Homeಮುಖಪುಟಲಖಿಂಪುರ್ ಖೇರಿ ಹತ್ಯಾಕಾಂಡ ಪೂರ್ವಯೋಜಿತವಾದುದು: SIT

ಲಖಿಂಪುರ್ ಖೇರಿ ಹತ್ಯಾಕಾಂಡ ಪೂರ್ವಯೋಜಿತವಾದುದು: SIT

SIT ಯು ಕಾರು ಹರಿಸಿ ಕೊಂದ 13 ಆರೋಪಿಗಳ ವಿರುದ್ಧ ಶಸಸ್ತ್ರ ಕಾಯ್ದೆಯಡಿಯಲ್ಲಿ ಕೊಲೆಯತ್ನ ಸೇರಿ ನಾಲ್ಕು ಹೊಸ ಸೆಕ್ಷನ್‌ಗಳನ್ನು ಸೇರಿಸಲು CJM ಮುಂದೆ ಅರ್ಜಿ ಸಲ್ಲಿಸಿದೆ.

- Advertisement -
- Advertisement -

ನಾಲ್ವರು ರೈತರು ಸೇರಿದಂತೆ ಒಟ್ಟು 8 ಜನರ ಅಮಾನುಷ ಸಾವಿಗೆ ಕಾರಣವಾದ ಅಕ್ಟೋಬರ್ 3 ರ ಉತ್ತರ ಪ್ರದೇಶದ ಲಖೀಂಪುರ್ ಖೇರಿ ಹತ್ಯಾಕಾಂಡವು ಯೋಜಿತವಾದ ಮತ್ತು ಉದ್ದೇಶಪೂರ್ವಕ ಕೃತ್ಯವಾಗಿದೆಯೆ ಹೊರತು ನಿರ್ಲಕ್ಷತನದಿಂದ ಆಗಿದ್ದಲ್ಲ ಎಂದು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ತಿಳಿಸಿದೆ.

ಹಾಗಾಗಿ SIT ಯು ಕಾರು ಹರಿಸಿ ಕೊಂದ 13 ಆರೋಪಿಗಳ ವಿರುದ್ಧ ಶಸಸ್ತ್ರ ಕಾಯ್ದೆಯಡಿಯಲ್ಲಿ ಕೊಲೆಯತ್ನ ಸೇರಿ ನಾಲ್ಕು ಹೊಸ ಸೆಕ್ಷನ್‌ಗಳನ್ನು ಸೇರಿಸಲು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ಮುಂದೆ ಅರ್ಜಿ ಸಲ್ಲಿಸಿದೆ.

ಈಗಾಗಲೇ ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾ ವಿರುದ್ಧ ಕೊಲೆಯತ್ನದ ಪ್ರಕರಣ ದಾಖಲಾಗಿದೆ. ನಂತರದ ತನಿಖೆಯ ಸಂದರ್ಭದಲ್ಲಿ ಹೊಸ ಸಾಕ್ಷ್ಯಗಳು ಸಿಕ್ಕಿದ್ದರಿಂದ ಈಗ ಎಲ್ಲಾ 13 ಆರೋಪಿಗಳ ಮೇಲೆ ಕೊಲೆಯತ್ನ ಪ್ರಕರಣ ಸೇರಿಸಲು ಮನವಿ ಮಾಡಿದೆ. ಜೊತೆಗೆ ಆರೋಪಿಗಳ ವಿರುದ್ಧದ ಮೂರು ಆರೋಪಗಳನ್ನು ಕೈಬಿಡುವಂತೆ ಸಹ ಎಸ್‌ಐಟಿ ನ್ಯಾಯಾಲಯಕ್ಕೆ ಮನವಿ ಮಾಡಿದೆ. ಅವುಗಳೆಂದರೆ ಐಪಿಸಿ ಸೆಕ್ಷನ್‌ 279 (ಸಾರ್ವಜನಿಕ ಮಾರ್ಗದಲ್ಲಿ ದುಡುಕಿನ ಚಾಲನೆ), 338 (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕ್ರಿಯೆ) ಮತ್ತು 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ).

ಅವುಗಳ ಬದಲಿಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆಯ ಯತ್ನ), 326 (ಸ್ವಯಂಪ್ರೇರಿತವಾಗಿ ಅಪಾಯಕಾರಿ ಶಸ್ತ್ರಾಸ್ತ್ರಗಳು ಅಥವಾ ವಿಧಾನಗಳಿಂದ ಗಂಭೀರವಾದ ಗಾಯವನ್ನು ಉಂಟುಮಾಡುವುದು), 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಸೇರಿಸಲು ವಿನಂತಿಸಲಾಗಿದೆ.

ರೈತರು ಮತ್ತು ಪತ್ರಕರ್ತನ ಮೇಲೆ ಯೋಜನಾಬದ್ದವಾಗಿ ಮತ್ತು ಕೊಲ್ಲುವ ಉದ್ದೇಶದಿಂದಲೇ ಎಸ್‌ಯವಿ ಕಾರುಗಳು ಹರಿದಿವೆ ಎಂದು ಎಸ್‌ಐಟಿ ತಿಳಿಸಿದೆ.

ಅಕ್ಟೋಬರ್ 3 ರಂದು, ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಸೇರಿದ ಎಸ್‌ಯುವಿ ಮತ್ತು ಇತರ ಎರಡು ಬೆಂಗಾವಲು ವಾಹನಗಳು ಶಾಂತಿಯುತ ಪ್ರತಿಭಟನೆ ನಡೆಸಿ ತೆರಳುತ್ತಿದ್ದ ರೈತರ ಮೇಲೆ ಹರಿದವು. ಈ ಹತ್ಯಾಕಾಂಡದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದರು. ಪ್ರಕರಣದ ಆರೋಪಿಗಳಾಗಿ ಆಶಿಶ್ ಮಿಶ್ರಾ, ಲುವ್ಕುಶ್, ಆಶಿಶ್ ಪಾಂಡೆ, ಶೇಖರ್ ಭಾರ್ತಿ, ಅಂಕಿತ್ ದಾಸ್, ಲತೀಫ್, ಶಿಶುಪಾಲ್, ನಂದನ್ ಸಿಂಗ್, ಸತ್ಯಂ ತ್ರಿಪಾಠಿ, ಸುಮಿತ್ ಜೈಸ್ವಾಲ್, ಧರ್ಮೇಂದ್ರ ಬಂಜಾರಾ, ರಿಂಕು ರಾಣಾ ಮತ್ತು ಉಲ್ಲಾಸ್ ತ್ರಿವೇದಿ ಅವರನ್ನು ಎಸ್‌ಐಟಿ ಇದುವರೆಗೆ ಬಂಧಿಸಿದೆ.

ಅವರನ್ನು ಲಖಿಂಪುರ ಖೇರಿ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ. ಈ ನಡುವೆ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಆಶಿಶ್ ಮಿಶ್ರಾನ ಜಾಮೀನು ಅರ್ಜಿಗೆ ಪ್ರತಿ-ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದೆ.


ಇದನ್ನೂ ಓದಿ: ನೆಲಮಂಗಲ: ತಮಟೆ ಬಾರಿಸಿದ್ದಕ್ಕೆ ದಲಿತನಿಗೆ ಥಳಿತ; ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...