Homeಮುಖಪುಟನಾಗರಹೊಳೆಯಲ್ಲಿ ಗೇಟ್ ಹಾರಿದ ಆನೆ: ವೈರಲ್ ವಿಡಿಯೋ ನೋಡಿ

ನಾಗರಹೊಳೆಯಲ್ಲಿ ಗೇಟ್ ಹಾರಿದ ಆನೆ: ವೈರಲ್ ವಿಡಿಯೋ ನೋಡಿ

- Advertisement -
- Advertisement -

ಗೇಟ್ ಹಾರುವುದು, ಕಾಂಪೌಂಡ್ ಹಾರುವುದು ಶಾಲಾ-ಕಾಲೇಜು ಯುವಕ-ಯುವತಿಯರ ಸಾಧಾರಣ ಕೃತ್ಯ. ಆದರೆ ಆನೆಯೊಂದು ಗೇಟ್ ಹಾರಬಹುದೆ? ಆನೆಯ ದೈತ್ಯ ಆಕಾರ ನೆನೆಸಿಕೊಂಡರೆ ಸಾಧ್ಯವಿಲ್ಲ ಎನಿಸುತ್ತದೆ ಅಲ್ಲವೇ? ಆದರೆ ಇಲ್ಲೊಂದು ಆನೆ ಕಷ್ಟಪಟ್ಟು ಗೇಟ್ ಹಾರುವ ಮೂಲಕ ನೆಟ್ಟಿಗರ ಗಮನ ಸೆಳೆದಿದೆ.

ಮೈಸೂರಿನ ನಾಗರಹೊಳೆ ರಕ್ಷಿತ ಅರಣ್ಯ ಪ್ರದೇಶದ ವೀರನಹೊಸಳ್ಳಿ ರೇಂಜ್‌ನಲ್ಲಿ ನವೆಂಬರ್ 16ರ ಬೆಳಿಗ್ಗೆ ಆನೆಯೊಂದು ಕಬ್ಬಿಣದ ತಡೆಗೋಡೆಯನ್ನು ದಾಟುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾಡಿನಿಂದ ಪ್ರಾಣಿಗಳು ಮುಖ್ಯವಾಗಿ ಆನೆಗಳು ನಮ್ಮ ಹೊಲಕ್ಕೆ ಬರಬಾರದೆಂದು ಕೆಲವರು ಕಬ್ಬಿಣದ ತಡೆಗೋಡೆ ಹಾಕಿದ್ದಾರೆ. ಅದನ್ನು ದಾಟಿ ಬಂದಿರುವ ಆನೆಯೊಂದು ಮೇವು ತಿಂದು ನಂತರ ವಾಪಸ್ ಕಾಡಿನೊಳಕ್ಕೆ ಗೇಟು ದಾಟುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಸುಪ್ರಿಯ ಸಾಹುರವರು ತಮ್ಮ ಟ್ವಿಟರ್ ಖಾತೆಯಲ್ಲಿ ನವೆಂಬರ್ 17 ರಂದು “ಮಾತುಗಳಿಲ್ಲ” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ. 28 ಸೆಕೆಂಡ್‌ಗಳ ಈ ವಿಡಿಯೋವನ್ನು ಇದುವರೆಗೂ 2 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.

ಈ ವಿಡಿಯೋಗೆ ಸಾಕಷ್ಟು ಜನರು ಅದ್ಭುತವಾಗಿದೆ, ಕ್ಯೂಟ್ ಆಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಲವರು ಸಂಚಾರಿ ನಿಯಮವನ್ನು ಉಲ್ಲಂಘಿಸಿದ ಆನೆಗೆ ಟ್ರಾಫಿಕ್ ಪೊಲೀಸರು 500 ರೂ ದಂಡ ವಿಧಿಸಬೇಕೆಂದು ಹಾಸ್ಯ ಮಾಡಿದ್ದಾರೆ. ಇನ್ನು ಕೆಲವರು ಇದು ವನ್ಯಜೀವಿಗಳು ಮತ್ತು ಮಾನವರ ನಡುವಿನ ಸಂಘರ್ಷವಾಗಿದ್ದು, ತಡೆಗೋಡೆ ಹಾಕಿ ಆನೆಯ ಆಹಾರಕ್ಕೆ ಏಕೆ ಅಡ್ಡಿ ಮಾಡಲಾಗುತ್ತಿದೆ? ಆ ತಡೆಗೋಡೆ ಕಾನೂನುಬದ್ಧವೇ? ಕಾನೂನು ಬಾಹಿರವೇ? ಎಂದು ಪ್ರಶ್ನಿಸಿದ್ದಾರೆ.

ತಮಿಳುನಾಡು ಶಾಸಕ ಟಿಆರ್‌ಬಿ ರಾಜಾರವರು ಇದೇ ವೀಡಿಯೊವನ್ನು ತಮಿಳುನಾಡಿನ ಹಣಕಾಸು ಸಚಿವರಿಗೆ ಟ್ಯಾಗ್ ಮಾಡಿ ಹಂಚಿಕೊಂಡಿದ್ದಾರೆ. “ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯ ಸಮಯದಲ್ಲಿ ಆನೆ ಕಂದಕಗಳು ಮತ್ತು ಬ್ಯಾರಿಕೇಡ್‌ಗಳ ಕಳಪೆ ನಿರ್ವಹಣೆಯಿಂದ ಮನುಷ್ಯ ಮತ್ತು ಪ್ರಾಣಿಗಳ ಸಂಘರ್ಷವನ್ನು ತಡೆಯಲು ಅಸಮರ್ಥವಾದ ಬಗ್ಗೆ ಬಡ ಅರಣ್ಯ ಇಲಾಖೆ ಅಧಿಕಾರಿಗಳನ್ನು ನಾವು ದೂಷಿಸುತ್ತಿರುವಾಗ ಈ ಚೋರ ಜಂಬೋಗಳು ಹೊಸ ತಂತ್ರಗಳನ್ನು ಕಲಿಯುತ್ತಲೇ ಇದ್ದಂತೆ ತೋರುತ್ತಿದೆ” ಎಂದು ಬರೆದಿದ್ದಾರೆ.

ಕಾಡಿನ ನಾಶ, ಅರಣ್ಯ ಪ್ರದೇಶಗಳಲ್ಲಿ ಅಭಿವೃದ್ದಿ ಕಾರ್ಯಗಳು ಹೆಚ್ಚಾಗುತ್ತಿರುವುದರಿಂದ ಮನುಷ್ಯ ಮತ್ತು ಕಾಡಿನ ಪ್ರಾಣಿಗಳ ನಡುವೆ ಸಂಘರ್ಷ ಹೆಚ್ಚಾಗುತ್ತಿದೆ. ಕಾಡು ಕಡಿಮೆಯಾದಂತೆಲ್ಲ ಅಲ್ಲಿನ ಪ್ರಾಣಿಗಳು ನಾಡಿನ ಮೇಲೆ ದಾಳಿ ಮಾಡಲು ಆರಂಭಿಸುತ್ತಿವೆ. ಕಾಡಿನಂಚಿನ ಜನರಿಗೆ ಇದು ನಿತ್ಯ ತಲೆನೋವಿನ ವಿಷಯವಾಗಿದೆ. ಅದರ ರೂಪಕವಾಗಿ ಈ ವಿಡಿಯೋ ಹೊರಹೊಮ್ಮಿದೆ ಎನ್ನಬಹುದು. ನಿಮಗೆ ಏನು ಅನ್ನಿಸುತ್ತದೆ ಎಂಬುದನ್ನು ಕಮೆಂಟ್ ಮಾಡಿ.


ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು ಯೋಜನೆ; ರಾಜ್ಯಗಳ ಮತ್ತು ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಯ ನಡುವೆ ಪರಿಸರವಾದಿಗಳ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR : ಭಾಲ್ಕಿ, ಬೆಳಗಾವಿ ಉತ್ತರ-ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ಸಾವಿರಾರು ಅರ್ಹ ಮತಗಳ ಡಿಲೀಟ್‌ಗೆ ಯತ್ನ; ಅನ್ಯರು ಫಾರಂ-7 ಸಲ್ಲಿಸಿರುವುದು ಬಯಲು!

ಭಾರತೀಯ ಚುನಾವಣಾ ಆಯೋಗದಲ್ಲಿ (ಇಸಿಐ) ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ಸರ್ವಾಧಿಕಾರಿ ಧೋರಣೆ ಬಟಾಬಯಲಾಗಿ ದೇಶದಾದ್ಯಂತ ಭಾರೀ ಚರ್ಚೆಯಾಗುತ್ತಿರುವ ನಡುವೆಯೇ, ಕರ್ನಾಟಕದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌)...

‘ದಿಮಾಗಿ ನಕ್ಸಲರು ಚುನಾವಣಾ ಆಯುಕ್ತರನ್ನು ಗುರಿಯಾಗಿಸಿಕೊಂಡಿದ್ದಾರೆ..’; ಗ್ಯಾನೇಶ್‌ ಕುಮಾರ್ ಬೆಂಬಲಕ್ಕೆ ನಿಂತ ಅಸ್ಸಾಂ ಸಿಎಂ

ಮುಖ್ಯ ಚುನಾವಣಾ ಆಯುಕ್ತರು ಇತರ ಚುನಾವಣಾ ಆಯುಕ್ತರನ್ನು ಸಂಪರ್ಕಿಸದೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಮುಖ್ಯ ಚುನಾವಣಾ ಆಯುಕ್ತರನ್ನು (ಸಿಇಸಿ) ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ದಾಳಿಯು ಇದು ರಾಜಕೀಯ ಪ್ರಚಾರ ಹಾಗೂ ವಿರೋಧ ಪಕ್ಷಗಳ...

ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯ: ಸಂಕಷ್ಟದಲ್ಲಿ ಲಕ್ಷಾಂತರ ‘Gen Z’ ಯುವಕರ ಮತದಾನದ ಹಕ್ಕು!

ಭಾರತೀಯ ಚುನಾವಣಾ ಆಯೋಗದಲ್ಲಿ ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇತರ ಇಬ್ಬರು ಆಯುಕ್ತರ ನಡುವೆ ಉಂಟಾಗಿದೆ ಎನ್ನಲಾದ ಆಂತರಿಕ ಭಿನ್ನಾಭಿಪ್ರಾಯದಿಂದಾಗಿ, ದೇಶದ ನೂತನ ಯುವ ಮತದಾರರ ಸೇರ್ಪಡೆ ಪ್ರಕ್ರಿಯೆ ಮಂದಗತಿಯಲ್ಲಿದೆ ಎಂಬ ವರದಿ...

‘ಅನ್ಯಾಯಯುತ’ ಚುನಾವಣೆಗಳಿಗೆ ಅವಕಾಶ ನೀಡಿದ್ದಕ್ಕಾಗಿ ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು: ಪ್ರಿಯಾಂಕಾ ಗಾಂಧಿ

ವಯನಾಡ್: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಕೋಟ್ಯಂತರ ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿದಿರುವ ವಿಚಾರದ ನಡುವೆಯೇ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ನ ವಾಗ್ದಾಳಿ ಮತ್ತಷ್ಟು ತೀವ್ರಗೊಂಡಿದೆ. ಮತದಾರರ...

48 ಗಂಟೆಯೊಳಗೆ ರಾಜೀನಾಮೆ ನೀಡದಿದ್ದರೆ ರಾಷ್ಟ್ರವ್ಯಾಪಿ ಪ್ರತಿಭಟನೆ; ಗ್ಯಾನೇಶ್ ಕುಮಾರ್‌ಗೆ ಸಿಜೆಪಿ ಎಚ್ಚರಿಕೆ

ದೇಶದ ಅತ್ಯಂತ ದೊಡ್ಡ ರಾಷ್ಟ್ರದ್ರೋಹಿ ಎಂದು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), "ಮತದಾರರ ಹಕ್ಕುಗಳನ್ನು ದುರ್ಬಲಗೊಳಿಸುತ್ತಿದ್ದಾರೆ" ಎಂದು ಆರೋಪಿಸಿ ಅವರ...

11 ವರ್ಷದ ಅತ್ಯಾಚಾರ ಸಂತ್ರಸ್ತೆಗೆ ಗರ್ಭಧಾರಣೆ ಮುಂದುವರಿಸಲು ಒತ್ತಾಯಿಸಲಾಗದು: 24 ವಾರ ಮೀರಿದರೂ ಗರ್ಭಪಾತಕ್ಕೆ ಜಮ್ಮು-ಕಾಶ್ಮೀರ ಹೈಕೋರ್ಟ್ ಅನುಮತಿ

ಶ್ರೀನಗರ: ಲೈಂಗಿಕ ದೌರ್ಜನ್ಯದಿಂದ ಗರ್ಭಿಣಿಯಾಗಿರುವ 11 ವರ್ಷದ ಬಾಲಕಿಯನ್ನು ಕಾನೂನಿನಲ್ಲಿರುವ ನಿಗದಿತ ಅವಧಿಯನ್ನು ಮೀರಿದೆ ಎಂಬ ಕಾರಣಕ್ಕೆ ಗರ್ಭಧಾರಣೆಯನ್ನು ಪೂರ್ಣ ಅವಧಿಯವರೆಗೆ ಮುಂದುವರಿಸುವಂತೆ ಒತ್ತಾಯಿಸಲಾಗುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್...

6 ವರ್ಷದ ಮಲಮಗಳ ಅತ್ಯಾಚಾರ, ಹತ್ಯೆ ಪ್ರಕರಣ : ಅಪರಾಧಿಯ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಬದಲಾಯಿಸಿದ ಸುಪ್ರೀಂ ಕೋರ್ಟ್

ಮಧ್ಯಪ್ರದೇಶದಲ್ಲಿ ತನ್ನ ಆರು ವರ್ಷದ ಮಲಮಗಳನ್ನು ಅತ್ಯಾಚಾರ ಮಾಡಿ ಹತ್ಯೆಗೈದ ಪ್ರಕರಣದಲ್ಲಿ ಅಪರಾಧಿಯೆಂದು ಸಾಬೀತಾದ ವ್ಯಕ್ತಿಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ಸುಪ್ರೀಂ ಕೋರ್ಟ್ ಇಂದು (ಸೆ.24) ಬದಲಾಯಿಸಿದೆ. livelaw.in ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಸಂದೀಪ್...

ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ತನಿಖೆಗೆ ಸಮಿತಿ ರಚನೆ

ಬಿ.ಟೆಕ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ಶಂಕಿತ ಆತ್ಮಹತ್ಯೆಯ ಸುತ್ತಲಿನ ಪರಿಸ್ಥಿತಿಗಳ ಬಗ್ಗೆ ತನಿಖೆ ನಡೆಸಲು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಬಾಂಬೆ ಬುಧವಾರ (ಸೆ.23) 10 ಸದಸ್ಯರ...

ಉತ್ತರ ಪ್ರದೇಶ| ಗೋಮಾಂಸ ಸಾಗಿಸುತ್ತಿರುವ ಶಂಕೆ; ಬಿರಿಯಾನಿ ಹೋಟೆಲ್ ಮಾಲೀಕನ ಮೇಲೆ ಗುಂಪು ಹಲ್ಲೆ

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಮೂವರು ಯುವಕರು ಮುಸ್ಲಿಂ ಬಿರಿಯಾನಿ ಹೋಟೆಲ್ ಮಾಲೀಕನೊಬ್ಬ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಶಂಕೆಯಿಂದ ಆತನ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ಭಾನುವಾರ (ಸೆ. 20) ಈ...

ಟಿಎಂಸಿ ಹೆಸರು, ಚಿಹ್ನೆ ತಡೆ: ಅಂತಿಮ ನಿರ್ಧಾರದ ಕಾಲಮಿತಿ ಕೇಳಿದ ಸುಪ್ರೀಂ ಕೋರ್ಟ್; ಸೆ. 28ಕ್ಕೆ ವಿಚಾರಣೆ

ತೃಣಮೂಲ ಕಾಂಗ್ರೆಸ್‌ (TMC) ಪಕ್ಷದ ಮೂಲ ಹೆಸರು ಹಾಗೂ ‘ಜೋಡಾ ಘಾಸ್‌ಫುಲ್‌’ (Flowers & Grass) ಚುನಾವಣಾ ಚಿಹ್ನೆಯ ಬಳಕೆಯನ್ನು ತಾತ್ಕಾಲಿಕವಾಗಿ ತಡೆಹಿಡಿದಿರುವ ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು...