Homeಕರ್ನಾಟಕರಾಜ್ಯದಲ್ಲಿ ಲಾಕ್‌ಡೌನ್ ಇಲ್ಲ: ಊಹಾಪೋಹಗಳಿಗೆ ಕಿವಿಕೊಡಬಾರದು-ಸಿಎಂ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಲಾಕ್‌ಡೌನ್ ಇಲ್ಲ: ಊಹಾಪೋಹಗಳಿಗೆ ಕಿವಿಕೊಡಬಾರದು-ಸಿಎಂ ಬಸವರಾಜ ಬೊಮ್ಮಾಯಿ

- Advertisement -
- Advertisement -

ದೇಶದಲ್ಲಿ ಓಮಿಕ್ರಾನ್ ಬಗ್ಗೆ ಆತಂಕ ಹೆಚ್ಚಾಗಿದ್ದು, ಈ ನಡುವೆಯೇ ರಾಜ್ಯದಲ್ಲಿಯೂ ಲಾಕ್‌ಡೌನ್‌ ಜಾರಿಯಾಗುವ ಬಗ್ಗೆ ವದಂತಿ ಹಬ್ಬಿತ್ತು. ಇದಕ್ಕೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಇಲ್ಲ. ಈ ಕುರಿತಂತೆ ಊಹಾಪೋಹಗಳಿಗೆ ಜನ ಕಿವಿಗೊಡಬಾರದು ಎಂದು ಹೇಳಿದ್ದಾರೆ.

”ಸದ್ಯಕ್ಕೆ ರಾಜ್ಯದಲ್ಲಿ ಲಾಕ್‌ಡೌನ್ ಪ್ರಶ್ನೆಯೇ ಇಲ್ಲ. ಜನಜೀವನ ಎಂದಿನಂತೆ ನಡೆಯಬೇಕು. ಹೆಚ್ಚು ಜನರು ಸೇರುವಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಂಘಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ ಸಂಸ್ಥೆಗಳು ಜವಾಬ್ದಾರಿಯುತವಾಗಿ ನಡೆದುಕೊಂಡು ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಕೋವಿಡ್ ಬಗ್ಗೆ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ. ಕ್ಲಸ್ಟರ್ ಆಗಿರುವಲ್ಲಿ ವಿಶೇಷ ನಿಗಾ ವಹಿಸಲಾಗಿದೆ” ಎಂದು ಸಿಎಂ ತಿಳಿಸಿದ್ದಾರೆ.

’ಕೊರೊನಾ ಹೊಸ ರೂಪಾಂತರಿ ಓಮಿಕ್ರಾನ್ ಬಗ್ಗೆ ನಿಗಾ ಇರಿಸಲಾಗಿದೆ. ಈಗಿರುವ ಡೆಲ್ಟಾ ತಳಿಯಿಂದ ಅಲ್ಲಲ್ಲಿ ಕ್ಲಸ್ಟರ್ ಆಗಿದೆ. ಎರಡು ಹಂತಗಳಲ್ಲಿ ಇದನ್ನು ನಿಭಾಯಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದ್ದು, ವೈಜ್ಞಾನಿಕವಾಗಿ ಕೈಗೊಳ್ಳಬೇಕಿರುವ ಕ್ರಮಗಳನ್ನು ಕೈಗೊಂಡಿದೆ. ಹೆಚ್ಚಿನ ತನಿಖೆಗೆ ಎನ್.ಸಿ.ಬಿ.ಎಸ್‌ಗೂ ಮಾದರಿಗಳನ್ನು ಕಳುಹಿಸಲಾಗಿದೆ. ವಿದೇಶಗಳಿಂದ ಬಂದಿರುವ ಪ್ರಯಾಣಿಕರ ಬಗ್ಗೆ ವಿಶೇಷ ನಿಗಾ ಇರಿಸಿದ್ದು, ಸಂಪರ್ಕಿತರ ಪತ್ತೆ ಹಾಗೂ ಪರೀಕ್ಷೆಗಳನ್ನು ಮಾಡಲಾಗುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?


ಇನ್ನು ಕ್ಲಸ್ಟರ್‌ಗಳ ಬಗ್ಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅಲ್ಲಿ ಪಾಲ್ಗೊಂಡಿದ್ದವರ ಪರೀಕ್ಷೆ, 7 ದಿನಗಳ ನಂತರ ಮತ್ತೊಮ್ಮೆ ಪರೀಕ್ಷೆ ಮಾಡಲು ಸೂಚಿಸಲಾಗಿದೆ. ಧಾರವಾಡದ ಎಸ್.ಡಿ.ಎಂ ಕಾಲೇಜಿನಲ್ಲಿ ಸುಮಾರು 4 ಸಾವಿರ ಜನರ ಪರೀಕ್ಷೆಯನ್ನು ಮಾಡಲಾಗಿದೆ. ಅದೇ ರೀತಿ ಮೈಸೂರು, ಹಾಸನ ಮತ್ತು ಬೆಂಗಳೂರಿನ ಆನೇಕಲ್‌ನಲ್ಲಿನ ಕಸ್ಟರ್‌ಗಳಲ್ಲಿ ತಪಾಸಣೆಯನ್ನು ತೀವ್ರ ಗೊಳಿಸಲಾಗಿದೆ. ಸಾಮಾನ್ಯ ಪರೀಕ್ಷೆಗಳನ್ನು ಹೆಚ್ಚಿಸಲೂ ಸಹ ಸೂಚನೆ ನೀಡಲಾಗಿದೆ ಎಂದಿದ್ದಾರೆ.

—————

ಇದನ್ನೂ ಓದಿ: ಬೆಂಗಳೂರಿನ ESI ಆಸ್ಪತ್ರೆ ನಿರ್ಲಕ್ಷ್ಯ: ಒಂದೂವರೆ ವರ್ಷದ ಬಳಿಕ ಶವಾಗಾರದಿಂದ ಕೊರೊನಾ ಪೀಡಿತರ ಮೃತದೇಹ ಹೊರ ತೆಗೆದ ಸಿಬ್ಬಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...