Homeಕರ್ನಾಟಕಬೆಂಗಳೂರು: ಕನಿಷ್ಠ ವೇತನಕ್ಕೆ ಆಗ್ರಹಿಸಿ ಪೌರಕಾರ್ಮಿಕರ ಬೃಹತ್ ಪ್ರತಿಭಟನೆ

ಬೆಂಗಳೂರು: ಕನಿಷ್ಠ ವೇತನಕ್ಕೆ ಆಗ್ರಹಿಸಿ ಪೌರಕಾರ್ಮಿಕರ ಬೃಹತ್ ಪ್ರತಿಭಟನೆ

- Advertisement -
- Advertisement -

ಕನಿಷ್ಠ ವೇತನಕ್ಕಾಗಿ ಪೌರಕಾರ್ಮಿಕರು ಬುಧವಾರ ಬೆಂಗಳೂರಿನ ಕಾರ್ಮಿಕ ಭವನದ ಎದುರು ಬೃಹತ್‌‌ ಪ್ರತಿಭಟನೆ ನಡೆಸಿದರು. ಕಾನೂನಿಯ ಅನ್ವಯ ವೇತನ ಪರಿಷ್ಕರಣೆ ಮಾಡಬೇಕು ಎಂದು ಆಗ್ರಹಿಸಿದರು.

ಘನತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿರುವ ಪೌರಕಾರ್ಮಿಕರು ಮತ್ತು ಇತರ ಕಾರ್ಮಿಕರಿಗೆ ಪಾವತಿಸಬೇಕಾದ ಕನಿಷ್ಟ ವೇತನವನ್ನು ನಿಗದಿ ಮಾಡಬೇಕು. ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಅಧಿಸೂಚನೆ ಅನ್ವಯ, ಕನಿಷ್ಠ ವೇತನ ಕಾಯ್ದೆ 1948ರ ಅನ್ವಯ ಪ್ರತಿ 5 ವರ್ಷಕ್ಕೊಮ್ಮೆ ವೇತನವನ್ನು ಪರಿಶೀಲಿಸಿ ಪರಿಷ್ಕರಿಸಬೇಕು ಎಂದು ಕಾರ್ಮಿಕರು ತಿಳಿಸಿದರು.

ಏಪ್ರಿಲ್‌ 8ರಂದು, 2021ರಲ್ಲಿ ಕನಿಷ್ಠ ವೇತನಗಳ ಪರಿಷ್ಕರಣೆಯನ್ನು ಖಚಿತಪಡಿಸಿಕೊಳ್ಳಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೋರಿ ಒತ್ತಾಯಿಸಿದ್ದೇವೆ. 05.08.2021ರಂದು ಪರಿಷ್ಕರಿಸಬೇಕಿದ್ದ ಕನಿಷ್ಠ ವೇತನವನ್ನು ಇನ್ನೂ ಪರಿಷ್ಕರಿಸಲಾಗಿಲ್ಲ ಎಂದು ಪ್ರತಿಭಟನಾಕಾರರು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ವೇತನ ಆಯೋಗದ ಪ್ರಕಾರ, ಆಹಾರ ಮತ್ತು ಬಟ್ಟೆಯ ಅವಶ್ಯಕತೆಗೆ ಕನಿಷ್ಠ ರೂ. 12,000, ಕಡಿಮೆಯೆಂದರೂ ಮನೆ ಬಾಡಿಗೆ ವೆಚ್ಚವೇ 4000 ರೂ. ಬೇಕಾಗುತ್ತದೆ. ಇಂಧನ, ವಿದ್ಯುತ್‌ ಮತ್ತು ಇತರ ವಿವಿಧ ವೆಚ್ಚದ ವಸ್ತುಗಳಿಗೆ ವೇತನದ ಶೇ. 20ರಷ್ಟು ನಿಗದಿಯಾಗುತ್ತದೆ. ಮಕ್ಕಳ ಶಿಕ್ಷಣ, ವೈದ್ಯಕೀಯ ಅವಶ್ಯಕತೆಗಳು, ಹಬ್ಬಗಳು/ಸಮಾರಂಭಗಳು, ಮನರಂಜನೆ, ವೃದ್ಧಾಪ್ಯ, ಮದುವೆ ಇತ್ಯಾದಿಗಳಿಗೆ ವೇತನದ ಕನಿಷ್ಠ ಶೇ.25ರಷ್ಟು ವಿನಿಯೋಗವಾಗುತ್ತದೆ ಎಂದು ತಿಳಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಎಲ್ಲ ವೆಚ್ಚಗಳನ್ನು ಒಟ್ಟುಗೂಡಿಸಿದರೆ ಕನಿಷ್ಠ 29,090 ರೂಪಾಯಿ ಮಾಸಿಕ ವೇತನವನ್ನು ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಲ್ಲಿ ನೀಡಬೇಕಾಗುತ್ತದೆ. ಅಂದರೆ ದಿನಕ್ಕೆ 1,118 ರೂ.ಗಳನ್ನು ಪಾವತಿಸಬೇಕಾಗುತ್ತದೆ. ಇದರ ಪ್ರಕಾರ ಬಿಬಿಎಂಪಿ ಹಾಗೂ ವಿವಿಧ ನಗರ ಪಾಲಿಕೆಗಳಲ್ಲಿ ಮಾಸಿಕ ಕನಿಷ್ಠ ವೇತನ 35,000 ರೂ.ಗಳನ್ನು ನೀಡಬೇಕು. ಅಂದರೆ ದಿನಕ್ಕೆ 1,346.15 ರೂ. ಪಾವತಿಸಬೇಕು ಎಂದು ಪೌರಕಾರ್ಮಿಕರು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯು ದಿನಾಂಕ 17.04.2015ರಂದು ತನ್ನ ಸಭೆಯಲ್ಲಿ ಸರ್ವಾನುಮತದಿಂದ ಕನಿಷ್ಠ ವೇತನ ಪರಿಷ್ಕರಣೆಯ ಬಾಹ್ಯ ಮಿತಿಯನ್ನು 5 ವರ್ಷದಿಂದ 3 ವರ್ಷಕ್ಕೆ ಇಳಿಸಬೇಕೆಂದು ಶಿಫಾರಸು ಮಾಡಿದೆ ಎಂಬುದನ್ನು ದಯವಿಟ್ಟು ಗಮನಿಸಬೇಕು ಎಂದು ಒತ್ತಾಯಿಸಿದರು.

ಕನಿಷ್ಠ ವೇತನವನ್ನು ನಿಗದಿಪಡಿಸಲು ಮತ್ತು ಪರಿಷ್ಕರಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಅಧ್ಯಯನ ಮಾಡಲು ಹೊಸ ಸಮಿತಿಯನ್ನು ರಚಿಸುವಂತೆ ಶಿಫಾರಸು ಮಾಡಲಾಗಿದೆ. ಹಾಗಾಗಿ ಈ ಶಿಫಾರಸುಗಳನ್ನು ತಕ್ಷಣವೇ ಜಾರಿಗೊಳಿಸಬೇಕು. ಮುಂದೆ ಎಲ್ಲಾ ಪರಿಶಿಷ್ಟ ಉದ್ಯೋಗಗಳಿಗೆ ಕನಿಷ್ಠ ವೇತನ ಪರಿಷ್ಕರಣೆಗಳನ್ನು ಪ್ರತಿ 3 ವರ್ಷಗಳಿಗೊಮ್ಮೆ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.


ಇದನ್ನೂ ಓದಿರಿ: ದೇಶಕ್ಕಾಗಿ ಜೈಲಿಗೆ ಹೋಗಿ ಬಂದಿದ್ದಾರೆ: ಮುಸ್ಲಿಂ ಬಾಲಕಿಯರನ್ನು ಬೆದರಿಸಿದ ಯುವಕರಿಗೆ ಬಿಜೆಪಿ ಮುಖಂಡನ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...