Homeಕರ್ನಾಟಕಮುಂಡಗೋಡ: ಅಶುದ್ದ ನೀರು-ಊಟದಿಂದ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ- ಪಾಲಕರಲ್ಲಿ ಆತಂಕ

ಮುಂಡಗೋಡ: ಅಶುದ್ದ ನೀರು-ಊಟದಿಂದ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ- ಪಾಲಕರಲ್ಲಿ ಆತಂಕ

- Advertisement -
- Advertisement -

ಮುಂಡಗೋಡದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅನೈರ್ಮಲ್ಯ, ಅಶುದ್ದ ಊಟ ಮತ್ತು ನೀರಿನಿಂದ ವಿದ್ಯಾರ್ಥಿಗಳ ಆರೋಗ್ಯ ಕೆಡುವ ಭಯ ಮೂಡಿದೆಯೆಂದು ಪಾಲಕರು ತಹಶೀಲ್ದಾರ್‌ಗೆ ದೂರು ಕೊಟ್ಟ ದಿನದ ರಾತ್ರಿಯೇ 9 ವಿದ್ಯಾರ್ಥಿಗಳು ವಾಂತಿ ತಲೆ ನೋವು, ಹೊಟ್ಟೆ ನೋವು ಬಾಧಿಸಿ ಆಸ್ಪತ್ರೆಗೆ ದಾಖಲಾಗಬೇಕಾದ ಘಟನೆ ನಡೆದಿದೆ. ಸಂಭವನೀಯ ಅನಾಹುತದಿಂದ ವಿದ್ಯಾರ್ಥಿಗಳು ಪಾರಾಗಿ ಮನೆ ಸೇರಿದ್ದಾರಾದರೂ ಶಾಲೆಯ ಅವ್ಯವಸ್ಥೆ ಬಗ್ಗೆ ಆತಂಕ, ಆಕ್ರೋಶ ಭರಿತ ಟೀಕೆ-ಟಿಪ್ಪಣಿ ವ್ಯಕ್ತವಾಗುತ್ತಿದೆ.

ಶುಕ್ರವಾರ ರಾತ್ರಿ ವಿದ್ಯಾರ್ಥಿಗಳು ಊಟ ಮುಗಿಸಿ ತಮ್ಮ ತಮ್ಮ ಕೊಠಡಿ ಸೇರಿಕೊಂಡಿದ್ದರು. ಆಗ ಇದ್ದಕ್ಕಿದ್ದಂತೆಯೆ 7 ಮತ್ತು 8ನೇ ತರಗತಿಗೆ ಸೇರಿದ ಓರ್ವ ಹುಡುಗ ಹಾಗು 8 ಹುಡುಗಿಯರಿಗೆ ವಾಂತಿ ಶುರುವಾಗಿದೆ. ಇನ್ನು ಕೆಲವರು ಹೊಟ್ಟೆ ನೋವು ಮತ್ತು ತಲೆ ನೋವಿನಿಂದ ಬಳಲತೊಡಗಿದರು. ಹಾಸ್ಟೇಲ್ ನರ್ಸ್ ರಾತ್ರಿಯೇ ಸರ್ಕಾರಿ ಆಸ್ಪತ್ರೆಗೆ 9 ವಿದ್ಯಾರ್ಥಿಗಳನ್ನು ದಾಖಲಿಸಿದ್ದಾರೆ. ಇವರಲ್ಲಿ 8 ವಿದ್ಯಾರ್ಥಿಗಳು ಗುಣಮುಖರಾಗಿ ಹಾಸ್ಟೇಲ್ ಸೇರಿದರೆ, ಒಬ್ಬ ವಿದ್ಯಾರ್ಥಿನಿ ಮಾತ್ರ ಹೆಚ್ಚು ಅಸ್ವಸ್ಥಳಾಗಿದ್ದರಿಂದ ಶನಿವಾರ ಸಂಜೆ ತನಕವೂ ಆಸ್ಪತ್ರೆಯಲ್ಲೆ ಇರಬೇಕಾಯಿತು.

ಕಲುಷಿತ ಆಹಾರದಿಂದ ತಮ್ಮ ಮಕ್ಕಳ ಆರೋಗ್ಯ ಹದಗೆಟ್ಟಿದೆಯೆಂದು ಪಾಲಕರು ಆಕ್ರೋಶಿತರಾಗಿದ್ದರು. ಪಾಲಕರ ಈ ಅನುಮಾನಕ್ಕೂ ಕಾರಣವಿತ್ತು. ಕೆಲ ದಿನಗಳ ಹಿಂದೆ ವಿದ್ಯಾರ್ಥಿಗಳಿಗೆ ಕೊಟ್ಟ ಊಟದಲ್ಲಿ ಹುಳುಗಳು ಕಂಡುಬಂದಿತ್ತು. ಈ ಕುರಿತು ತಹಶೀಲ್ದಾರ್‌ರಿಗೆ ದೂರು ಸಹ ನೀಡಲಾಗಿತ್ತು. ಆಹಾರ ಪದಾರ್ಥ ಸರಿಯಾಗಿ ಶುಚಿಗೊಳಿಸದೆ ಅಡಿಗೆ ತಯಾರಿಸದ್ದರಿಂದ ಹುಳುಗಳು ಊಟದಲ್ಲಿ ಬರಲು ಕಾಣವಾಗಿತ್ತೆಂದು ವಾರ್ಡನ್ ಹೇಳಿದ್ದರು.

ಆದರೆ ಈ ಬಾರಿ ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಲು ಕಲುಷಿತ ನೀರು ಕಾರಣವಾಗಿತ್ತು. ಶಾಲೆಯ ಕುಡಿಯುವ ನೀರನ್ನು ಶುದ್ದ ಮಾಡಲೆಂದು ಟ್ಯಾಂಕಿಗೆ ಬೆರೆಸಿದ ಕ್ಲೋರಿನ್‌ನಿಂದ ಸಮಸ್ಯೆಯಾಗಿದೆಯೆಂದು ತಾಲ್ಲೂಕು ಆಸ್ಪತ್ರೆ ಆಡಳಿತಾಧಿಕಾರಿ ಡಾ. ಎಚ್.ಎಫ್.ಇಂಗಳೆೆ ತಿಳಿಸಿದ್ದಾರೆ. ಮಿತಿ ಮೀರಿ ಕ್ಲೋರಿನ್ ಬೆರೆಸಿದ್ದು ಅಥವಾ ಕ್ಲೋರಿನ್ ಪರಿಣಾಮ ಕಡಿಮೆಯಾಗಿ ಕುಡಿಯಲು ಯೋಗ್ಯವಾಗುವ ಮೊದಲೆ ಹೊಣೆಗೇಡಿತನದಿಂದ ವಿದ್ಯಾಥಿಗಳಿಗೆ ನೀಡಿದ್ದರಿಂದ ಆರೋಗ್ಯ ಹದಗೆಟ್ಟಿದೆಯೆನ್ನಲಾಗಿದೆ.

ಶುದ್ದ ಕುಡಿಯುವ ನೀರಿನ ಘಟಕ ಶಾಲೆಗೆ ಮಂಜೂರಾಗಿ ಹಲವು ದಿನವಾಗಿದ್ದರೂ ಅದಿನ್ನು ಸ್ಥಾಪಿಸಲಾಗಿಲ್ಲ. ಘಟಕಕ್ಕೆ ಬೇಕಾದ ಸಾಮಗ್ರಿಗಳು ಬಂದಿವೆ. ಆದರೆ ಅದನ್ನು ಜೋಡಿಸಲಾಗಿಲ್ಲ. ಹೀಗಾಗಿ ಮಕ್ಕಳು ಶುದ್ದ ನೀರಿನಿಂದ ವಂಚಿತರಾಗಿ ಕಷ್ಟ ಎದುರಿಸುವಂತಾಗಿದೆಯೆಂದು ಪಾಲಕರು ಹೇಳುತ್ತಾರೆ. ಈ ಸಲ ಬಟ್ಟೆ, ಪುಸ್ತಕ ವಿತರಣೆಯಾಗಿಲ್ಲವೆಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಶಿಕ್ಷಕರಿಗೆ ಮಕ್ಕಳ ಬಗ್ಗೆ ಕಾಳಜಿಯಿಲ್ಲವೆಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದು, 9 ವಿದ್ಯಾರ್ಥಿಗಳು ಅಸ್ವಸ್ಥರಾದಾಗ ಆಸ್ಪತ್ರೆ ಸೇರಿಸಲು ನರ್ಸ್‌ಗೆ ಯಾವ ಶಿಕ್ಷಕರೂ ನೆರವಿಗೆ ಬರಲಿಲ್ಲವೆಂದು ಹೇಳಿದ್ದಾರೆ. ಶಾಲೆಯ ಹಿಂಬದಿಯ ವಸತಿ ಗ್ರಹದಲ್ಲೆ ಇದ್ದರು ಶಿಕ್ಷರು ಉದಾಸೀನ ತೋರಿಸಿದ್ದು ಅಮಾನವೀಯವೆಂದು ಪಾಲಕರು ಹೇಳುತ್ತಿದ್ದಾರೆ.


ಇದನ್ನೂ ಓದಿ: ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...