Homeಮುಖಪುಟಚೆನ್ನೈ: ’ಹೆಣ್ಣು ತಾಯಿಯ ಗರ್ಭ ಮತ್ತು ಸಮಾಧಿಯಲ್ಲಿ ಮಾತ್ರ ಸುರಕ್ಷಿತವಾಗಿರುತ್ತಾಳೆ’ ಎಂದು ಬರೆದು ಆತ್ಮಹತ್ಯೆ ಮಾಡಿಕೊಂಡ...

ಚೆನ್ನೈ: ’ಹೆಣ್ಣು ತಾಯಿಯ ಗರ್ಭ ಮತ್ತು ಸಮಾಧಿಯಲ್ಲಿ ಮಾತ್ರ ಸುರಕ್ಷಿತವಾಗಿರುತ್ತಾಳೆ’ ಎಂದು ಬರೆದು ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತೆ, ಯುವಕನ ಬಂಧನ

- Advertisement -
- Advertisement -

ಅಪ್ರಾಪ್ತೆಯೊಬ್ಬರು ಪತ್ರವೊಂದರಲ್ಲಿ ’ಹೆಣ್ಣು ತಾಯಿಯ ಗರ್ಭ ಮತ್ತು ಸಮಾಧಿಯಲ್ಲಿ ಮಾತ್ರ ಸುರಕ್ಷಿತವಾಗಿರುತ್ತಾಳೆ’ ಎಂದು ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತಮಿಳುನಾಡಿನ ಚೆನ್ನೈ ನಗರದ ಹೊರವಲಯದಲ್ಲಿರುವ ಮಂಗಾಡು ಎಂಬಲ್ಲಿ ನಡೆದಿದೆ.

ಮಂಗಾಡು ಗ್ರಾಮದ ಚೆನ್ನೈನ ಪೂನಮಲ್ಲಿ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಅಪ್ರಾಪ್ತೆಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ಕಾಲೇಜು ವಿದ್ಯಾರ್ಥಿಯನ್ನು ಪೋಕ್ಸೋ ಕಾಯ್ದೆ ಅಡಿಯಲ್ಲಿ ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಶನಿವಾರ (ಡಿ.18) ರಂದು ಆಕೆಯ ತಾಯಿ ಮಾರುಕಟ್ಟೆಗೆ ಹೋಗಿದ್ದ ಸಮಯದಲ್ಲಿ ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡಿದ್ದರು.

“ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಬಂಧ ಹೊಂದಿರುವುದಾಗಿ ಯುವಕ ಒಪ್ಪಿಕೊಂಡಿದ್ದಾನೆ. ಕಳೆದ ಎರಡು ವಾರಗಳಿಂದ ಆಕೆಗೆ ಕಿರುಕುಳ ನೀಡಿ ಚಿತ್ರಹಿಂಸೆ ನೀಡುತ್ತಿದ್ದನು. ಇಬ್ಬರ ನಡುವೆ ಅಶ್ಲೀಲ ಸಂದೇಶಗಳು ಮತ್ತು ಛಾಯಾಚಿತ್ರಗಳು ವಿನಿಮಯವಾಗಿರುವುದು ಪತ್ತೆಯಾಗಿದೆ. ಇದಕ್ಕಿಂತ ಮೊದಲ ಎಂಟು ತಿಂಗಳಿನಿಂದ ಅವರು ಉತ್ತಮ ಸ್ನೇಹ ಸಂಬಂಧವನ್ನು ಹೊಂದಿದ್ದರು” ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರನ್ನು NDTV ಉಲ್ಲೇಖಿಸಿದೆ.

ಇದನ್ನೂ ಓದಿ: ಚೆನ್ನೈ: ಪತ್ನಿಯ ಸಹಾಯದಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಸ್ವಯಂ ಘೋಷಿತ ದೇವಮಾನವನ ಬಂಧನ

“ಹೆಣ್ಣು ತಾಯಿಯ ಗರ್ಭ ಮತ್ತು ಸಮಾಧಿಯಲ್ಲಿ ಮಾತ್ರ ಸುರಕ್ಷಿತವಾಗಿರುತ್ತಾಳೆ. ಹೆಣ್ಣು ಮಕ್ಕಳಿಗೆ ಶಾಲೆಯು ಸುರಕ್ಷಿತವಾಗಿಲ್ಲ ಮತ್ತು ಶಿಕ್ಷಕರನ್ನು ನಂಬಲು ಸಾಧ್ಯವಿಲ್ಲ. ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳು ಮತ್ತು ಪುತ್ರರಿಗೆ ಹೆಣ್ಣುಮಕ್ಕಳನ್ನು ಗೌರವದಿಂದ ಕಾಣುವುದನ್ನು ಕಲಿಸಬೇಕು” ಎಂದು ವಿದ್ಯಾರ್ಥಿನಿ ಡೆತ್‌ ನೋಟ್‌ನಲ್ಲಿ ಬರೆದಿದ್ದಾರೆ. ಜೊತೆಗೆ ಮಾನಸಿಕ ಹಿಂಸೆಯಿಂದ ತಾನು ಓದಲು, ನಿದ್ದೆ ಮಾಡಲು ಸಹ ಸಾಧ್ಯವಾಗಲಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ.

ಲೈಂಗಿಕ ಕಿರುಕುಳವನ್ನು ನಿಲ್ಲಿಸಿ. ನನಗೆ ನ್ಯಾಯ ಕೊಡಿಸಿ ಎಂದಿರುವ ಮೃತ ಸಂತ್ರಸ್ತೆ, ಲೈಂಗಿಕ ದೌರ್ಜನ್ಯವು ಸಂಬಂಧಿಕರು, ಶಿಕ್ಷಕರು ಮತ್ತು ಎಲ್ಲರಿಂದಲೂ ನಡೆಯಬಹುದು ಎಂದಿದ್ದಾರೆ.

ಮೂರು ವರ್ಷಗಳ ಹಿಂದೆ ಬಾಲಕಿ 8ನೇ ತರಗತಿ ಓದುತ್ತಿದ್ದಾಗ ಇದೇ ಯುವಕ ಆಕೆಯ ಶಾಲೆಯಲ್ಲಿ 11ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಬಳಿಕ ಸಂತ್ರಸ್ತೆ ಬಾಲಕಿಯರ ಕಾಲೇಜಿಗೆ ತೆರಳಿದ್ದರು. ಆದರೆ ಇಬ್ಬರು Instagram ನಲ್ಲಿ ಮತ್ತೆ ಸ್ನೇಹಿತರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಆಕೆಯ ಆತ್ಮಹತ್ಯೆ ಪತ್ರದ ಆಧಾರದ ಮೇಲೆ ಬಾಲಕಿಗೆ ಇನ್ನಷ್ಟು ಮಂದಿ ಕಿರುಕುಳ ನೀಡಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104)


ಇದನ್ನೂ ಓದಿ: ಮಂಡ್ಯದ ಬೂಕನಕೆರೆಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಆರೋಪ: ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...