Homeಮುಖಪುಟಅದಾನಿ-ಮಮತಾ ಬ್ಯಾನರ್ಜಿ ಭೇಟಿ: ಅದಾನಿ ಕುರಿತ ತಮ್ಮ ಟ್ವೀಟ್‌ಗಳಿಗೆ ಬದ್ದ ಎಂದ ಮಹುವಾ ಮೊಯಿತ್ರಾ

ಅದಾನಿ-ಮಮತಾ ಬ್ಯಾನರ್ಜಿ ಭೇಟಿ: ಅದಾನಿ ಕುರಿತ ತಮ್ಮ ಟ್ವೀಟ್‌ಗಳಿಗೆ ಬದ್ದ ಎಂದ ಮಹುವಾ ಮೊಯಿತ್ರಾ

- Advertisement -
- Advertisement -

ಪಶ್ಚಿಮ ಬಂಗಾಳದ ಆಡಳಿತರೂಢ ಪಕ್ಷ ಟಿಎಂಸಿಯ ಮುಖ್ಯಸ್ಥೆ ಮತ್ತು ಸಿಎಂ ಮಮತಾ ಬ್ಯಾನರ್ಜಿಯರು ಡಿಸೆಂಬರ್ 02ರ ಗುರುವಾರ ಸಂಜೆ ಉದ್ಯಮಿ ಗೌತಮ್ ಅದಾನಿಯವರನ್ನು ಭೇಟಿಯಾಗಿದ್ದಾರೆ. ರಾಜ್ಯದಲ್ಲಿ ಹೂಡಿಕೆ ಮಾಡುವಂತೆ ಮತ್ತು 2022ರ ಏಪ್ರಿಲ್‌ನಲ್ಲಿ ನಡೆಯುವ ಬೆಂಗಾಲ್ ಗ್ಲೋಬಲ್ ಬ್ಯುಸಿನೆಸ್ ಸಮ್ಮಿಟ್‌ಗೆ ಆಹ್ವಾನಿಸಿದ್ದಾರೆ. ಇನ್ನೊಂದೆಡೆ ಕೃಷಿ ಕಾಯ್ದೆಗಳು ಸೇರಿದಂತೆ ಹಲವು ವಿಚಾರವಾಗಿ ಅದಾನಿಯ ವಿರುದ್ಧ ಕಿಡಿಕಾರುತ್ತಿದ್ದ ಅದೇ ಪಕ್ಷದ ಸಂಸದೆ ಮಹುವಾ ಮೊಯಿತ್ರಾರವರು ಈಗ ತಮ್ಮ ಹಳೆಯ ಟ್ವೀಟ್‌ಗಳನ್ನು ಅಳಿಸಿದ್ದಾರೆ ಮತ್ತು ಅಳಿಸಲಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಉತ್ತರಿಸಿರುವ ಮಹುವಾ ತಮ್ಮ ಟ್ವೀಟ್‌ಗಳಿಗೆ ಈಗಲೂ ಬದ್ಧ ಎಂದಿದ್ದಾರೆ.

ಮಹುವಾ ಮೊಯಿತ್ರಾರವರು ಈ ಹಿಂದೆ ಅದಾನಿಯವ ವಿರುದ್ಧ ಮಾಡಿದ್ದ ಹಲವರು ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಟ್ವೀಟ್ ಮಾಡಿರುವ ಸಿಪಿಐ(ಎಂ) ನಾಯಕ ಎಂಡಿ ಸಲೀಂರವರು ಈ ಟ್ವೀಟ್‌ಗಳಲ್ಲಿ ಯಾವಾಗ ಬೇಕಾದರೂ ಡಿಲೀಟ್ ಮಾಡಬಹುದು ಎಂದು ಆರೋಪಿಸಿದ್ದಾರೆ. ಇನ್ನು ಕೆಲವು ನೆಟ್ಟಿಗರು ಒಂದು ಹೆಜ್ಜೆ ಮುಂದೆ ಹೋಗಿ ಮಹುವಾರವರು ಅದಾನಿಯವರನ್ನು ಟೀಕಿಸಿದ್ದ ತಮ್ಮ ಹಳೆಯ ಟ್ವೀಟ್‌ಗಳನ್ನು ಅಳಿಸಿಹಾಕಿದ್ದಾರೆ ಎಂದು ದೂರಿದ್ದಾರೆ. ಇದಕ್ಕೆ ಟ್ವೀಟ್ ಮೂಲಕವೆ ಸ್ಪಷ್ಟೀಕರಣ ನೀಡಿರುವ ಸಂಸದೆ, ಎಲ್ಲಾ ಟ್ವೀಟ್‌ಗಳು ಈಗಲೂ ಇವೆ ಮತ್ತು ಆ ವಿಚಾರಕ್ಕೆ ನಾನು ಬದ್ಧನಾಗಿದ್ದೇನೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಸಂಸ್ಥೆಗಳನ್ನು ಅದಾನಿ ಕಬಳಿಸುತ್ತಿದ್ದಾರೆ. ಇಡೀ ಕೇಂದ್ರ ಸರ್ಕಾರವೇ ಅವರ ಜೇಬಿನಲ್ಲಿದೆ. ಬ್ಯಾಂಕುಗಳಿಗೆ ಅವರು ವಂಚನೆ ಮಾಡಿದ್ದರೂ ಸಮರ್ಪಕ ತನಿಖೆ ನಡೆಯುತ್ತಿಲ್ಲ ಎಂದು ಮಹುವಾ ಮೊಯಿತ್ರಾ ಸರಣಿ ಟ್ವೀಟ್‌ಗಳಲ್ಲಿ ಅದಾನಿ ವಿರುದ್ಧ ತಿರುಗಿಬಿದ್ದಿದ್ದರು. ಈಗ ಸ್ವತಃ ಸಿಎಂ ಅದಾನಿಯವರನ್ನು ಹೂಡಿಕೆಗೆ ಬಂಗಾಳಕ್ಕೆ ಬನ್ನಿ ಎಂದು ಆಹ್ವಾನಿಸುತ್ತಿರುವುದರಿಂದ ಈ ವಿವಾದ ಭುಗಿಲೆದ್ದಿದೆ.

ಮಮತಾ ಬ್ಯಾನರ್ಜಿಯವರು ಬ್ಯುಸಿನೆಸ್ ಸಮ್ಮಿಟ್‌ಗೆ ಮುಖೇಶ್ ಅಂಬಾನಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಸಹ ಆಹ್ವಾನಿಸಿದ್ದಾರೆ. ಅದಾನಿ ಈ ಕುರಿತು ಟ್ವೀಟ್ ಮಾಡಿ “ಮಮತಾ ಬ್ಯಾನರ್ಜಿಯವರನ್ನು ಭೇಟಿ ಮಾಡಿದ್ದು ಸಂತೋಷವಾಗಿದೆ” ಎಂದಿದ್ದಾರೆ. ಜೊತೆಗೆ ಭೇಟಿಯ ಫೋಟೊ ಸಹ ಹಂಚಿಕೊಂಡಿದ್ದಾರೆ.

ಗೌತಮ್ ಅದಾನಿಯವರಿಗೆ ಯಾವುದೇ ಅಡೆ ತಡೆಯಿಲ್ಲದ ವ್ಯವಹಾರ ಸ್ನೇಹಿ ವಾತಾವರಣ ನಿರ್ಮಾಣ ಮಾಡಿಕೊಡಲಾಗುವುದು ಎಂದು ಬಂಗಾಳ ಸಿಎಂ ಭರವಸೆ ನೀಡಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಕೃಷಿ ಸೇರಿದಂತೆ ನೂರಾರು ಕ್ಷೇತ್ರಗಳಲ್ಲಿ ಹರಡಿಕೊಂಡಿರುವ ಅದಾನಿ ಮತ್ತು ಅಂಬಾನಿಗಳು ಬಂಗಾಳದ ಕಡೆಗೆ ತಮ್ಮ ದೃಷ್ಟಿ ನೆಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ದೇಶದ ರೈತರು ಈ ಇಬ್ಬರೂ ಉದ್ಯಮಿಗಳನ್ನು ಬಾಯ್ಕಾಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಟಾಟಾ ಕಂಪನಿಯ ತಮ್ಮ ಕಾರ್ಖಾನೆಗಾಗಿ ಭೂಮಿ ವಶಪಡಿಸಿಕೊಳ್ಳಲು ಮುಂದಾದಾದ ಸಿಂಗೂರು ಮತ್ತು ನಂದಿಗ್ರಾಮಗಳಲ್ಲಿ ಭಾರೀ ಹೋರಾಟ ಭುಗಿಲೆದ್ದಿತು. ಆ ಹೋರಾಟಕ್ಕೆ ನಾಯಕತ್ವ ನೀಡಿದ್ದ ಟಿಎಂಸಿಯ ಸುವೇಂದು ಅಧಿಕಾರಿ ಮತ್ತು ಮಮತಾ ಬ್ಯಾನರ್ಜಿ ದೊಡ್ಡ ನಾಯಕರಾಗಿ ಬೆಳೆದಿದ್ದರು. ಈ ಮೂರನೇ ಬಾರಿ ಅಧಿಕಾರಕ್ಕೆ ಬಂದಿರುವ ಅವರು ಮತ್ತದೆ ಅಂಬಾನಿ ಅದಾನಿಗಳಿಗೆ ಆಹ್ವಾನ ನೀಡುತ್ತಿದ್ದಾರೆ. ಮುಂದೆ ಏನಾಗಲಿದೆ ಎಂಬುದನ್ನು ಕಾಲವೇ ನಿರ್ಧರಿಸಲಿದೆ.

ಇದನ್ನೂ ಓದಿ: ‘ಮೋದಿ ಬೀದಿಬದಿ ಪೋಕರಿ ರೀತಿ ಮಾತನಾಡುತ್ತಾರೆ’- ಮೊಹುವಾ ಮೊಯಿತ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...