Homeಕರ್ನಾಟಕಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ನಟ ದರ್ಶನ್ ಆಗ್ರಹ

ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ನಟ ದರ್ಶನ್ ಆಗ್ರಹ

- Advertisement -
- Advertisement -

ಬೆಳಗಾವಿಯ ಅನಗೋಳದ ಕನಕದಾಸ ಕಾಲೋನಿಯಲ್ಲಿರುವ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ದುಷ್ಕರ್ಮಿಗಳು ಭಗ್ನಗೊಳಿಸಿರುವುದಕ್ಕೆ ನಟ ದರ್ಶನ್ ತೂಗುದೀಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟಕ್ಕೆ ಜೀವನ ಮುಡುಪಿಟ್ಟ ಹೋರಾಟಗಾರನ ಪ್ರತಿಮೆ ಭಗ್ನಗೊಳಿಸಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸಿದ್ದಾರೆ.

“ಸ್ವಾತಂತ್ರ್ಯ ದಿನಾಚರಣೆಯಂದು ಜನಿಸಿ, ಗಣರಾಜ್ಯೋತ್ಸವ ದಿನದಂದು ಮರಣ ಹೊಂದಿರುವ ಈ ಅಪ್ರತಿಮ ವೀರನಿಗೆ ಅಪಮಾನ ಮಾಡಿದ್ದಾರೆ. ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಿಟ್ಟ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡತಕ್ಕದ್ದು” ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬಾವುಟಕ್ಕೆ ಬೆಂಕಿ ಇಟ್ಟವರನ್ನು ಶಿಕ್ಷಿಸಿ, ನಮ್ಮ ಧ್ವಜ ಹಿಡಿದ ಭುಜಗಳನ್ನು ರಕ್ಷಿಸಿ: ಡಾ.ಹಂಸಲೇಖ

ಅನಗೋಳದ ಕನಕದಾಸ ಕಾಲೋನಿಯಲ್ಲಿರುವ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ದುಷ್ಕರ್ಮಿಗಳು ಭಗ್ನಗೊಳಿಸಿ, ಖಡ್ಗ, ಗುರಾಣಿ ಕಿತ್ತುಹಾಕಿರುವ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ. ಪರಿಸ್ಥಿತಿ ಉಲ್ಬಣಗೊಂಡ ಹಿನ್ನೆಲೆ ಜಿಲ್ಲೆಯಲ್ಲಿ ಪೊಲೀಸರು 144 ಸೆಕ್ಷನ್ ಜಾರಿಗೊಳಿಸಿದ್ದಾರೆ.

ಘಟನೆ ಸಂಬಂಧ ತಿಲಕವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲವರನ್ನು ಬಂಧಿಸಲಾಗಿದೆ. ಸದ್ಯಕ್ಕೆ ಭಗ್ನಗೊಂಡಿರುವ ಪುತ್ಥಳಿಯನ್ನು ವಶಕ್ಕೆ ತೆಗೆದುಕೊಂಡಿದ್ದು ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ರಾತ್ರಿ 8 ಗಂಟೆಯವರೆಗೂ 144 ಸೆಕ್ಷನ್ ಜಾರಿಯಲ್ಲಿರಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಘಟನೆಗೆ ಪ್ರತಿಕ್ರಿಯಿಸಿ, “ಬೆಳಗಾವಿಯಲ್ಲಿರುವ ಕರ್ನಾಟಕದ ಅಭಿಮಾನ ಮೂರ್ತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ, ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ ಸಿಎಂ ಬಸವರಾಜ ಬೊಮ್ಮಾಯಿಯವರು ಈ ಗೂಂಡಾಗಳನ್ನು ತಕ್ಷಣ ಬಂಧಿಸಿ ಜೈಲಿಗಟ್ಟುವಂತೆ ಪೊಲೀಸರಿಗೆ‌ ಆದೇಶ ನೀಡಬೇಕು. ಇದಕ್ಕೆಲ್ಲ ‘ಕ್ರಿಯೆಗೆ ಪ್ರತಿಕ್ರಿಯೆ’ ಎಂಬ ಮೊಂಡುವಾದ ಮಂಡಿಸಬೇಡಿ. ಕಾನೂನಿನ ಕ್ರಮ ಇಂತಹ ಪುಂಡರಿಗೆ ಕಠಿಣ ಸಂದೇಶವಾಗಲಿ. ಇದೇ ವೇಳೆ ಕನ್ನಡ ಬಂಧುಗಳು ಆವೇಶಕ್ಕೆ ಒಳಗಾಗದೆ,‌‌‌ ಸಂಯಮದಿಂದ ಶಾಂತಿ-ಸೌಹಾರ್ದತೆ ಕಾಪಾಡಿಕೊಂಡು‌ ಬರಬೇಕೆಂದು‌ ಮನವಿ ಮಾಡುತ್ತೇನೆ” ಎಂದಿದ್ದಾರೆ.


ಇದನ್ನೂ ಓದಿ: ಬೆಳಗಾವಿ: ದುಷ್ಕರ್ಮಿಗಳಿಂದ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನ- 144 ಸೆಕ್ಷನ್ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....