- Advertisement -
- Advertisement -
ಪಂಜಾಬ್ನ ಲೂಧಿಯಾನ ಕೋರ್ಟ್ ಕಾಂಪ್ಲೆಕ್ಸ್ನಲ್ಲಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ ಇಬ್ಬರು ಸಾವನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂದು ಎನ್ಡಿಟಿವಿ ವರದಿ ಮಾಡಿದೆ.
ಇಂದು ಮಧ್ಯಾಹ್ನ 12.22ರ ಸಮಯದಲ್ಲಿ ಕಟ್ಟಡದ ಎರಡನೇ ಮಹಡಿಯ ಶೌಚಾಲಯದಲ್ಲಿ ಸ್ಪೋಟ ಸಂಭವಿಸಿದೆ. ಸ್ಪೋಟದ ತೀವ್ರತೆಯಿಂದಾಗಿ ಶೌಚಾಲಯದ ಗೋಡೆಗಳು ಕುಸಿದಿದ್ದು, ಅಕ್ಕಪಕ್ಕದ ಕಿಟಕಿಗಳು ಪುಡಿ ಪುಡಿಯಾಗಿವೆ.
ಅಗ್ನಿಶಾಮಕ ದಳ ಮತ್ತು ಪೊಲೀಸು ಸುತ್ತುವರಿದಿದ್ದು, ಪರಿಹಾರ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಲೂಧಿಯಾನ ನಗರದ ಕೇಂದ್ರಭಾಗದಲ್ಲಿ ಕೋರ್ಟ್ ಕಾಂಪ್ಲೆಕ್ಸ್ ಇದ್ದು ಪಕ್ಕದಲ್ಲಿಯೇ ಜಿಲ್ಲಾಧಿಕಾರಿಗಳ ಕಚೇರಿ ಇದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
ಫ್ಯಾಕ್ಟ್ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾಗ ಶಿವನ ದೇವಾಲಯ ಪತ್ತೆಯಾಯಿತೆ?