Homeಮುಖಪುಟಅಜ್ಮಲ್ ಕಸಬ್ ಮೊಬೈಲ್‌ ಫೋನ್‌‌ ನಾಶಪಡಿಸಲಾಗಿದೆ: ನಿವೃತ್ತ ಎಸಿಪಿ ಆರೋಪ

ಅಜ್ಮಲ್ ಕಸಬ್ ಮೊಬೈಲ್‌ ಫೋನ್‌‌ ನಾಶಪಡಿಸಲಾಗಿದೆ: ನಿವೃತ್ತ ಎಸಿಪಿ ಆರೋಪ

26/11 ಮುಂಬೈ ದಾಳಿಗೆ 13 ವರ್ಷ ಆಗಿದ್ದು, ಸೆರೆಸಿಕ್ಕ ಅಜ್ಮಲ್‌ನನ್ನು ನವೆಂಬರ್ 2012 ರಲ್ಲಿ ಗಲ್ಲಿಗೇರಿಸಲಾಯಿತು

- Advertisement -
- Advertisement -

ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರು ಮೊಹಮ್ಮದ್ ಅಜ್ಮಲ್ ಕಸಬ್‌ನಿಂದ ವಶಪಡಿಸಿಕೊಂಡ ಮೊಬೈಲ್ ಫೋನ್ ಅನ್ನು ನಾಶಪಡಿಸಿದ್ದಾರೆ ಎಂದು ನಿವೃತ್ತ ಸಹಾಯಕ ಪೊಲೀಸ್ ಆಯುಕ್ತ ಸಂಶೇರ್ ಖಾನ್ ಪಠಾಣ್ ಆರೋಪಿಸಿದ್ದಾರೆ. ಅಜ್ಮಲ್‌ ಕಸಬ್‌ನನ್ನು 26/11 ಮುಂಬೈ ದಾಳಿಯ ದೋಷಿ ಎಂದು ಸುಪ್ರೀಂ ಕೋರ್ಟ್ ಘೋಷಿಸಿತ್ತು ಮತ್ತು ನವೆಂಬರ್ 2012 ರಲ್ಲಿ ಆತನನ್ನು ಗಲ್ಲಿಗೇರಿಸಲಾಯಿತು.

ಸಂಶೇರ್‌ ಖಾನ್‌‌ ಪಠಾಣ್ ಅವರು ಜುಲೈನಲ್ಲಿ ಮುಂಬೈ ಪೊಲೀಸ್ ಆಯುಕ್ತರಿಗೆ ಲಿಖಿತ ದೂರನ್ನು ಸಲ್ಲಿಸಿದ್ದರು. ಈ ದೂರಿನಲ್ಲಿ ಪರಮ್‌ ಬೀರ್‌ ಸಿಂಗ್ ವಿರುದ್ಧ ತನಿಖೆ ಮತ್ತು ನಂತರದ ಕ್ರಮಕ್ಕಾಗಿ ಒತ್ತಾಯಿಸಿದ್ದರು. ಈ ದೂರಿನ ಪ್ರತಿ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಪ್ರಸಾರವಾಯಿತು.

ಪರಮ್‌ ಬೀರ್‌ ಸಿಂಗ್‌ ಅವರನ್ನು ಈ ವರ್ಷದ ಮಾರ್ಚ್‌ ತಿಂಗಳಲ್ಲಿ ಮುಂಬೈ ಪೊಲೀಸ್ ಮುಖ್ಯಸ್ಥ ಹುದ್ದೆಯಿಂದ ತೆಗೆದುಹಾಕಲಾಯಿತು.

ಇದನ್ನೂ ಓದಿ: 26/11 ಮುಂಬೈ ಭಯೋತ್ಪಾದಕ ದಾಳಿಗೆ 13 ವರ್ಷ: ಹುತಾತ್ಮರನ್ನು ಸ್ಮರಿಸಿದ ಗಣ್ಯರು

ಸಂಶೇರ್‌ ಖಾನ್‌‌ ಪಠಾಣ್ ತಮ್ಮ ದೂರಿನಲ್ಲಿ, “ಅಜ್ಮಲ್‌ ಕಸಬ್‌ನಿಂದ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದೇವೆ ಎಂದು ಡಿಬಿ ಮಾರ್ಗ್ ಪೊಲೀಸ್ ಠಾಣೆಯ ಆಗಿನ ಹಿರಿಯ ಇನ್ಸ್‌ಪೆಕ್ಟರ್ ಎನ್‌ಆರ್ ಮಾಲಿ ಅವರು ತಿಳಿಸಿದ್ದರು” ಎಂದು ವಿವರಿಸಿದ್ದಾರೆ.

“ಅಲ್ಲಿಂದ ಈ ಮೊಬೈಲ್‌ ಅನ್ನು ಕಾಂಬ್ಳೆ ಎಂದು ಗುರುತಿಸಲಾದ ಕಾನ್‌ಸ್ಟೆಬಲ್‌ಗೆ ಹಸ್ತಾಂತರಿಸಲಾಯಿತು. ಆಗಿನ ಡಿಐಜಿ (ಭಯೋತ್ಪಾದನಾ ನಿಗ್ರಹ ದಳ) ಆಗಿದ್ದ ಪರಮ್‌ ಬೀರ್‌ ಸಿಂಗ್ ಕಾನ್‌ಸ್ಟೆಬಲ್‌ನಿಂದ ಮೊಬೈಲ್ ಫೋನ್ ತೆಗೆದುಕೊಂಡರು. ಪ್ರಕರಣದ ತನಿಖಾಧಿಕಾರಿ ರಮೇಶ್ ಮಹಾಲೆ ಅವರಿಗೆ ಫೋನ್ ಹಸ್ತಾಂತರಿಸಬೇಕಿತ್ತು. ಆದರೂ ಪರಮ್‌ ಬೀರ್‌ಸಿಂಗ್‌ ಅದನ್ನು ನಾಶಪಡಿಸಿದ್ದಾರೆ” ಎಂದು ಸಂಶೇರ್‌‌ ಖಾನ್‌ ಪಠಾಣ್ ಆರೋಪಿಸಿದ್ದಾರೆ.

ದೇಶದ ಆರ್ಥಿಕ ರಾಜಧಾನಿ ಮುಂಬೈ ಮೇಲೆ ನವೆಂಬರ್ 26, 2008 ರಂದು ಭಯೋತ್ಪಾದಕ ದಾಳಿ ನಡೆದಿತ್ತು. ಈ ದಾಳಿ ನಡೆದು ಶುಕ್ರವಾರಕ್ಕೆ(ನಿನ್ನೆ) 13 ವರ್ಷ ಆಗಿದೆ. ಲಷ್ಕರ್‌–ಎ–ತೊಯ್ಬಾದ ಸಂಘಟನೆ ಭಯೋತ್ಪಾದಕರು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಮುಂಬೈ ಪ್ರವೇಶಿಸಿ, ನಡೆಸಿದ ಸರಣಿ ದಾಳಿಗಳಲ್ಲಿ 18 ಭದ್ರತಾ ಸಿಬ್ಬಂದಿ ಸೇರಿದಂತೆ 166 ಜನರು ಈ ಘಟನೆಯಲ್ಲಿ ಮೃತಪಟ್ಟಿದ್ದರು. ಮುಂಬೈಯ ಜನನಿಬಿಡ ಪ್ರದೇಶಗಳಲ್ಲಿ ಗುಂಡಿನ ಮಳೆ ಸುರಿಸಿದ್ದರು. ನಂತರ ಮುಂಬೈನ ತಾಜ್​​​​​ ಹೋಟೆಲ್ ಪ್ರವೇಶಿಸಿ ದಾಳಿ ಪ್ರಾರಂಭಿಸಿದ್ದರು. ಭದ್ರತಾ ಪಡೆಗಳು 10 ಉಗ್ರರ ಪೈಕಿ ಒಂಬತ್ತು ಮಂದಿಯನ್ನು ಹೊಡೆದುರುಳಿಸಿತ್ತು. ಬದುಕುಳಿದ್ದ ಏಕೈಕ ಉಗ್ರ ಅಜ್ಮಲ್ ಕಸಬ್ ಅನ್ನು ನವೆಂಬರ್ 21, 2012 ರಂದು ಗಲ್ಲಿಗೇರಿಸಲಾಯಿತು.

ಇದನ್ನೂ ಓದಿ: ಮತ್ತೆ ರೈತ ಮಹಾಪಂಚಾಯತ್‌ಗಳ ಆರಂಭ: ಮುಂಬೈ, ಲಕ್ನೋಗಳಲ್ಲಿ ಅಬ್ಬರಿಸಲಿರುವ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...