Homeದಲಿತ್ ಫೈಲ್ಸ್ಕೆ.ಆರ್ ಪೇಟೆ: ದಲಿತರ ಮೇಲೆ ದೌರ್ಜನ್ಯ - ದೂರು ನೀಡಿದ್ದಕ್ಕೆ ಅಂಗಡಿ ಮುಚ್ಚಿ ಸವರ್ಣೀಯರಿಂದ ಸಾಮಾಜಿಕ...

ಕೆ.ಆರ್ ಪೇಟೆ: ದಲಿತರ ಮೇಲೆ ದೌರ್ಜನ್ಯ – ದೂರು ನೀಡಿದ್ದಕ್ಕೆ ಅಂಗಡಿ ಮುಚ್ಚಿ ಸವರ್ಣೀಯರಿಂದ ಸಾಮಾಜಿಕ ಬಹಿಷ್ಕಾರ

ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ 27 ಸವರ್ಣೀಯರ ವಿರುದ್ಧ ಎಫ್ಐಆರ್ ದಾಖಲಾಗಿದೆ.

- Advertisement -
- Advertisement -

ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲ್ಲೂಕಿನ ಹರಿಹರಪುರದಲ್ಲಿ ಹನುಮ ಜಯಂತಿ ಪ್ರಯುಕ್ತ ದೇವಾಲಯ ಪ್ರವೇಶಿಸಿದ ದಲಿತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆನ್ನಲ್ಲೆ ದೂರು ನೀಡಿದ್ದಕ್ಕೆ ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿ ಅಸ್ಪೃಶ್ಯತೆ ಆಚರಣೆ ಮಾಡಲಾಗಿದೆ.

ಡಿ.16ರಂದು ದಲಿತರ ಮೇಲೆ ದೌರ್ಜನ್ಯ ಘಟನೆ ನಡೆದಿದ್ದು ನಂತರ ಕೆ.ಆರ್‌.ಪೇಟೆ ಸರ್ಕಲ್‌ ಇನ್‌ಸ್ಪೆಕ್ಟರ್‌ ನಿರಂಜನ್‌ ದೂರು ಸ್ವೀಕರಿಸಲು ನಿರಾಕರಿಸಿದ ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್‌.ಯತೀಶ್‌ ಬಳಿ ದೂರು ನೀಡಲಾಗಿತ್ತು. ಪರಿಣಾಮ 27 ಸವರ್ಣೀಯರ ಮೇಲೆ ಜಾತಿ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಆದರೆ ಯಾರೊಬ್ಬರನ್ನು ಬಂಧಿಸಿಲ್ಲ.

ನಮ್ಮ ವಿರುದ್ಧವೇ ದೂರು ನೀಡಿದ್ದಾರೆ ಎಂದು ಕುಪಿತಗೊಂಡಿರುವ ಸವರ್ಣೀಯರು ಊರಿನ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದಾರೆ. ಆ ಮೂಲಕ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎಂದು ಗ್ರಾಮದ ದಲಿತ ಯುವಕರು ದೂರಿದ್ದಾರೆ. ಊರಿನೆಲ್ಲಡೆ ಬೈಕ್‌ನಲ್ಲಿ ಸಂಚರಿಸಿ ಅಂಗಡಿಗಳನ್ನು ಮುಚ್ಚಿರುವ ವಿಡಿಯೋ ಮಾಡಿದ್ದಾರೆ.

ವಿಡಿಯೋ ನೋಡಿ

https://www.youtube.com/watch?v=-FCOJuSEQuI

“ನಿಮ್ಮಿಂದ ದೇವಸ್ಥಾನ ಮಲಿನಗೊಂಡಿದೆ. ನಿಮ್ಮಂಥ ಜನರನ್ನು ಭೂಮಿ ಮೇಲೆ ಇರದಂತೆ ಸುಟ್ಟು ಹಾಕುತ್ತೇವೆ ಎಂದು ಡಿ.16ರ ರಾತ್ರಿ 11.30ರ ಸಮಯದಲ್ಲಿ ಸುಮಾರು 50-60 ಜನ ಸವರ್ಣೀಯರು ಮಾರಕಾಸ್ತ್ರಗಳಿಂದ ದಲಿತರ ಮೇಲೆ ಹಲ್ಲೆ ನಡೆಸಿದ್ದಾರೆ. ಮಾರಕಾಸ್ತ್ರಗಳಾದ ದೊಣ್ಣೆ, ಕೊಡಲಿ, ಪಂಚ್‌, ಕಲ್ಲು ಮತ್ತು ಇಟ್ಟಿಗೆಗಳೊಂದಿಗೆ ದಲಿತ ಕಾಲೋನಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಅಂಗವಿಕಲ ವ್ಯಕ್ತಿ ನಂಜಯ್ಯ ಎಂಬುವವರ ಮೇಲೆಯೂ ದಾಳಿ ನಡೆದಿದೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ನಡೆಸಲಾಗಿದೆ” ಎಂದು ದಲಿತರು ದೂರು ನೀಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ದಲಿತ ಯುವಕರಾದ ದರ್ಶನ್, ಸುನಿಲ್‌, ಲೋಹಿತ್‌, ಅಭಿಷೇಕ್‌, ವಿನಯ್‌, ಸಂಜಯ್‌, ಚಲವರಾಜು, ಭಾಗ್ಯಮ್ಮ, ಕುಮಾರ, ರಂಜಮ್ಮ, ಶೋಭಾ, ನಂಜಯ್ಯ ಅವರು ನೀಡಿದ ದೂರಿನ ಅನ್ವಯ 27 ಜನರ ಮೇಲೆ ಪ್ರಕರಣ ದಾಖಲಾಗಿದೆ.

ದಲಿತರ ವಿರುದ್ಧ ಪ್ರತಿಭಟನೆಗೆ ಮುಂದಾದ ಸವರ್ಣೀಯರು

27 ಜನರ ಮೇಲೆ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಸವರ್ಣೀಯರು ತಮ್ಮ ಜನಾಂಗದ ಹೆಣ್ಣು ಮಕ್ಕಳನ್ನು ದಲಿತ ಯುವಕರು ರೇಗಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಂಗಡಿಗಳನ್ನು ಮುಚ್ಚಿ ಸಾಮಾಜಿಕ ಬಹಿಷ್ಕಾರ ಹಾಕಿದ್ದಲ್ಲದೆ ಇಂದು ಕೆ.ಆರ್ ಪೇಟೆಯ ಪ್ರವಾಸಿ ಮಂದಿರದ ಬಳಿ ಸೇರಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ನಾನುಗೌರಿ.ಕಾಂ ಕೆ.ಆರ್ ಪೇಟೆಯ ಗ್ರಾಮಾತಂರ ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ರವರನ್ನು ಸಂಪರ್ಕಿಸಿದಾಗ, “ಸವರ್ಣೀಯರು ತಮ್ಮ ಮೇಲೆಯೂ ದೌರ್ಜನ್ಯವಾಗಿದೆ ಎಂದು ಒಂದು ಅರ್ಜಿ ಕೊಟ್ಟಿದ್ದಾರೆ. ಆದರೆ ಪ್ರತಿ ದೂರು ದಾಖಲಾಗಿಲ್ಲ. ತನಿಖೆ ನಡೆಸುತ್ತಿದ್ದೇವೆ. ಯಾವುದೇ ಬಂಧನವಾಗಿಲ್ಲ” ಎಂದು ಮಾಹಿತಿ ನೀಡಿದ್ದಾರೆ.

ಸಂವಿಧಾನದ 17ನೇ ವಿಧಿಯು ಎಲ್ಲಾ ರೀತಿಯ ಅಸ್ಪೃಶ್ಯತೆ ಆಚರಣೆಯನ್ನು ನಿಷೇಧಿಸುತ್ತದೆ. ದೇವಾಲಯ ಪ್ರವೇಶಕ್ಕೆ ನಿರಾಕರಣೆ, ಬಾವಿ ಮುಂತಾದ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಕ್ಕೆ ತಡೆ, ಪ್ರಾರ್ಥನೆ ಮತ್ತು ಧಾರ್ಮಿಕ ವಿಧಿ-ವಿಧಾನಗಳನ್ನು ಆಚರಿಸುವುದರಲ್ಲಿ ತಾರತಮ್ಯವನ್ನು ನಿಷೇಧಿಸುತ್ತದೆ. ಈ ಆಚರಣೆಗೆಳು ಮುಂದುವರೆದರೆ ಅದನ್ನು ಅಸ್ಪೃಶ್ಯತೆ ಎಂದು ಪರಿಗಣಿಸುವುದು ಹಾಗೂ ಅದನ್ನು ಆಚರಿಸುವ ವ್ಯಕ್ತಿ ಆಪಾದಿತ ಎಂದು ಪರಿಗಣಿಸುವುದು ಹಾಗೂ ಅದನ್ನು ಅಲ್ಲಗಳೆಯುವ ಜವಾಬ್ದಾರಿಯನ್ನು ಆಪಾದಿತನ ಮೇಲೆ ಹೊರಿಸುವುದು ಕಾಯಿದೆಯ ಮುಖ್ಯ ಅಂಶವಾಗಿತ್ತು. ಆದರೆ ಶಿಕ್ಷೆಯ ಪ್ರಮಾಣ ಮುಂತಾದ ಹಲವು ನ್ಯೂನತೆಗಳಿಂದಾಗಿ ಕಾನೂನಿನಲ್ಲಿ ಬದಲಾವಣೆ ತರಬೇಕಾಯಿತು. ಈಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಬುಡಕಟ್ಟು (ದೌರ್ಜನ್ಯಗಳ ತಡೆ) ಕಾಯಿದೆ 1989 ಮತ್ತು 1995ರಲ್ಲಿ ಅದರಡಿ ರೂಪಿಸಲಾದ ನಿಯಮಗಳು ಜಾರಿಯಲ್ಲಿವೆ.


ಇದನ್ನೂ ಓದಿ : ಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...