Homeಕರ್ನಾಟಕಕೋಲಾರ: ಕ್ರಿಶ್ಚಿಯನ್ನರ ಮೇಲೆ ಹಲ್ಲೆ, ಧರ್ಮಗ್ರಂಥಗಳಿಗೆ ಬೆಂಕಿ

ಕೋಲಾರ: ಕ್ರಿಶ್ಚಿಯನ್ನರ ಮೇಲೆ ಹಲ್ಲೆ, ಧರ್ಮಗ್ರಂಥಗಳಿಗೆ ಬೆಂಕಿ

- Advertisement -
- Advertisement -

ಕರ್ನಾಟಕದ ಕೋಲಾರ ಜಿಲ್ಲೆಯಲ್ಲಿ ಶನಿವಾರ (ಡಿಸೆಂಬರ್ 11) ಬಲಪಂಥೀಯ ಗುಂಪುಗಳ ಯುವಕರು ಧಾರ್ಮಿಕ ಪುಸ್ತಕಗಳಿಗೆ ಬೆಂಕಿ ಹಚ್ಚಿ, ಕ್ರಿಶ್ಚಿಯನ್ನರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ದಾಳಿ ನಡೆದಾಗ ಕ್ರೈಸ್ತ ಗುಂಪುಗಳ ಪ್ರತಿನಿಧಿಗಳು ಶ್ರೀನಿವಾಸಪುರದಲ್ಲಿ ಮನೆ ಮನೆಗೆ ಕಿರುಪುಸ್ತಕಗಳನ್ನು ಹಂಚುತ್ತಿದ್ದರು.

ಬುಕ್‌ಲೆಟ್‌ಗಳನ್ನು ವಿತರಿಸುವುದರ ವಿರುದ್ಧ ಕ್ರೈಸ್ತರಿಗೆ ಎಚ್ಚರಿಕೆಯನ್ನು ಹಿಂದುತ್ವ ಪರ ಗುಂಪುಗಳು ನೀಡಿದ್ದವು. ಯಾವುದೇ ದೂರು ಇಲ್ಲದ ಕಾರಣ ಎಫ್‌ಐಆರ್ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

“ಮನೆಗೆ ಹೋಗಿ ಪ್ರಚಾರ ಮಾಡುವ ಮೂಲಕ ಯಾವುದೇ ಕೋಮು ಸೌಹಾರ್ದತೆಯನ್ನು ಕೆಡಿಸದಂತೆ ನಾವು ಕ್ರಿಶ್ಚಿಯನ್ ಸಮುದಾಯಕ್ಕೆ ತಿಳಿಸಿದ್ದೇವೆ. ಬಲಪಂಥೀಯರು ಮತ್ತು ಕ್ರಿಶ್ಚಿಯನ್ ಸಮುದಾಯದವರು ಸೌಹಾರ್ದಯುತವಾಗಿ ವಿಷಯವನ್ನು ಇತ್ಯರ್ಥಗೊಳಿಸಿದ್ದಾರೆ” ಎಂದು ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ಹೇಳಿಕೆ ನೀಡಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಘಟನೆಯ ನಂತರ ಕ್ರಿಶ್ಚಿಯನ್ ಗುಂಪುಗಳ ಸದಸ್ಯರು ಪೊಲೀಸರನ್ನು ಭೇಟಿ ಮಾಡಿ ಅವರೊಂದಿಗೆ ಮಾತನಾಡಿದ್ದಾರೆ. ಬಲಪಂಥೀಯ ಗುಂಪಿನ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ.

ಕ್ರಿಶ್ಚಿಯನ್ನರಿಂದ ಬಲವಂತವಾಗಿ ಮತಾಂತರ ನಡೆಸಲಾಗುತ್ತಿದೆ ಎಂದು ಹಿಂದುತ್ವ ಪರ ಬಲಪಂಥೀಯ ಗುಂಪುಗಳು ಆರೋಪಿಸಿವೆ.

ಅದೇ ದಿನ, ಬೆಳಗಾವಿಯಲ್ಲಿ ಮತ್ತೊಂದು ಕ್ರಿಶ್ಚಿಯನ್ ವಿರೋಧಿ ದಾಳಿ ನಡೆಸಲು ಯತ್ನಿಸಲಾಗಿದೆ. ಒಬ್ಬ ಪಾದ್ರಿಯ ಮೇಲೆ ತಲವಾರ್‌‌ನಿಂದ ದಾಳಿ ಮಾಡಲು ವ್ಯಕ್ತಿಯೊಬ್ಬರು ಹಿಂಬಾಲಿಸಿದರು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ತಲವಾರ್‌‌ ಹಿಡಿದ ವ್ಯಕ್ತಿ ಬಾಕ್ಸೈಟ್ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ ವರ್ಕರ್ ಚರ್ಚ್‌ನ ಪ್ಯಾರಿಷ್ ಪಾದ್ರಿ ಫಾದರ್ ಫ್ರಾನ್ಸಿಸ್ ಡಿಸೋಜಾ ಅವರನ್ನು ಬೆನ್ನಟ್ಟುತ್ತಿರುವುದನ್ನು ವೈರಲ್‌ ವಿಡಿಯೊದಲ್ಲಿ ಕಾಣಬಹುದು.

ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಕ್ರೈಸ್ತ ಗುಂಪುಗಳ ಮೇಲೆ ಸರಣಿ ದಾಳಿಗಳು ನಡೆಯುತ್ತಿವೆ. ದುಷ್ಕರ್ಮಿಗಳನ್ನು ಕಾನೂನಾತ್ಮಕವಾಗಿ ಶಿಕ್ಷೆಗೆ ಒಳಪಡಿಸುವುದನ್ನು ಬಿಟ್ಟು ಸಂತ್ರಸ್ತರಿಗೆಯೇ ಪೊಲೀಸರು ಬುದ್ಧಿ ಹೇಳುತ್ತಿರುವ ಘಟನೆಗಳು ವರದಿಯಾಗುತ್ತಿವೆ.

ಸಿವಿಲ್ ಸೊಸೈಟಿ ಸಂಘಟನೆಯ ಇತ್ತೀಚಿನ ಸತ್ಯಶೋಧನಾ ವರದಿಯು ದಕ್ಷಿಣ ಕನ್ನಡವೊಂದರಲ್ಲೇ ಕನಿಷ್ಠ 71 ಕೋಮು ವೈಷಮ್ಯದ ಪ್ರಕರಣಗಳು ಕಳೆದ ಎಂಟು ತಿಂಗಳ ಅವಧಿಯಲ್ಲಿ ನಡೆದಿವೆ ಎಂದು ಹೇಳಿದೆ.


ಇದನ್ನೂ ಓದಿರಿ: ‘ಹಿಂದುತ್ವಕ್ಕೆ ಸತ್ಯವೆಂದರೆ ಆಗದು, ಹಿಂದೂಧರ್ಮ, ಹಿಂದುತ್ವ ಒಂದೇ ಅಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...