Homeಮುಖಪುಟಅಮಿತ್ ಶಾ ಕ್ಷೇತ್ರದಲ್ಲಿ ಕ್ರಿಕೆಟ್‌, ಕಬಡ್ಡಿ ಟೂರ್ನಿಮೆಂಟ್‌‌ಗೆ ‘ಅರ್ಟಿಕಲ್‌ 370’ ಎಂದು ಹೆಸರಿಟ್ಟ ಬಿಜೆಪಿ!

ಅಮಿತ್ ಶಾ ಕ್ಷೇತ್ರದಲ್ಲಿ ಕ್ರಿಕೆಟ್‌, ಕಬಡ್ಡಿ ಟೂರ್ನಿಮೆಂಟ್‌‌ಗೆ ‘ಅರ್ಟಿಕಲ್‌ 370’ ಎಂದು ಹೆಸರಿಟ್ಟ ಬಿಜೆಪಿ!

- Advertisement -
- Advertisement -

ಗುಜರಾತ್‌ನ ಗಾಂಧಿನಗರ ಲೋಕಸಭಾ ಕ್ಷೇತ್ರದಲ್ಲಿ 370ನೇ ವಿಧಿ ಹೆಸರಿನಲ್ಲಿ ಕ್ರಿಕೆಟ್‌ ಮತ್ತು ಕಬಡ್ಡಿ ಪಂದ್ಯಾವಳಿಗಳನ್ನು ಪ್ರಾರಂಭಿಸಲು ಬಿಜೆಪಿ ನಿರ್ಧರಿಸಿದೆ. ಗಾಂಧಿನಗರವು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರವಾಗಿರುವುದು ವಿಶೇಷ.

‘ಗಾಂಧಿನಗರ ಲೋಕಸಭೆ ಪ್ರೀಮಿಯರ್ ಲೀಗ್ 370’ ಅಥವಾ ‘GLPL 370’ ಎಂದು ಟೂರ್ನಿಮೆಂಟ್‌ಗೆ ಹೆಸರಿಟ್ಟು “ಗರಿಷ್ಠ ಸಂಖ್ಯೆಯ ಯುವಕರನ್ನು ಪಕ್ಷಕ್ಕೆ ಸೆಳೆಯಲಾಗುವುದು” ಎಂದು ಸ್ಥಳೀಯ ಬಿಜೆಪಿ ಮುಖಂಡರೊಬ್ಬರು ‘ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಅಹಮದಾಬಾದ್ ನಗರ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಜಿತುಭಾಯ್ ಪಟೇಲ್ ಹೇಳಿಕೆ ನೀಡಿದ್ದು, ಲೀಗ್ ಅನ್ನು 370ನೇ ವಿಧಿ ಎಂದು ಹೆಸರಿಸಲಾಯಿತು. ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನಗಳನ್ನು ಅಮಿತ್ ಶಾ ಅವರ ನಾಯಕತ್ವದಲ್ಲಿ 2019ರಲ್ಲಿ ರದ್ದುಮಾಡಲಾಯಿತು ಎಂದಿದ್ದಾರೆ. ‘ಡಿಸೆಂಬರ್‌‌ನಲ್ಲಿ ಪಂದ್ಯಾವಳಿಗಳು ನಡೆಯಲಿವೆ’ ಎಂದು ಪಟೇಲ್ ಮಾಹಿತಿ ನೀಡಿದ್ದಾರೆ.

“ಮತದಾರರ ಪಟ್ಟಿಯಲ್ಲಿ ಹೆಸರಿರುವ (ಯುವ) ಮತದಾರರನ್ನು ಬಿಜೆಪಿ ಪರವಾಗಿಸುವ ಸಲುವಾಗಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅದಕ್ಕಾಗಿ ಕ್ರಿಕೆಟ್ ಮತ್ತು ಕಬಡ್ಡಿಯನ್ನು ಆಯ್ಕೆ ಮಾಡಲಾಗಿದೆ. ಪ್ರತಿ ವಾರ್ಡ್‌ನಲ್ಲಿ ಕನಿಷ್ಠ ಎರಡು ತಂಡಗಳನ್ನು (ಕ್ರಿಕೆಟ್ ಮತ್ತು ಕಬಡ್ಡಿಗೆ ತಲಾ ಒಂದು) ಹೊಂದುವುದು ಗುರಿಯಾಗಿದೆ” ಎಂದು ಗಾಂಧಿನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಹರ್ಷದ್ ಪಟೇಲ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಹರ್ಷದ್ ಪ್ರಕಾರ, “ಈ ಕಲ್ಪನೆಯನ್ನು ಮೊದಲು ಶಾ ಅವರೇ ಒಂದು ಸಣ್ಣ ಸಭೆಯಲ್ಲಿ ಮಂಡಿಸಿದರು. ಅಂದಿನಿಂದ 200ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದಾರೆ.”

”ಲೋಕಸಭಾ ಕ್ಷೇತ್ರದ ಕಾರ್ಯಕರ್ತರೆಲ್ಲ ಇದರಲ್ಲಿ ಭಾಗಿಯಾಗಿದ್ದಾರೆ. ಇಡೀ ಕ್ಷೇತ್ರಕ್ಕೆ ಒಂದು ಕಬಡ್ಡಿ ಪಂದ್ಯಾವಳಿ ಮತ್ತು ಅದರ ಏಳು ವಿಧಾನಸಭಾ ಕ್ಷೇತ್ರಗಳಿಗೆ ಒಂದರಂತೆ ಏಳು ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸುವ ಯೋಜನೆ ಇದೆ. ತಂಡಗಳ ನೋಂದಣಿ ಈಗಾಗಲೇ ನಡೆಯುತ್ತಿದೆ” ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಸಿಂಗ್ ವಘೇಲಾ ಹೇಳಿದ್ದಾರೆ.

ತಂಡಗಳು, ಸ್ಥಳಗಳು ಮತ್ತು ಕಮೆಂಟೇಟರ್ಸ್‌‌ಗಳನ್ನು ಗುರುತಿಸುವುದು ಮತ್ತು ನಿಯಮಗಳನ್ನು ರೂಪಿಸುವುದು ಸೇರಿದಂತೆ ಹಲವು ಜವಾಬ್ದಾರಿಗಳನ್ನು ಸ್ಥಳೀಯ ಬಿಜೆಪಿ ಪದಾಧಿಕಾರಿಗಳಿಗೆ ವಹಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಆಗಸ್ಟ್ 2019ರಲ್ಲಿ, ನರೇಂದ್ರ ಮೋದಿ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ಒಂದು ನಿರ್ದಿಷ್ಟ ಸ್ವಾಯತ್ತತೆಯನ್ನು ನೀಡಿದ ಸಂವಿಧಾನದ 370 ನೇ ವಿಧಿಯನ್ನು ಏಕಪಕ್ಷೀಯವಾಗಿ ತೆಗೆದುಹಾಕಿ, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲು ನಿರ್ಧರಿಸಿತು. ಈ ನಿರ್ಧಾರ ಭಾರತದ ಉಳಿದ ಭಾಗಗಳೊಂದಿಗೆ ಜಮ್ಮು ಕಾಶ್ಮೀರವನ್ನು ಒಂದುಗೂಡಿಸಲು ಸಹಾಯ ಮಾಡುತ್ತದೆ, ಭಯೋತ್ಪಾದನೆಯನ್ನು ಕಡಿಮೆ ಮಾಡುತ್ತದೆ ಮತ್ತು ಆರ್ಥಿಕತೆಯ ಬೆಳವಣಿಗೆಗೆ ಸಹಾಯ ಮಾಡುತ್ತದೆ ಎಂದು ಸರ್ಕಾರ ಪ್ರತಿಪಾದಿಸಿದರೂ ಈ ಯಾವುದೇ ಪರಿಣಾಮಗಳು ಈವರೆಗೆ ದಾಖಲಾಗಿಲ್ಲ ಎಂದು ದಿ ವೈರ್‌ ಸುದ್ದಿಜಾಲತಾಣ ವರದಿ ಮಾಡಿದೆ.


ಇದನ್ನೂ ಓದಿರಿ: ‘ಮೋದಿ ಸರ್ಕಾರಕ್ಕೆ ಎಂಎಸ್‌ಪಿ ಫುಲ್ ಫಾರ್ಮ್ ಗೊತ್ತಿಲ್ಲ!’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....