Homeಮುಖಪುಟ12 ಸಂಸದರ ಅಮಾನತು ರದ್ದುಗೊಳಿಸುವುದಿಲ್ಲ: ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು

12 ಸಂಸದರ ಅಮಾನತು ರದ್ದುಗೊಳಿಸುವುದಿಲ್ಲ: ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು

- Advertisement -
- Advertisement -

ಮುಂಗಾರು ಅಧಿವೇಶನದ ಕೊನೆಯ ದಿನವಾದ ಆಗಸ್ಟ್ 11 ರಂದು, ಅನುಚಿತ ವರ್ತನೆ ಆರೋಪದಲ್ಲಿ ಅಮಾನತು ಮಾಡಲಾಗಿದ್ದ 12 ಸಂಸದರ ಅಮಾನತು ಈ ಅಧಿವೇಶದಲ್ಲಿಯು ರದ್ದುಗೊಳಿಸಲಾಗುವುದಿಲ್ಲ ಎಂದು ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಮಂಗಳವಾರ ಹೇಳಿದ್ದಾರೆ.

ಸಂಸದರ ಅಮಾನತ್ತಿಗೆ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು ಇದಕ್ಕೆ ಪ್ರತಿಕ್ರಿಯೆಯಾಗಿ ಸರ್ಕಾರದ ಕ್ರಮವನ್ನು ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಸಮರ್ಥಿಸಿಕೊಂಡಿದ್ದಾರೆ.

ಸಂಸದರು ಪಶ್ಚಾತ್ತಾಪ ವ್ಯಕ್ತಪಡಿಸದ ಕಾರಣ ಅಮಾನತು ಹಾಗೆಯೇ ಉಳಿಯುತ್ತದೆ ಎಂದು ಹೇಳಿರುವ ಅವರು, ಅಮಾನತುಗೊಂಡ ಸಂಸದರು ಪಶ್ಚಾತ್ತಾಪ ವ್ಯಕ್ತಪಡಿಸದ ಕಾರಣ ವಿರೋಧ ಪಕ್ಷದ ನಾಯಕ ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಅವರ ಮನವಿಯನ್ನು ನಾನು ಪರಿಗಣಿಸುತ್ತಿಲ್ಲ. ಅಮಾನತು ಹಿಂಪಡೆಯುವುದಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಪ್ರತಿ ಹರಿದು ಪ್ರತಿಭಟನೆ: ರಾಜ್ಯಸಭೆಯಿಂದ ಟಿಎಂಸಿ ಸಂಸದ ಶಾಂತನು ಸೇನ್ ಅಮಾನತು

ಕೆಲವೇ ನಿಮಿಷಗಳ ಹಿಂದೆ ವಿರೋಧ ಪಕ್ಷದ ನಾಯಕ ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಅವರು ಸಂಸದರನ್ನು ಅಮಾನತುಗೊಳಿಸುವ ಸರ್ಕಾರದ ಕ್ರಮದ ವಿರುದ್ಧ ಇದು ಆಯ್ಕೆ ಮತ್ತು ನಿಯಮಗಳಿಗೆ ವಿರುದ್ಧವಾಗಿದೆ ಎಂದು ವಾದಿಸಿದ್ದರು. ನಂತರ 12 ಪ್ರತಿಪಕ್ಷಗಳ ಸಂಸದರ ಅಮಾನತು ಹಿಂಪಡೆಯಲು ನಾನು ನಿಮ್ಮನ್ನು ವಿನಂತಿಸುತ್ತೇನೆ ಎಂದಿದ್ದರು. ಆದರೆ ಅವರ ಮನವಿಯನ್ನು ರಾಜ್ಯಸಭಾಧ್ಯಕ್ಷರು ನಿರಾಕರಿಸಿದ್ದಾರೆ.

ಪ್ರತಿಪಕ್ಷಗಳು ವೆಂಕಯ್ಯ ನಾಯ್ಡು ಅವರ ಹೇಳಿಕೆಯಿಂದ ಅಸಮಾಧಾನಗೊಂಡು ಸಂಸತ್‌ನಿಂದ ಹೊರನಡೆದಿದ್ದಾರೆ. “ಪ್ರಜಾಪ್ರಭುತ್ವದಲ್ಲಿ ಪ್ರತಿಪಕ್ಷಗಳಿಗೆ ಹೊರನಡೆಯಲು ಎಲ್ಲ ಹಕ್ಕುಗಳಿವೆ. ಆದರೆ ಸದನ ಕಾರ್ಯನಿರ್ವಹಿಸಬೇಕು ಎಂದು ರಾಜ್ಯಸಭಾಧ್ಯಕ್ಷರು ಹೇಳಿದ್ದಾರೆ.

ಕಳೆದ ಆಗಸ್ಟ್‌ನಲ್ಲಿ ಪೆಗಾಸಸ್ ಹಗರಣದ ಕುರಿತು ವಿರೋಧ ಪಕ್ಷದ ಸಂಸದರು ಮತ್ತು ಸರ್ಕಾರ ನಡುವಿನ ಗದ್ದಲಕ್ಕಾಗಿ ಈ ಬಾರಿಯ ಅಧಿವೇಶನದಿಂದಲೂ ಶಿವಸೇನೆಯ ಪ್ರಿಯಾಂಕಾ ಚತುರ್ವೇದಿ ಸೇರಿದಂತೆ 12 ರಾಜ್ಯಸಭಾ ಸಂಸದರನ್ನು ಅಮಾನತುಗೊಳಿಸಲಾಗಿದೆ.

ನಿಯಮ 256 ರ ಅಡಿಯಲ್ಲಿ ಅಮಾನತುಗೊಂಡ ಸಂಸದರು: ಕಾಂಗ್ರೆಸ್‌ನ ಫುಲೋ ದೇವಿ ನೇತಮ್, ಛಾಯಾ ವರ್ಮಾ, ರಿಪುನ್ ಬೋರಾ, ರಾಜಮಣಿ ಪಟೇಲ್, ಸೈಯದ್ ನಾಸಿರ್ ಹುಸೇನ್ ಮತ್ತು ಅಖಿಲೇಶ್ ಪ್ರಸಾದ್ ಸಿಂಗ್. ಟಿಎಂಸಿಯ ಡೋಲಾ ಸೇನ್ ಮತ್ತು ಶಾಂತಾ ಛೆಟ್ರಿ. ಶಿವಸೇನೆಯ ಅನಿಲ್ ದೇಸಾಯಿ ಮತ್ತು ಪ್ರಿಯಾಂಕಾ ಚತುರ್ವೇದಿ, ಸಿಪಿಎಂನ ಎಳಮರಮ್ ಕರೀಂ ಮತ್ತು ಸಿಪಿಐನ ಬಿನೋಯ್ ವಿಶ್ವಂ.


ಇದನ್ನೂ ಓದಿ: ಅಹೋರಾತ್ರಿ ಪ್ರತಿಭಟನೆ ನಡೆಸಿದ ಅಮಾನತುಗೊಂಡ ಸಂಸದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...