರ್ದೇಶಕ ಪ. ರಂಜಿತ್‌, ವೆಟ್ರಿಮಾರನ್‌, ನಟ ಪ್ರಕಾಶ್ ರಾಜ್ ಸೇರಿದಂತೆ ಹಲವಾರು ಸ್ವತಂತ್ರ ಪತ್ರಕರ್ತರು, ಚಿತ್ರೋದ್ಯಮಿಗಳು ಹಾಗೂ ಯೂಟ್ಯೂಬರ್‌ಗಳು ಧ್ವನಿ ಎತ್ತಿದ್ದಾರೆ.

ನಟ ಸೂರ್ಯ ಅವರ ವಿರುದ್ದ ಲೀಗಲ್ ನೋಟಿಸ್ ವಿಷಯ ಸುದ್ದಿ ಆಗುತ್ತಿದ್ದಂತೆ ನಿರ್ದೇಶಕ ಪ. ರಂಜಿತ್‌ “ನಾವು ಸೂರ್ಯ ಅವರ ಬೆಂಬಲಕ್ಕೆ ಇದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರದಲ್ಲಿ ಹಿಂದಿ ಮಾತನಾಡುವ ವ್ಯಕ್ತಿಗೆ ಕಪಾಳ ಮೋಕ್ಷ: ಪ್ರಕಾಶ್ ರಾಜ್‌ ಹೇಳಿದ್ದೇನು?

ದೇಶದ ಮತ್ತೊಬ್ಬ ಪ್ರತಿಭಾವಂತ ನಿರ್ದೇಶಕ ವೆಟ್ರಿ ಮಾರನ್‌ ಕೂಡಾ ಸೂರ್ಯ ಬೆಂಬಲಕ್ಕೆ ನಿಂತಿದ್ದು, “ಜೈ ಭೀಮ್ ತಂಡ ಸರಿಯಾದ ಕೆಲಸವನ್ನು ಮಾಡಿದೆ. ನಟ ಸೂರ್ಯ ತಮ್ಮ ತಾರಾ ಪಟ್ಟವನ್ನು ಮರುವ್ಯಾಖ್ಯಾನಿಸುತ್ತಿರುವ ಒಬ್ಬ ತಾರೆ. ನಾನು ಜೈ ಭೀಮ್‌ನ ಇಡೀ ತಂಡದ ಬೆಂಬಲಕ್ಕೆ ಇದ್ದೇನೆ” ಎಂದು ಹೇಳಿದ್ದಾರೆ.

ಜೈಭೀಮ್ ಚಿತ್ರದ ಸಹನಟ ಕೂಡಾ ಆಗಿರುವ ಹಿರಿಯ ನಟ ಪ್ರಕಾಶ್ ರಾಜ್ ಕೂಡಾ “ಸೂರ್ಯ ಬೆಂಬಲಕ್ಕೆ ನಾವಿದ್ದೇವೆ” ಎಂದು ಹೇಳಿದ್ದಾರೆ.

ಚಿತ್ರ ನಿರ್ದೇಶಕ ವೆಂಕಟ್‌ ಪ್ರಭು ಅವರು, “ಒಂಟಿಯಾಗಿ ನಿಂತರೂ ಸರಿ, ಸರಿಯಾದ ವಿಷಯಕ್ಕೆ ನಿಲ್ಲು. ನಾವು ಸೂರ್ಯ ಬೆಂಬಲಕ್ಕೆ ಇದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ಪತ್ರಕರ್ತೆ ಆಶಾಮೀರಾ ಅಯ್ಯಪ್ಪನ್ ಅವರು, “ಸತ್ಯ ಎಂಬುವುದು ಬೆಳಕು ಇದ್ದಹಾಗೆ. ಅದಕ್ಕಾಗಿ ಹೋರಾಡುವುದು ಯಾವತ್ತಿಗೂ ಬಿಡಬಾರದು” ಎಂದು ಹೇಳಿದ್ದಾರೆ.

ಇಷ್ಟೇ ಅಲ್ಲದೆ, ಇನ್ನೂ ಹಲವಾರು ಜನರು ನಟ ಸೂರ್ಯ ಅವರ ಪರವಾಗಿ ನಿಂತಿದ್ದಾರೆ. ಅದನ್ನು ಇಲ್ಲಿ ಕ್ಲಿಕ್ ನೋಡಬಹುದು.

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...