Homeಮುಖಪುಟಗುಂಪು ಹಿಂಸಾಚಾರ ವಿರೋಧಿ ಮಸೂದೆ ಅಂಗೀಕರಿಸಿದ ಜಾರ್ಖಂಡ್‌

ಗುಂಪು ಹಿಂಸಾಚಾರ ವಿರೋಧಿ ಮಸೂದೆ ಅಂಗೀಕರಿಸಿದ ಜಾರ್ಖಂಡ್‌

- Advertisement -
- Advertisement -

ಜಾರ್ಖಂಡ್ ವಿಧಾನಸಭೆಯು ಮಂಗಳವಾರದಂದು ‘ಗುಂಪು ಹತ್ಯೆ ಮತ್ತು ಗುಂಪು ಹಿಂಸಾಚಾರ’ದ ವಿರುದ್ಧ ಮಸೂದೆಯನ್ನು ಅಂಗೀಕರಿಸಿದೆ. ಸುದ್ದಿ ಸಂಸ್ಥೆ ಎಎನ್‌ಐ, “ಜಾರ್ಖಂಡ್‌ ಸರ್ಕಾರ ‘ಗುಂಪು ಹಿಂಸಾಚಾರ ಮತ್ತು ಗುಂಪು ಹತ್ಯೆ ತಡೆ ಮಸೂದೆ-2021’ ಕಾಯ್ದೆಯನ್ನು ಅಂಗೀಕರಿಸಿದೆ” ಎಂದು ವರದಿ ಮಾಡಿದೆ. ಮಾಧ್ಯಮ ವರದಿಗಳ ಪ್ರಕಾರ, ಮಸೂದೆಯು ಸಾಂವಿಧಾನಿಕ ಹಕ್ಕುಗಳ ಪರಿಣಾಮಕಾರಿ ರಕ್ಷಣೆ ಮತ್ತು ಗುಂಪು ಹಿಂಸಾಚಾರವನ್ನು ತಡೆಗಟ್ಟುವ ಗುರಿಯನ್ನು ಹೊಂದಿದೆ.

ಮಸೂದೆಯು ಗುಂಪು ಹಲ್ಲೆ ಅಥವಾ ಅದರಲ್ಲಿ ಭಾಗವಹಿಸಿದ ತಪ್ಪಿತಸ್ಥರಿಗೆ ಗರಿಷ್ಠ ಜೀವಾವಧಿ ಶಿಕ್ಷೆ ಮತ್ತು 25 ಲಕ್ಷ ರೂಪಾಯಿ ದಂಡವನ್ನು ವಿಧಿಸುತ್ತದೆ ಎಂದು ವರದಿಗಳು ಉಲ್ಲೇಖಿಸಿವೆ. ಈ ಬೆಳವಣಿಗೆಯೊಂದಿಗೆ, ಗುಂಪು ಹಲ್ಲೆಯ ವಿರುದ್ದ ಮಸೂದೆ ಅಂಗೀಕರಿಸಿರುವ ಮೂರನೇ ರಾಜ್ಯವಾಗಿ ಜಾರ್ಖಂಡ್ ಹೊರ ಹೊಮ್ಮಿದೆ. ಈ ಹಿಂದೆ ಪಶ್ಚಿಮ ಬಂಗಾಳ ಮತ್ತು ರಾಜಸ್ಥಾನ ರಾಜ್ಯಗಳು ಗುಂಪು ಹಿಂಸಾಚಾರ ವಿರೋಧಿ ಮಸೂದೆಯನ್ನು ಅಂಗೀಕರಿಸಿದ್ದವು.

ಇದನ್ನೂ ಓದಿ:Explainer: ವೋಟರ್ ಐಡಿಯೊಂದಿಗೆ ಆಧಾರ್ ಲಿಂಕ್ ಮಾಡುವ ಮಸೂದೆಯ ಸಾಧಕ-ಬಾಧಕಗಳು

ಉದ್ದೇಶಿತ ವಿಧೇಯಕವು ಲಿಂಚಿಂಗ್ ತಡೆಗಟ್ಟುವಿಕೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಮನ್ವಯಗೊಳಿಸಲು ನೋಡಲ್ ಅಧಿಕಾರಿ ಎಂದು ಕರೆಯಲಾಗುವ ಇನ್‌ಸ್ಪೆಕ್ಟರ್ ಜನರಲ್ ಆಫ್ ಪೋಲೀಸ್ ಶ್ರೇಣಿಗಿಂತ ಕಡಿಮೆಯಿಲ್ಲದ ರಾಜ್ಯ ಸಂಯೋಜಕರನ್ನು ನೇಮಿಸಲು ಅವಕಾಶ ನೀಡುತ್ತದೆ. ಈ ನೋಡಲ್ ಅಧಿಕಾರಿಯನ್ನು ಪೊಲೀಸ್ ಮಹಾನಿರ್ದೇಶಕರು ನೇಮಿಸುತ್ತಾರೆ.

ಸಾಂವಿಧಾನಿಕ ನಿಯಮಗಳಿಗೆ ಅನುಸಾರವಾಗಿ ಕಾನೂನಾಗಲು ಈ ಮಸೂದೆಯನ್ನು ಈಗ ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾಗುವುದು ಎನ್ನಲಾಗಿದೆ.

ಸದನದಲ್ಲಿ ಮಸೂದೆಯನ್ನು ಮಂಡಿಸಿದ ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಅಲಂಗೀರ್ ಆಲಂ, “ಜನರಿಗೆ ಪರಿಣಾಮಕಾರಿ ಭದ್ರತೆ ಒದಗಿಸುವುದು, ಅವರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸುವುದು ಮತ್ತು ಗುಂಪು ಹಿಂಸಾಚಾರವನ್ನು ತಡೆಯುವುದು ಇದರ ಮುಖ್ಯ ಉದ್ದೇಶವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಸಿ.ಬಿ.ಐ., ಇ.ಡಿ. ನಿರ್ದೇಶಕರ ಅಧಿಕಾರಾವಧಿ ವಿಸ್ತರಣೆ; ಸಂಸತ್ತಿನಲ್ಲಿ ಮಸೂದೆ ಅಂಗೀಕಾರ

ಮಸೂದೆಯ ಮೇಲಿನ ಚರ್ಚೆಯ ಸಮಯದಲ್ಲಿ, ಪ್ರಮುಖ ವಿರೋಧ ಪಕ್ಷವಾದ ಬಿಜೆಪಿ ಹಲವಾರು ತಿದ್ದುಪಡಿಗಳನ್ನು ಮಂಡಿಸಿತು. ಅದನ್ನು ಸರ್ಕಾರವು ಧ್ವನಿ ಮತದ ಮೂಲಕ ಬದಿಗಿಟ್ಟಿತು. ಅಲ್ಪಸಂಖ್ಯಾತರ ಓಲೈಕೆಗಾಗಿ ರಾಜ್ಯ ಸರ್ಕಾರ ತರಾತುರಿಯಲ್ಲಿ ಮಸೂದೆಯನ್ನು ತಂದಿದೆ ಎಂದು ಬಿಜೆಪಿ ನಾಯಕ ಸಿಪಿ ಸಿಂಗ್ ಆರೋಪಿಸಿದ್ದಾರೆ.

ಜಾರ್ಖಂಡ್‌ನಲ್ಲಿ ಗುಂಪು ಹಿಂಸಾಚಾರದ ಅನೇಕ ಪ್ರಕರಣಗಳು ವರದಿಯಾಗಿವೆ. 2019 ರಲ್ಲಿ 24 ವರ್ಷದ ತಬ್ರೇಜ್ ಅನ್ಸಾರಿಯನ್ನು ಸೆರೈಕೆಲಾ ಖಾರ್ಸಾವನ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಶಂಕೆಯ ಮೇಲೆ ಕಟ್ಟಿಹಾಕಿ ಥಳಿಸಿದಾಗ ರಾಜ್ಯದಲ್ಲಿ ಗುಂಪು ಹತ್ಯೆಯ ಘಟನೆಗಳು ಮುನ್ನೆಲೆಗೆ ಬಂದಿದ್ದವು. ಈ ಥಳಿತದಿಂದಾಗಿ ಅವರು ಸಾವನ್ನಪ್ಪಿದ್ದರು.

ಬುಡಕಟ್ಟು ರಾಜ್ಯವಾದ ಜಾರ್ಖಂಡ್‌ನಲ್ಲಿ ವಾಮಾಚಾರ ನಡೆಸುತ್ತಿದ್ದಾರೆ ಎಂದು ಶಂಕಿಸಿ ಗುಂಪು ಹತ್ಯೆ ಮಾಡಿದ ಘಟನೆಗಳೂ ನಡೆದಿವೆ. ರಾಜ್ಯದ ಮುಖ್ಯಮಂತ್ರಿ ಹೇಮಂತ್ ಸೊರೆನ್ ಗುಂಪು ಹಿಂಸಾಚಾರದ ಘಟನೆಗಳನ್ನು ಖಂಡಿಸಿ, ಅದರ ವಿರುದ್ಧ ಕಾನೂನು ತರುವುದಾಗಿ ಭರವಸೆ ನೀಡಿದ್ದರು.

ಇದನ್ನೂ ಓದಿ:ಚಳಿಗಾಲದ ಸಂಸತ್‌ ಅಧಿವೇಶನದಲ್ಲಿ ಮಂಡನೆಯಾಗಲಿವೆ 26 ಹೊಸ ಮಸೂದೆ: ಇಲ್ಲಿದೆ ಸಂಕ್ಷಿಪ್ತ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...