Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಪೊಲೀಸರು ಮಸೀದಿ ಸ್ವಚ್ಛಗೊಳಿಸುತ್ತಿರುವುದು ನಿಜವೇ?

ಫ್ಯಾಕ್ಟ್‌ಚೆಕ್: ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಪೊಲೀಸರು ಮಸೀದಿ ಸ್ವಚ್ಛಗೊಳಿಸುತ್ತಿರುವುದು ನಿಜವೇ?

- Advertisement -
- Advertisement -

ಮಮತಾ ಬ್ಯಾನರ್ಜಿಯವರ ಆಡಳಿತದಲ್ಲಿ ಪಶ್ಚಿಮ ಬಂಗಾಳದ ಪೊಲೀಸ್ ಸಿಬ್ಬಂದಿಗಳು ಮಸೀದಿ ಸ್ವಚ್ಛಗೊಳಿಸುತ್ತಿರುವ ದೃಶ್ಯಗಳು ಎಂದು ಫೋಟೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ

ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ಚಿತ್ರವನ್ನು ಗೂಗಲ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ 2016ರ ಜೂನ್ 26 ರಂದು ಎಕೆ ನ್ಯೂಸ್ ಚಾನೆಲ್ ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ ಇದೇ ರೀತಿಯ ಫೋಟೊವೊಂದು ಕಂಡುಬಂದಿದೆ. ರಂಜಾಬ್ ಹಬ್ಬದ ಹಿನ್ನೆಲೆಯಲ್ಲಿ ತೆಲಂಗಾಣದ ಆದಿಲಾಬಾದ್ ಜಿಲ್ಲೆಯ ಪೊಲೀಸ್ ಸಿಬ್ಬಂದಿ ಭೈಂಸಾದಲ್ಲಿನ ಪಂಜೆಶಾ ಮಸೀದಿಯನ್ನು ಸ್ವಚ್ಛಗೊಳಿಸುತ್ತಿರುವ ದೃಶ್ಯಗಳು ಎಂದು ಚಾನೆಲ್ ವರದಿ ಮಾಡಿದೆ. ಹಲವಾರು ಸಾಮಾಜಿಕ ಜಾಲತಾಣಗಳಲ್ಲಿಯೂ ಸಹ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಆದಿಲಾಬಾದ್ ಪೊಲೀಸರು ದೇವಾಸ್ಥಾನಗಳು ಮತ್ತು ಮಸೀದಿಗಳನ್ನು ಸ್ವಚ್ಛಗೊಳಿಸಿದ್ದಾರೆ ಎಂದು ಇದೇ ರೀತಿಯ ಫೊಟೊಗಳನ್ನು ಹಂಚಿಕೊಂಡಿದ್ದಾರೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕೀ ವರ್ಡ್‌ಗಳನ್ನು ಬಳಸಿ ಹುಡುಕಿದಾಗ 2016ರ ಜೂನ್ 20 ರಂದು ತೆಲಂಗಾಣ ರಾಜ್ಯ ಪೊಲೀಸ್ ಪ್ರಕಟಿಸಿ ಫೇಸ್‌ಬುಕ್ ಪೋಸ್ಟ್ ಒಂದು ಕಂಡುಬಂದಿದೆ. ಅದರಲ್ಲಿ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಆದಿಲಾಬಾದ್ ಜಿಲ್ಲೆಯ ಪೊಲೀಸ್ ಸಿಬ್ಬಂದಿ ಗಿಡಗಳನ್ನು ನೆಟ್ಟು, ದೇವಾಸ್ಥಾನ ಮತ್ತು ಮಸೀದಿಗಳನ್ನು ಸ್ವಚ್ಚಗೊಳಿಸಿದರು ಎಂದು ವಿವರಣೆ ನೀಡಲಾಗಿದೆ.

ಈಟಿವಿ ತೆಲಂಗಾಣ ನ್ಯೂಸ್ ಚಾನೆಲ್ ಆದಿಲಾಬಾದ್ ಜಿಲ್ಲೆಯ ಪೊಲೀಸ್ ಸಿಬ್ಬಂದಿ ಸ್ವಚ್ಛ ಭಾರತ ಅಭಿಯಾನ ನಡೆಸಿದ್ದರ ಕುರಿತು ಹಲವು ವಿಡಿಯೋಗಳನ್ನು ಪ್ರಕಟಿಸಿದೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ‘ಈಟಿವಿ ತೆಲಂಗಾಣ’ ಸುದ್ದಿ ವಾಹಿನಿ ಪ್ರಕಟಿಸಿದ ವಿಡಿಯೋದಲ್ಲಿ ನಿರ್ಮಲ್ ಪೊಲೀಸರು ದೇವಸ್ಥಾನವನ್ನು ಸ್ವಚ್ಛಗೊಳಿಸುತ್ತಿರುವುದನ್ನು ನೋಡಬಹುದು. ಈ ಎಲ್ಲಾ ಸಾಕ್ಷಿಗಳಿಂದ ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ಫೋಟೋ ಹಳೆಯದಾಗಿದೆ ಮತ್ತು ಪಶ್ಚಿಮ ಬಂಗಾಳಕ್ಕೆ ಸಂಬಂಧಿಸಿಲ್ಲ ಎಂದು ತೀರ್ಮಾನಿಸಬಹುದು, ಆದರೆ ತಪ್ಪುದಾರಿಗೆಳೆಯುವ ಕೋಮುವಾದಿ ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಒಟ್ಟಾರೆಯಾಗಿ 2016ರ ತೆಲಂಗಾಣದಲ್ಲಿನ ಸ್ವಚ್ಛ ಭಾರತ ಅಭಿಯಾನದ ದೃಶ್ಯಗಳನ್ನು ಬಂಗಾಳದಲ್ಲಿ ಪೊಲೀಸರು ಮಸೀದಿ ಸ್ವಚ್ಛಗೊಳಿಸುತ್ತಿರುವುದು ಎಂದು ಹಂಚಿಕೊಳ್ಳಲಾಗಿದೆ.


ಇದನ್ನೂ ಓದಿ: ವಾರಣಾಸಿಗೆ ಪ್ರಧಾನಿ ಮೋದಿ ಭೇಟಿ: ಮಸೀದಿಗೆ ಕೇಸರಿ ಬಣ್ಣ ಬಳಿದ ಅಧಿಕಾರಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...