Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಗರ್ಭಿಣಿಯನ್ನು ಬಾಲಕಿ ರಕ್ಷಿಸುವ ವಿಡಿಯೊ ನಿಜವಾದ ಘಟನೆಯದ್ದಲ್ಲ

ಫ್ಯಾಕ್ಟ್‌ಚೆಕ್‌: ಗರ್ಭಿಣಿಯನ್ನು ಬಾಲಕಿ ರಕ್ಷಿಸುವ ವಿಡಿಯೊ ನಿಜವಾದ ಘಟನೆಯದ್ದಲ್ಲ

- Advertisement -
- Advertisement -

ಬಾಲಕಿಯೊಬ್ಬಳು ಗರ್ಭಿಣಿಯನ್ನು ರಕ್ಷಿಸುವ ನೈಜ ಸಿಸಿಟಿವಿ ದೃಶ್ಯಾವಳಿ ಎಂದು ಪ್ರತಿಪಾದಿಸಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಆಟೋ ರಿಕ್ಷಾ ಚಾಲಕನೊಬ್ಬ ತನ್ನ ಆಟೋ ರಿಕ್ಷಾದೊಳಗೆ ಕುಳಿತು, ನೋವಿನಿಂದ ಬಳಲುತ್ತಿರುವ ಗರ್ಭಿಣಿಗೆ ಸಹಾಯ ಮಾಡುವಂತೆ ಪ್ರಯಾಣಿಕರನ್ನು ಬೇಡಿಕೊಳ್ಳುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು.

ಹಲವು ಪ್ರಯತ್ನಗಳ ನಂತರ, ಆಟೋ ಚಾಲಕನ ಮನವಿಯನ್ನು ಗಮನಿಸಿ ಬಿಎಂಡಬ್ಲ್ಯೂ ಕಾರು ನಿಲ್ಲುತ್ತದೆ. ಬಾಲಕಿಯೊಬ್ಬಳು ಕಾರಿನಿಂದ ಹೊರಬರುವುದನ್ನು ವಿಡಿಯೊದಲ್ಲಿ ನೋಡಬಹುದು. ಗರ್ಭಿಣಿಗೆ ಬಾಲಕಿ ನೀರು ನೀಡಿ ಆಸ್ಪತ್ರೆಗೆ ಕರೆದೊಯ್ದು ರಕ್ಷಿಸುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ಮಾನವೀಯತೆಯನ್ನು ಪ್ರತಿಪಾದಿಸುವ ಈ ವಿಡಿಯೊ ಸಂದೇಶ ನಿಜಕ್ಕೂ ಮಹತ್ವದ್ದು. ಆದರೆ ಇದನ್ನು ನಿಜವಾಗಿ ನಡೆದ ಘಟನೆಯೆಂದು ಪ್ರತಿಪಾದಿಸುತ್ತಿರುವುದು ಸತ್ಯಕ್ಕೆ ದೂರವಾಗಿದೆ.

ಸತ್ಯಾಂಶವೇನು? ಯಾವುದರ ವಿಡಿಯೊವಿದು?

ವೀಡಿಯೊದಲ್ಲಿನ ಸ್ಕ್ರೀನ್‌ಶಾಟ್‌ಗಳ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಡಿಸೆಂಬರ್ 06, 2021ರಂದು ಜಮ್ಮು ಮತ್ತು ಕಾಶ್ಮೀರ ಪೀಸ್ ಫೌಂಡೇಶನ್ ಫೇಸ್‌ಬುಕ್ ಪುಟದಲ್ಲಿ ಇದೇ ರೀತಿಯ ದೃಶ್ಯಗಳನ್ನು ಹೊಂದಿರುವ ವೀಡಿಯೊ ಕಂಡುಬಂದಿದೆ. ಮಕ್ಕಳಲ್ಲಿ ಮತ್ತು ಸಮಾಜದ ಜನರಲ್ಲಿ ಮಾನವೀಯತೆಯನ್ನು ಪ್ರೇರೇಪಿಸಲು ರಚಿಸಲಾದ ಸ್ಕ್ರಿಪ್ಟ್‌ ಇದಾಗಿದೆ ಎಂದು ವೀಡಿಯೊದ ವಿವರಣೆಯು ಹೇಳುತ್ತದೆ. ಈ ಫೇಸ್‌ಬುಕ್ ಪೇಜ್‌ ಮನರಂಜನೆ, ಶೈಕ್ಷಣಿಕ ಉದ್ದೇಶಗಳಿಗಾಗಿ ಸ್ಕ್ರಿಪ್ಟ್ ಮಾಡಿದ ನಾಟಕಗಳು ಮತ್ತು ವಿಡಂಬನೆಗಳನ್ನು ಒಳಗೊಂಡಿರುತ್ತದೆ ಎಂದು ಅವರು ಸ್ಪಷ್ಟವಾಗಿ ವಿವರಿಸಿದ್ದಾರೆ.

ಅಲ್ಲದೆ, ಇದೇ ರೀತಿಯ ಸ್ಕ್ರಿಪ್ಟ್ ಮಾಡಿದ ವೀಡಿಯೊಗಳನ್ನು ವೀಕ್ಷಕರು ‘LOBO 619’ ಫೇಸ್‌ಬುಕ್ ಪುಟದಲ್ಲೂ ನೋಡಬಹುದು ಎಂದು ಈ ಫೇಸ್‌ಬುಕ್ ಪೋಸ್ಟ್ ಶಿಫಾರಸು ಮಾಡುತ್ತದೆ. ಇದೇ ರೀತಿಯ ಶೈಕ್ಷಣಿಕ ಮತ್ತು ಜಾಗೃತಿ ವೀಡಿಯೊಗಳನ್ನು ‘LOBO 619’ Facebook ಪುಟದಲ್ಲಿ ಪ್ರಕಟಿಸಲಾಗಿದೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ತೆಲಂಗಾಣ ರಾಜ್ಯದ ಹೈದ್ರಾಬಾದ್‌ ಹಾಸ್ಯ ಕಲಾವಿದ ಮೊಹಮ್ಮದ್ ಖಯ್ಯೂಮ್ ಅವರು ಲೋಬೋ ಎಂದು ಜನಪ್ರಿಯವಾಗಿದ್ದಾರೆ.

ಈ ಹಿಂದೆ, ಲೈಂಗಿಕ ಕಿರುಕುಳ ಸಂಬಂಧಿಸಿದಂತೆ ಇದೇ ರೀತಿಯ ಜಾಗೃತಿ ವೀಡಿಯೊವು ಕೋಮುದ್ವೇಷ ಪ್ರತಿಪಾದನೆಯೊಂದಿಗೆ ವೈರಲ್ ಆಗಿದ್ದಾಗ ಸತ್ಯಾಂಶವನ್ನು ಪತ್ತೆ ಹಚ್ಚಿ ಪ್ರಕಟಿಸಲಾಗಿತ್ತು. ಅದನ್ನು ಇಲ್ಲಿ ನೋಡಬಹುದು.

ಸಂಕ್ಷಿಪ್ತವಾಗಿ ಹೇಳುವುದಾದರೆ, ಪೂರ್ವ ನಿಯೋಜಿತ ವೀಡಿಯೊವನ್ನು “ಬಾಲಕಿಯು ಗರ್ಭಿಣಿಯನ್ನು ರಕ್ಷಿಸುವ ನೈಜ ಘಟನೆ” ಎಂದು ತಪ್ಪಾಗಿ ಪ್ರತಿಪಾದಿಸಿ ಹಂಚಿಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...