ಛತ್ತೀಸ್‌ಗಢದ 15 ನಗರ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಜಯ ದಾಖಲಿಸಿದೆ. ಇದೀಗ ಮತ ಎಣಿಕೆ ಪೂರ್ಣಗೊಂಡಿದ್ದು, 300 ವಾರ್ಡ್‌ಗಳ ಪೈಕಿ 174ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಬಿಜೆಪಿ ಭಾರಿ ಹಿನ್ನಡೆ ಅನುಭವಿಸಿದ್ದು 89 ವಾರ್ಡ್‌ಗಳನ್ನಷ್ಟೇ ಜಯಿಸಿಕೊಂಡಿದೆ.
ಸೋಮವಾರದಂದು 15 ನಗರ ಸಂಸ್ಥೆಗಳಲ್ಲಿ ಮತ್ತು 15 ವಾರ್ಡ್‌ಗಳ ಉಪಚುನಾವಣೆಯ ಮತಗಳ ಎಣಿಕೆಯು ಗುರುವಾರದಂದು 29 ಎಣಿಕೆ ಕೇಂದ್ರಗಳಲ್ಲಿ ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಗಿತ್ತು.
ಇದನ್ನೂ ಓದಿ:ಉತ್ತರ ಪ್ರದೇಶ:ಪ್ರಧಾನಿ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದ 70 ಮಂದಿ ಎಸ್‌ಪಿ ಕಾರ್ಯಕರ್ತರ ಬಂಧನ, ಬಿಡುಗಡೆ
ಫಲಿತಾಂಶ ಘೋಷಿಸಿದ ನಂತರ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ತಮ್ಮ ಸರ್ಕಾರವು ಪ್ರಾರಂಭಿಸಿದ ಕಲ್ಯಾಣ ಯೋಜನೆಗಳ ಯಶಸ್ಸನ್ನು ಈ ಫಲಿತಾಂಶವು ಸೂಚಿಸುತ್ತದೆ ಎಂದು ಹೇಳಿದ್ದಾರೆ.
15 ನಗರ ಸಂಸ್ಥೆಗಳ ಒಟ್ಟು 370 ವಾರ್ಡ್‌ಗಳ ಪೈಕಿ 300 ವಾರ್ಡ್‌ಗಳಿಗೆ ರಾಜ್ಯ ಚುನಾವಣಾ ಆಯೋಗ (ಎಸ್‌ಇಸಿ) ಫಲಿತಾಂಶ ಪ್ರಕಟಿಸಿದ್ದು, ಇದರಲ್ಲಿ 174 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು, 89 ರಲ್ಲಿ ಬಿಜೆಪಿ, 6 ರಲ್ಲಿ ಜನತಾ ಕಾಂಗ್ರೆಸ್ ಛತ್ತೀಸ್‌ಗಢ (ಜೆ) ಮತ್ತು 31 ರಲ್ಲಿ ಪಕ್ಷೇತರರು ಗೆಲುವು ಸಾಧಿಸಿದ್ದಾರೆ.
ದುರ್ಗ್ ಜಿಲ್ಲೆಯ ಪ್ರಮುಖ ಭಿಲಾಯಿ ಮುನ್ಸಿಪಲ್ ಕಾರ್ಪೊರೇಷನ್‌ಗೆ ಒಳಪಡುವ ಉಳಿದ 70 ವಾರ್ಡ್‌ಗಳ ಫಲಿತಾಂಶವನ್ನು ಇನ್ನೂ ಅಧಿಕೃತವಾಗಿ ಘೋಷಿಸಲಾಗಿಲ್ಲ. ಅಲ್ಲಿ ಎಣಿಕೆ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದಾಗ್ಯೂ, 70 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಹೆಚ್ಚಿನ ಮುನ್ನಡೆ ಸಾಧಿಸಿದೆ ಎಂದು ಹೇಳಲಾಗುತ್ತಿದೆ. ಈ 70 ವಾರ್ಡ್‌ಗಳಲ್ಲಿ ಕಾಂಗ್ರೆಸ್ 37, ಬಿಜೆಪಿ 24, ಇತರರು 8 ರಲ್ಲಿ ಮತ್ತು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) 1 ರಲ್ಲಿ ಮುನ್ನಡೆ ಸಾಧಿಸಿದೆ.
ಕಾಂಗ್ರೆಸ್ ಶಾಸಕ ದೇವೇಂದ್ರ ಯಾದವ್ ಅವರು ಭಿಲಾಯಿ ಮುನ್ಸಿಪಲ್ ಕಾರ್ಪೊರೇಷನ್‌ನ ಹಾಲಿ ಮೇಯರ್ ಆಗಿದ್ದಾರೆ.
4 ಮುನಿಸಿಪಲ್ ಕಾರ್ಪೊರೇಶನ್‌ಗಳು, 6 ಮುನ್ಸಿಪಲ್ ಕೌನ್ಸಿಲ್‌ಗಳು ಮತ್ತು ಐದು ನಗರ ಪಂಚಾಯತ್‌ಗಳಿಗೆ ಚುನಾವಣೆ ನಡೆದಿತ್ತು.
ರಾಯ್‌ಪುರ ಜಿಲ್ಲೆಯ ಬಿರ್‌ಗಾಂವ್ ಮುನ್ಸಿಪಲ್ ಕಾರ್ಪೊರೇಷನ್‌ನ 40 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 19 ಮತ್ತು ಬಿಜೆಪಿ 10, ಜೆಸಿಸಿ (ಜೆ) ಮತ್ತು ಸ್ವತಂತ್ರ ಅಭ್ಯರ್ಥಿಗಳು ಕ್ರಮವಾಗಿ 5 ಮತ್ತು 6 ವಾರ್ಡ್‌ಗಳಲ್ಲಿ ವಿಜೇತರಾಗಿದ್ದಾರೆ.
ಇದನ್ನೂ ಓದಿ:ಗೋವಾ: ಕಾಂಗ್ರೆಸ್‌ನ ಮಾಜಿ ಕಾರ್ಯಾಧ್ಯಕ್ಷ, ಶಾಸಕ ಅಲೆಕ್ಸೊ ಟಿಎಂಸಿಗೆ ಸೇರ್ಪಡೆ
13 ನಗರ ಸಂಸ್ಥೆಗಳ ವ್ಯಾಪ್ತಿಯ 15 ವಾರ್ಡ್‌ಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ 11 ಮತ್ತು ಬಿಜೆಪಿ 1 ಸ್ಥಾನ ಗಳಿಸಿದರೆ, ಉಳಿದ 3 ರಲ್ಲಿ ಸ್ವತಂತ್ರ ಅಭ್ಯರ್ಥಿಗಳು ಜಯಗಳಿಸಿದ್ದಾರೆ.
“ಎಲ್ಲಾ ಪುರಸಭೆಯ ಫಲಿತಾಂಶಗಳು ಕಾಂಗ್ರೆಸ್ ಪರವಾಗಿವೆ. ಈ ಫಲಿತಾಂಶವು ರಾಜ್ಯ ಸರ್ಕಾರದ ಜನಕಲ್ಯಾಣ ಯೋಜನೆಗಳ ಯಶಸ್ಸನ್ನು ತೋರಿಸುತ್ತದೆ. ರಾಜ್ಯದಲ್ಲಿ ಮೂರು ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಜನರು ನಂಬಿಕೆ ಇರಿಸಿದ್ದಾರೆ ಮತ್ತು ಹೀಗಾಗಿ ಪಕ್ಷದ ಪರವಾಗಿ ತಮ್ಮ ಜನಾದೇಶವನ್ನು ನೀಡಿದ್ದಾರೆ” ಎಂದು ಮುಖ್ಯಮಂತ್ರಿ ಬಘೇಲ್ ಹೇಳಿದ್ದಾರೆ.
ಮತದಾರರಿಗೆ ಕೃತಜ್ಞತೆ ಸಲ್ಲಿಸಿರುವ ಅವರು, ವಿಜೇತರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಯುಪಿ ವಿಧಾನಸಭಾ ಚುನಾವಣೆಗೆ ಬಘೇಲ್ ಅವರನ್ನು ಕಾಂಗ್ರೆಸ್ ಹಿರಿಯ ವೀಕ್ಷಕರನ್ನಾಗಿ ನೇಮಿಸಿದೆ.
ಇದನ್ನೂ ಓದಿ:ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ 10 ದಿನ ಕಾಂಗ್ರೆಸ್‌ನಿಂದ ಪಾದಯಾತ್ರೆ



ಇದೊಂದು ಆಶಾದಾಯಕ ಬೆಳೆವಣಿಗೆ.