Homeಮುಖಪುಟಕೇಂದ್ರಕ್ಕೆ ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ 702 ರೈತರ ಪಟ್ಟಿ ಕಳುಹಿಸಿದ SKM

ಕೇಂದ್ರಕ್ಕೆ ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ 702 ರೈತರ ಪಟ್ಟಿ ಕಳುಹಿಸಿದ SKM

- Advertisement -
- Advertisement -

ಒಕ್ಕೂಟ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಒಂದು ವರ್ಷದಿಂದ ನಡೆಯುತ್ತಿರುವ ರೈತ ಹೋರಾಟದಲ್ಲಿ 700ಕ್ಕೂ ಅಧಿಕ ರೈತರು ಹುತಾತ್ಮರಾಗಿದ್ದಾರೆ. ಆದರೆ ಈ ಕುರಿತು ಲೋಕಸಭೆಯ ಅಧಿವೇಶನದಲ್ಲಿ ‘ನಮ್ಮಲ್ಲಿ ಯಾವುದೇ ಡೇಟಾ ಇಲ್ಲ, ಹಾಗಾಗಿ ಅವರಿಗೆ ಪರಿಹಾರ ಕೊಡುವ ಪ್ರಶ್ನೆಯೇ ಉದ್ಭವಿಸವುದಿಲ್ಲ’ ಎಂದು ಕೃಷಿ ಸಚಿವಾಲಯ ಹೇಳಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈಗ ದೆಹಲಿ ಹೋರಾಟ ವೇದಿಕೆಯಾದ ಸಂಯುಕ್ತ ಕಿಸಾನ್‌ ಮೋರ್ಚಾ ಕೇಂದ್ರ ಸರ್ಕಾರಕ್ಕೆ ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ 702 ರೈತರ ಪಟ್ಟಿ ಕಳುಹಿಸಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ರೈತ ನಾಯಕ ಕಿಶನ್‌ ಪಾಲ್, ’ನಾವು ಆಂದೋಲನದ ಸಮಯದಲ್ಲಿ ಹುತಾತ್ಮರಾದ 702 ರೈತರ ಪಟ್ಟಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದೇವೆ’ ಎಂದು ತಿಳಿಸಿದ್ದಾರೆ.

ಶುಕ್ರವಾರ ಸಂಜೆ ಪತ್ರಿಕಾಗೋಷ್ಟಿಯಲ್ಲಿ 600ಕ್ಕೂ ಹೆಚ್ಚು ಹುತಾತ್ಮ ರೈತರ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಸರ್ಕಾರವು ಪ್ರತಿಭಟನೆಯ ಸಮಯದಲ್ಲಿ ಸಾವನ್ನಪ್ಪಿದ ರೈತರ ಬಗ್ಗೆ ತಮ್ಮ ಬಳಿ ಡೇಟಾ ಇಲ್ಲ ಸುಳ್ಳು ಹೇಳುತ್ತಿದೆ” ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಆಡಳಿತವಿರುವ ಪಂಜಾಬ್‌ ರಾಜ್ಯದಿಂದ 403 ಮೃತ ರೈತರ ಪಟ್ಟಿಯನ್ನು ನೀಡಲಾಗಿದೆ. ಆ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ನೀಡಲಾಗಿದೆ. ಇತರ ರಾಜ್ಯಗಳಿಂಮದ 200 ಕ್ಕೂ ಹೆಚ್ಚು ಹುತಾತ್ಮ ರೈತರ ಪಟ್ಟಿಯನ್ನು ವಿವರಿಸಿ, ಕನಿಷ್ಠ ಈಗಲಾದರೂ ಮೃತ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಮತ್ತು ರೈತರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರವನ್ನು ಒತ್ತಾಯಿಸಿದ್ದಾರೆ.

ಇದುವರೆಗೂ ಪಂಜಾಬ್ ಮತ್ತು ತೆಲಂಗಾಣ ಸರ್ಕಾರ ಹುತಾತ್ಮ ರೈತರ ಕುಟುಂಬಕ್ಕೆ ಪರಿಹಾರ ಘೋಷಿಸಿವೆ. ಆದರೆ ಕೇಂದ್ರ ಸರ್ಕಾರ ಪರಿಹಾರ ಘೋಷಿಸದೆ ನುಣುಚಿಕೊಳ್ಳಲು ಯತ್ನಿಸುತ್ತಿದೆ.


ಇದನ್ನೂ ಓದಿ: MSP ಸೇರಿ ಇತರ ಹಕ್ಕೊತ್ತಾಯಗಳ ಕುರಿತು ಸರ್ಕಾರದೊಂದಿಗೆ ಮಾತುಕತೆಗೆ 5 ರೈತ ಮುಖಂಡರನ್ನು ಹೆಸರಿಸಿದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...