Homeಮುಖಪುಟಚಾರಿತ್ರಿಕ ರೈತ ಹೋರಾಟಕ್ಕೆ ಒಂದು ವರ್ಷ: ನ.26ರ ಕಾರ್ಯಕ್ರಮಗಳು ಇಂತಿವೆ

ಚಾರಿತ್ರಿಕ ರೈತ ಹೋರಾಟಕ್ಕೆ ಒಂದು ವರ್ಷ: ನ.26ರ ಕಾರ್ಯಕ್ರಮಗಳು ಇಂತಿವೆ

- Advertisement -
- Advertisement -

‘ದೆಹಲಿ ಗಡಿಗಳಲ್ಲಿ ರೈತ ಹೋರಾಟ ಆರಂಭವಾಗಿ ನವೆಂಬರ್ 26ಕ್ಕೆ ಒಂದು ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಸಾವಿರಾರು ರೈತರು ಹೋರಾಟಕ್ಕೆ ಬಂದು ಸೇರುವ ನಿರೀಕ್ಷೆ ಇದ್ದು, ಅದಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ. ನವೆಂಬರ್ 26 ರಂದು ಚಳವಳಿಯ ’ಭಾಗಶಃ ವಿಜಯ’ ಆಚರಿಸಲಾಗುವುದು ಮತ್ತು ಉಳಿದ ಹಕ್ಕೊತ್ತಾಯಗಳನ್ನು ಪೂರೈಸುವಂತೆ ಒತ್ತಾಯಿಸಲಾಗುವುದು’ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ತಿಳಿಸಿದೆ.

ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಯುಕ್ತ ಕಿಸಾನ್ ಮೋರ್ಚಾ, ದೆಹಲಿಯಿಂದ ದೂರವಿರುವ ರಾಜ್ಯಗಳ ರಾಜಧಾನಿಗಳಲ್ಲಿ, ವಿವಿಧ ಬಗೆಯ ಪ್ರತಿಭಟನೆಗಳ ಜೊತೆಗೆ ಟ್ರ್ಯಾಕ್ಟರ್ ರ್ಯಾಲಿಗಳನ್ನು ಆಯೋಜಿಸಲಾಗುವುದು ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ರೈತ ಹೋರಾಟವನ್ನು ಬೆಂಬಲಿಸಿ ವಿಶ್ವದಾದ್ಯಂತ ಅಂತರಾಷ್ಟ್ರೀಯ ರೈತ ಸಂಘಟನೆಗಳು ಮತ್ತು ಭಾರತೀಯ ವಲಸಿಗರು ‘ಐಕ್ಯತಾ ಕಾರ್ಯಕ್ರಮ’ಗಳನ್ನು ನಡೆಸಲು ಯೋಜನೆ ರೂಪಿಸಿವೆ ಎಂದು ಅದು ತಿಳಿಸಿದೆ.

“ನವೆಂಬರ್ 26 ರಂದು, ಮಧ್ಯಾಹ್ನ 12 ರಿಂದ 2 ರವರೆಗೆ ಲಂಡನ್‌ನಲ್ಲಿ ಭಾರತೀಯ ಹೈಕಮಿಷನ್ ಎದುರು ಪ್ರತಿಭಟನೆ ನಡೆಯಲಿದೆ. ಅದೇ ದಿನ, ವ್ಯಾಂಕೋವರ್, ಕೆನಡಾದ ಸರ್ರೆಯಲ್ಲಿ ಪ್ರತಿಭಟನೆ ಇರುತ್ತದೆ. ನವೆಂಬರ್ 30 ರಂದು ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಪ್ರತಿಭಟನೆ ನಡೆಯಲಿದೆ. ಡಿಸೆಂಬರ್ 4 ರಂದು ಕ್ಯಾಲಿಫೋರ್ನಿಯಾದಲ್ಲಿ ಕಾರ್ ರ್ಯಾಲಿ ಮತ್ತು ನ್ಯೂಯಾರ್ಕ್ ನಲ್ಲಿ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಸ್ಯಾನ್ ಜೋಸ್ ಗುರುದ್ವಾರದಲ್ಲಿ ರೈತ ಹುತಾತ್ಮರ ಸ್ಮರಣಾರ್ಥ ಮತ್ತು ಮೇಣದಬತ್ತಿಯ ಜಾಗರಣೆ ನಡೆಯಲಿದೆ. ಡಿಸೆಂಬರ್ 8 ರಂದು ಆಸ್ಟ್ರಿಯಾದ ವಿಯೆನ್ನಾದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದೆ. ಇನ್ನು ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲಿ ಹಂಚಿಕೊಳ್ಳಲಾಗುವುದು ಎಂದು ಎಸ್‌ಕೆಎಂ ತಿಳಿಸಿದೆ.

ಕರ್ನಾಟಕ: ನವೆಂಬರ್ 26 ರಾಜ್ಯದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳ ಬಂದ್

ಕೇಂದ್ರ ಸರ್ಕಾರ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುವುದಾಗಿ ಘೋಷಿಸಿದೆ. ಆದರೆ ಕೇಂದ್ರಕ್ಕೆ ಅನುಗುಣವಾಗಿ ಕರ್ನಾಟಕ ರಾಜ್ಯವು ಎಪಿಎಂಸಿ ಮತ್ತು ಭುಸುಧಾರಣ ಕಾಯ್ದೆಗೆ ತಂದಿರುವ ತಿದ್ದುಪಡಿಗಳನ್ನು ವಾಪಸ್ ಪಡೆದುಕೊಳ್ಳಬೇಕೆಂದು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹಿಸಿದೆ. ಅದಕ್ಕಾಗಿ ನವೆಂಬರ್ 26 ರಂದು ರಾಜ್ಯದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟಿಸಲು ಕರೆ ನೀಡಲಾಗಿದೆ.

ಬೆಂಗಳೂರಿನ ಹೊಸಕೋಟೆ, ದೇವನಹಳ್ಳಿ ಬಳಿ ಹೆದ್ದಾರಿ ಬಂದ್ ಹೋರಾಟ ನಡೆಯಲಿದೆ. ಅಲ್ಲದೆ ರಾಮನಗರ, ಮಂಡ್ಯ, ರಾಯಚೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಹೆದ್ದಾರಿ ಬಂದ್ ಹೋರಾಟ ನಡೆಯಲಿದೆ ರೈತ ಮುಖಂಡರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್‌ರವರು ಮಾತನಾಡಿ, “ಕೇಂದ್ರದ ಕರಾಳ ಕಾಯ್ದೆಗಳು ಸಂಸತ್ತಿನಲ್ಲಿ ರದ್ದುಗೊಳ್ಳಬೇಕಿದೆ. ಜೊತೆಗೆ ಎಂಎಸ್‌ಪಿ ಜಾರಿಗೆ ಕಾನೂನು ಬೇಕೆಂದು ಆಗ್ರಹಿಸಿ ಚಳವಳಿ ಮುಂದುವರೆಯಲಿದೆ. ಕರ್ನಾಟಕ ಸರ್ಕಾರ ತಿದ್ದುಪಡಿ ಮಾಡಿರುವ ಮೂರು ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ನವೆಂಬರ್ 26 ರಂದು ಹೆದ್ದಾರಿ ಬಂದ್ ನಡೆಯಲಿದೆ. ಸಾರ್ವಜನಿಕರು ಅಂದು ಪ್ರಯಾಣ ಮಾಡದೇ ರೈತ ಹೋರಾಟಕ್ಕೆ ಬೆಂಬಲಿಸಿಬೇಕು” ಎಂದು ಮನವಿ ಮಾಡಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರರವರು ಮಾತನಾಡಿ, “ನರೇಂದ್ರ ಮೋದಿಯವರು ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ. ಆದರೆ ಎಂಎಸ್‌ಪಿ ಬಗ್ಗೆ, ವಿದ್ಯುಚ್ಛಕ್ತಿ ಮಸೂದೆ ಅವರು ಮಾತನಾಡಿಲ್ಲ. ಗಡಿಗಳಲ್ಲಿ ಹುತಾತ್ಮರಾದ 670ಕ್ಕೂ ಹೆಚ್ಚು ರೈತರ ಬಗ್ಗೆ, ಅವರಿಗೆ ಪರಿಹಾರ ಕೊಡುವ ಚಕಾರವೆತ್ತಿಲ್ಲ. ಇನ್ನು ರಾಜ್ಯ ಸರ್ಕಾರವೂ ತನ್ನ ಕಾಯ್ದೆಗಳನ್ನು ವಾಪಸ್ ಪಡೆಯಬೇಕಾಗಿತ್ತು. ಅದಕ್ಕಾಗಿ ನಾವು ಎಲ್ಲಾ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ ನೀಡಿದ್ದೇವೆ. ಹಾಗಾಗಿ ಎಲ್ಲಾ ಪ್ರಯಾಣಿಕರು ಅಂದು ಹಗಲಿನ ಪ್ರಯಾಣವನ್ನು ಜನತೆ ಮುಂದೂಡಬೇಕೆಂದು ಮನವಿ ಮಾಡಿದ್ದಾರೆ.

‘ದೆಹಲಿಯ ಗಡಿಯಲ್ಲಿ ರೈತರ ಪ್ರತಿಭಟನೆಯ ಮೊದಲ ವಾರ್ಷಿಕೋತ್ಸವದ ಅಂಗವಾಗಿ ನವೆಂಬರ್ 25 ರಂದು ಹೈದರಾಬಾದ್‌ನಲ್ಲಿ ‘ಮಹಾ ಧರಣಿ’ ನಡೆಯಲಿದೆ. ಸಂಯುಕ್ತ ಕಿಸಾನ್ ಮೋರ್ಚಾದ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮಹಾ ಧರಣಿಯಲ್ಲಿ ಹಲವಾರು ಕಾರ್ಮಿಕ ಸಂಘಟನೆಗಳು ಮತ್ತು ಇತರ ಸಾಮೂಹಿಕ ಸಂಘಟನೆಗಳ ಮುಖಂಡರು ಸಹ ಭಾಗವಹಿಸಲಿದ್ದಾರೆ’ ಎನ್ನಲಾಗಿದೆ.


ಇದನ್ನೂ ಓದಿ: ನವೆಂಬರ್‌ 29 ರಂದು 60 ಟ್ರ್ಯಾಕ್ಟರ್‌ಗಳಲ್ಲಿ ಸಂಸತ್ತಿಗೆ ಮೆರವಣಿಗೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...