Homeಕರ್ನಾಟಕಆಹಾರದಲ್ಲಿ ಸತ್ತ ಹಾವು ಪತ್ತೆ: 52 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಆಹಾರದಲ್ಲಿ ಸತ್ತ ಹಾವು ಪತ್ತೆ: 52 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

- Advertisement -
- Advertisement -

ವಿಷಾಹಾರದ ಕಾರಣಕ್ಕೆ ಅಬ್ಬೆ ತುಮಕೂರು ವಿಶ್ವಾರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯ 52 ವಿದ್ಯಾರ್ಥಿಗಳನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಗುರುವಾರ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಬೆಳಗಿನ ಉಪಹಾರ ಸೇವಿಸಿದ ಬಳಿಕ ಮೂವರು ವಿದ್ಯಾರ್ಥಿಗಳು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದು, 49 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಇದರ ನಂತರ ವಿದ್ಯಾರ್ಥಿಗಳು ಸೇವಿಸಿದ್ದ ಉಪಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಬೆಂಬಲಿಸಿ ವಿದ್ಯಾರ್ಥಿಗಳಿಂದ ಬೃಹತ್‌ ರ್‍ಯಾಲಿ

ಮುದ್ನಾಳ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ವಿದ್ಯಾರ್ಥಿಗಳನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೂವರು ವಿದ್ಯಾರ್ಥಿಗಳನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದ್ದು, ಉಳಿದ 49 ಮಂದಿಯನ್ನು ಸಾಮಾನ್ಯ ವಾರ್ಡ್‌ಗೆ ದಾಖಲಿಸಲಾಗಿದೆ.

ಎಲ್ಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾ ಆಸ್ಪತ್ರೆಯ ಮೂಲಗಳು ತಿಳಿಸಿವೆ. ತಾಲೂಕು ಆರೋಗ್ಯಾಧಿಕಾರಿ ಹನುಮಂತರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ.

ಇದನ್ನೂ ಓದಿ: ಜಾತಿಕೂಪದ ವಿರಾಟ್‌ರೂಪವನ್ನು ಬಿಚ್ಚಿಟ್ಟ ಹಂಸಲೇಖ ಘಟನೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...