Homeಮುಖಪುಟಹೋರಾಟಗಾರ್ತಿ ‘ಸುಧಾ ಭಾರದ್ವಾಜ್‌’ ಅವರಿಗೆ ಜಾಮೀನು

ಹೋರಾಟಗಾರ್ತಿ ‘ಸುಧಾ ಭಾರದ್ವಾಜ್‌’ ಅವರಿಗೆ ಜಾಮೀನು

- Advertisement -
- Advertisement -

ಬಂಧನವಾಗಿ ಮೂರು ವರ್ಷಗಳು ಕಳೆದರೂ ಪೊಲೀಸರು ಯಾವುದೆ ದೋಷಾರೋಪ ಪಟ್ಟಿಯನ್ನು ಸಲ್ಲಿಸದೇ ಇರುವ ಕಾರಣ ಭೀಮಾ ಕೊರೆಗಾಂವ್‌‌‌ – ಎಲ್ಗರ್‌ ಪರಿಷತ್ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಮಾನವ ಹಕ್ಕುಗಳ ಹೋರಾಟಗಾರ್ತಿ, ವಕೀಲೆ ಸುಧಾ ಭಾರದ್ವಾಜ್ ಅವರಿಗೆ ಬಾಂಬೆ ಹೈಕೋರ್ಟ್ ಬುಧವಾರ ಡೀಫಾಲ್ಟ್ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ತನಿಖೆಗಾಗಿ ಒದಗಿಸಲಾದ ಗರಿಷ್ಠ ಅವಧಿ ಮುಗಿದ ನಂತರವೂ ಪೊಲೀಸರು ಯಾವುದೇ ಆರೋಪ ಪಟ್ಟಿಯನ್ನು ಸಲ್ಲಿಸದಿದ್ದರೆ, ಆರೋಪಿಯು ಜಾಮೀನಿನ ಮೇಲೆ ಬಿಡುಗಡೆಯಾಗಲು ಅರ್ಹನಾಗುತ್ತಾರೆ. ಇನ್ನು ಡೀಫಾಲ್ಟ್‌ ಜಾಮೀನು ಎಂದು ಕರೆಯುತ್ತಾರೆ.

ಇದನ್ನೂ ಓದಿ:ಬಡಜನರಿಗೆ ವಕೀಲೆಯಾಗಿದ್ದಕ್ಕೆ ಜೈಲಿಗೆ ಹೋದ ಐಐಟಿ ಪದವೀಧರೆ ಸುಧಾ ಭಾರದ್ವಾಜ್!

ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಎನ್.ಜೆ. ಜಮಾದಾರ್ ಅವರ ಪೀಠವು ಸುಧಾ ಭಾರದ್ವಾಜ್ ಅವರನ್ನು ನಗರದ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯಕ್ಕೆ ಹಾಜರುಪಡಿಸಿ, ಅವರ ಜಾಮೀನಿಗೆ ವಿಧಿಸಬೇಕಾದ ಷರತ್ತುಗಳನ್ನು ನಿರ್ಧರಿಸುತ್ತದೆ. ಇದರ ನಂತರ ಬೈಕುಲ್ಲಾ ಮಹಿಳಾ ಜೈಲಿನಿಂದ ಅವರನ್ನು ಬಿಡುಗಡೆ ಮಾಡಲಾಗುತ್ತದೆ.

2018 ರಲ್ಲಿ ಅವರನ್ನು ಬಂಧಿಸಿದಾಗಿನಿಂದ ಅವರು ಅಂಡರ್ ಟ್ರಯಲ್ ಆಗಿ ಬಂಧನದಲ್ಲಿದ್ದರು. ನ್ಯಾಯಮೂರ್ತಿ ಶಿಂಧೆ ನೇತೃತ್ವದ ಹೈಕೋರ್ಟ್ ಪೀಠ ಈ ವರ್ಷ ಆಗಸ್ಟ್ 4 ರಂದು ಸುಧಾ ಭಾರದ್ವಾಜ್ ಅವರ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿತ್ತು.

ಆದಾಗ್ಯೂ, ಸುಧಾ ಅವರೊಂದಿಗೆ ಸಹ-ಆರೋಪಿಗಳಾಗಿರುವ ಸುಧೀರ್ ಧವಳೆ ಮತ್ತು ಇತರ ಏಳು ಮಂದಿಯ ಡೀಫಾಲ್ಟ್ ಜಾಮೀನು ಅರ್ಜಿಗಳನ್ನು ಹೈಕೋರ್ಟ್ ತಿರಸ್ಕರಿಸಿದೆ.

ಇದನ್ನೂ ಓದಿ:ಭಾರತದಲ್ಲಿ ಸಂವಿಧಾನ ಮತ್ತು ಪ್ರಜಾತಂತ್ರಗಳು ಉಳಿದರೆ ಮಾತ್ರ ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆ ಸಾಧ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ವಿನಾಕಾರಣ ಮೂರು ವರ್ಷ ಜೈಲಿನಲ್ಲಿ ಇದ್ದ ಸುದಾ ಭಾರದ್ವಾಜ್ ಅವರಿಗೆ ಜಾಮೀನು ದೊರಕಿದ್ದು ಸ್ವಾಗತಾರ್ಹ.

  2. ವಿನಾಕಾರಣ ಈ ರೀತಿಯಲ್ಲಿ ಅಮಾಯಕರನ್ನು ನ್ಯಾಯಕ್ಕಾಗಿ ಹೊರದುವವರನ್ನು ಬಂದಿಸಿ ಅವರ ಮೇಲೆ ಈ ರೀತಿ ಇಲ್ಲದ ಆರೋಪಗಳನ್ನು ಹೊರಿಸಿ, ಅವರನ್ನು ಭಯಪಡಿಸಿ ,ತೊಂದರೆ ಕೊಟ್ಟು ಜೈಲಿಗೆ ಕಳುಹಿಸುವ ಮೂಲಕ ಅಹಂಕಾರ ಇರುವ ಸ್ವಾರ್ಥಿಗಳು ಮಾಡುತ್ತಾರೆ.

  3. ವಿನಾಕಾರಣ ಈ ರೀತಿಯಲ್ಲಿ ಅಮಾಯಕರನ್ನು ನ್ಯಾಯಕ್ಕಾಗಿ ಹೊರದುವವರನ್ನು ಬಂದಿಸಿ ಅವರ ಮೇಲೆ ಈ ರೀತಿ ಇಲ್ಲದ ಆರೋಪಗಳನ್ನು ಹೊರಿಸಿ, ಅವರನ್ನು ಭಯಪಡಿಸಿ ,ತೊಂದರೆ ಕೊಟ್ಟು ಜೈಲಿಗೆ ಕಳುಹಿಸುವ ಮೂಲಕ ಅಹಂಕಾರ ಇರುವ ಸ್ವಾರ್ಥಿಗಳು ಮಾಡುತ್ತಾರೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...