Homeಮುಖಪುಟಗೋವಾ ಚುನಾವಣೆ: ಟಿಎಂಸಿ, ಆಪ್ ಜೊತೆ ಮೈತ್ರಿಯತ್ತ ಕಾಂಗ್ರೆಸ್ ಚಿತ್ತ?

ಗೋವಾ ಚುನಾವಣೆ: ಟಿಎಂಸಿ, ಆಪ್ ಜೊತೆ ಮೈತ್ರಿಯತ್ತ ಕಾಂಗ್ರೆಸ್ ಚಿತ್ತ?

- Advertisement -
- Advertisement -

ಕೆಲವೇ ತಿಂಗಳುಗಳಲ್ಲಿ ಗೋವಾದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಕಳೆದ ಭಾರೀ ಅತಿ ದೊಡ್ಡ ವಿರೋಧ ಪಕ್ಷವಾಗಿ ಹೊರಹೊಮ್ಮಿದರೂ ಅಧಿಕಾರ ಪಡೆಯಲಾಗದ ಕಾಂಗ್ರೆಸ್ ಈ ಬಾರಿ ಶತಾಯಗತಾಯ ಅಧಿಕ್ಕಾರಕ್ಕೇರಲು ಪ್ರಯತ್ನಿಸುತ್ತಿದೆ. ಅದಕ್ಕಾಗಿ ಟಿಎಂಸಿ, ಆಪ್ ಸೇರಿದಂತೆ ಇನ್ನಿತರ ಪ್ರಾದೇಶಿಕ ಪಕ್ಷಗಳ ಜೊತೆ ಮೈತ್ರಿಗೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

2017ರಲ್ಲಿ ಇತರೆ ಪಕ್ಷಗಳ ಶಾಸಕರನ್ನು ಎಳೆತಂದು ಸರ್ಕಾರ ರಚಿಸಿದ್ದ ಬಿಜೆಪಿ, ಅಂತೂ ಇಂತೂ ಅಧಿಕಾರ ನಡೆಸಿದೆ. ಇದೀಗ ಮುಂದಿನ ಚುನಾವಣೆಯಲ್ಲಿಯೂ ಅಧಿಕಾರ ಉಳಿಸಿಕೊಳ್ಳುವ ವಿಶ್ವಾಸದಲ್ಲಿದೆ. ಆದರೆ ಗೋವಾ ಫಾರ್ವರ್ಡ್ ಪಾರ್ಟಿ ಮೈತ್ರಿಯಿಂದ ಹೊರನಡೆದು ಕಾಂಗ್ರೆಸ್ ಜೊತೆಸೇರಿದೆ. ಇದು ಬಿಜೆಪಿಗೆ ಕೊಂಚ ಹಿನ್ನಡೆಯಾದಂತಿದೆ.

ಇನ್ನೊಂದೆಡೆ ಸಿಎಂ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದು, ಗೋವಾದ ಹಿಂದಿನ ರಾಜ್ಯಪಾಲರಾಗಿದ್ದ, ಹಾಲಿ ಮೇಘಾಲಯದ ರಾಜ್ಯಪಾಲರಾಗಿರುವ ಸತ್ಯಪಾಲ್ ಮಲ್ಲಿಕ್ ಪ್ರಮೋದ್ ಸಾವಂತ್ ವಿರುದ್ಧ ಕಿಡಿಕಾರಿದ್ದಾರೆ. ಇದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ.

2019 ರಲ್ಲಿ ಕಾಂಗ್ರೆಸ್‌ ಶಾಸಕರು ಬಿಜೆಪಿಗೆ ವಲಸೆ ಹೋದಾಗಿನಿಂದ, ಪಕ್ಷವು ತನ್ನ ಪಡೆಗಳನ್ನು ಗಟ್ಟಿಗೊಳಿಸಲು ಹೆಣಗಾಡುತ್ತಿದೆ. ಎಲ್ಲಾ ಪ್ರಾದೇಶಿಕ ಮತ್ತು ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಪಕ್ಷವು ಕಾರ್ಯತಂತ್ರಗಳನ್ನು ರೂಪಿಸುತ್ತಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ತಿಳಿಸಿದ್ದಾರೆ.

40 ಸದಸ್ಯರ ಗೋವಾ ವಿಧಾನಸಭೆಯಲ್ಲಿ ಮೂವರು ಶಾಸಕರನ್ನು ಹೊಂದಿರುವ ಗೋವಾ ಫಾರ್ವರ್ಡ್ ಪಾರ್ಟಿಯೊಂದಿಗೆ ಕಾಂಗ್ರೆಸ್ ಈಗಾಗಲೇ ಮೈತ್ರಿ ಮಾಡಿಕೊಂಡಿದೆ. ಇದೀಗ, ಇತರ ಪಕ್ಷಗಳಾದ ತೃಣಮೂಲ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಮತ್ತು ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿಯೊಂದಿಗೆ ಕೈಜೋಡಿಸಲು ಉತ್ಸುಕವಾಗಿದೆ. ಶನಿವಾರ ಪಕ್ಷದ ನಾಯಕರನ್ನು ಭೇಟಿ ಮಾಡಲು ನವದೆಹಲಿಗೆ ಬಂದಿದ್ದ ಕಾಮತ್ ಅವರು, ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್ ಪಕ್ಷವು ಟಿಎಂಸಿ, ಎಎಪಿ, ಜಿಎಫ್‌ಪಿ, ಎಂಜಿಪಿಯೊಂದಿಗೆ ಮೈತ್ರಿ ಮಾಡಿಕೊಳ್ಳದ ಹೊರತು ಬೇರೆ ದಾರಿಯಿಲ್ಲ. ಕಾಂಗ್ರೆಸ್, ಟಿಎಂಸಿ ಮತ್ತು ಎಎಪಿಯ ರಾಷ್ಟ್ರೀಯ ನಾಯಕರು ಚುನಾವಣೆಗೆ ಮುಂಚಿತವಾಗಿ ಮಹಾಮೈತ್ರಿಕೂಟವನ್ನು ರೂಪಿಸಲು ಉನ್ನತ ಮಟ್ಟದಲ್ಲಿ ಮಾತುಕತೆ ನಡೆಸಬೇಕು ಎಂದು ಕೆಲ ಕಾಂಗ್ರೆಸ್ ನಾಯಕರು ಒತ್ತಾಯಿಸುತ್ತಿದ್ದಾರೆ.

ಆದರೆ ಟಿಎಂಸಿ ಮುಖ್ಯಸ್ಥೆ ಮತ್ತು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ವಿರುದ್ಧ ಕಿಡಿಕಾರುತ್ತಿದ್ದಾರೆ. ಆಪ್ ಕೂಡ ಕಾಂಗ್ರೆಸ್‌ನಿಂದ ದೂರ ನಿಂತಿದೆ. ಅಲ್ಲದೆ ಟಿಎಂಸಿ ಮತ್ತು ಆಪ್ ಸಹ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿವೆ. ಇಂತಹ ಸಂದರ್ಭದಲ್ಲಿ ಮೈತ್ರಿ ಸಾಧ್ಯವೇ ಎಂಬ ಪ್ರಶ್ನೆಗಳು ಮೂಡಿವೆ. ಇವೆಲ್ಲಕ್ಕೂ ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ.


ಇದನ್ನೂ ಓದಿ: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿರುವ ಮಾಜಿ ಶಾಸಕ ಕೋನರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...