Homeಚಳವಳಿಕಾರ್ಮಿಕರ ನಡುವೆ ಅಸ್ಮಿತೆ ರಾಜಕೀಯ ಬಿತ್ತಿ ಒಡೆದಿದ್ದಾರೆ: ಮಾನಸಯ್ಯ

ಕಾರ್ಮಿಕರ ನಡುವೆ ಅಸ್ಮಿತೆ ರಾಜಕೀಯ ಬಿತ್ತಿ ಒಡೆದಿದ್ದಾರೆ: ಮಾನಸಯ್ಯ

- Advertisement -
- Advertisement -

ಕಾರ್ಮಿಕರ ನಡುವೆ ಐಡೆಂಟಿಟಿ ಪೊಲಿಟಿಕ್ಸ್‌ ಬಿತ್ತಿ ಕಾರ್ಮಿಕರನ್ನು ಒಡೆಯಲು ಯತ್ನಿಸಲಾಗುತ್ತಿದೆ. ಇದರ ವಿರುದ್ಧ ಎಚ್ಚರ ವಹಿಸಬೇಕು ಎಂದು ಟ್ರೇಡ್‌ ಯೂನಿಯನ್‌ ಸೆಂಟರ್‌ ಆಫ್‌ ಇಂಡಿಯಾ ರಾಜ್ಯಾಧ್ಯಕ್ಷ ಆರ್‌.ಮಾನಸಯ್ಯ ತಿಳಿಸಿದರು.

ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ (ಎಂಎಎಸ್‌ಎ) ಅಡಿಯಲ್ಲಿ ಟ್ರೇಡ್‌ ಯೂನಿಯನ್‌ ಸೆಂಟರ್‌ ಆಫ್‌ ಇಂಡಿಯಾ (ಟಿಯುಸಿಐ), ಕರ್ನಾಟಕ ಶ್ರಮಿಕ ಶಕ್ತಿ (ಕೆಎಸ್‌ಎಸ್‌), ಬಿಡಬ್ಲ್ಯೂಎಸ್‌ಎಸ್‌ಬಿ ಗುತ್ತಿಗೆ ಕಾರ್ಮಿಕರ ಸಂಘ, ಬೆಂಗಳೂರು ರೇಸ್‌ ಕೋರ್ಸ್ ಕಾರ್ಮಿಕರ ಸಂಘ, ಬಿಬಿಎಂಪಿ ಗುತ್ತಿಗೆ ಪೌರ ಕಾರ್ಮಿಕರ ಸಂಘ, ಕರ್ನಾಟಕ ರಾಜ್ಯ ಲೋಡಿಂಗ್‌ ಅಂಡ್‌ ಅನ್ ಲೋಡಿಂಗ್‌ ಕಾರ್ಮಿಕರ ಒಕ್ಕೂಟ, ವಲಸೆ ಕಾರ್ಮಿಕರ ಸೌಹಾರ್ದ ಕೇಂದ್ರ (ಎಂಡಬ್ಲೂಎಸ್‌ಎನ್‌), ಮಂಡ್ಯ ರೈಲ್ವೆ ಗೂಡ್ಸ್‌ ಶೆಡ್ ಕಾರ್ಮಿಕರ ಸಂಘ, ಕೆಎಸ್‌‌ಬಿಸಿಎಲ್‌ ಲೋಡಿಂಗ್ ಕಾರ್ಮಿಕರ ಸಂಘ, ಕೂಲಿ ನೇಕಾರ ಕಾರ್ಮಿಕರ ಬಳಗ ಒಂದುಗೂಡಿ ಬೆಂಗಳೂರಿನಲ್ಲಿ ಭಾನುವಾರ ನಡೆಸಿದ ಬೃಹತ್‌ ಸಮಾವೇಶದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

“ಕಾರ್ಮಿಕರ ನಡುವೆ ಐಡೆಂಟಿಟಿ ಪೊಲಿಟಿಕ್ಸ್‌ ಬಿತ್ತುತ್ತಿದ್ದಾರೆ. ನೀವು ಪೌರ ಕಾರ್ಮಿಕರು, ಹಾಗಾಗಿ ಸಕ್ಕರೆ ಕಾರ್ಖಾನೆ ಕಾರ್ಮಿಕರ ಜೊತೆ ಹೋಗಬಾರದು ಎಂದು ಹೇಳುತ್ತಾರೆ. ನೀವು ಸಕ್ಕರೆ ಕಾರ್ಮಿಕರು ಉಕ್ಕಿನ ಕಾರ್ಮಿಕರ ಜೊತೆ ಹೋಗಬಾರದು ಎಂದು ಹೇಳುತ್ತಾರೆ. ನೀವು ಸರ್ಕಾರಿ ನೌಕರರು ಸ್ಟೀಲ್ ಕಾರ್ಮಿಕರ ಜೊತೆ ಹೋಗಬಾರದು ಎಂದು ಹೇಳುತ್ತಾರೆ. ನೀವು ಸಾರಿಗೆ ಕಾರ್ಮಿಕರು, ಅಂಗನವಾಡಿ ಕಾರ್ಮಿಕರ ಜೊತೆ ಹೋಗಬಾರದು ಅಂತಾರೆ. ಈ ರೀತಿಯಲ್ಲಿ ನಮ್ಮ ನಡುವೆ ಅಸ್ಮಿತೆಯ ರಾಜಕಾರಣವನ್ನು ಹರಡುವ ಮೂಲಕ ಕಾರ್ಮಿಕರನ್ನು ತುಂಡರಿಸಿದ್ದಾರೆ. ಕಾರ್ಮಿಕರಲ್ಲಿ ಮೂಢನಂಬಿಕೆಗಳನ್ನು ಬಿತ್ತುತ್ತಿದ್ದಾರೆ” ಎಂದು ಎಚ್ಚರಿಸಿದರು.

ದೇಶ ಕಟ್ಟೋರು ಕಾರ್ಮಿಕರೇ ಹೊರತು ಎಸ್‌ಎಸ್‌ಎಸ್‌, ಬಜರಂಗದಳ, ವಿಎಚ್‌ಪಿಗಳಲ್ಲ, ಇನ್ಯಾವುದೇ ಸ್ವಾಮೀಜಿಗಳಲ್ಲ. ಘಂಟೆ ಭಾರಿಸಿದರೆ ದೇಶ ನಡೆಯುವುದಿಲ್ಲ, ಮಂತ್ರ ಹೇಳಿದರೆ ದೇಶ ನಡೆಯುವುದಿಲ್ಲ. ಹೀಗಾಗಿ ಮಂತ್ರ ಹೇಳುವ ತುಟಿಗಳಿಗಿಂತ ಮಣ್ಣು ಅಗೆಯುವ ಕೈಗಳನ್ನು ಪ್ರೀತಿಸಿ ಎಂದು ಮಾರ್ಮಿಕವಾಗಿ ನುಡಿದರು.

ಇದನ್ನೂ ಓದಿರಿ: ಮಂಡ್ಯದ ಬೂಕನಕೆರೆಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಆರೋಪ: ನಾಳೆ ಪ್ರತಿಭಟನೆ

ಬಂಡವಾಳಶಾಹಿಗಳ ಪರವಾಗಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಿಂತಿದೆ. 44 ಕಾರ್ಮಿಕ ಕಾಯ್ದೆಗಳನ್ನು ತೆರವುಗೊಳಿಸಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ತಂದಿದ್ದಾರೆ. ಈ ಸಂಹಿತೆಗಳಲ್ಲಿ ವೇತನ ಭದ್ರತೆ, ಆರೋಗ್ಯ ಸುರಕ್ಷತೆ, ಜೀವನ ಭದ್ರತೆ ಇಲ್ಲ. ಮಾಲಿಕರ, ಅಧಿಕಾರಿಗಳ, ಮೇಲ್ಜಾತಿಗಳ, ಶ್ರೀಮಂತರ ಸುರಕ್ಷತೆ ಮಾತ್ರ ಇದೆ. ಹೀಗಾಗಿ ಇದರ ವಿರುದ್ಧ ಒಂದು ದೊಡ್ಡ ಹೋರಾಟವನ್ನು ಕಟ್ಟಬೇಕಾಗಿದೆ ಎಂದು ಹೇಳಿದರು.

ಕಾರ್ಮಿಕರಿಗೆ ಕನಿಷ್ಠ 25,000 ರೂ. ಮಾಸಿಕ ವೇತನ ಕಡ್ಡಾಯ ಮಾಡಲೇಬೇಕು. ಗುತ್ತಿಗೆ ಪದ್ಧತಿ ರದ್ದುಗೊಳಿಸಬೇಕು. ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಲೇಬೇಕು. ಇಲ್ಲವಾದರೆ ನಮ್ಮ ಕೈಯಲ್ಲಿರುವ ಪೊರಕೆ, ಗುದ್ದಲಿ, ಸುತ್ತಿಗೆಗಳು ಮಾತನಾಡುತ್ತವೆ. ಕಾರ್ಮಿಕರೆಂದರೆ ಕನಿಷ್ಠರಲ್ಲ. ಈ ದೇಶದ ಕಟ್ಟಾಳುಗಳು ಎಂದು ಬಣ್ಣಿಸಿದರು.

ಸಮಾವೇಶದ ಉದ್ಘಾಟನಾ ಭಾಷಣ ಮಾಡಿದ ಹೈಕೋರ್ಟ್ ಹಿರಿಯ ವಕೀಲರಾದ ಬಾಲನ್‌, “ನಮ್ಮ ಕೆಲಸದ ಹಕ್ಕುಗಳು ಇರುವ ಕಾನೂನನ್ನು, ನಮ್ಮ ಸಂಬಳದ ಹಕ್ಕಿನ ಕಾನೂನುಗಳನ್ನು, ನಮ್ಮ ಸಾಮಾಜಿಕ ಹಕ್ಕುಗಳಾದ ಪಿಎಫ್‌, ಗ್ರಾಚ್ಯುಟಿ, ರಜೆ ಇತ್ಯಾದಿಗಳನ್ನು ನೀಡಿದ ಕಾನೂನುಗಳನ್ನು ಕಿತ್ತುಕೊಂಡಿದ್ದಾರೆ. ನೌಕರರಾಗಬೇಕಿದ್ದವರನ್ನು ಕೂಲಿಗಳನ್ನಾಗಿ ಮಾಡಿದ್ದಾರೆ. ಒಂದೇ ಕೆಲಸ, ಒಂದೇ ಪೊರಕೆ. ಆದರೆ ಗುತ್ತಿಗೆಯವರಿಗೆ ಹಾಗೂ ಕಾಯಂ ನೌಕರರಿಗೆ ಬೇರೆ ಬೇರೆ ಸಂಬಳ ನೀಡುತ್ತಿದ್ದಾರೆ ಎಂದು ವಿವರಿಸಿದರು.

“ನೀವು ಕಾನೂನು ಮಾಡ್ರಯ್ಯ, ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ಕಾನೂನು ಮಾಡಿ. ಕೆಲಸದಿಂದ ತೆಗೆಯಬಾರದೆಂದು ಕಾನೂನು ಮಾಡಿ. ಅದನ್ನು ಬಿಟ್ಟು ಮೊಟ್ಟೆ ತಿನ್ನಬಾರದೆಂದು, ಮಟನ್‌ ತಿನ್ನಬಾರದೆಂದು, ದನದ ಮಾಂಸ ತಿನ್ನಬಾರದೆಂದು, ನೀರು ಕುಡಿಯಬಾರದೆಂದು ಕಾನೂನು ಮಾಡುತ್ತಿದ್ದಾರೆ. ಎಂಥ ಕಾನೂನು ಮಾಡ್ತಾ ಇದ್ದಿರಯ್ಯ ಬೊಮ್ಮಾಯಿ? ನೀವು ಈ ರೀತಿ ಕೆಲಸ ಮಾಡಿದರೆ- ಮುಂದಿನ ಚುನಾವಣೆಯಲ್ಲಿ ಬೊಮ್ಮಾಯಿ ಆಪ್‌ ನಹೀ ನಹೀ ಎಂದು ಚಾಟಿ ಬೀಸಿದರು.

ಇದನ್ನೂ ಓದಿರಿ: RSS ಮುಖ್ಯಸ್ಥರಿಗೆ ಕಲಬುರಗಿ ಕೇಂದ್ರೀಯ ವಿವಿ ರಿಜಿಸ್ಟ್ರಾರ್ ಡೋಣೂರರ ಪತ್ರ: ಅಕ್ರಮ ನೇಮಕಾತಿ ಕಾರಣವೇ?

ಕ್ಯಾಂಟೀನ್‌ ನಮ್ಮ ಹಕ್ಕು. ಮಧ್ಯಾಹ್ನ ಊಟ ಕೊಡಬೇಕು. ಒಂದು ಕಾಲದಲ್ಲಿ ಇದೆಲ್ಲ ಇತ್ತು. 1996ರಲ್ಲಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿ, ರೈಲ್ವೆ, ಬಿಬಿಎಂಪಿ, ಆಸ್ಪತ್ರೆ ಸೇರಿದಂತೆ ಹಲವು ಕಡೆಗಳಲ್ಲಿ ಗುತ್ತಿಗೆ ಪದ್ಧತಿ ಇರಬಾರದೆಂದು ಹೇಳಿತ್ತು. ಆದರೆ 2001ನೇ ಇಸವಿಯಲ್ಲಿ ವಾಜಪೇಯಿ ಆ ಕಾನೂನನ್ನು ಕಿತ್ತು ಹಾಕಿ, ನಿಮ್ಮ ಬಾಯಿಗೆ ಮಣ್ಣು ಹಾಕಿದರು. 2002ರಲ್ಲಿ ಸುಪ್ರೀಂ ಕೋರ್ಟ್, ಸ್ಟೀಲ್‌ ಅಥಾರಿಟಿ ಆಫ್‌ ಇಂಡಿಯಾದಲ್ಲಿ ಗುತ್ತಿಗೆ ಪದ್ಧತಿಯ ಪರವಾಗಿ ತೀರ್ಪು ನೀಡಿತು. ನಾನು ಸುಪ್ರಿಂ ಕೋರ್ಟ್‌‌ಗೆ ದಿಕ್ಕಾರ ಹೇಳುತ್ತೇನೆ. ನಿಮ್ಮ ಬಾಯಿಗೆ ಸುಪ್ರಿಂಕೋರ್ಟ್ ಮಣ್ಣು ಹಾಕಿದೆ. ನೀವು ಗುತ್ತಿಗೆ ಪದ್ಧತಿಯಲ್ಲಿ ಕೆಲಸ ಮಾಡುತ್ತಿದ್ದರೆ ಅದಕ್ಕೆ ಬಿಜೆಪಿ ಮತ್ತು ಸುಪ್ರೀಂ ಕೋರ್ಟ್ ಕಾರಣ ಎಂದು ಆರೋಪಿಸಿದರು.

ಸಮಾವೇಶದಲ್ಲಿ ಕರ್ನಾಟಕ ಶ್ರಮಿಕ ಶಕ್ತಿ ಸಂಘಟನೆಯ ವರದರಾಜೇಂದ್ರ ಅವರು ಪ್ರಸ್ತಾವಿಕವಾಗಿ ಮಾತನಾಡಿದರು. ಹರಿಯಾಣದ ಜನಸಂಘರ್ಷ ಮಂಚ್‌ನ ಸುದೇಶ್‌ಕುಮಾರಿ, ಆಂಧ್ರಪ್ರದೇಶದ ಐಎಫ್‌‌ಟಿಯು ಸಂಘಟನೆಯ ಎಸ್.ವೆಂಕಟೇಶ್ವರ ರಾವ್‌, ಉತ್ತರಾಖಾಂಡ್‌ನ ಇಂಕಿಲಾಬಿ ಮಜ್ದೂರ್‌ ಕೇಂದ್ರದ ಕೈಲಾಶ್‌, ಬಿಹಾರದ ಐಎಫ್‌ಟಿಯು ಸಂಘಟನೆಯ ಸಿದ್ಧಾಂತ್‌ ವೇದಿಕೆಯಲ್ಲಿ ಹಾಜರಿದ್ದರು. ಕಾರ್ಮಿಕ ಇಲಾಖೆಯ ಡಿಎಲ್‌ಸಿ ರವಿಕುಮಾರ್‌ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಮಿಕರ ಹಕ್ಕೋತ್ತಾಯಗಳನ್ನು ಸ್ವೀಕರಿಸಿದರು.


ಇದನ್ನೂ ಓದಿರಿ: ಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...