Homeಚಳವಳಿಮೊದಲು ನಿರ್ಲಕ್ಷಿಸುತ್ತಾರೆ, ನಂತರ ನಗುತ್ತಾರೆ, ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ: ರೈತ ಹೋರಾಟದ ಪಾಠ

ಮೊದಲು ನಿರ್ಲಕ್ಷಿಸುತ್ತಾರೆ, ನಂತರ ನಗುತ್ತಾರೆ, ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ: ರೈತ ಹೋರಾಟದ ಪಾಠ

ರೈತ ಹೋರಾಟದ ಗೆಲುವನ್ನು ರಾಜಕೀಯ ನಾಯಕರು, ರಾಜಕೀಯ ಪಕ್ಷಗಳು ಬಣ್ಣಿಸಿರುವುದು ಹೀಗೆ....

- Advertisement -
- Advertisement -

“ಮೊದಲು ನಿನ್ನನ್ನು ನಿರ್ಲಕ್ಷಿಸುತ್ತಾರೆ, ನಿನ್ನನ್ನು ನೋಡಿ ನಗುತ್ತಾರೆ, ನಂತರ ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ” – ಇದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸಂದೇಶ. ಸುದೀರ್ಘ ರೈತ ಹೋರಾಟದ ವಿಚಾರದಲ್ಲಿ ಗಾಂಧೀಜಿಯವರ ಮಾತು ಅಕ್ಷರಶಃ ನಿಜವಾಗಿದೆ.

ದೆಹಲಿ ಗಡಿಯಲ್ಲಿ ಒಂದು ವರ್ಷ ಕಾಲ ಹೋರಾಟ ಕುಳಿತ ರೈತರನ್ನು ಖಾಲಿಸ್ತಾನಿಗಳು ಎಂದು ಜರಿದರು. ದಲ್ಲಾಳಿಗಳೆಂದು ಕರೆದರು. ಟ್ರಾಕ್ಟರ್ ರ್‍ಯಾಲಿಯಲ್ಲಿ ಗಲಭೆಯನ್ನು ಸೃಷ್ಟಿಸಿ ಹೋರಾಟವನ್ನು ಹತ್ತಿಕ್ಕಲು ಯತ್ನಿಸಿದರು. ಗೋದಿ ಮಿಡಿಯಾಗಳು ಪ್ರಭುತ್ವದ ಪರ ನಿಂತು ಹೋರಾಟದ ಕುರಿತು ಅಪಪ್ರಚಾರ ಮಾಡಿದೆವು. 750ಕ್ಕೂ ಹೆಚ್ಚು ರೈತರು ಹುತಾತ್ಮರಾದರು. ಪ್ರತಿಭಟನೆ ಮಾಡಿ ವಾಪಸ್‌ ಬರುತ್ತಿದ್ದ ರೈತರ ಮೇಲೆ ವಾಹನ ಹತ್ತಿಸಲಾಯಿತು. ಎಷ್ಟೊಂದು ಕಹಿ ಘಟನೆ, ಎಷ್ಟೊಂದು ನೋವು. ಇಷ್ಟೆಲ್ಲ ಆದ ಮೇಲೆ ರೈತರಿಗೆ ದಿಗ್ವಿಜಯ.

ಮೊದಲೇ ಹೇಳಿದಂತೆ ಇದು ಗಾಂಧಿವಾದದ ಗೆಲುವು- “First they ignore you, then they laugh at you, then they fight you, and then you win.”

ಇದನ್ನೂ ಓದಿರಿ: ಟ್ಯಾಂಕರ್ v/s ಟ್ರಾಕ್ಟರ್: ಟ್ಯಾಂಕರ್ ಮಣಿಸಿದ ಟ್ರಾಕ್ಟರುಗಳು!

ರಾಜಕೀಯ ನಾಯಕರು, ಪಕ್ಷಗಳು ರೈತರ ಹೋರಾಟವನ್ನು ನೆನೆದಿರುವುದು ಹೀಗೆ….

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿ, “ಸತ್ಯಾಗ್ರಹದ ಮೂಲಕ ದೇಶದ ಅನ್ನದಾತರು ದುರಹಂಕಾರಿಗಳ ತಲೆ ತಗ್ಗಿಸಿದ್ದಾರೆ. ಅನ್ಯಾಯದ ವಿರುದ್ಧದ ಈ ವಿಜಯಕ್ಕೆ ಅಭಿನಂದನೆಗಳು! ಜೈ ಹಿಂದ್, ಜೈ ಹಿಂದ್ ರೈತ!” ಎಂದಿದ್ದಾರೆ.

“ರೈತರ ಹೋರಾಟ ಒತ್ತಡವನ್ನು ಸೃಷ್ಟಿ ಮಾಡಲಿದೆ, ಕೃಷಿ ಕಾಯ್ದೆಗಳನ್ನು ಹಿಂಪಡೆಯಲೇಬೇಕು” ಎಂದು ಹಿಂದೆ ನೀಡಿದ್ದ ತಮ್ಮ ಹೇಳಿಕೆಯನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯೆ: “ಬಿಜೆಪಿಯ ಕ್ರೌರ್ಯದಿಂದ ಕಂಗೆಡದೆ ಅವಿರತವಾಗಿ ಹೋರಾಡಿದ ಪ್ರತಿಯೊಬ್ಬ ರೈತನಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇದು ನಿಮ್ಮ ವಿಜಯವಾಗಿದೆ. ಈ ಹೋರಾಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿಯೊಬ್ಬರಿಗೂ ನನ್ನ ಆಳವಾದ ಸಂತಾಪಗಳು”.

ಸಿದ್ದರಾಮಯ್ಯ: “ರೈತರ ಪ್ರತಿರೋಧದ ಫಲವಾಗಿ ರೈತ ವಿರೋಧಿ ಕಾನೂನುಗಳನ್ನು ಮೋದಿ ಹಾಗೂ ಬಿಜೆಪಿ ಸರ್ಕಾರ ವಾಪಸ್‌ ಪಡೆದಿದ್ದಾರೆ. ಎಲ್ಲ ರೈತರಿಗೆ, ಕಾಂಗ್ರೆಸ್ ನಾಯಕರಿಗೆ, ದೇಶದ ಎಲ್ಲ ನಾಗರಿಕರಿಗೆ ಧನ್ಯವಾದಗಳು”.

ಡಿ.ಕೆ.ಶಿವಕುಮಾರ್‌: “ಒಂದೂವರೆ ವರ್ಷದ ಸುದೀರ್ಘ ಹೋರಾಟದ ನಂತರ ರೈತರ ಪ್ರತಿಭಟನೆಗೆ ಜಯ ಸಂದಿರುವುದು ಸಮಾಧಾನಕರ ಸಂಗತಿ. ಇದು ಕಾಂಗ್ರೆಸ್‌ ಪಕ್ಷಕ್ಕೆ ಆಸ್ತಿಯಂತಿರುವ ಗಾಂಧೀಜಿ ಅವರ ಆದರ್ಶಗಳಿಗೆ ಸಿಕ್ಕಿದ ಗೆಲುವು ಕೂಡ ಹೌದು…”

ಈ ಸುದೀರ್ಘ ಹೋರಾಟದಲ್ಲಿ ಮಡಿದ 700ಕ್ಕೂ ಹೆಚ್ಚು ರೈತರನ್ನು ಹುತಾತ್ಮರು ಎಂದು ಸರ್ಕಾರ ಒಪ್ಪಿಕೊಳ್ಳಬೇಕು. ಜೊತೆಗೆ ಅವರ ಕುಟುಂಬಕ್ಕೆ ಪರಿಹಾರ ಮತ್ತು ಸರ್ಕಾರಿ ಉದ್ಯೋಗವನ್ನು ನೀಡಬೇಕು...”

ಇದನ್ನೂ ಓದಿರಿ: ಯಶಸ್ಸಿನತ್ತ ಒಗ್ಗಟ್ಟು ಮತ್ತು ನ್ಯಾಯ: ಕೃಷಿ ಕಾಯ್ದೆಗಳ ರದ್ಧತಿಗೆ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಕ್ರಿಯೆ

ಸಿಪಿಐ ಹೇಳಿಕೆ: ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಲಕ್ಷಾಂತರ ಕಿಸಾನ್‌ಗಳಿಗೆ ಸಿಪಿಐ (ಎಂ) ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸುತ್ತದೆ! ಎಸ್‌ಕೆಎಂ ನೇತೃತ್ವದ ಕಿಸಾನ್ ಆಂದೋಲನಕ್ಕೆ ಸಂದ ಭಾರಿ ಜಯವಿದು. ಮೋದಿ ಸರ್ಕಾರದ ಪ್ರತಿಯೊಂದು ಕುತಂತ್ರವನ್ನು ಸೋಲಿಸಲಾಯಿತು. ನಿರಂಕುಶ ಹಾಗೂ ಕರಾಳ ಮೂರು ಕಾಯ್ದೆಗಳನ್ನು ವಾಪಸ್‌ ಪಡೆಯಲಾಗಿದೆ.

ಎಚ್‌.ಡಿ.ಕುಮಾರಸ್ವಾಮಿ ಅವರ ಸರಣಿ ಟ್ವೀಟ್ ಮಾಡಿದ್ದಾರೆ. ಎಚ್‌ಕೆಡಿ ಅವರ ಟ್ವೀಟ್‌ಗಳು ಹೀಗಿವೆ:

“ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ & ಈಗ ಏಕಾಎಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ..”

“ನಿಜಕ್ಕೂ ಕರಾಳ ಕಾಯ್ದೆಗಳ ವಾಪಸಾತಿ ರೈತರ ವಿಜಯ & ಐತಿಹಾಸಿಕ. ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯ ಗಡಿಯಲ್ಲಿ ಅನ್ನಧಾತರು ಪ್ರತಿಭಟನೆ ನಡೆಸಿದರು. ಕೇಂದ್ರವು ಅವರ ಮೇಲೆ ಅಮಾನವೀಯ ಕ್ರೌರ್ಯ ನಡೆಸಿತು. ಅನೇಕ ಅಮೂಲ್ಯ ಜೀವಗಳ ನೆತ್ತರು ಹರಿಯಿತು. ಚಳಿ, ಮಳೆ, ಬಿಸಿಲೆನ್ನದೇ ರೈತರು ಹೋರಾಡಿದರು.

“ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ. ಚುನಾವಣೆ ಮುಗಿದ ಮೇಲೆ ಆ ಕರಾಳ ಕಾಯ್ದೆಗಳನ್ನು ಬೇರೆ ರೂಪದಲ್ಲಿ ಪುನಾ ಜಾರಿ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ರೈತರಿಗೆ ಮಾತು ಕೊಡಬೇಕಿತ್ತು...”

“ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ದೇಶದ ನಾನಾ ಕಡೆ ರೈತರ ವಿರುದ್ಧ ನಡೆದಿರುವ ದೌರ್ಜನ್ಯಕ್ಕೆ ಪ್ರಧಾನಿಗಳು ತಮ್ಮ ಭಾಷಣದಲ್ಲಿ ಕ್ಷಮೆ ಯಾಚನೆ ಮಾಡಬೇಕಿತ್ತು. ಈಗಲಾದರೂ ರೈತರ ಮೇಲೆ ಹಿಂಸಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು ಎಂಬುದು ನನ್ನ ಒತ್ತಾಯ...”

“ನ್ಯಾಯಕ್ಕಾಗಿ ಹೋರಾಡಿ ಹುತಾತ್ಮರಾದ ರೈತ ಕುಟುಂಬದಲ್ಲಿ ಪ್ರಧಾನಿ ಮೋದಿ ಕ್ಷಮೆ ಕೇಳಬೇಕು” ಎಂದು ಆಮ್‌ ಆದ್ಮಿ ಪಕ್ಷ ಒತ್ತಾಯಿಸಿದೆ.


ಇದನ್ನೂ ಓದಿರಿ: 700 ಕ್ಕೂ ಹೆಚ್ಚು ರೈತರ ಸಾವು ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡ ತಡೆಯಬಹುದಿತ್ತು: ಸಂಯುಕ್ತ ಕಿಸಾನ್ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...