Homeಮುಖಪುಟಪುಂಡಲೀಕ ಕಲ್ಲಿಗನೂರುರವರ 'ಚಾಲುಕ್ಯರ ಶಿಲ್ಪಕಲೆ' ಪುಸ್ತಕ ಬಿಡುಗಡೆ ನಾಳೆ

ಪುಂಡಲೀಕ ಕಲ್ಲಿಗನೂರುರವರ ‘ಚಾಲುಕ್ಯರ ಶಿಲ್ಪಕಲೆ’ ಪುಸ್ತಕ ಬಿಡುಗಡೆ ನಾಳೆ

ಸುಮಾರು 500 ಪುಟಗಳ ಬೃಹತ್‌ ಗಾತ್ರದ, ಬಹುವರ್ಣದ ಈ ಕೃತಿಯಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಚಿತ್ರಗಳಿವೆ.

- Advertisement -
- Advertisement -

ತಮ್ಮ ರೇಖಾ ಚಿತ್ರಗಳ ಮೂಲಕ ಪರಿಚಿತರಾಗಿರುವ ಪುಂಡಲೀಕ ಕಲ್ಲಿಗನೂರು ಅವರು ಕರ್ನಾಟಕ ಶಿಲ್ಪಕಲಾ ವೈಭವವನ್ನು ವಿಶಿಷ್ಟವಾಗಿ ಕಟ್ಟಿಕೊಡುವ ಪ್ರಯತ್ನ ಮಾಡುತ್ತಾ ಬಂದಿದ್ದಾರೆ. ಬೇಲೂರು- ಹಳೇಬೀಡು, ಗದಗ ಜಿಲ್ಲೆಯ ದೇಗುಲಗಳ ಶಿಲ್ಪಕಲೆಯನ್ನು ಟೇಬಲ್‌ ಟಾಪ್‌ ಪುಸ್ತಕಗಳ ರೂಪದಲ್ಲಿ ಹೊರ ತಂದಿರುವ ಅವರು ಈಗ ಬಾದಾಮಿ ಚಾಲುಕ್ಯರ ಶಿಲ್ಪಕಲಾ ಶ್ರೀಮಂತಿಕೆಯನ್ನು ಕುರಿತು ‘ಚಾಲುಕ್ಯರ ಶಿಲ್ಪಕಲೆ’ ಎಂಬ ನೂತನ ಪುಸ್ತಕ ಬರೆದಿದ್ದಾರೆ. ಡಿಸೆಂಬರ್ 11 ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಈ ಪುಸ್ತಕ ಬಿಡುಗಡೆಯಾಗಲಿದೆ.

ಕರ್ನಾಟಕದ ಪ್ರಮುಖ ರಾಜವಂಶಗಳಲ್ಲಿ ಒಂದಾದ ಚಾಲುಕ್ಯ, ಬಾದಾಮಿ, ಐಹೊಳೆ, ಪಟ್ಟದ ಕಲ್ಲು ಹಾಗೂ ಮಹಾಕೂಟವನ್ನು ಆಳಿತ್ತು. ಈ ಅವಧಿಯಲ್ಲಿ ನಿರ್ಮಾಣವಾದ ದೇಗುಲಗಳು ಇಂದಿಗೂ ಸೃಷ್ಟಿ ವಿಸ್ಮಯದ ಸಂಕೇತಗಳು. ಪ್ರಪಂಚದ ಪಾರಂಪರಿಕ ತಾಣಗಳೆಂದು ಗುರುತಿಸಿಕೊಂಡಿರುವ ಈ ಚಾಲುಕ್ಯು ಶಿಲೆಯ ವೈಭವವನ್ನು ಚಿತ್ರ ಹಾಗೂ ಪಠ್ಯಗಳ ಮೂಲಕ ವಿಶಿಷ್ಟವಾಗಿ ಕಟ್ಟಿಕೊಡುವ ಪ್ರಯತ್ನವನ್ನು ‘ ಚಾಲುಕ್ಯರ ಶಿಲ್ಪಕಲೆ’ ಕೃತಿಯಲ್ಲಿ ಮಾಡಲಾಗಿದೆ.

ಸುಮಾರು 500 ಪುಟಗಳ ಬೃಹತ್‌ ಗಾತ್ರದ, ಬಹುವರ್ಣದ ಈ ಕೃತಿಯಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಚಿತ್ರಗಳಿವೆ. ಈ ಚಿತ್ರಗಳು ಚಾಲುಕ್ಯರ ಶ್ರೀಮಂತಿಕೆಯನ್ನು ಎತ್ತಿ ಹಿಡಿಯುತ್ತವೆ. ಪುಸ್ತಕದ ಕಲಾತ್ಮಕ ಪುಟ ವಿನ್ಯಾಸ ಓದುಗರನ್ನು ಸೆಳೆಯುತ್ತವೆ.

ಕರ್ನಾಟಕ ಇತಿಹಾಸ ಅಕಾಡೆಮಿಯ ಅಧ್ಯಕ್ಷರಾದ ದೇವರ ಕೊಂಡಾರೆಡ್ಡಿಯವರು ಈ ಕೃತಿಗೆ ಮುನ್ನಡಿ ಬರೆಯುತ್ತಾ, ” ಬಾದಾಮಿ ಚಾಲುಕ್ಯರ ಶಿಲ್ಪಗಳು ಮಂಗಳೇಶನಿಂದ ಹಿಡಿದು ಇಮ್ಮಡಿ ಕೀರ್ತಿವರ್ಮನವರೆಗೆ ರಚಿತವಾಗಿವೆ. ಪುಂಡಲೀಕ ಕಲ್ಲಿಗರನೂರು ಅವರೂ ಸಹ ಶಿಲ್ಪಗಳ ವಿಮರ್ಶೆಗಿಂತ ಅವುಗಳ ಅಂದ, ಕಥಾಶಿಲ್ಪ, ಸಂಯೋಜನೆ ಇಂತಹ ವಿವರಗಳ ಕಡೆಗೆ ಗಮನ ಹರಿಸಿದ್ದಾರೆ. ಹೀಗಾಗಿ ಇವರ ಚಾಲುಕ್ಯ ಶಿಲ್ಪಕಲಾ ನೋಟ ಮಾಟ ಸಂಪುಟವು ಚಾಲುಕ್ಯು ಶಿಲ್ಪಕಲೆಯ ಸೌಂದರ್ಯ ಹಾಗೂ ಗಾಂಭೀರ್ಯಗಳನ್ನು ಪರಿಚಯಿಸುತ್ತದೆ” ಎಂದಿದ್ದಾರೆ.

ದೃಶ್ಯ ಕಲಾ ಇತಿಹಾಸಕಾರ, ಕೆ ವಿ ಸುಬ್ರಮಣ್ಯ ಅವರು ತಮ್ಮ ಮುನ್ನುಡಿಯಲ್ಲಿ, ” ಈ ಅಪೂರ್ವ ದೇವಾಲಯ ವಾಸ್ತುಶಿಲ್ಪ ನೆಲೆಗಳಲ್ಲಿ ನಡೆದಾಡಿ, ದೇವಾಲಯ ದೃಶ್ಯಕಲಾ ಇತಿಹಾಸದ ಅಧ್ಯಯನ ಮಾಡಿರುವ ಪುಂಡಲೀಕ ಕಲ್ಲಿಗನೂರ ಅವರ ಸಾಹಸಮಯ ಪ್ರಯತ್ನಗಳು ಹಲವು. ಈ ಹಿನ್ನೆಲೆಯಲ್ಲಿ ನೋಡುಗ/ಓದುಗರು ಇನ್ನೂ ಹಲವು ರೀತಿಗಳಲ್ಲಿ ಚಾಲುಕ್ಯರ ಶಿಲ್ಪಕಲೆಯನ್ನು ನೋಡಬಹುದಾದ ದಾರಿಗಳನ್ನು ಅನ್ವೇಷಿಸಿಕೊಳ್ಳಬಹುದೆನಿಸುತ್ತದೆ. ಪುಂಡಲೀಕರ ವಿಶಿಷ್ಟ ಕ್ಯಾಮರಾ ಕಣ್ಣಿನ, ಸುಂದರ ದೃಶ್ಯ ಮತ್ತು ಅಕ್ಷರ ಮೂಲದ ಈ ಪುಸ್ತಕದಲ್ಲಿ , ಚಾಲುಕ್ಯರ ನವರಸ ಭಾವಗಳ ದೇವಾಲಯವಾಸ್ತು ಮತ್ತು ಶಿಲ್ಪಗ ನೂರಾರು ಚಿತ್ರಗಳು, 125ಕ್ಕೂ ಹೆಚ್ಚಿನ ಶೀರ್ಷಿಕೆಗಳ ಅವಕಾಶದ ಅಡಿ ಅನಾವರಣಗೊಂಡಿದೆ” ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಅಪರ ಅಬಕಾರಿ ಆಯುಕ್ತರಾದ ಡಾ ವೈ ಮಂಜುನಾಥ್‌, ಕರ್ನಾಟಕ ಸಂಸ್ಕೃತ ವಿವಿ ವಿಶ್ರಾಂತ ಕುಲಪತಿ ಪ್ರೊ ಮಲ್ಲೇಪುರಂ ಜಿ ವೆಂಕಟೇಶ, ಕರ್ನಾಟಕ ಇತಿಹಾಸ ಅಕಾಡೆಮಿ ಅಧ್ಯಕ್ಷರಾದ ದೇವರ ಕೊಂಡಾರೆಡ್ಡಿ, ಪ್ರಕಾಶಕರ ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ, ಕರ್ನಾಟಕ ಚಿತ್ರಕಾವ್ಯ ಅಭಿಯಾನದ ನಿರ್ದೇಶಕ ಚಂದ್ರೇಗೌಡ ಕುಲಕರ್ಣಿ, ಕಲಾ ವಿಮರ್ಶಕರಾದ ಎಚ್ ಎ ಅನಿಲಕುಮಾರ್, ಪತ್ರಕರ್ತ ಗೌರೀಶ್‌ ಅಕ್ಕಿ, ಲೇಖಕಿ ನಳಿನಿ ಡಿ, ನಟ, ಕೆ ಎಸ್ ಪರಮೇಶ್ವರ, ಹಿರಿಯ ಕಲಾವಿದರ ಪ ಸ ಕುಮಾರ್ ಉಪಸ್ಥಿತರಿರುವರು.


ಇದನ್ನೂ ಓದಿ: ಕುಟುಂಬದೊಳಗಿನ ರಚನೆಗೂ, ಸಮಾಜದ ಒಡಕುಗಳಿಗೂ ಇರುವ ನಿಕಟ ಸಂಬಂಧ ಶೋಧಿಸುವ ಮೂನಿಯಾ ಅಕ್ಲ್‌ಳ ’ಕಾಸ್ಟ ಬ್ರಾವ, ಲೆಬನಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...