Homeಕರ್ನಾಟಕಮುರುಡೇಶ್ವರದ ಶಿವನ ವಿಗ್ರಹ ವಿರೂಪ: ಚುನಾವಣೆಗಾಗಿ ಐಸಿಸ್ ಹೆಸರಲ್ಲಿ ಕೋಮು ಗಲಭೆಗೆ ಹುನ್ನಾರ?

ಮುರುಡೇಶ್ವರದ ಶಿವನ ವಿಗ್ರಹ ವಿರೂಪ: ಚುನಾವಣೆಗಾಗಿ ಐಸಿಸ್ ಹೆಸರಲ್ಲಿ ಕೋಮು ಗಲಭೆಗೆ ಹುನ್ನಾರ?

- Advertisement -
- Advertisement -


ಉತ್ತರ ಕನ್ನಡದ ಪ್ರಸಿದ್ದ ಪ್ರವಾಸಿ ಮತ್ತು ಧಾರ್ಮಿಕ ತಾಣ ಮುರುಡೇಶ್ವರದ ಪ್ರಮುಖ ಆಕರ್ಷಣೆಯರನಿಸಿರುವ ಶಿವನ ಪ್ರತಿಮೆಯನ್ನು ವಿರೂಪಗೊಳಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಉಗ್ರವಾದಿ ಸಂಘಟನೆ ಐಎಸ್‌ಐಎಸ್ ಇಂಥದೊಂದು ಚಿತ್ರ ತನ್ನ ಆನ್ ಲೈನ್ ಮುಖವಾಣಿ ವಾಯ್ಸ್ ಆಪ್ ಹಿಂದ್‌ನಲ್ಲಿ ಪ್ರಕಟಿಸಿದೆಯೆಂದು ವ್ಯವಸ್ಥಿತವಾಗಿ ಪುಕಾರು ಹಬ್ಬಿಸಲಾಗಿತ್ತು. ಆದರೆ ವಿಶ್ವ ಪ್ರಸಿದ್ದ ಮುರುಡೇಶ್ವನ ವಿಗ್ರಹ ಭಗ್ನಗೊಳಿಸಿದ ಚಿತ್ರ ಐಸಿಸ್ ಪತ್ರಿಕೆಯಲ್ಲಿ ಬಂದಿಲ್ಲವೆಂಬುದು ಬಹಿರಂಗವಾಗಿದೆ. ಕಳೆದ ಅಸೆಂಬ್ಲಿ ಚುನಾವಣೆ ಬಳಿಕ ಶಾಂತವಾಗಿರುವ ಕರಾವಳಿಯನ್ನು ಕದಡಿ ಮುಂಬರುವ ಚುನಾವಣೆಗೆ ತಯಾರಿಗೆ ಮತಾಂಧ ಶಕ್ತಿಗಳು ನಡೆಸಿರುವ ಹುನ್ನಾರವಿದು ಎಂಬ ಅಭಿಪ್ರಾಯ ವ್ಯಾಪಕವಾಗಿ ಮೂಡಿದೆ.

ಇದಕ್ಕೊಂದು ಹಿನ್ನಲೆಯೂ ಇದೆ. ಕೆಲ ತಿಂಗಳ ಹಿಂದೆ ಭಾರತದಲ್ಲಿ ಐಸಿಸ್‌ನ ಮುಖವಾಣಿಯಾಗಿರುವ ವಾಯ್ಸ್ ಆಫ್ ಹಿಂದ್‌ನ ಸಂಪರ್ಕದಲ್ಲಿದ್ದಾರೆ ಎಂಬ ಆರೋಪದಲ್ಲಿ ದೇಶದ ಹಲವೆಡೆ ದಾಳಿ ಮಾಡಿ ಕೆಲವರನ್ನು ಬಂಧಿಸಲಾಗಿತ್ತು. ಇದರಲ್ಲಿ ಭಟ್ಕಳದ ಯುವಕನೊಬ್ಬನಿದ್ದ. ಇದನ್ನು ಬಳಸಿಕೊಂಡು ಭಟ್ಕಳ ತಾಲೂಕಿನ ಮುರುಡೇಶ್ವರದ ಶಿವನ ಮೂರ್ತಿಯನ್ನು ಐಸಿಸ್‌ನವರು ವಿಕಾರಗೊಳಿಸಿ ಪ್ರಕಟಿಸಿದ್ದಾರೆಂದು ಸುಳ್ಳು ಪ್ರಚಾರ ಮಾಡಲು ಪ್ರಯತ್ನಿಸಲಾಗಿದೆ ಎನ್ನಲಾಗಿದೆ. ವಾಯ್ಸ್ ಆಫ್ ಹಿಂದ್‌ನಲ್ಲಿ ಬಂದಿದೆಯೆಂಬಂತೆ ‘ಸೃಷ್ಟಿಸಲಾದ’ ಚಿತ್ರದಲ್ಲಿ ಶಿವನ ಶಿರವನ್ನು ಛೇದಗೊಳಿಸಿ ಅಲ್ಲಿ ಐಸಿಸ್ ಬಾವುಟ ಹಾರಿಸಲಾಗಿತ್ತು. ಅಲ್ಲದೆ ತಪ್ಪು ದೇವರನ್ನು ಒಡೆಯುವ ಸಮಯ ಬಂದಿದೆಯೆಂದು ಬರೆಯಲಾಗಿತ್ತು. ಆದರೆ ಅಂತಹ ಯಾವ ಘಟನೆಯೂ ಮುರುಡೇಶ್ವರದಲ್ಲಿ ನಡೆದಿಲ್ಲ. ಕೇವಲ ಫೋಟೊಶಾಪ್ ಮಾಡಿ ಹರಿಯಬಿಡಲಾಗಿತ್ತು.

ವಾಯ್ಸ್ ಆಫ್ ಹಿಂದ್‌ನಲ್ಲಿ ಇಂತಹ ಫೋಟೋ ಆಗಲಿ ಒಕ್ಕಣಿಕೆಯಾಗಲಿ ಬಂದಿಲ್ಲವೆಂದು ಉತ್ತರ ಕನ್ನಡದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಧೃಡಪಡಿಸದ್ದಾರೆ. ಯಾವ ಮೂಲದಿಂದ ಇದನ್ನು ಹರಿಬಿಡಲಾಗಿದೆಯೆಂಬುದನ್ನು ಹುಡುಕಲಾಗುತ್ತಿದೆ: ಸೈಬರ್ ಕ್ರೈಮ್ ಪೊಲೀಸರ ನೆರವು ಪಡೆಲಾಗುತ್ತಿದೆ ಎಂದು ಹೇಳಿದ್ದಾರೆ. ಕಳೆದ ಫೆಬ್ರವರಿಯಲ್ಲೇ ಮುರುಡೇಶ್ವರದ ವಿಶ್ವ ವಿಖ್ಯಾತ 123 ಅಡಿಯ ಶಿವ ಪ್ರತಿಮೆಯನ್ನು ವಿರೂಪಗೊಳಿಸಿದಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಷ್ಠಾಪಿಸಲಾಗಿತ್ತೆಂಬ ಮಾಹಿತಿ ಪೊಲೀಸರಿಗೆ ದೊರಕಿದೆ ಎನ್ನಲಾಗಿದೆ. ಶಿವನ ಮೂರ್ತಿ ಭಗ್ನಗೊಳಿಸಿದಂತೆ ಚಿತ್ರ ರೂಪಿಸಿ, ಪ್ರಚೋದನಾತ್ಮಕ ಬರಹ ಹಾಕಿದ ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರಿಗಿದು ಪಕ್ಕಾ ಆಗಿದೆ.

ಕೆಲವು ದಿನಗಳ ಹಿಂದೆ ಮಡಿಕೇರಿಯಲ್ಲಿ ನಡೆದ ಪ್ರತಿಭಟನೆಯೊಂದರ ಹೊತ್ತಲ್ಲಿ “ಅಂಬೇಡ್ಕರ್ ಜಿಂದಾಬಾದ್ ಎಂದು ಹಾಕಿದ ಘೋಷಣೆಯನ್ನು ತಿರುಚಿ ಪಾಕಿಸ್ತಾನ್ ಜಿಂದಾಬಾದ್” ಎಂದು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿತ್ತು. ಈ ಪ್ರಕರಣದಲ್ಲಿ ಓರ್ವ ಪತ್ರಕರ್ತನೂ ಸೇರಿದಂತೆ ಮೂವರನ್ನು ಬಂಧಿಸಲಾಗಿತ್ತು. ಇದರ ಬೆನ್ನಿಗೆ ಮುರುಡೇಶ್ವರ ಪ್ರತಿಮೆ ವಿರೂಪ ಪ್ರಕರಣ ನಡೆದಿರುವುದರ ಹಿಂದೆ ರಾಜಕೀಯ ಹಿಕಮತ್ತು ಅಡಗಿದೆಯೆಂಬ ಚರ್ಚೆ ಹಟ್ಟುಹಾಕಿದೆ. ಮುಂದಿನ ಒಂದು ವರ್ಷ ಚುನಾವಣಾ ವರ್ಷವಾಗಿರುವುದರಿಂದ ಕರಾವಳಿಯಲ್ಲಿ ಆತಂಕ ಶುರುವಾಗಿದೆ.

ಮೊದಲು ವಿವಿಧ ಜಾತಿ-ಕೋಮುಗಳ ನಡುವೆ ಮನಸ್ತಾಪ ಉಂಟಾಗುವಂತ ಕೃತಕ ಚಿತ್ರ, ಪ್ರಚೋದನಾತ್ಮಕ ಬರಹ ತಯಾರಿಸಿ ಅದನ್ನು ನೈಜವೆಂಬಂತೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು, ನಂತರ ಮುಖ್ಯವಾಹಿನಿಯ ಮಾದ್ಯಮಗಳಲ್ಲಿ ಸುದ್ದಿ ಬರುವಂತೆ ನೋಡಿಕೊಳ್ಳುವುದು ಎಲೆಕ್ಷನ್ ತಂತ್ರಗಾರಿಕೆ ಎಂಬ ಮಾತು ಕೇಳಿಬರುತ್ತಿದೆ!


ಇದನ್ನೂ ಓದಿ: ಕೋಮುಗಲಭೆಗೆ ಹುನ್ನಾರ: ಕನ್ನಡ ಪ್ರಭ ಪತ್ರಕರ್ತ ಸೇರಿದಂತೆ ಇಬ್ಬರು ಬಿಜೆಪಿ ನಾಯಕರ ವಿರುದ್ದ ಸ್ವಯಂ ಪ್ರೇರಿತ ಪ್ರಕರಣದ ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...