Homeಕರ್ನಾಟಕಕರ್ನಾಟಕ ಹೈಕೋರ್ಟ್‌ನ ವಿಚಾರಣೆಯ ವೇಳೆ ಅರೆಬೆತ್ತಲೆಯಾಗಿ ಸ್ನಾನ ಮಾಡಿದ ವ್ಯಕ್ತಿ!

ಕರ್ನಾಟಕ ಹೈಕೋರ್ಟ್‌ನ ವಿಚಾರಣೆಯ ವೇಳೆ ಅರೆಬೆತ್ತಲೆಯಾಗಿ ಸ್ನಾನ ಮಾಡಿದ ವ್ಯಕ್ತಿ!

- Advertisement -
- Advertisement -

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಲೈಂಗಿಕ ಪ್ರಕರಣದ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್‌ನಲ್ಲಿ ವ್ಯಕ್ತಿಯೊಬ್ಬರು ವಿಡಿಯೊದಲ್ಲಿ ಅರೆಬೆತ್ತಲೆಯಾಗಿ ಕಾಣಿಸಿಕೊಂಡಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ಪೀಠದ ಮುಂದೆ ಮಂಗಳವಾರ ಈ ಘಟನೆ ನಡೆದಿದೆ.

ಲೈಂಗಿಕ ಪ್ರಕರಣದಲ್ಲಿ ಸಂತ್ರಸ್ಥೆ ಪರ ವಾದ ಮಂಡಿಸಿದ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅವರು ಈ ವಿಷಯವನ್ನು ಪ್ರಸ್ತಾಪಿಸಿದ ನಂತರ ನ್ಯಾಯಾಲಯವು ವೀಡಿಯೊದಲ್ಲಿ ಕಾಣಿಸಿಕೊಂಡ ವ್ಯಕ್ತಿಗೆ ನೋಟಿಸ್ ಜಾರಿಗೊಳಿಸಿದೆ ಎಂದು ವರದಿಯಾಗಿದೆ.

“ವ್ಯಕ್ತಿಯು ಅರೆಬೆತ್ತಲೆಯಾಗಿ ಕಾಣಿಸಿಕೊಂಡಿದ್ದು, ಸ್ನಾನ ಮಾಡುತ್ತಿದ್ದ” ಎಂದು ಜೈಸಿಂಗ್ ಹೇಳಿದ್ದಾರೆ. ವ್ಯಕ್ತಿಯು ಸುಮಾರು 20 ನಿಮಿಷಗಳ ಕಾಲ ವಿಡಿಯೊದಲ್ಲಿ ಕಾಣಿಸಿಕೊಂಡಿದ್ದು ಇದು ಉದ್ದೇಶಪೂರ್ವಕವಾಗಿ ಎಸಗಿದ ಕೃತ್ಯವಾಗಿದೆ ಎಂದು ಅವರು ದೂರಿದ್ದಾರೆ.

ಇದನ್ನೂ ಓದಿ:ಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ನ್ಯಾಯಾಲಯದ ವಿಚಾರಣೆಯ ಮಧ್ಯದಲ್ಲಿ ಇದು ನಡೆದಿದ್ದು ಅತ್ಯಂತ ಗೊಂದಲಕಾರಿ ಸಂಗತಿಯಾಗಿದೆ ಎಂದು ಇಂದಿರಾ ಜೈಸಿಂಗ್‌ ಹೇಳಿದ್ದಾರೆ. ನ್ಯಾಯಾಂಗ ನಿಂದನೆ ಮತ್ತು ಲೈಂಗಿಕ ಕಿರುಕುಳದ ಅಡಿಯಲ್ಲಿ ಅಧಿಕೃತವಾಗಿ ದೂರು ನೀಡಲಿದ್ದೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

“ನನ್ನ ಆಕ್ಷೇಪಣೆಯ ಹೊರತಾಗಿಯೂ ಪೂರ್ಣ 20 ನಿಮಿಷಗಳ ಕಾಲ ಪರದೆಯ ಮೇಲೆ ವ್ಯಕ್ತಿಯು ಅರೆ ಬೆತ್ತಲೆಯಾಗಿ ಕಾಣಿಸಿಕೊಂಡಿದ್ದಾನೆ ಎಂದು ನಾನು ಖಚಿತಪಡಿಸುತ್ತೇನೆ. ನ್ಯಾಯಾಂಗ ನಿಂದನೆ ಮತ್ತು ಲೈಂಗಿಕ ಕಿರುಕುಳಕ್ಕಾಗಿ ನಾನು ಅಧಿಕೃತ ದೂರು ನೀಡುತ್ತಿದ್ದೇನೆ. ನ್ಯಾಯಾಲಯದ ವಿಚಾರಣೆಯ ಮಧ್ಯದಲ್ಲಿ ಇದು ಅತ್ಯಂತ ಗೊಂದಲದ ಸಂಗತಿಯಾಗಿದೆ” ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಅರೆ ಬೆತ್ತಲೆಯಾಗಿದ್ದ ವ್ಯಕ್ತಿಯ ಹೆಸರನ್ನು ಶ್ರೀಧರ್ ಭಟ್ ಎಂದು ತೋರಿಸುತ್ತಿತ್ತು ಎಂದು ವಿಚಾರಣೆಯ ಭಾಗವಾಗಿದ್ದ ವಕೀಲರು ನ್ಯೂಸ್‌ ಮಿನಿಟ್‌ಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಅರೆ ಬೆತ್ತಲೆಯಾಗಿದ್ದ ವ್ಯಕ್ತಿಗೆ ನ್ಯಾಯಾಲಯದ ಅಧಿಕಾರಿಯೊಬ್ಬರು ಅವರಿಗೆ ತಿಳಿಸಿದ ನಂತರ ಅವರು ಲಾಗ್ ಔಟ್ ಮಾಡಿದ್ದಾರೆ ಎಂದು ನ್ಯೂಸ್ ಮಿನಿಟ್ ಹೇಳಿದೆ.

ಇದನ್ನೂ ಓದಿ:ರಾಘವೇಶ್ವರ ಭಾರತೀ ಅತ್ಯಾಚಾರ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...