Homeಮುಖಪುಟದೆಹಲಿಯಾನ 2: ದೆಹಲಿ ಗಡಿಗಳಿಗೆ ಹೊರಟ ಕರ್ನಾಟಕ ಜನಶಕ್ತಿ ತಂಡ

ದೆಹಲಿಯಾನ 2: ದೆಹಲಿ ಗಡಿಗಳಿಗೆ ಹೊರಟ ಕರ್ನಾಟಕ ಜನಶಕ್ತಿ ತಂಡ

- Advertisement -
- Advertisement -

ಇಂದು ಸಂಸತ್ತಿನ ಉಭಯ ಸದನಗಳಲ್ಲಿ ಕೃಷಿ ಕಾಯ್ದೆಗಳ ರದ್ದತಿ ಮಸೂದೆ 2021 ಮಂಡನೆಯಾಗಿ ಅಂಗೀಕಾರವಾಗಿದೆ. ರೈತರ ಚಾರಿತ್ರಿಕ ಹೋರಾಟಕ್ಕೆ ಅಧಿಕೃತ ಗೆಲುವು ಸಂದಿದೆ. ಆದರೆ ರೈತರ ಪ್ರತಿಭಟನೆ ಮಾತ್ರ ಮುಗಿದಿಲ್ಲ. ಎಂಎಸ್‌ಪಿ ಖಾತ್ರಿಗೆ ಕಾನೂನು ಸೇರಿದಂತೆ ಹಲವು ಬೇಡಿಕೆಗಳನ್ನಿಟ್ಟುಕೊಂಡು ರೈತರು ಹೋರಾಟ ಮುಂದುವರೆಸಿದ್ದಾರೆ. ದೇಶಾದ್ಯಂತದ ಜನ ದೆಹಲಿ ಗಡಿಗಳನ್ನು ತಲುಪಿ ಬೆಂಬಲ ಸೂಚಿಸುತ್ತಿದ್ದಾರೆ. ಅದರಂತೆ ಕರ್ನಾಟಕದಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿ ಯುವಜನರ ತಂಡ ರೈತ ಹೋರಾಟ ಬೆಂಬಲಿಸಲು ದೆಹಲಿಗೆ ಹೊರಟಿದೆ.

ರಾಜ್ಯದಲ್ಲಿ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಹೋರಾಟ ಕರ್ನಾಟಕ, ಐಕ್ಯ ಹೋರಾಟ ಸಮಿತಿ ಮತ್ತು ಎಐಕೆಎಸ್‌ಸಿಸಿಯ ಭಾಗವಾಗಿರುವ ಕರ್ನಾಟಕ ಜನಶಕ್ತಿ ತಂಡವು ದೆಹಲಿಯಾನ 2 ಹೆಸರಿನಲ್ಲಿ ದೆಹಲಿಗೆ ಹೊರಟಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಕರ್ನಾಟಕ ಜನಶಕ್ತಿ ರಾಜ್ಯಸಮಿತಿ ಸದಸ್ಯರಾದ ಸರೋವರ್ ಬೆಂಕಿಕೆರೆ ಮಾತನಾಡಿ, “ವ್ಯಕ್ತಿಯೊಬ್ಬನ ಪ್ರತಿಷ್ಠೆ ಮತ್ತು ಖಾಸಗೀ ಕಂಪನಿಗಳಿಗೆ ಲಾಭ ಮಾಡಿಕೊಡಲು ಮಾತ್ರ ಬಂದಿದ್ದ ಕರಾಳ ಕೃಷಿ ಕಾಯ್ದೆ ರೈತರ ಹೋರಾಟದಿಂದ ವಾಪಾಸ್ಸಾಗಿದೆ. ಇದು ರೈತರ ಗೆಲುವು ಮಾತ್ರವಲ್ಲ ಇಡೀ ದೇಶದ ಜನರ ಗೆಲವು, ಅನ್ನ ತಿನ್ನುವವರ ಪ್ರತಿಯೊಬ್ಬರ ಗೆಲುವು. ಈ ಭಂಡ ಸರ್ಕಾರ ಕಾಯ್ದೆ ಮಾತ್ರ ವಾಪಾಸ್ ತಗೆದುಕೊಂಡಿದೆ ಆದರೆ ಎಮ್.ಎಸ್.ಪಿ ಅನ್ನು ಶಾಸನಬದ್ಧ ಗೊಳಿಸುವ ತೀರ್ಮಾನ ಇನ್ನೂ ಮಾಡಿಲ್ಲ. ಹುತಾತ್ಮ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಮತ್ತು ಆ ಸಾವುಗಳಿಗೆ ಕ್ಷಮೆ ಕೇಳಬೇಕು‌. ಹಾಗಾಗಿ ಈ ಹೋರಾಟ ಇನ್ನೂ ಜಾರಿಯಲ್ಲಿದೆ. ಅದನ್ನು ಸೇರಿಕೊಳ್ಳಲು ನಾವು ಹೊರಟಿದ್ದೇವೆ” ಎಂದರು.

ಇದೊಂದು ಐತಿಹಾಸಿಕ ಹೋರಾಟವೇ ಹೌದು. ಇದನ್ನು ಬೆಂಬಲಿಸಿ ರಾಜ್ಯದಲ್ಲಿ ಸೈಕಲ್ ಜಾಥಾ, ಹಳ್ಳಿಯಾನ ದಂತಹ ಪ್ರಚಾರಾಂದೋಲನವನ್ನು ನಾವು ಮಾಡಿದ್ದೆವು‌. ಎಲ್ಲಾ ಹೋರಾಟಗಳಲ್ಲಿಯೂ ಭಾಗಿಯಾಗಿದ್ದೆವು. ವಿದ್ಯಾರ್ಥಿ ಯುವಜನರಾಗಿ, ರೈತರ ಮಕ್ಕಳಾಗಿ ದೆಹಲಿಯ ರೈತ ಹೋರಾಟದಲ್ಲಿ ಭಾಗಿಯಾಗುವುದು ನಮ್ಮ ಕರ್ತವ್ಯ ಎಂದು ಭಾವಿಸಿ ಮತ್ತೊಮ್ಮೆ ದೆಹಲಿಗೆ ಹೊರಟಿದ್ದೇವೆ. ರಾಜ್ಯದಲ್ಲಿಯೂ ಕೃಷಿ ವಿರೋಧಿ, ಜನವಿರೋಧಿ ನೀತಿಗಳು ಜಾರಿಯಾಗಿದ್ದು ಅವುಗಳನ್ನೂ ವಾಪಾಸ್ ಪಡೆದುಕೊಳ್ಳಬೇಕೆಂದು ಒತ್ತಾಯಿಸುತ್ತೇವೆ ಮತ್ತು ಅಂತಹ ಹೋರಾಟಗಳಲ್ಲಿಯೂ ಭಾಗವಹಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿಯೂ ಸಹ ಕರ್ನಾಟಕ ಜನಶಕ್ತಿಯ ಭಾಗವಾಗಿ ನೂರಕ್ಕೂ ಹೆಚ್ಚು ರೈತರು, ಯುವಜನರು ದೆಹಲಿ ಗಡಿಗಳಿಗೆ ತಲುಪಿ ಒಂದು ವಾರಗಳ ಕಾಲ ಇದ್ದು ರೈತ ಹೋರಾಟದಲ್ಲಿ ಭಾಗಿಯಾಗಿದ್ದರು.


ಇದನ್ನೂ ಓದಿ: ಕೃಷಿ ಕಾಯ್ದೆಗಳು ವಾಪಸ್: ದೆಹಲಿ ಗಡಿಗಳಲ್ಲಿ ರೈತರ ಸಂಭ್ರಮಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕರ್ನಾಟಕ ದಿಂದ ಹೊರಟಿರುವ ಜನ ಶಕ್ತಿ ತಂಡಕ್ಕೆ ಅಭಿನಂದನೆಗಳು. ಇತಿಹಾಸದ ಪುಟಗಳಲ್ಲಿ ಸೇರಿ ಹೋಗಲಿರುವ ಹೋರಾಟದಲ್ಲಿ ಭಾಗವಹಿಸುತ್ತಿರುವ ಎಲ್ಲಾ ಬಂಧುಗಳಿಗೆ ಭೀಮ ವಂದನೆಗಳು.

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....