Homeಕರ್ನಾಟಕ‘ತೆರವು’ ಹೆಸರಿನಲ್ಲಿ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ಜಜ್ಜಿ ಪುಡಿಮಾಡಿ ದರ್ಪ ಮೆರೆದ ಅಧಿಕಾರಿಗಳು

‘ತೆರವು’ ಹೆಸರಿನಲ್ಲಿ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ಜಜ್ಜಿ ಪುಡಿಮಾಡಿ ದರ್ಪ ಮೆರೆದ ಅಧಿಕಾರಿಗಳು

- Advertisement -
- Advertisement -

ಮಂಗಳೂರು ಮಹಾನಗರ ಪಾಲಿಕೆ ಸತತ ಎರಡನೇ ದಿನವೂ ನಗರದ ಬೀದಿಬದಿ ವ್ಯಾಪಾರಿಗಳನ್ನು ತೆರವು ಮಾಡಿದ್ದು, ‘ದ.ಕ.ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಶ್ರೇಯೋಭಿವೃಧಿ ಸಂಘ’ವು ಪಾಲಿಕೆಯ ಕ್ರಮವನ್ನು ಶುಕ್ರವಾರ ತೀವ್ರವಾಗಿ ಖಂಡಿಸಿದೆ.

ಅನಧಿಕೃತ ಗೂಡಂಗಡಿ ಮತ್ತು ಪುಟ್‌ಪಾತ್ ತೆರವು ಕಾರ್ಯಾಚರಣೆ ಮಾಡಲು ಕಳೆದ ಬುಧವಾರದಂದು ಪಾಲಿಕೆಯ ಮೇಯರ್ ಮತ್ತು ಕಮೀಷನರ್‌‌‌‌ ಆದೇಶ ಹೊರಡಿಸಿದ್ದರು ಎನ್ನಲಾಗಿದ್ದು, ಅದರಂತೆ ಗುರುವಾರದಿಂದ ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಆದರೆ ಬೀದಿಬದಿ ವ್ಯಾಪಾರಿಗಳಿಗೆ ಸರಕಾರವೇ ನೀಡಿದ್ದ ಗುರುತಿನ ಚೀಟಿಯಿದ್ದರೂ ಅಂತಹ ವ್ಯಾಪಾರಿಗಳನ್ನು ಕೂಡಾ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಹಲವು ವ್ಯಾಪಾರಿಗಳ ಗಾಡಿ ಮತ್ತಿತರ ವಸ್ತುಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ನಿಯಮಬಾಹಿರವಾಗಿ ಜಜ್ಜಿ ಪುಡಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:ಕಂದಾಯ ಗ್ರಾಮಗಳಾಗಿ ಲಂಬಾಣಿ ತಾಂಡಗಳ ಪರಿವರ್ತನೆಗೆ ಸರ್ವೇ: ಸಿಎಂ

ಈ ಬಗ್ಗೆ ಆಕ್ರೊಶ ವ್ಯಕ್ತಪಡಿಸಿರುವ ಬೀದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮೊಹಮ್ಮದ್ ಮುಸ್ತಫಾ, “ಪ್ರಮಾಣ ಪತ್ರ ಮತ್ತು ಗುರುತಿನ ಚೀಟಿ ಇದ್ದವರಿಗೆ ತೊಂದರೆ ಕೊಟ್ಟಿದ್ದಾರೆ. ಮಹಾನಗರ ಪಾಲಿಕೆಯ ಅಧಿಕಾರಿಗಳು ಈ ರೀತಿಯಾಗಿ ಏಕಾಏಕಿ ತೆರವು ಮಾಡಿದ್ದು ಎಷ್ಟು ಸರಿ? ಬೀದಿ ಬದಿಯ ನಿಯಮಾನುಸಾರ ಪಟ್ಟಣ ವ್ಯಾಪಾರ ಸಮಿತಿ ಸಭೆಯಲ್ಲಿ ಚರ್ಚಿಸದೆ ತೆರವು ಕಾರ್ಯಾಚರಣೆ ನಡೆಸಿದ್ದಾರೆ” ಎಂದು ಹೇಳಿದ್ದಾರೆ.

ಗುರುತಿನ ಚೀಟಿ ಇಲ್ಲದ ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಮಾಡಿಸುವುದಕ್ಕಾಗಿ ಮಹಾನಗರ ಪಾಲಿಕೆಯು ಇತ್ತೀಚೆಗೆ ಸರ್ವೆ ನಡೆಸಿತ್ತು. ಆದರೆ ಇಂದು ಸರ್ವೆ ನಡೆಸಿರುವ ಹಲವು ವ್ಯಾಪಾರಿಗಳ ಅಂಗಡಿಗಳನ್ನು ತೆರವುಗೊಳಿಸಿದೆ ಎಂದು ಮುಸ್ತಫಾ ದೂರಿದ್ದಾರೆ.

“ಅಂಗಡಿಗಳ ತೆರವುಗೊಳಿಸಬೇಕಾದರೆ ‘ಪಟ್ಟಣ ವ್ಯಾಪಾರ ಸಮಿತಿ’ಯ ಸಭೆ ನಡೆಸಿ ಅಲ್ಲಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಆದರೆ ಪಾಲಿಕೆಯು ಈ ರೀತಿಯ ಯಾವುದೆ ಸಭೆಯನ್ನು ನಡೆಸಿಲ್ಲ. ಅವವೇ ತೀರ್ಮಾನ ತೆಗೆದುಕೊಳ್ಳುವುದಾದರೆ ಪಟ್ಟಣ ವ್ಯಾಪಾರ ಸಮಿತಿ ಯಾಕೆ? ಅದೊಂದು ಚುನಾಯಿತ ಸಮಿತಿಯಾಗಿದ್ದು, ಅದರ ಸಭೆಯಲ್ಲಿ ಪಾಲಿಕೆಯು ತೆರವುಗೊಳಿಸುವ ವಿಚಾರವನ್ನು ಇಡಬೇಕಾಗಿತ್ತು” ಎಂದು ಮುಸ್ತಫಾ ಹೇಳಿದ್ದಾರೆ.

ಕಾನೂನಿನ ಪ್ರಕಾರ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಕೆಂದರೆ ಅವರಿಗೆ ಪರ್ಯಾಯ ವ್ಯವಸ್ಥೆಯನ್ನು ಸ್ಥಳೀಯ ಸಂಸ್ಥೆಯೂ ಮಾಡಿರಬೇಕು. ಜೊತೆಗೆ ತೆರವುಗೊಳಿಸಿದ ವಸ್ತುಗಳನ್ನು ದಂಡ ಕಟ್ಟಿಸಿ ಅದನ್ನು ಅವರಿಗೆ ವಾಪಾಸು ಕೊಡಬೇಕು. ಆದರೆ ಶುಕ್ರವಾರದಂದು ಎರಡು ಜೆಸಿಬಿ, ಎರಡು ಲಾರಿ ಮುಖಾಂತರ ಬಂದಿದ್ದ ಮಹಾನಗರ ಪಾಲಿಕೆ ಅಧಿಕಾರಿಗಳು ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ಜೆಸಿಬಿಯಲ್ಲಿ ಜಜ್ಜಿ ಪುಡಿಪುಡಿ ಮಾಡಿ ಲಾರಿಗೆ ತುಂಬಿಸಿದ್ದಾರೆ ಎಂದು ಮುಸ್ತಫಾ ಆರೋಪಿಸಿದ್ದಾರೆ.

ಇದನ್ನೂ ಓದಿ:ಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಮಾರಾಟ ಮಾಡುತ್ತಿರುವ, ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದ ಅಂತರರಾಷ್ಟ್ರೀಯ ಮಹಿಳಾ ಕ್ರೀಡಾಪಟು!

ಸರ್ಕಾರ ಬೀದಿಬದಿ ವ್ಯಾಪಾರಿ ಎಂದು ಗುರುತಿಸಿ ಚೀಟಿ ಕೊಟ್ಟವರ ಮೇಲೆ ಕೂಡಾ ಪೊಲೀಸ್‌ ರಕ್ಷಣೆಯಲ್ಲಿ ದಬ್ಬಾಳಿಕೆ ಮಾಡಲಾಗಿದೆ. ಅಧಿಕಾರಿಗಳು ಬಡ ವ್ಯಾಪಾರಿಗಳೊಂದಿಗೆ ಮಾತನಾಡುವಷ್ಟು ವ್ಯಯಧಾನ ಇಟ್ಟುಕೊಂಡಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೆರವು ಕಾರ್ಯಾಚರಣೆ ವಿರುದ್ದ ಸೋಮವಾರದಂದು ಪಟ್ಟಣ ವ್ಯಾಪಾರ ಸಮಿತಿಯ ಸದಸ್ಯರು ಮಹಾನಗರ ಪಾಲಿಕೆಯ ಆಯುಕ್ತರನ್ನು ಚೀಟಿಯಾಗಿ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ಇಲ್ಲದವರು ಮತ್ತು ಸರ್ವೆ ಆಗಿರುವ ಬಡ ಬೀದಿ ಬದಿ ವ್ಯಾಪಾರಸ್ಥರ ಪರವಾಗಿ ಚರ್ಚಿಸಲಿದ್ದೇವೆ ಎಂದು ಬೀದಿಬದಿ ವ್ಯಾಪಾರಸ್ಥರ ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಹೇಳಿದ್ದಾರೆ.

ಈ ಬಗ್ಗೆ ಮಹಾನಗರ ಪಾಲಿಕೆಯ ಕಮಿಷನರ್ ಅಕ್ಷಯ್‌ ಶ್ರೀಧರ್‌ ಅವರಿಗೆ ನಾನುಗೌರಿ.ಕಾಂ ಕರೆ ಮಾಡಿದ್ದು, ಆದರೆ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕಿದ ನಂತರ ಅವರ ಹೇಳಿಕೆಯನ್ನು ಇಲ್ಲಿ ಅಪ್‌ಡೇಟ್‌ ಮಾಡಲಾಗುವುದು.

ಇದನ್ನೂ ಓದಿ:ಬೀದಿಬದಿಯ ಬಡ ವ್ಯಾಪಾರಿಗಳ ಮೇಲೆ ದರ್ಪ ತೋರಿದ ಪಿಎಸ್‌ಐ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...