Homeಮುಖಪುಟಗರುಡ ಗಮನ ವೃಷಭ ವಾಹನ: ಶತಮಾನಗಳ ಜಾನಪದ ಹಾಡಿನ ಸಾಂಸ್ಕೃತಿಕ ಮೌಲ್ಯವನ್ನು ಹಿಂಸೆಯ ಸಂಭ್ರಮಕ್ಕೆ ಬದಲಾಯಿಸುವುದು...

ಗರುಡ ಗಮನ ವೃಷಭ ವಾಹನ: ಶತಮಾನಗಳ ಜಾನಪದ ಹಾಡಿನ ಸಾಂಸ್ಕೃತಿಕ ಮೌಲ್ಯವನ್ನು ಹಿಂಸೆಯ ಸಂಭ್ರಮಕ್ಕೆ ಬದಲಾಯಿಸುವುದು ಸರಿಯೆ?

- Advertisement -

(ಗಗವೃವಾ ಸಿನಿಮಾದಲ್ಲಿನ ಮಹದೇಶ್ವರ ಸ್ವಾಮಿಯ ಹಾಡು ಬಳಸಿರುವ ಹಿನ್ನೆಲೆ ಕುರಿತು ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು ಬರೆದ ಬರಹವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾನುಗೌರಿ ಓದುಗರಿಗಾಗಿ ಅದನ್ನು ಇಲ್ಲಿ ಪ್ರಕಟಿಸುತ್ತಿದ್ದೇವೆ)

- Advertisement -

ಇತ್ತೀಚೆಗೆ ಬಿಡುಗಡೆಯಾದ ಕನ್ನಡ ಚಲನಚಿತ್ರ ‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ಪುರಾಣದ ಐತಿಹ್ಯಗಳನ್ನು ಹೋಲಿಸಿ ಚಿತ್ರಕಥೆಯನ್ನು ರೂಪಿಸಲಾಗಿದೆ ಎಂದು ಕೇಳಿ ತಿಳಿದಿದ್ದೇವೆ. ಸಿನೆಮಾ ರಂಗಕ್ಕೆ ಇದೇನೂ ಹೊಸತಲ್ಲ. ಆದರೆ ಈ ಸಿನೆಮಾದ ಒಂದು ಕೊಲೆಯ ನಂತರದ ದೃಶ್ಯದ ಹಿನ್ನೆಲೆಯಾಗಿ ಕೊಲೆಗಾರನು ನರ್ತಿಸುವಾಗ “ಸೋಜುಗಾದ ಸೂಜು ಮಲ್ಲಿಗೆ” ಎಂಬ ಮಲೈ ಮಹದೇಶ್ವರ ಸ್ವಾಮಿ ಕುರಿತಾದ ಜಾನಪದ ಗೀತೆಯನ್ನು ಹೊಸದಾಗಿ ಸಂಯೋಜಿಸಿದ ಸಂಗೀತದ ಮೂಲಕ ಹಾಡಿಸಲಾಗಿದೆ.

ಯಾವುದೇ ಕಲಾತ್ಮಕ ಕೃತಿಗಳ ಹಾಗೆಯೇ ಸಿನೆಮಾ ರಂಗವೂ ರಚನಾತ್ಮಕವಾಗಿ ಮತ್ತು ಸಮಾಜಮುಖಿಯಾಗಿ ನಡೆದುಕೊಳ್ಳಬೇಕಾಗಿರುವುದು ಈ ಕಾಲದ ಅಗತ್ಯ. ಹೀಗೆ ಮಾಡುವಾಗ ಸೃಜನಶೀಲತೆಯು ಹಲವು ರೂಪಗಳನ್ನು ಪಡೆದುಕೊಳ್ಳುತ್ತದೆ. ಇದಕ್ಕೆ ಯಾರ ವಿರೋಧವೂ ಇರಕೂಡದು.

ಆದರೆ ಪ್ರಸ್ತುತ ಪ್ರಕರಣದಲ್ಲಿ ಸಿನೆಮಾ ನಿರ್ದೇಶಕರು ಮಂಗಳೂರಿನ ಸುತ್ತಮುತ್ತಲ ಸಾಂಸ್ಕೃತಿಕ ಹಿನ್ನೆಲೆಯಲ್ಲಿ ಒಂದು ಕ್ರೌರ್ಯದತ್ತ ವಾಲುವ ಕಥಾಹಂದರವನ್ನು ರೂಪಿಸಿ ಅದರಲ್ಲಿ ನಡೆಯುವ ಕೊಲೆಯೆಂಬ ಹೀನಕೃತ್ಯ ಮಾಡಿ ಸಂಭ್ರಮಿಸುವ ದೃಶ್ಯದ ಹಿನ್ನೆಲೆಯಾಗಿ ಮಾದೇವನನ್ನು ಪೂಜಿಸುವ, ಆರಾಧಿಸುವ ಜಾನಪದ ಹಾಡನ್ನು ಬಳಸಿರುವುದನ್ನು ನೋಡಿದಾಗ ನಿರ್ದೇಶಕರ ಮಾರುಕಟ್ಟೆ ಆಧಾರಿತ ಚಿಂತನೆಯ ಬಗ್ಗೆ ಅನುಕಂಪ ಮೂಡುತ್ತದೆ. ಮಂಗಳೂರಿನ ದಟ್ಟ ಅನುಭವ ಕೊಡುವ ಚಿತ್ರದಲ್ಲಿ ಮೈಸೂರು ಸೀಮೆಯಲ್ಲಿ ಅತಿಹೆಚ್ಚು ಜನಪ್ರಿಯವಾಗಿರುವ ಮಾದೇವನ ಸ್ತುತಿಸುವ, ಈಗ ಹಠಾತ್ತಾಗಿ ಜನಪ್ರಿಯವಾಗಿರುವ ಗೀತೆಯನ್ನು ಯಾವುದೇ ಕಾರಣವಿಲ್ಲದೆ ಸೃಜನಶೀಲತೆ ಎಂಬ ಕಾರಣ ನೀಡಿ ಬಳಸಿರುವುದು ಏಕೆ ಎಂಬುದನ್ನು ಕನ್ನಡ ನಾಡಿನ ಜನರೇ ನಿರ್ಧರಿಸಬೇಕು. ಮಂಗಳೂರು ಸೀಮೆಯಲ್ಲೂ ನೂರಾರು ಶೈವ ಸ್ಥಾನಗಳಿವೆ; ಶಿವನನ್ನು ಸ್ತುತಿಸುವ ನೂರಾರು ಜನಪ್ರಿಯ ಹಾಡುಗಳಿವೆ. ಹೀಗಿದ್ದೂ ದೂರದ ಮಲೈ ಮಹದೇಶ್ವರನ ಕುರಿತ ಹಾಡನ್ನು ಬಳಸುವ ಅನಿವಾರ್ಯತೆ ಅವರಿಗೆ ಏಕೆ ಬಂತು ಎಂಬುದನ್ನು ಕರ್ನಾಟಕದ ಜನತೆಯೇ ಪ್ರಶ್ನಿಸಿ ಉತ್ತರ ಕಂಡುಕೊಳ್ಳಬೇಕಿದೆ.

ಈ ಹಾಡಲ್ಲದೆ ದಾಸಶ್ರೇಷ್ಠ ಪುರಂದರದಾಸರ “ಚಂದ್ರಚೂಡ ಶಿವಶಂಕರ ಪಾರ್ವತಿ” ಹಾಡನ್ನೂ ಇದೇ ಸಿನೆಮಾದಲ್ಲಿ ಇನ್ನೊಂದು ಸನ್ನಿವೇಶಕ್ಕೆ ಬಳಸಿಕೊಂಡಿದ್ದಾರೆ ಎಂಬುದನ್ನೂ ತಿಳಿದಿದ್ದೇವೆ. ಪುರಂದರ ದಾಸರಾಗಲೀ, ಮನುಷ್ಯತ್ವದಿಂದ ದೈವತ್ವಕ್ಕೇರಿದ ಮಹಾಮಹಿಮ ಮಲೈ ಮಹದೇಶ್ವರ ಸ್ವಾಮಿಗಳಾಗಲೀ, ಭಕ್ತಿ ಪರವಶತೆಯಿಂದ ಪದ್ಯಗಳನ್ನು ರಚಿಸಿದ ಜನಪದರಾಗಲೀ ಈ ಹಾಡುಗಳ ಮೇಲೆ ಯಾವ ಹಕ್ಕುಗಳನ್ನೂ ಇಟ್ಟುಕೊಂಡಿಲ್ಲ. ತಮ್ಮ ಹಾಡುಗಳೆಲ್ಲವೂ ಸಮಾಜದ ಅಭ್ಯುದಯಕ್ಕಾಗಿ ಎಂದೇ ಅವರೆಲ್ಲ ಭಾವಿಸಿದ್ದರು; ಇಂದೇನಾದರೂ ಈ ಹಾಡುಗಳು ಕೃತಿಸ್ವಾಮ್ಯದಡಿ ಇದ್ದ ಪಕ್ಷದಲ್ಲಿ ಏನಾಗುತ್ತಿತ್ತು ಎಂಬುದನ್ನೂ ಈ ನಾಡಿನ ಚಿಂತಕರು, ಸಿನೆಮಾ ರಂಗದ ಅನುಭವಿಗಳು ಯೋಚಿಸಬೇಕಲ್ಲವೆ? ಶತಮಾನಗಳ ಕಾಲ ಉಳ್ಳವರು – ಬಡವರು ಎಂಬ ಭೇದ ಭಾವವಿಲ್ಲದೆ ಈ ಹಾಡುಗಳನ್ನು ಭಜಿಸುತ್ತ ಶಿವನ ಸಾನಿಧ್ಯ ಬಯಸುತ್ತ ಮೈಲುಗಟ್ಟಲೆ ಪಾದಯಾತ್ರೆ ಮಾಡಿ ಬರುವ ಅಸಂಖ್ಯ ಭಕ್ತರು ಮಹದೇಶ್ವರ ಬೆಟ್ಟವನ್ನು ಹತ್ತುವುದು ತಮ್ಮಲ್ಲಿರುವ ಎಲ್ಲ ಬಗೆಯ ಅರಿ ಷಡ್ವರ್ಗಗಳು ನಾಶವಾಗಲಿ ಎಂದೇ ಹೊರತು ಕ್ರೌರ್ಯದ ಮಾನಸಿಕತೆ ಬೆಳೆಯಲಿ ಎಂದು ಅಲ್ಲವೇ ಅಲ್ಲ.

ಶತಮಾನಗಳ ಕಾಲ ಬಾಳಿದ ಈ ಹಾಡುಗಳು, ಭಗವದ್ಗೀತೆ, ಶಿವಶರಣರ ವಚನಗಳು ಮುಂತಾದ ಸಂತ ಸಾಹಿತ್ಯ, ಜನಪದ ಸಾಹಿತ್ಯದ ಕೃತಿಗಳು ಈ ಎಲ್ಲ ಘಟನೆಗಳನ್ನೂ ಮೀರಿ ಇನ್ನೂ ನೂರಾರು ವರ್ಷಗಳ ಕಾಲ ಜನರ ಮನದಾಳದಲ್ಲಿ ಇದ್ದೇ ಇರುತ್ತವೆ. ಅದರೆ ಡಿಜಿಟಲ್‌ ವೇದಿಕೆಗಳಲ್ಲಿ ಹೆಚ್ಚು ಕಾಲ ಬಾಳುವ ಸಿನೆಮಾಗಳಲ್ಲಿ ಹೀಗೆ ಸಂಬಂಧವಿಲ್ಲದೆ, ಸತರ್ಕವಿಲ್ಲದೆ ಸೃಜನಶೀಲತೆಯ ಹೆಸರಿನಲ್ಲಿ ಹಾಡುಗಳನ್ನು ಬಳಸಿ, ಇನ್ನೊಬ್ಬರು ಹಾಡುವಾಗ ಈ ಕ್ರೌರ್ಯದ ಸನ್ನಿವೇಶಗಳೇ ನೆನಪಾಗುವ ಹಾಗೆ ಮಾಡುವ ಮಾನಸಿಕತೆಗೆ ಏನೆನ್ನಬೇಕು? ಜಾನಪದ, ತಾತ್ವಿಕ ಹಾಡುಗಳ ಸಾಂಸ್ಕೃತಿಕ ಮೌಲ್ಯವನ್ನು ಉಳಿಸಿ ಬೆಳೆಸುವುದು ಮುಖ್ಯವೋ, ಅವುಗಳನ್ನು ವಾಣಿಜ್ಯ ಉದ್ದೇಶದ ರೂಪಕಗಳನ್ನಾಗಿ ರೂಪಾಂತರಿಸುವುದು ಮುಖ್ಯವೋ? ಇದನ್ನೂ ಜನರೇ ತೀರ್ಮಾನಿಸಬೇಕು. ಸೃಜನಶೀಲತೆ ಎಂಬುದು ಸಾಂಸ್ಕೃತಿಕ ಪತನಕ್ಕೆ ಕಾರಣವಾಗದೆ, ಸಮಾಜದ ಉನ್ನತಿಗೆ ಬಳಕೆಯಾಗಲಿ ಎಂದಷ್ಟೆ ಅಂತಿಮವಾಗಿ ಹೇಳಬಹುದಾದ ಮಾತು.

ಅದ್ಭುತ ಪ್ರತಿಭೆಗಳ ಸಂಗಮ ಎಂದೇ ಸುದ್ದಿಯಾಗಿರುವ ಸಿನೆಮಾ ನಿರ್ಮಾಣ ತಂಡದ ಯಾರೊಬ್ಬರ ಕ್ಷಮೆ ಕೇಳಿ ಆಗಬೇಕಾದ್ದೇನೂ ಇಲ್ಲ. ಕ್ಷಮಾಭಾವವು ವ್ಯಕ್ತಿಯ ಅಂತರಂಗದಲ್ಲಿ ಅದಾಗೇ ಮೂಡಬೇಕೇ ವಿನಃ ಯಾವುದೇ ಒತ್ತಡಕ್ಕೆ ಕೃತಕವಾಗಿ ಹುಟ್ಟಬಾರದು. ಆತ್ಮಸಾಕ್ಷಿ ಇದ್ದವರಿಗೆ ಕ್ಷಮೆ ಕೇಳಬೇಕೇ ಬೇಡವೆ ಎಂದು ನಿರ್ಧರಿಸುವುದೂ ಕಷ್ಟವಾಗುವುದಿಲ್ಲ! ಕೊಲೆಗೆ ರೂಪಕವಾಗಿ ದೇವರ ಹಾಡನ್ನು, ದುರ್ಗಾಸ್ತುತಿಯನ್ನು ಬಳಸುವುದು ತುಂಬ ಹಳೆಯ ತಂತ್ರ. ಹಲವು ಟಿವಿ ಸೀರಿಯಲ್‌ಗಳಲ್ಲೂ ಹೀಗೆ ಮಾಡಿದ್ದಾರೆ ಎಂದು ಕೇಳಿದ್ದೇವೆ. ಇಂತಹ ಚರ್ವಿತಚರ್ವಣ ಸಿದ್ಧ ಮಾದರಿಗಳನ್ನು ಮೀರುವ ಸೃಜನಶೀಲತೆ ಇವರಿಗೆಲ್ಲ ಒದಗಲಿ ಎಂದು ಹಾರೈಸುತ್ತೇವೆ. ಶತಮಾನಗಳಿಂದ ಅರಳಿದ ಜನಪದ ಸೊಗಡಿನ ಹಾಡೊಂದರ ಮೌಲ್ಯವನ್ನು, ಅದರಿಂದ ದೊರಕುವ ಅಮೂಲ್ಯ ದೈವಿಕ ರೂಪಕಗಳನ್ನು ಒಂದು ಸಿನೆಮಾದ ವಾಣಿಜ್ಯ ಉದ್ದೇಶದ ರೂಪಕಕ್ಕಾಗಿ ಬಲಿ ಕೊಡುವುದು ಎಷ್ಟು ಸರಿ?

ಮಹದೇಶ್ವರರು ನೈಜ ವ್ಯಕ್ತಿಯಾಗಿದ್ದು ದೈವತ್ವಕ್ಕೆ ಬೆಳೆದವರು. ಅವರು ಜಾತಿ – ಪಂಥ ಭೇದವಿಲ್ಲದೆ ಲಕ್ಷಾಂತರ ಭಕ್ತರನ್ನು ಹೊಂದಿದ್ದಾರೆ. ಅವರು ಸಕಲಜೀವಿಗಳಿಗೂ ಲೇಸನ್ನೇ ಬಯಸುವವರು; ಅಲ್ಪಮತಿಗಳಿಗೆ ಜ್ಞಾನ ನೀಡಿ, ಅಂತಹವರ ಅಪಸವ್ಯಗಳನ್ನು ಕ್ಷಮಿಸಿ ನಸುನಗು ಬೀರಿದ ಮಹಾಯೋಗಿ. ಇಂತಹ ಮಹಾಮಹಿಮರ ಬಗ್ಗೆ ಇದ್ದ ಅದ್ಭುತ ಗೀತೆಯೊಂದನ್ನು ಹಾಡುವಾಗ ಯಾವುದೋ ಲೌಕಿಕ ಜಗತ್ತಿಗೆ ಸೇರಿದ ಹಿಂಸಾತ್ಮಕ ಕಥೆಯೊಳಗಿನ ಕ್ರೌರ್ಯವು ನೆನಪಾಗುವಂತೆ ಮಾಡಿದ ನಿರ್ದೇಶಕರನ್ನೂ ಮಹದೇಶ್ವರರು ಹರಸಲಿ; ಅವರಿಗೆ ಮುಂದೆಂದೂ ಇಂತಹ ಚಿಂತನೆಗಳು ಬರದಂತೆ ಸದ್ಬುದ್ಧಿ ನೀಡಲಿ.

ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು
ಪೀಠಾಧಿಪತಿಗಳು
ಶ್ರೀ ಸಾಲೂರು ಬೃಹನ್ಮಠ
ಶ್ರೀ ಮಲೆ ಮಹದೇಶ್ವರ ಬೆಟ್ಟ


ಇದನ್ನೂ ಓದಿ: ಕಾಣೆಯಾದ ಸಂಕೀರ್ಣತೆ, ವಿವರಗಳ ಕೊರತೆ, ಗ.ಗ.ವೃ.ವಾ.ದಲ್ಲಿ ಹಿಂಸೆಯೇ ಬಂಡವಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...