Homeಮುಖಪುಟತಮಿಳುನಾಡು ಸಂಸದನ ಮಾನಹಾನಿ: BJP ನಾಯಕನ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ

ತಮಿಳುನಾಡು ಸಂಸದನ ಮಾನಹಾನಿ: BJP ನಾಯಕನ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ

- Advertisement -
- Advertisement -

ತಮಿಳುನಾಡಿನ ಚಿದಂಬರಂ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಅಧ್ಯಕ್ಷ ತೋಳ್ ತಿರುಮಾವಳವನ್ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡದಂತೆ ಮತ್ತು ಪ್ರಸಾರ ಮಾಡದಂತೆ ಬಿಜೆಪಿ ಪದಾಧಿಕಾರಿಗಳು, ಕೆಲವು ಪತ್ರಕರ್ತರು, ವಕೀಲರು ಮತ್ತು ಬರಹಗಾರರನ್ನು ಮದ್ರಾಸ್ ಹೈಕೋರ್ಟ್ ಗುರುವಾರ ನಿರ್ಬಂಧಿಸಿದೆ.

ತನ್ನ ಪ್ರತಿಷ್ಠೆಗೆ ಹಾನಿ ಮಾಡಿದ್ದಕ್ಕಾಗಿ 1 ಕೋಟಿ ರೂ ಮೊತ್ತದ ಮಾನ ನಷ್ಟ ಪರಿಹಾರ ನೀಡಬೇಕು ಎಂದು ಕೋರಿ ತಿರುಮಾವಳವನ್‌ ನೀಡಿದ್ದ ಸಿವಿಲ್ ಮೊಕದ್ದಮೆಗೆ ನ್ಯಾಯಮೂರ್ತಿ ಅಬ್ದುಲ್ ಖುದ್ದೋಸ್ ಅವರು ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ. ಮಾನಹಾನಿಕರ ಹೇಳಿಕೆಗಳನ್ನು ನೀಡಿದ ಆರೋಪಕ್ಕೆ ಗುರಿಯಾಗಿರುವ ಪ್ರತಿವಾದಿಗಳು ಜನವರಿ 28 ರೊಳಗೆ ಸ್ಪಷ್ಟೀಕರಣ ನೀಡಬೇಕು ಎಂದು ನ್ಯಾಯಮೂರ್ತಿ ಆದೇಶಿಸಿದ್ದಾರೆ.

ಇದನ್ನೂ ಓದಿ:ನಾಯಕತ್ವ ವ್ಯಕ್ತಿಯೊಬ್ಬರ ‘ದೈವಿಕ ಹಕ್ಕಲ್ಲ’: ರಾಹುಲ್ ಗಾಂಧಿ ವಿರುದ್ದ ಪ್ರಶಾಂತ್‌ ಕಿಶೋರ್‌ ವಾಗ್ದಾಳಿ

ತೋಲ್‌‌ ತಿರುಮಾವಳವನ್ ಮೂಲತಃ ವಕೀಲರಾಗಿದ್ದು, ಅವರು ವಿದ್ಯಾರ್ಥಿ ದಿನಗಳಿಂದಲೂ ದೀನದಲಿತರ ಪರವಾಗಿ ಹೋರಾಡುತ್ತಿದ್ದಾರೆ ಎಂದು ಹಿರಿಯ ವಕೀಲ ಇ.ಓಂಪ್ರಕಾಶ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಕಳೆದ 32 ವರ್ಷಗಳಿಂದ ಸಕ್ರಿಯ ಸಾರ್ವಜನಿಕ ಸೇವೆಯಲ್ಲಿರುವ ತಿರುಮಾವಳವನ್‌ ಅವರ ರಾಜಕೀಯ ಪಕ್ಷವು ಈಗ ವಿಧಾನಸಭೆಯಲ್ಲಿ ನಾಲ್ಕು ಶಾಸಕರು ಮತ್ತು ಸಂಸತ್ತಿನಲ್ಲಿ ಇಬ್ಬರು ಸದಸ್ಯರನ್ನು ಹೊಂದಿದೆ. ಅಲ್ಲದೆ ಅವರು ಜಗತ್ತಿನಾದ್ಯಂತ ಹರಡಿರುವ ತಮಿಳರ ನಡುವೆ ಜನಪ್ರಿಯ ವ್ಯಕ್ತಿಯಾಗಿದ್ದಾರೆ ಎಂದು ವಕೀಲರು ನ್ಯಾಯಾಲಯಕ್ಕೆ ಹೇಳಿದ್ದಾರೆ.

ತಿರುಮಾವಳವನ್ ಅವರ ವಕೀಲರು ನ್ಯಾಯಾಲಯಕ್ಕೆ, “ಈ ಹಿಂದೆ ವಿಸಿಕೆಯೊಂದಿಗೆ ಇದ್ದ ಡಿ.ಪೆರಿಯಸಾಮಿ ಅಲಿಯಾಸ್ ‘ಥಡಾ’ ಪೆರಿಯಸಾಮಿ ಅವರು ಪಕ್ಷ ಬದಲಿಸಿ ಬಿಜೆಪಿಗೆ ಸೇರಿದ್ದಾರೆ. ಇವರಿಗೆ ವಿಧಾನಸಭೆ ಮತ್ತು ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷವು ಅವಕಾಶ ನೀಡಿದ್ದಾರೆ. ಅವರು ಬಿಜೆಪಿ ಸೇರಿದ ನಂತರ ತನ್ನ ಫೇಸ್‌ಬುಕ್ ಪುಟ ಮತ್ತು ಇತರ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಅವಹೇಳನಕಾರಿ ವಿಷಯವನ್ನು ಪೋಸ್ಟ್ ಮಾಡುವ ಮೂಲಕ ಸಂಸದರ ವಿರುದ್ಧ ನಿಂದಿಸುವ ಮತ್ತು ದುರುದ್ದೇಶಪೂರಿತ ಪ್ರಚಾರವನ್ನು ಪ್ರಾರಂಭಿಸಿದ್ದರು. ಅದೇ ರೀತಿ, ವಕೀಲ ಪಿ. ರತ್ನಂ ಕೂಡ ಸಂಸದರ ವೈಯಕ್ತಿಕ ವ್ಯಕ್ತಿತ್ವಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಲು ಪ್ರಾರಂಭಿಸಿದ್ದಾರೆ” ಎಂದು ದೂರಿದ್ದಾರೆ.

ಇದನ್ನೂ ಓದಿ:ದೆಹಲಿ ಮಾಲಿನ್ಯಕ್ಕೆ ಪಾಕ್ ಕಾರಣ ಎಂದ ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...