Homeಮುಖಪುಟಸಿಖ್ಖರ ಕುರಿತು ಅವಹೇಳನಕಾರಿ ಪೋಸ್ಟ್: ವಿಚಾರಣೆಗೆ ಹಾಜರಾಗುವಂತೆ ಕಂಗನಾಗೆ ದೆಹಲಿ ವಿಧಾನಸಭೆ ಪ್ಯಾನೆಲ್ ನೋಟೀಸ್

ಸಿಖ್ಖರ ಕುರಿತು ಅವಹೇಳನಕಾರಿ ಪೋಸ್ಟ್: ವಿಚಾರಣೆಗೆ ಹಾಜರಾಗುವಂತೆ ಕಂಗನಾಗೆ ದೆಹಲಿ ವಿಧಾನಸಭೆ ಪ್ಯಾನೆಲ್ ನೋಟೀಸ್

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ರೈತರು ಮತ್ತು ಸಿಖ್ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಮುಂಬೈನಲ್ಲಿ FIR ದಾಖಲಾದ ಬೆನ್ನಲ್ಲೆ ಅವರು ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸೌಹಾರ್ದತೆ ಸಮಿತಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಆಮ್ ಆದ್ಮಿ ಪಕ್ಷದ ಮುಖಂಡ ಮತ್ತು ಶಾಸಕ ರಾಘವ್ ಚಡ್ಡಾ ನೇತೃತ್ವದ ಸಮಿತಿ ಮುಂದೆ ಡಿಸೆಂಬರ್ 6 ರಂದು ಕಂಗನಾ ರಣಾವತ್ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

“ನಿಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ 20.11.2021 ರಂದು ಅತಿರೇಕದ, ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಪೋಸ್ಟ್‌ಗಳನ್ನು ಪ್ರಕಟಿಸಿರುವುದಾಗಿ ಹಲವಾರು ದೂರುಗಳನ್ನು ಸಮಿತಿಯು ಸ್ವೀಕರಿಸಿದೆ ಎಂದು ಸಮಿತಿಯ ಉಪ ಕಾರ್ಯದರ್ಶಿ ಕಂಗನಾಗೆ ಕಳಿಸಿರುವ ನೋಟಿಸ್‌ನಲ್ಲಿ ತಿಳಿಸಲಾಗಿದೆ. ಕಂಗನಾರವರು ಸಿಖ್ಖರನ್ನು ಖಲಿಸ್ತಾನಿ ಭಯೋತ್ಪಾದಕರು ಎಂದು ಕರೆಯುವ ಮೂಲಕ ಇಡೀ ಸಿಖ್ ಸಮುದಾಯವನ್ನು ಅವಮಾನಿಸಿದ್ದಾರೆ. ಇದು ಕೋಮು ಸೌಹಾರ್ದತೆಗೆ ದೊಡ್ಡ ಧಕ್ಕೆಯಾಗಿದೆ” ಎಂದು ಸಮನ್ಸ್ ಹೇಳಿದೆ.

ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆಯ ನಂತರ ಕಂಗನಾ ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಸಿಖ್ ಸಮುದಾಯದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. 

“ಖಲಿಸ್ತಾನಿ ಭಯೋತ್ಪಾದಕರು ಸರ್ಕಾರದ ಕೈ ಹಿಂಡುತ್ತಿದ್ದಾರೆ. ಆದರೆ ನಾವು ಒಬ್ಬ ಮಹಿಳೆಯನ್ನು ಮರೆಯದಿರೋಣ. ಈ ಹಿಂದೆ ಆ ಒಬ್ಬ ಮಹಿಳೆ ಪ್ರಧಾನಿಯಾಗಿದ್ದಾಗ (ಇಂದಿರಾ ಗಾಂಧಿ) ತನ್ನ ಜೀವವನ್ನು ಲೆಕ್ಕಿಸದೆ ಇವರನ್ನು ಸೊಳ್ಳೆಗಳ ರೀತಿ ಹೊಸಕಿ ಹಾಕಿದ್ದರು. ಆ ಮಹಿಳೆ ದೇಶಕ್ಕೆ ಒಳ್ಳೆಯದು ಮಾಡದಿದ್ದರೂ ಸಹ ಇವರನ್ನು ತನ್ನ ಕಾಲಡಿಯಲ್ಲಿ ಹೊಸಕಿ ಹಾಕಿದ್ದರು ಮತ್ತು ದೇಶ ಇಬ್ಭಾಗವಾಗಲು ಬಿಡಲಿಲ್ಲ. ಈಗಲೂ ಆ ಮಹಿಳೆಯನ್ನು ಕಂಡರೆ ಇವರು ನಡುಗುತ್ತಾರೆ. ಇವರಿಗೆ ಅಂಥವರೆ ಬೇಕು” ಎಂದು ಕಂಗನಾ ರೈತರನ್ನು ಅವಮಾನಿಸಿ ಪೋಸ್ಟ್ ಹಾಕಿದ್ದರು.

ಇದಕ್ಕೆ ವಿರೋಧ ವ್ಯಕ್ತಪಡಿಸಿ ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ (ಡಿಎಸ್‌ಜಿಎಂಸಿ) ಮತ್ತು ಶಿರೋಮಣಿ ಅಕಾಲಿದಳದ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರು 1984 ರ ಸಿಖ್-ವಿರೋಧಿ ದಂಗೆಗಳನ್ನು ಉಲ್ಲೇಖಿಸಿ ಕಂಗನಾ “ಉದ್ದೇಶಪೂರ್ವಕವಾಗಿ ಸಿಖ್ಖರನ್ನು ಪ್ರಚೋದಿಸುತ್ತಿದ್ದಾರೆ” ಎಂದು ಆರೋಪಿಸಿ ಮುಂಬೈನ ಖಾರ್‌ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಅದರ ಆಧಾರದಲ್ಲಿ FIR ನೊಂದಾಯಿಸಲಾಗಿದೆ.


ಇದನ್ನೂ ಓದಿ: ರೈತರ ಕುರಿತು ಅವಹೇಳನಕಾರಿ ಪೋಸ್ಟ್: ಮುಂಬೈನಲ್ಲಿ ಕಂಗನಾ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...